Connect with us

ದಿನದ ಸುದ್ದಿ

ಏಪ್ರಿಲ್ 29 ರಂದು ಜಗಳೂರಿಗೆ ಸಿಎಂ | ಐತಿಹಾಸಿಕ, ದಾಖಲೆ ಪ್ರಮಾಣದ 1404.15 ಕೋಟಿ ಮೌಲ್ಯದ ವಿವಿಧ ಕಾಮಗಾರಿಗಳಿಗೆ ಚಾಲನೆ : ಸಂಸದ ಡಾ. ಜಿ.ಎಂ.ಸಿದ್ದೇಶ್ವರ್

Published

on

ಸುದ್ದಿದಿನ,ದಾವಣಗರೆ : ದಾವಣಗೆರೆ ಜಿಲ್ಲೆಯಲ್ಲಿ ಅತ್ಯಂತ ಹಿಂದುಳಿದ ತಾಲ್ಲೂಕು ಹಾಗೂ ಬರದ ತಾಲ್ಲೂಕು ಎಂದೇ ಖ್ಯಾತಿ ಪಡೆದ ಜಗಳೂರು ತಾಲ್ಲೂಕಿನ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿಯವರು ಏಪ್ರಿಲ್ 29 ರಂದು ರೂ.1404.15 ಕೋಟಿಯಷ್ಟು ಕಾಮಗಾರಿಗಳಿಗೆ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವರು ಹಾಗೂ ಸಂಸದರಾದ ಡಾ;ಜಿ.ಎಂ.ಸಿದ್ದೇಶ್ವರ್ ತಿಳಿಸಿದರು.

ಅವರು ಬುಧವಾರ ಏ.27 ರಂದು ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿ ಹಾಗೂ ಕಾರ್ಯಕ್ರಮದ ಸ್ಥಳ ಪರಿಶೀಲನೆ ನಡೆಸಿ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ರೂ.1383.10 ಕೋಟಿ ಮೌಲ್ಯದ 19 ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ರೂ.21.05 ಕೋಟಿ ಮೌಲ್ಯದ 18 ಕಾಮಗಾರಿಗಳಿಗೆ ಉದ್ಘಾಟನೆ ನೆರವೇರಿಸುವರು. ಮತ್ತು ಸುಮಾರು 12 ಇಲಾಖೆಗಳಿಂದ 1248 ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಣೆ ಮಾಡಲಿದ್ದು ಜಗಳೂರು ಪಟ್ಟಣದ ಬಯಲು ರಂಗಮಂದಿರದ ಆವರಣದಲ್ಲಿ ಏ.29 ರಂದು ಬೆಳಗ್ಗೆ 11.30 ಕ್ಕೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸುಮಾರು 25 ಸಾವಿರದಷ್ಟು ಜನರು ಭಾಗವಹಿಸಲಿದ್ದಾರೆ ಎಂದು ಸಂಸದರು ತಿಳಿಸಿದರು.

ಕಾರ್ಯಕ್ರಮದಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉಪಸ್ಥಿತರಿರುವರು. ಹಾಗೂ ಜಲ ಸಂಪನ್ಮೂಲ ಸಚಿವರಾದ ಗೋವಿಂದ ಎಂ.ಕಾರಜೋಳ, ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ, ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು, ವಸತಿ ಸಚಿವರಾದ ವಿ.ಸೋಮಣ್ಣ, ಲೋಕೋಪಯೋಗಿ ಸಚಿವರಾದ ಸಿ.ಸಿ.ಪಾಟೀಲ್, ಬೃಹತ್ ಕೈಗಾರಿಕೆ ಸಚಿವರಾದ ಮುರುಗೇಶ್ ನಿರಾಣಿಯವರು ಭಾಗವಹಿಸುವರು.

ಶಾಸಕರು ಹಾಗೂ ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಎಸ್.ವಿ.ರಾಮಚಂದ್ರ ಅಧ್ಯಕ್ಷತೆ ವಹಿಸುವರು. ಇದಲ್ಲದೆ ಬಳ್ಳಾರಿ ಸಂಸದರಾದ ವೈ.ದೇವೇಂದ್ರಪ್ಪ, ಜಿಲ್ಲೆಯ ಶಾಸಕರು ಹಾಗೂ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ಮಾಯಕೊಂಡ ಶಾಸಕರು ಹಾಗೂ ಡಾ; ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಪ್ರೊ; ಎನ್.ಲಿಂಗಣ್ಣ, ಚನ್ನಗಿರಿ ಶಾಸಕರು ಹಾಗೂ ಕರ್ನಾಟಕ ಸಾಬೂನು ಮತ್ತು ಮರ್ಜಕ ನಿಯಮಿತ ಅಧ್ಯಕ್ಷರಾದ ಮಾಡಾಳು ವಿರೂಪಾಕ್ಷಪ್ಪ, ಸರ್ಕಾರದ ಮುಖ್ಯ ಸಚೇತಕರು, ವಿಧಾನ ಪರಿಷತ್ ಡಾ; ವೈ.ಎ.ನಾರಾಯಣಸ್ವಾಮಿ, ಶಾಸಕರಾದ ಎಸ್.ಎ.ರವೀಂದ್ರನಾಥ್, ಡಾ; ಶಾಮನೂರು ಶಿವಶಂಕರಪ್ಪ, ಎನ್.ರಾಮಪ್ಪ, ವಿಧಾನಪರಿಷತ್ ಸದಸ್ಯರಾದ ಮೋಹನ್ ಕುಮಾರ್ ಕೊಂಡಜ್ಜಿ, ಕೆ.ಪಿ.ನಂಜುಂಡಿ ವಿಶ್ವಕರ್ಮ, ರವಿಕುಮಾರ್.ಎನ್, ಡಾ; ತೇಜಸ್ವಿಗೌಡ, ಆಯನೂರು ಮಂಜುನಾಥ್, ಎಸ್.ಎಲ್.ಭೋಜೇಗೌಡ, ಚಿದಾನಂದ ಎಂ.ಗೌಡ, ಆರ್.ಶಂಕರ್, ಡಿ.ಎಸ್.ಅರುಣ್, ಕೆ.ಎಸ್.ನವೀನ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಎಸ್.ಸಿದ್ದಪ್ಪ, ಉಪಾಧ್ಯಕ್ಷೆ ಮಂಜಮ್ಮ ಬಿ.ಮಂಜಣ್ಣ ಭಾಗವಹಿಸುವರು ಎಂದರು.

ಉದ್ಘಾಟನೆಯಾಗಲಿರುವ ಕಾಮಗಾರಿಗಳು

ತಲಾ ರೂ.3 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಪಟ್ಟಣ ಪಂಚಾಯತಿ ಕಚೇರಿ ಹಾಗೂ ರಂಗಮಂದಿರ, ರೂ.2.16 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಉಜ್ಜಪ್ಪವಡೇರಹಳ್ಳಿ ಗ್ರಾಮ ಆರೋಗ್ಯ ಕೇಂದ್ರ ಮತ್ತು ಮಲ್ಲಾಪುರ ಗ್ರಾಮದಲ್ಲಿ ನಿರ್ಮಿಸಲಾದ ಪ್ರಾಥಮಿಕ ಆರೋಗ್ಯ ಕೇಂದ್ರ, ರೂ.2 ಕೋಟಿ ವೆಚ್ಚದಲ್ಲಿ ಜಗಳೂರು ಪಟ್ಟಣದಲ್ಲಿ ನಿರ್ಮಿಸಿರುವ ವಿ.ಐ.ಪಿ.ಗೆಸ್ಟ್ ಹೌಸ್, ರೂ.2 ಕೋಟಿ ವೆಚ್ಚದ ಅಣಬೂರು ಗ್ರಾಮದ ವಡಕಸರ ಹಳ್ಳ ಹಾಗೂ ಜಂಗಮತುಂಬಿಗೆರೆ ಹತ್ತಿರದ ಹಳ್ಳಕ್ಕೆ ನಿರ್ಮಿಸಲಾಗಿರುವ ಚಕ್ ಡ್ಯಾಂ ರೂ.75 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಹುಚ್ಚಂಗಿಪುರದ ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ

ರೂ.50 ಲಕ್ಷ ವೆಚ್ಚದಲ್ಲಿ ದೇವಿಕೆರೆ ಗ್ರಾಮ ಪಂಚಾಯತಿಯ ಕೊಡದಗುಡ್ಡದಲ್ಲಿ ನಿರ್ಮಿಸಲಾಗಿರುವ ಯಾತ್ರಿ ನಿವಾಸ, ರೂ.1.68 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕೊಣಚಗಲ್ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ, ರೂ.2.68 ಕೋಟಿ ವೆಚ್ಚದಲ್ಲಿ ಮರು ನಿರ್ಮಾಣ ಮಾಡಿರುವ ಬಿಳಚೋಡು ಗ್ರಾಮದ ಸ.ಹಿ.ಪ್ರಾ.ಶಾಲೆ, ರೂ.4 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಅರಸೀಕೆರೆ ಗ್ರಾಮದ ರಸ್ತೆಗಳು, ಉಚ್ಚಂಗಿದುರ್ಗದ ಗ್ರಾಮದ ರಸ್ತೆಗಳು ಹಾಗೂ ರೂ.1.50 ಲಕ್ಷ ವೆಚ್ಚದ ಸೊಕ್ಕೆ ಗ್ರಾಮದ ಹೈಟೆಕ್ ಗ್ರಂಥಾಲಯ ಸೇರಿ ಒಟ್ಟು ರೂ.21.05 ಕೋಟಿ ವೆಚ್ಚದ ಒಟ್ಟು 18 ಪೂರ್ಣಗೊಂಡ ಕಾಮಗಾರಿಗಳನ್ನು ಮುಖ್ಯಮಂತ್ರಿ ಲೋಕಾರ್ಪಣೆ ಮಾಡಲಿದ್ದಾರೆ.

ರೂ.1383.10 ಕೋಟಿ ವೆಚ್ಚದಲ್ಲಿ 19 ಕಾಮಗಾರಿಗಳಿಗೆ ಶಂಕುಸ್ಥಾಪನೆ: ಚಿತ್ರದುರ್ಗ ಭದ್ರಾ ಮೇಲ್ದಂಡೆ ಯೋಜನಾ ವಲಯ ವಿಶ್ವೇಶ್ವರಯ್ಯ ಜಲನಿಗಮದ ವತಿಯಿಂದ ಭದ್ರಾ ಮೇಲ್ದಂಡೆ ಯೋಜನೆಯಡಿಯಲ್ಲಿ ಜಗಳೂರು ತಾಲ್ಲೂಕಿಗೆ 62 ಗ್ರಾಮಗಳಿಗೆ ಹನಿನೀರಾವರಿ ಸೌಲಭ್ಯ ಹಾಗೂ 9 ಕೆರೆಗಳಿಗೆ ನೀರು ತುಂಬಿಸುವ ರೂ. 125514 ಲಕ್ಷ ವೆಚ್ಚದ ಯೋಜನೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು.

ಕರ್ನಾಟಕ ಗೃಹ ಮಂಡಳಿ ವತಿಯಿಂದ ರೂ. 2670 ಲಕ್ಷ ವೆಚ್ಚದಲ್ಲಿ ಜಗಳೂರು ತಾಲ್ಲೂಕಿನ ಜಗಳೂರು ಮತ್ತು ಮರೇನಹಳ್ಳಿ ಗ್ರಾಮಗಳ ಸ.ನಂಗಳಲ್ಲಿ ಕರ್ನಾಟಕ ಗೃಹ ಮಂಡಳಿ ವತಿಯಿಂದ ನಿರ್ಮಾಣಗೊಳ್ಳುವ ನಿವೇಶನ ಮತ್ತು ಅಭಿವೃದ್ಧಿ ಕಾಮಗಾರಿ. ಲೋಕೋಪಯೋಗಿ ಇಲಾಖೆ ವತಿಯಿಂದ ರೂ.2250 ಲಕ್ಷ ವೆಚ್ಚದಲ್ಲಿ ಜಗಳೂರು ತಾಲ್ಲೂಕಿನ ಎಸ್‍ಹೆಚ್‍ಡಿಪಿ ಯೋಜನೆಯಡಿ 5 ರಸ್ತೆ ಕಾಮಗಾರಿ ಅಭಿವೃದ್ಧಿ, ರೂ.2600 ಲಕ್ಷ ವೆಚ್ಚದಲ್ಲಿ ಜಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಮಂಡ್ಯ ಹಡಗಲಿ ರಾಜ್ಯ ಹೆದ್ದಾರಿ 047ರ ರಸ್ತೆ ಸರಪಳಿ ಕೆರೆ ಏರಿಗೆ ಸುರಕ್ಷತಾ ತಡೆಗೋಡೆ, ಕ್ರಾಷ್ ಬ್ಯಾರಿಯಲ್, ಅಳವಡಿಕೆ, ಇತರೆ ಸುರಕ್ಷಾ ಕಾಮಗಾರಿಗೆ ಶಂಕುಸ್ಥಾಪನೆ.

ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ವತಿಯಿಂದ ರೂ.2131 ಲಕ್ಷ ವೆಚ್ಚದಲ್ಲಿ ಜಗಳೂರು ತಾಲ್ಲೂಕಿನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ 30 ಗ್ರಾಮಗಳ ಮನೆ ಮನೆಗೆ ಕಾರ್ಯಾತ್ಮಕ ನಳ ಸಂಪರ್ಕ ಒದಗಿಸುವ ಕಾಮಗಾರಿ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ರೂ.2123.07 ವೆಚ್ಚದಲ್ಲಿ ಜಗಳೂರು ಪಟ್ಟಣದ ವಿವಿಧ ಕೊಳಚೆ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ-ಸರ್ವರಿಗೂ ಸೂರು ಯೋಜನೆಯಡಿ 300 ಮನೆಗಳ ನಿರ್ಮಾಣ ಕಾಮಗಾರಿಗೆ ಚಾಲನೆ, ಕೃಷಿ ಇಲಾಖೆ ವತಿಯಿಂದ ರೂ.1174 ಲಕ್ಷ ವೆಚ್ಚದಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಜಲಾನಯನ ಅಭಿವೃದ್ಧಿ ಯೋಜನೆ2.00 5 ವರ್ಷದ ಕಾರ್ಯಕ್ರಮದ ಒಟ್ಟು ಪ್ರಾಜೆಕ್ಟ್ ವಿಸ್ತೀರ್ಣ 5340 ಹೆಕ್ಟೇರ್, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ರೂ. 500 ಲಕ್ಷ ವೆಚ್ಚದಲ್ಲಿ ಜಗಳೂರು ತಾಲ್ಲೂಕು ಬಿಳಿಚೋಡು ಹೋಬಳಿ ಬಗ್ಗೇನಹಳ್ಳಿ ಗ್ರಾಮದಲ್ಲಿ ಸ.ನಂ 13ರ ಜಮೀನಿನಲ್ಲಿ 9.36 ಎಕರೆ ಪ್ರದೇಶದಲ್ಲಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು.

ಸಮಾಜ ಕಲ್ಯಾಣ ಇಲಾಖೆಯಿಂದ ರೂ.450 ಲಕ್ಷ ವೆಚ್ಚದಲ್ಲಿ ಜಗಳೂರು ತಾಲ್ಲೂಕು ಅಣಬೂರು, ಅರಿಶಿನಗುಂಡಿ, ಬಿಸ್ತುವಳ್ಳಿ, ಸಾಗಲಕಟ್ಟೆ, ಗುತ್ತಿದುರ್ಗ, ಚದುರಗೊಳ್ಳ, ತುಪ್ಪದಹಳ್ಳಿ, ಅಸಗೋಡು, ಪಲ್ಲಾಗಟ್ಟೆ, ಯರಲಗಟ್ಟೆ, ಹನುಮಂತಾಪುರ, ಭರಮಸಮುದ್ರ ಗ್ರಾಮಗಳಲ್ಲಿ ಸ್ಮಶಾನ ಅಭಿವೃದ್ಧಿ ಕಾಮಗಾರಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ರೂ.80ಲಕ್ಷ ವೆಚ್ಚದಲ್ಲಿ ಜಗಳೂರು ತಾಲ್ಲೂಕು ಕಸ್ತೂರಿಪುರ, ಮಾಗಡಿ, ಐಯ್ಯನಹಳ್ಳಿ, ಗೋಪಾಲಪುರ ಗ್ರಾಮಗಳಲ್ಲಿ ಪರಿಶಿಷ್ಟ ಪಂಗಡ ಸ್ಮಶಾನ ಅಭಿವೃದ್ಧಿ ಕಾಮಗಾರಿ, ಶಿಕ್ಷಣ ಇಲಾಖೆಯಿಂದ ರೂ.31.50 ಲಕ್ಷ ವೆಚ್ಚದಲ್ಲಿ ಜಗಳೂರು ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಮತ್ತು ರೂ.16.50ಲಕ್ಷ ವೆಚ್ಚದಲ್ಲಿ ಪಲ್ಲಾಗಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಿರ್ಮಾಣ.

ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದಿಂದ ರೂ.485 ಲಕ್ಷದಲ್ಲಿ ಉಚ್ಚಂಗಿ ಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬೋಧನಾ ಕೊಠಡಿ, ಪಲ್ಲಾಗಟ್ಟೆ ಗ್ರಾಮ ರಸ್ತೆ, ವಿದ್ಯುತ್ ದೀಪ ಅಳವಡಿಕೆ, ಬಿಳಿಚೋಡು ಗ್ರಾಮದ ಮಹರ್ಷಿ ವಾಲ್ಮೀಕಿ ಭವನ, ಕೆಆರ್‍ಡಿಎಲ್‍ನಿಂದ ರೂ.465.85 ಲಕ್ಷ ವೆಚ್ಚದಲ್ಲಿ ಜಗಳೂರು ವಿಧಾನ ಸಭಾ ಕ್ಷೇತ್ರದಲ್ಲಿ ಉಚ್ಚಂಗಿ ದುರ್ಗ ಗ್ರಾಮದ ಡಾಮೆಂಟ್ರಿ ಮತ್ತು ಪ್ರವಾಸ ಅಭಿವೃದ್ಧಿ ಕಾಮಗಾರಿ, ಕೆರೆ ರಸ್ತೆ ಅಭಿವೃದ್ಧಿ ಕಾಮಗಾರಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ರೂ.75 ಲಕ್ಷದಲ್ಲಿ ವಸತಿ ನಿಲಯ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲಾಗುವುದು.

1248 ಫಲಾನುಭವಿಗಳು

ಕಂದಾಯ ಇಲಾಖೆಯಿಂದ ಬಗರ್ ಹುಕ್ಕುಂ ಸಾಗವಳಿಯ 100 ಫಲಾನುಭವಿಗಳಿಗೆ ಪತ್ರ ವಿತರಣೆ, 62 ಫಲಾನುಭವಿಗಳಿಗೆ 94 ಸಿ ಖಾಯಂ ಹಕ್ಕು ಪತ್ರ, ಜಗಳೂರು ತಾಲ್ಲೂಕು ವ್ಯಾಪ್ತಿಯಲ್ಲಿ ಕೋವಿಡ್‍ನಿಂದ ಮೃತಪಟ್ಟ 82 ಕುಟುಂಬದ ವಾರಸುದಾರರಿಗೆ ಪರಿಹಾರದ ಆದೇಶ ಪ್ರತಿ, ಇಂದಿರಾಗಾಂಧಿ ವೃದ್ಧಾಪ್ಯ ವೇತನದ 37 ಫಲಾನಿಭವಿಗಳಿಗೆ ಆದೇಶ ಪ್ರತಿ, 12 ಫಲಾನುಭವಿಗಳಿಗೆ ವಿಧವಾ ವೇತನ, ಅಂಗವಿಕಲ ವೇತನದ ಐವರು ಫಲಾನುಭವಿಗಳಿಗೆ ಆದೇಶ ಪ್ರತಿ, ಸಂಧ್ಯಾ ಸುರಕ್ಷಾ ಯೋಜನೆಯಲ್ಲಿ 60 ಫಲಾನುಭವಿಗಳಿಗೆ ಆದೇಶ ಪತ್ರ ವಿತರಣೆ ಮಾಡಲಾಗುವುದು.

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡ ಅಭಿವೃದ್ಧಿ ನಿಗಮದಿಂದ 319 ಫಲಾನುಭವಿಗಳಿಗೆ ನೇರ ಸಾಲ , 10 ಫಲಾನುಭವಿಗಳಿಗೆ ಉದ್ಯಮಶೀಲತಾ ಯೋಜನೆಯಡಿತಯಲ್ಲಿ ಐರವಾತ ಕಾರು ವಿತರಣೆ. ಪ್ರೇರಣ ಮೈಕ್ರೋ ಕ್ರೆಡಿಟ್ ಯೋಜನೆಯಲ್ಲಿ 100 ಫಲಾನುಭವಿಗಳು, ಭೂ ಒಡೆತನ ಯೋಜನೆಯಡಿಯಲ್ಲಿ 2 ಫಲಾನುಭವಿಗಳಿಗೆ ಆದೇಶ ಪತ್ರ ವಿತರಿಸಲಾಗುವುದು.

ಶಿಶು ಅಭಿವೃದ್ಧಿ ಇಲಾಖೆಯಿಂದ ಅಮೃತ ಕಿರು ಉದ್ಯಮಿ ಯೋಜನೆಯಡಿ 33 ಸ್ವಸಹಾಯ ಗುಂಪುಗಳಿಗೆ ಬೀಜ ಧನಚೆಕ್ ವಿತರಣೆ, ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳ ಅಡಿಯಲ್ಲಿ ಇಲಾಖೆಯಿಂದ ಸೌಲಭ್ಯ ಪಡೆದ 95 ಫಲಾನುಭವಿ ರೈತರಿಗೆ ಸೌಲಭ್ಯ ವಿತರಣೆ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ 2 ಫಲಾನುಭವಿಗಳು, ಟ್ಯಾಕ್ಸಿ, ಗೂಡ್ಸ್ ಖರೀದಿ ಯೋಜನೆ ಅಡಿಯಲ್ಲಿ 2 ಫಲಾನುಭವಿಗಳು ಆದೇಶ ಪತ್ರ ವಿತರಣೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ 12 ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡಲಾಗುವುದು.

ಅರಣ್ಯ ಇಲಾಖೆಯಿಂದ 60 ಫಲಾನುಭವಿಗಳಿಗೆ ಪರಿಹಾರ ವಿತರಣೆ-ಜಗಳೂರು ವಲಯದಲ್ಲಿ ವನ್ಯಪ್ರಾಣಿ ದಾಳಿಯಿಂದ ಬೆಳೆ ಹಾನಿ, ಮಾನವ ಗಾಯ, ಮೃತಪಟ್ಟ ಸಾಕು ಪ್ರಾಣಿಗಳಿಗೆ ಪರಿಹಾರ ಧನ ವಿತರಣೆ ಮಾಡಲಾಗುವುದು. ರೇಷ್ಮೆ ಇಲಾಖೆಯಿಂದ ಜಿಲ್ಲಾ ಮಟ್ಟದ 3 ಪ್ರಗತಿಪರ ರೇಷ್ಮೆ ಬೆಳೆಗಾರರ ಪ್ರಶಸ್ತಿ ವಿತರಣೆ ಮಾಡಲಾಗುವುದು.

ಮೀನುಗಾರಿಗೆ ಇಲಾಖೆಯಿಂದ ಪ್ರಧಾನಮಂತ್ರಿ ಮತ್ಸ್ಯ ಯೋಜನೆಯಲ್ಲಿ 7 ಫಲಾನುಭವಿಗಳು ಸೌಲಭ್ಯ, ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ 34 ಫಲಾನುಭವಿಗಳಿಗೆ ಮೋಟಾರ್ ವಿತರಣೆ, ಗ್ರಾಮ ಪಂಚಾಯತ್‍ನಿಂದ ಗ್ರಾಮೀಣ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ 15 ಘನತ್ಯಾಜ್ಯ ವಿಲೇವಾರಿಯ ಸ್ವಚ್ಛ ವಾಹನಗಳ ಉದ್ಘಾಟನೆ ಮಾಡಲಾಗುತ್ತದೆ.

ಸಹಕಾರ ಇಲಾಖೆಯಿಂದ ದಾವಣಗೆರೆ ಜಿಲ್ಲಾ ಸಹಕಾರ ಬ್ಯಾಂಕ್, ಪಲ್ಲಾಗಟ್ಟೆ ಶಾಖೆ ಹಾಗೂ ದೊಣ್ಣೆ ಹಳ್ಳಿ ಶಾಖೆಯ 124 ಫಲಾನುಭವಿಗಳಿಗೆ ಕಿಸಾನ್ ಕ್ರೆಡಿಟ್ ಸಾಲ ಸೌಲಭ್ಯ ಮಂಜೂರಾತಿ ಆದೇಶ ಪತ್ರ ವಿತರಣೆ ಮಾಡಲಾಗುತ್ತದೆ.

ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ರಕ್ಷಣಾಧಿಕಾರಿ ಸಿ.ಬಿ.ರಿಷ್ಯಂತ್, ತಹಶೀಲ್ದಾರ್ ಸಂತೋಷ್ , ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀಪತಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.

ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

Published

on

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ

ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.

ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ತಾಲ್ಲೂಕು ತಹಶೀಲ್ದಾರ್‌ ರಾಜೇಶ್‌ ಕುಮಾರ್‌ ಸಿ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending