ದಿನದ ಸುದ್ದಿ
ಲೋಕಸಭೆ ಚುನಾವಣೆ; ರಾಜ್ಯದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆ ದಿನ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ, ದೇಶಾದ್ಯಂತ ಎರಡನೇ ಹಂತದ 89 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ರಾಜ್ಯದಲ್ಲಿ ನಡೆಯುತ್ತಿರುವ ಮೊದಲ ಹಂತದ ಚುನಾವಣೆಗೂ ಉಮೇದುವಾರಿಕೆ ಪ್ರಕ್ರಿಯೆ ಬಿರುಸುಗೊಂಡಿದೆ. ರಾಜ್ಯದ 14 ಕ್ಷೇತ್ರಗಳಿಗೆ ಮಾರ್ಚ್ 28 ರಿಂದ ಆರಂಭವಾಗಿರುವ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದು ಕೊನೆಗೊಳ್ಳಲಿದೆ. ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆ ಹಿಂಪಡೆಯಲು ಏಪ್ರಿಲ್ 8, ಸೋಮವಾರ ಕೊನೆಯ ದಿನ.
ಬಿಜೆಪಿ, ಕಾಂಗ್ರೆಸ್ ಸೇರಿದಂತೆ ವಿವಿಧ ಪಕ್ಷಗಳ ಅಭ್ಯರ್ಥಿಗಳು, ಬೃಹತ್ ಜಾಥಾ ನಡೆಸುವ ಮೂಲಕ, ಬೆಂಬಲಿಗರ ಬಲ ಪ್ರದರ್ಶನಕ್ಕೆ ಮುಂದಾಗಿವೆ. ತಮ್ಮ ಉಮೇದುವಾರಿಕೆಯನ್ನು ಜಾಥಾದಲ್ಲಿ ಆಗಮಿಸಿ, ಚುನಾವಣಾಧಿಕಾರಿಗಳಿಗೆ ಸಲ್ಲಿಸುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243