ದಿನದ ಸುದ್ದಿ

ಮೊದಲ ಹಂತದ ಲೋಕಸಭಾ ಚುನಾವಣೆಗೆ ನಾಳೆ ಅಧಿಸೂಚನೆ

Published

on

ಸುದ್ದಿದಿನ ಡೆಸ್ಕ್ : ಮೊದಲ ಹಂತದ ಲೋಕಸಭಾ ಚುನಾವಣೆಗೆ ನಾಳೆ ಅಧಿಸೂಚನೆ ಹೊರಬೀಳಲಿದೆ. 17 ರಾಜ್ಯಗಳು ಮತ್ತು 4 ಕೇಂದ್ರಾಡಳಿತ ಪ್ರದೇಶಗಳ 102 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 19 ರಂದು ಮತದಾನ ನಡೆಯಲಿದೆ.

ತಮಿಳುನಾಡಿನ 39 , ರಾಜಸ್ಥಾನ 12, ಉತ್ತರ ಪ್ರದೇಶದ 8, ಮಧ್ಯಪ್ರದೇಶದ 6, ಉತ್ತರಾಖಂಡ್, ಅಸ್ಸಾಂ ಹಾಗೂ ಮಹಾರಾಷ್ಟ್ರದ ತಲಾ 5, ಬಿಹಾರ 4, ಪಶ್ಚಿಮ ಬಂಗಾಳ 3, ಅರುಣಾಚಲ ಪ್ರದೇಶ್, ಮಣಿಪುರ್, ಮೇಘಾಲಯದಲ್ಲಿ ತಲಾ 2, ಛತ್ತೀಸ್‌ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪ, ಜಮ್ಮು ಮತ್ತು ಕಾಶ್ಮೀರ, ಲಕ್ಷ್ಯದ್ವೀಪ ಮತ್ತು ಪುದಿಚೇರಿಯ ತಲಾ ಒಂದೊಂದು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಈ ತಿಂಗಳ 27ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದ್ದು, ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version