Connect with us

ಕ್ರೀಡೆ

ಬೆಳಗಿನ ಪ್ರಮುಖ ಸುದ್ದಿಗಳು

Published

on

ಬೆಳಗಿನ ಪ್ರಮುಖ ಸುದ್ದಿಗಳು

 

  1. ಚೆನ್ನೈನಲ್ಲಿರುವ ರಿಪಬ್ಲಿಕ್ ಆಫ್ ಸಿಂಗಾಪುರ್‌ನ ಕಾನ್ಸುಲ್ ಜನರಲ್ ಎಡ್ಗರ್ ಹಾಂಗ್ ಅವರು ನಿನ್ನೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಇದೊಂದು ಸೌಜನ್ಯದ ಭೇಟಿಯಾಗಿತ್ತು ಎಂದು ರಾಜಭವನದ ಪ್ರಕಟಣೆ ತಿಳಿಸಿದೆ.
  2. ಚಿತ್ರದುರ್ಗ ಜಿಲ್ಲೆಯಲ್ಲಿ ಈ ಬಾರಿ ಗಣೇಶ ಹಬ್ಬವನ್ನು ಸರ್ಕಾರದ ಮಾರ್ಗಸೂಚಿ ಪಾಲನೆಯೊಂದಿಗೆ ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಮನವಿ ಮಾಡಿದ್ದಾರೆ.
  3. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಗಾಲ್ಯಾಂಡ್‌ಗೆ ನಿನ್ನೆಯಿಂದ ಮೂರು ದಿನಗಳ ಪ್ರವಾಸ ಕೈಗೊಂಡಿದ್ದಾರೆ. ಕೋಹಿಮಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಗಾಲ್ಯಾಂಡ್, ಸಾಮಾಜಿಕ, ಸಾಂಸ್ಥಿಕ ಹೊಣೆಗಾರಿಕೆ ಮತ್ತು ಹೂಡಿಕೆ ಸಮ್ಮೇಳನದಲ್ಲಿ ಅವರು ಭಾಗವಹಿಸಿದರು. ಇಂದು ಅವರು, ಮಾನ್ ಜಿಲ್ಲೆಗೆ ಭೇಟಿ ನೀಡಲಿದ್ದು, ಅಲ್ಲಿ ನೂತನವಾಗಿ ಆರಂಭಿಸಿರುವ ಆಕ್ಸಿಸ್ ಬ್ಯಾಂಕ್ ಶಾಖೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ.
  4. ಇಂದಿನಿಂದ ಎರಡು ದಿನಗಳ ಕಾಲ ಪಶ್ಚಿಮ ಮಧ್ಯ ಪ್ರದೇಶ, ಪೂರ್ವ ರಾಜಸ್ಥಾನ್ ಹಾಗೂ ಉತ್ತರ ಗುಜರಾತ್ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗಗಳ ಕೆಲವೆಡೆ 200 ಮಿಲಿಮೀಟರ್‌ಗೂ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ರಾಜ್ಯಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
  5. ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ ಸೂಚನೆ ನೀಡಿದೆ. ಈ ಸಂಬಂಧ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮಾರ್ಗಸೂಚಿಯನ್ನು ಹೊರಡಿಸಿದ್ದು, ಪರಿಣಾಮಕಾರಿಯಾಗಿ ಯೋಜನೆ ಅನುಷ್ಠಾನಗೊಳಿಸುವಂತೆ ಸೂಚಿಸಿದೆ.
  6. ಪದ್ಮ ಸರಣಿಯ ಪ್ರಶಸ್ತಿಗಳಿಗೆ ನಾಮನಿರ್ದೇಶನ ಮಾಡಲು ಸೆಪ್ಟೆಂಬರ್ 15ರವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ. ಪ್ರಶಸ್ತಿಗಳಿಗೆ ಆನ್‌ಲೈನ್ ಮೂಲಕ ನಾಮನಿರ್ದೇಶನ ಮಾಡಲು ಮೇ 1 ರಿಂದ ಕಾಲಾವಕಾಶ ಕಲ್ಪಿಸಲಾಗಿದೆ. ರಾಷ್ಟ್ರೀಯ ಪುರಸ್ಕಾರ್ ಪೋರ್ಟಲ್‌ನಲ್ಲಿ ನಾಮನಿರ್ದೇಶನಗಳನ್ನು ಅಪ್‌ಲೋಡ್ ಮಾಡಬಹುದಾಗಿದೆ.
  7. ತೀವ್ರ ಬಿಕ್ಕಟ್ಟಿನಲ್ಲಿರುವ ಶ್ರೀಲಂಕಾಗೆ ಭಾರತ 21 ಸಾವಿರ ಟನ್ ರಸಾಯಿನಿಕ ರಸಗೊಬ್ಬರವನ್ನು ಹಸ್ತಾಂತರಿಸಿದೆ. ಶ್ರೀಲಂಕಾದಲ್ಲಿರುವ ಭಾರತದ ರಾಯಭಾರಿ ಅವರು ಶ್ರೀಲಂಕಾಗೆ ಈ ನೆರವನ್ನು ಹಸ್ತಾಂತರಿಸಿದರು. ಕಳೆದ ತಿಂಗಳು 44 ಸಾವಿರ ಟನ್ ರಸಗೊಬ್ಬರವನ್ನು ಪೂರೈಸಲಾಗಿತ್ತು. ಈ ವರ್ಷ ಒಟ್ಟಾರೆ 4 ಶತಕೋಟಿ ಡಾಲರ್ ಮೊತ್ತದ ನೆರವು ನೀಡಲಾಗಿದೆ.
  8. ಮಹಿಳೆಯರು ಸೂಕ್ತ ತರಬೇತಿ ಪಡೆದು ಯಶಸ್ವಿ ಉದ್ಯಮಿಗಳಾಗಬೇಕೆಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಹಾಗೂ ಐಐಎಂ ಜಂಟಿ ಸಹಯೋಗದಲ್ಲಿ ಬೆಂಗಳೂರಿನಲ್ಲಿ ನಿನ್ನೆ ಏರ್ಪಡಿಸಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಮಹಿಳಾ ಪದವೀಧರರಿಗೆ ಉದ್ಯಮ ಶೀಲತಾ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
  9. ಮತದಾರರ ಪಟ್ಟಿಯ ಜೊತೆ ಆಧಾರ್ ಜೋಡಿಸುವ ಕುರಿತಾದ ನಮೂನೆ 6ಬಿ ಅಡಿಯಲ್ಲಿ ಆಧಾರ್ ಸಲ್ಲಿಕೆ ಮಾಡುವುದು ಅವರವರ ವಿವೇಚನೆಗೆ ಬಿಟ್ಟಿದ್ದು ಎಂದು ಚುನಾವಣಾ ಆಯೋಗ ಇಂದು ಪುನರುಚ್ಚರಿಸಿದೆ. ಆಧಾರ್ ಸಲ್ಲಿಕೆ ಮಾಡಿಲ್ಲ ಎಂಬ ಕಾರಣಕ್ಕಾಗಿ ಮತದಾರರ ಪಟ್ಟಿಯಲ್ಲಿ ಇರುವ ಯಾವುದೇ ಹೆಸರನ್ನು ತೆಗೆಯುವುದಿಲ್ಲ ಎಂದು ಆಯೋಗ ಟ್ವೀಟ್‌ನಲ್ಲಿ ತಿಳಿಸಿದೆ.
  10. ಡಿಜಿಟಲ್ ಪಾವತಿ ಸೇವೆ – ಯುಪಿಐ ಸೇವೆಗಳ ಮೇಲೆ ಯಾವುದೇ ರೀತಿಯ ಸುಂಕ ವಿಧಿಸುವ ಉದ್ದೇಶ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಹಣಕಾಸು ಸಚಿವಾಲಯ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವುದು ಹಾಗೂ ದೇಶದ ಆರ್ಥಿಕತೆಗೆ ಕೊಡುಗೆ ನೀಡಬೇಕೆಂಬ ಏಕೈಕ ಉದ್ದೇಶದಿಂದ ಡಿಜಿಟಲ್ ರೂಪದಲ್ಲಿನ ಯುಪಿಐ ಸೇವೆಗಳನ್ನು ಜಾರಿಗೆ ತರಲಾಗಿದೆ ಎಂದು ಹೇಳಿದೆ.
  11. ಪ್ರಧಾನಮಂತ್ರಿ ನರೇಂದ್ರಮೋದಿ ನಾಳೆಯಿಂದ ಹರಿಯಾಣ ಮತ್ತು ಪಂಜಾಬ್ ರಾಜ್ಯಗಳಿಗೆ ಭೇಟಿ ನೀಡಲಿದ್ದು, ಹರಿಯಾಣದ ಫರೀದಾಬಾದ್‌ನಲ್ಲಿ ನೂತನವಾಗಿ ನಿರ್ಮಿಸಿರುವ ಅಮೃತ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ. ಮೊಹಾಲಿಯಾ ಮುಲ್ಲಾನ್ ಪುರದಲ್ಲಿ ನಿರ್ಮಿಸಿರುವ ಹೋಮಿಬಾಬಾ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವನ್ನು ಲೋಕಾರ್ಪಣೆ ಮಾಡಲಿದ್ದಾರೆ.
  12. 2022-23ನೇ ಸಾಲಿನ 2ನೇ ಸರಣಿಯ ಸಾವರಿನ್ ಗೋಲ್ಡ್ ಬಾಂಡ್‌ಗಳನ್ನು ನಿನ್ನೆಯಿಂದ ಚಂದಾದಾರಿಕೆಗಾಗಿ ತೆರೆಯಲಾಗುತ್ತದೆ. ಇದು ಶುಕ್ರವಾರದವರೆಗೂ ಮುಂದುವರಿಯಲಿದೆ. ಈ ಅವಧಿಯಲ್ಲಿ ಬಾಂಡ್‌ನ ವಿತರಣೆಯ ಬೆಲೆ, ಪ್ರತಿ ಗ್ರಾಂಗೆ ಐದು ಸಾವಿರದ ನೂರ ತೊಂಬತ್ತೇಳು ರೂಪಾಯಿಗಳಾಗಿರುತ್ತದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ರಾಘವೇಂದ್ರ ಎನ್ ಬಿ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Published

on

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ದಾವಣಗೆರೆ ವಿಶ್ವವಿದ್ಯಾಲಯದ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ರಾಘವೇಂದ್ರ ಚಿನ್ನದ ಪದಕ ಗೆಲ್ಲುವ ಮೂಲಕ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ..

ದಾವಣಗೆರೆ ನಗರದ ಜಿಎಫ್ ಜಿಸಿ ಕಾಲೇಜಿನಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದಿಂದ ದೇಹದಾರ್ಢ್ಯ ಸ್ಪರ್ಧೆ ಹಾಗೂ ಆಯ್ಕೆ ಗಳು ನಡೆದವು, ಕಾಲೇಜಿನಲ್ಲಿ ಪ್ರಥಮ ಬಿಎ ವ್ಯಾಸಂಗ ಮಾಡುತ್ತಿರುವ ರಾಘವೇಂದ್ರ, ಹಳೇ ಕುಂದುವಾಡದ ಬಸವರಾಜ್, ಲಕ್ಷ್ಮಿದೇವಿ ದಂಪತಿಯ ಪುತ್ರನಾಗಿದ್ದು, ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ದೇಹ ಪ್ರದರ್ಶಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾನೆ.

ಓದಿನ ಜೊತೆಗೆ ತನ್ನ ತಂದೆಯ ಕಿರಾಣಿ ಅಂಗಡಿಯಲ್ಲಿ ಕೆಲಸ ಮಾಡುತ್ತಾ ತನ್ನ ಕನಸನ್ನು ನನಸು ಮಾಡಿಕೊಳ್ಳಲು ಬಿಡುವಿನ‌ ವೇಳೆಯಲ್ಲಿ ಕೋಚ್ ಮಧು ಪೂಜಾರ್ ಮಾರ್ಗದರ್ಶನದಲ್ಲಿ ದೇಹ ಹುರಿಗೊಳಿಸಿ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಗಳಿಸಿದ್ದಾನೆ, ಸ್ಪರ್ಧೆಯಲ್ಲಿ ಬೈಸಿಪ್ಸ್, ಲ್ಯಾಟ್ ಸ್ಟ್ರೈಡ್ ಪೋಸ್ ಕೊಟ್ಟು ನೋಡುಗರನ್ನು, ತೀರ್ಪುಗಾರರನ್ನು ಬೆರಗುಗೊಳಿಸಿದ್ದಾನೆ.

ಇನ್ನೂ ರಾಘವೇಂದ್ರನ ದೇಹ ಪ್ರದರ್ಶನ ವೇಳೆ ಶಿಳ್ಳೆ, ಚಪ್ಪಾಳೆ ಕೇಳಿ ಬಂದವು, ರಾಘವೇಂದ್ರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದು ಬರುವ ಫೆಬ್ರುವರಿಯಲ್ಲಿ ಮಂಗಳೂರಿನಲ್ಲಿ ಸ್ಪರ್ಧೆ ನಡೆಯಲಿದೆ, ಇನ್ನೂ ಚಿನ್ನದ ಪದಕ ಗಳಿಸಿರುವ ರಾಘವೇಂದ್ರನಿಗೆ ಜಿಎಫ್ ಜಿಸಿ ಕಾಲೇಜು ಆಡಳಿತ ಮಂಡಳಿ, ಮಾರ್ಗದರ್ಶಕರು, ಹಳೇ ಕುಂದುವಾಡ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಅದ್ವಿತೀಯ 2024ರಲ್ಲಿ ಜಿಎಂಐಟಿ ಕಾಲೇಜಿನ ಸಿಎಸ್ಇ ವಿದ್ಯಾರ್ಥಿಗಳ ಪೋಸ್ಟರ್ ಪ್ರಸ್ತುತಿಯಲ್ಲಿ ತೃತೀಯ ಸ್ಥಾನ

Published

on

ಸುದ್ದಿದಿನ,ದಾವಣಗೆರೆ:ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ (ಸಿ.ಎಸ್.ಇ) ವಿಭಾಗದ 5ನೇ ಸೆಮಿಸ್ಟರ್ ‘ಎ’ ವಿಭಾಗದ ವಿದ್ಯಾರ್ಥಿಗಳಾದ ಅಭಿಷೇಕ್ ಯು. ಮತ್ತು ಅಫ್ರಿದ್ ಆರ್.ಕೆ. ಈ ಇಬ್ಬರು ಇತ್ತೀಚಿಗೆ ಹುಬ್ಬಳ್ಳಿಯ ಕೆಎಲ್‌ಇ ತಾಂತ್ರಿಕ ಸಂಸ್ಥೆಯಲ್ಲಿ ನಡೆದ ಅದ್ವಿತೀಯ 2024ರಲ್ಲಿ ಪೋಸ್ಟರ್ ಪ್ರಸ್ತುತಿಯಲ್ಲಿ ತೃತೀಯ ಸ್ಥಾನವನ್ನು ಗಳಿಸಿದ್ದಾರೆ.

ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಎಂ.ಬಿ. ಸಂಜಯ್ ಪಾಂಡೆ, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಬಿ.ಎನ್. ವೀರಪ್ಪ, ಇನ್ಫಾರ್ಮಶನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಎಸ್. ನೀಲಾಂಬಿಕೆ, ವಿದ್ಯಾರ್ಥಿ ವ್ಯವಹಾರಗಳ ವಿಭಾಗದ ಉಪ ನಿರ್ದೇಶಕರಾದ ಎಂ. ಸಂತೋಷ ಕುಮಾರ್, ಜಿಎಂ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಕೆ.ಎಸ್. ಓಂಕಾರಪ್ಪ ಸೇರಿದಂತೆ ಆಡಳಿತ ಮಂಡಳಿ, ವಿಭಾಗದ ಮುಖ್ಯಸ್ಥರು ಮತ್ತು ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ತುಮಕೂರು:ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ತುಮಕೂರಿನಲ್ಲಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಲಾಗಿದ್ದು ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ತುಮಕೂರಿನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಆದಷ್ಟು ಶೀಘ್ರವೇ ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸಲಾಗುವುದು ಎಂದು ಹೇಳಿದ್ದಾರೆ. ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದ್ದು ಮೈಸೂರಿನಲ್ಲೂ ಜಾಗ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಚೆನ್ನೈ-ಮುಂಬೈ ಇಂಡಸ್ಟ್ರೀಯಲ್ ಕಾರಿಡಾರ್ ಗಾಗಿ ಆರು ಹಂತದಲ್ಲಿ 20 ಸಾವಿರ ಎಕರೆ ಸ್ವಾಧೀನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ವಸಂತನರಸಾಪುರದಲ್ಲಿ ಏಷ್ಯಾದಲ್ಲಿಯೇ ಅತಿ ದೊಡ್ಡ ಟೌನ್ ಶಿಪ್ ಪ್ರಾರಂಭವಾಗಿದೆ ಎಂದು ತಿಳಿಸಿದ ಅವರು, ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದು ಕೈಗಾರಿಕೆಗಳಿಗೆ ಮನವಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending