ಕ್ರೀಡೆ

ಬೆಳಗಿನ ಪ್ರಮುಖ ಸುದ್ದಿಗಳು

Published

on

ಬೆಳಗಿನ ಪ್ರಮುಖ ಸುದ್ದಿಗಳು

  1. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ಇಂದು ನಡೆಯಲಿದೆ. ಆಯವ್ಯಯದಲ್ಲಿ ಅಂಗೀಕಾರವಾಗಿರುವ ಹಲವಾರು ಯೋಜನೆಗಳಿಗೆ ಸಂಪುಟ ಅನುಮೋದನೆ ನೀಡುವ ಸಾಧ್ಯತೆ ಎಂದು ಮೂಲಗಳು ತಿಳಿಸಿವೆ.
  2. ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ನಾಲ್ಕು ಸ್ಥಾನಗಳ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಜಯರಾಮ್ ರಮೇಶ್ ಆಯ್ಕೆಯಾಗಿದ್ದು, ಇಂದು ನಾಮಪತ್ರ ಸಲ್ಲಿಸುವ ನಿರೀಕ್ಷೆ ಇದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ. ನಾಮಪತ್ರ ಸಲ್ಲಿಸಲು ನಾಳೆ ಕೊನೆಯ ದಿನ. ಬಿಜೆಪಿ ಎರಡು ಸ್ಥಾನದ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಚಿತ್ರನಟ ಜಗ್ಗೇಶ್ ಅವರ ಹೆಸರನ್ನು ಅಖೈರಗೊಳಿಸಿದ್ದು, ಇಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿದೆ. ನಾಲ್ಕನೇ ಅಭ್ಯರ್ಥಿ ಜೆಡಿಎಸ್ ಬೆಂಬಲ ಅನಿವಾರ್ಯವಾಗಿದ್ದು, ಅಭ್ಯರ್ಥಿ ಯಾರು ಎಂಬುದು ಕುತೂಹಲ ಮೂಡಿಸಿದೆ.
  3. ಸ್ವಿಡ್ಜೆರ್‌ಲ್ಯಾಂಡಿನ ಜಿನಿವಾದಲ್ಲಿ ನಡೆಯುತ್ತಿರುವ ವರ್ಲ್ಡ್ ಸಮ್ಮಿಟ್ ಆನ್ ಇನ್ಫಾರ್ಮೇಶನ್ ಶೃಂಗಸಭೆ ಇಂದಿನ ವರ್ಚುವಲ್ ಅಧಿವೇಶನದಲ್ಲಿ ದಾವಣಗೆರೆ ಮೂಲದ ಹಾಗೂ ಬೆಂಗಳೂರು ಸಾಪ್ಟ್ ವೇರ್ ಕಂಪನಿಯೊಂದರ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ.ಎಲ್ ರಾಕೇಶ್ ಭಾಗವಹಿಸಲಿದ್ದಾರೆ. ಸಾಧನೆಗಳು, ಒಪ್ಪಂದಗಳು ಮತ್ತು ಫಲಿತಾಂಶಗಳ ಕುರಿತು ಅಧಿವೇಶನದಲ್ಲಿ ಚರ್ಚಿಸಲಾಗುತ್ತಿದೆ. ಮಾಹಿತಿ ತಂತ್ರಜ್ಞಾನ ಮತ್ತು ಹಣಕಾಸು ಸೇವೆ ವಿಚಾರವಾಗಿ ಡಾ.ಎಲ್.ರಾಕೇಶ್ ವಿಷಯ ಮಂಡಿಸಲಿದ್ದಾರೆ. ವಿಶ್ವದ 194ದೇಶಗಳ ಪ್ರತಿನಿಧಿಗಳು ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.
  4. 17ನೇ ಮುಂಬೈ ಡಾಕ್ಯುಮೆಂಟ್ರಿ ಚಲನಚಿತ್ರ ಹಾಗೂ ಅನಿಮೇಷನ್ ಫಿಲ್ಮ್ 2022ಕ್ಕೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಚಾಲನೆ ನೀಡಿದರು. ಈ ಉತ್ಸವದಲ್ಲಿ 30 ದೇಶಗಳ 102ಚಲನಚಿತ್ರಗಳು ಪ್ರದರ್ಶನವಾಗಲಿವೆ. ಹಲವಾರು ಚಲನಚಿತ್ರ ವಿಮರ್ಶಕರು ಹಾಗೂ ಅಂತಾರಾಷ್ಟ್ರೀಯ ಚಲನಚಿತ್ರ ಝೂರಿಗಳು ಭಾಗವಹಿಸಿದ್ದಾರೆ.
  5. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ದೇಶಾದ್ಯಂತ ಇರುವ ಅನಾಥ ಮಕ್ಕಳೊಂದಿಗೆ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಲಿದ್ದಾರೆ. ಪ್ರಧಾನಮಂತ್ರಿ ಮಕ್ಕಳ ಪಾಲನಾ ಯೋಜನೆಯ ಫಲಾನುಭವಿಗಳಾದ ಥಾಣೆ ಜಿಲ್ಲೆಯ 43 ಅನಾಥರು ಸಹ ಜಿಲ್ಲಾಧಿಕಾರಿಗಳ ಕಚೇರಿಯಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಪೈಕಿ, 18 ವರ್ಷಕ್ಕಿಂತ ಮೇಲ್ಪಟ್ಟವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಾಜರಿರುತ್ತಾರೆ ಮತ್ತು 18ವರ್ಷಕ್ಕಿಂತ ಕಡಿಮೆ ವಯಸ್ಸಿನವರು ವೆಬ್‌ಕಾಸ್ಟ್ ಮೂಲಕ ಪಾಲ್ಗೊಳ್ಳಲಿದ್ದಾರೆ.
  6. ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಇಲಾಖೆಗಳ ವ್ಯಾಪ್ತಿಯ ಸುಮಾರು 16 ಯೋಜನೆಗಳು ಮತ್ತು ಕಾರ್ಯಕ್ರಮಗಳ ಫಲಾನುಭವಿಗಳು ಹಾಗೂ ಒಂಬತ್ತು ಸಚಿವಾಲಯಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಗರೀಬ್‌ಕಲ್ಯಾಣ್ ಸಮ್ಮೇಳನ’ ಎಂಬ ಹೆಸರಿನ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮ ಅಂದು ಶಿಮ್ಲಾದಲ್ಲಿ ನಡೆಯಲಿದೆ. ಎಲ್ಲಾ ರಾಜ್ಯಗಳ ರಾಜಧಾನಿ ಹಾಗೂ ಜಿಲ್ಲಾ ಕೇಂದ್ರಗಳಲ್ಲೂ ಕಾರ್ಯಕ್ರಮ ಏಕಕಾಲಕ್ಕೆ ಆಯೋಜಿಸಲಾಗಿದೆ.
  7. ಕೈಮಗ್ಗ ನೇಕಾರಿಕೆ ಪ್ರೋತ್ಸಾಹಿಸಲು ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಪ್ರಸಕ್ತ ಹಣಕಾಸು ವರ್ಷದಲ್ಲಿ ಮುದ್ರಾ ಯೋಜನೆಯಡಿಯಲ್ಲಿ ನೇಕಾರರಿಗೆ ಬ್ಯಾಂಕ್ ಸಾಲ ಸೌಲಭ್ಯ ಒದಗಿಸಲು ಚಾಮರಾಜನಗರ ಜಿಲ್ಲೆಯ ಅರ್ಹ ನೇಕಾರರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
  8. ಮಂಗಳೂರು ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ 931 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕೈಗೊಂಡಿರುವ ಕಾಮಗಾರಿಗಳು ಮುಂಬರುವ ಡಿಸೆಂಬರ್ ಅಥವಾ ಜನವರಿಯೊಳಗೆ ಪೂರ್ಣಗೊಳ್ಳಲಿವೆ. 48 ಕಾಮಗಾರಿಗಳು ಪ್ರಾರಂಭವಾಗಿ ಕೆಲವು ಭಾಗಶಃ ಹಾಗೂ ಕೆಲವು ಪೂರ್ಣಗೊಳ್ಳುವ ಹಂತದಲ್ಲಿವೆ, ಈ ಕಾಮಗಾರಿಗಳು ಕೇವಲ ಮಂಗಳೂರು ನಗರಕ್ಕೆ ಮಾತ್ರ ಸೀಮಿತವಾಗಿಲ್ಲ, ಅವುಗಳ ಲಾಭ ಸಂಪೂರ್ಣವಾಗಿ ಜಿಲ್ಲೆಯ ಜನತೆಗೆ ದೊರೆಯಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.
  9. 17ನೇ ಮುಂಬೈ ಡಾಕ್ಯೂಮೆಂಟ್ರಿ ಚಲನಚಿತ್ರ ಹಾಗೂ ಅನಿಮೇಷನ್ ಫಿಲ್ಮ್ 2022ಕ್ಕೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಚಾಲನೆ ನೀಡಿದರು. ಈ ಉತ್ಸವದಲ್ಲಿ 30 ದೇಶಗಳ 102 ಚಲನಚಿತ್ರಗಳು ಪ್ರದರ್ಶನವಾಗಲಿವೆ. ಹಲವಾರು ಚಲನಚಿತ್ರ ವಿಮರ್ಶಕರು ಹಾಗೂ ಅಂತಾರಾಷ್ಟ್ರೀಯ ಚಲನಚಿತ್ರ ಝೂರಿಗಳು ಭಾಗವಹಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version