ದಿನದ ಸುದ್ದಿ
ದೇಶಾದ್ಯಂತ ಈವರೆಗೆ 189 ಕೋಟಿಗೂ ಅಧಿಕ ಕೋವಿಡ್ ಲಸಿಕೆ ನೀಡಿಕೆ : ಕೇಂದ್ರ ಆರೋಗ್ಯ ಸಚಿವಾಲಯ
ಸುದ್ದಿದಿನ ಡೆಸ್ಕ್ : ದೇಶಾದ್ಯಂತ ನಡೆಯುತ್ತಿರುವ ಕೋವಿಡ್ ಲಸಿಕೆ ಅಭಿಯಾನದಡಿ ಈವರೆಗೆ 189 ಕೋಟಿ 41ಲಕ್ಷಕ್ಕೂ ಅಧಿಕ ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ. ಕಳೆದ 24ಗಂಟೆಗಳಲ್ಲಿ 16ಲಕ್ಷ 23ಸಾವಿರ ಲಸಿಕೆ ಡೋಸ್‌ಗಳನ್ನು ಫಲಾನುಭವಿಗಳಿಗೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಈ ಅವಧಿಯಲ್ಲಿ ಹೊಸದಾಗಿ 2 ಸಾವಿರದ 911ಕೋವಿಡ್ ಪ್ರಕರಣಗಳು ವರದಿಯಾಗಿವೆ. ದೇಶದಲ್ಲಿ ಪ್ರಸ್ತುತ ಸಕ್ರಿಯ ಸೋಂಕು ಪ್ರಕರಣಗಳ ಸಂಖ್ಯೆ 19ಸಾವಿರದ137ರಷ್ಟಿದ್ದು, ಇದು ಶೇಕಡ 0.04ರಷ್ಟಿದೆ. ಚೇತರಿಕೆ ಪ್ರಮಾಣ ಪ್ರಸ್ತುತ 98.74ರಷ್ಟಿದ್ದು, ವಾರದ ಪಾಸಿಟಿವಿಟಿ ದರ 0.71ರಷ್ಟಿದ್ದು, ದೈನಂದಿನ ಪಾಸಿಟಿವಿಟಿ ದರ 0.61 ರಷ್ಟಿದೆ.
ದೇಶದಲ್ಲಿ ಈವರೆಗೆ ಒಟ್ಟು 83ಕೋಟಿ 86ಲಕ್ಷ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದ್ದು, ಕಳೆದ 24ಗಂಟೆಗಳಲ್ಲಿ 4 ಲಕ್ಷ 19 ಸಾವಿರಕ್ಕೂ ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ.
#AmritMahotsav#Unite2FightCorona#LargestVaccineDrive
𝗖𝗢𝗩𝗜𝗗 𝗙𝗟𝗔𝗦𝗛https://t.co/QYPepQQs0S pic.twitter.com/71nWp9vUs7
— Ministry of Health (@MoHFW_INDIA) May 3, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243