ದಿನದ ಸುದ್ದಿ
ಏಪ್ರಿಲ್ 29 ರಂದು ಜಗಳೂರಿಗೆ ಸಿಎಂ | ಐತಿಹಾಸಿಕ, ದಾಖಲೆ ಪ್ರಮಾಣದ 1404.15 ಕೋಟಿ ಮೌಲ್ಯದ ವಿವಿಧ ಕಾಮಗಾರಿಗಳಿಗೆ ಚಾಲನೆ : ಸಂಸದ ಡಾ. ಜಿ.ಎಂ.ಸಿದ್ದೇಶ್ವರ್
ಸುದ್ದಿದಿನ,ದಾವಣಗರೆ : ದಾವಣಗೆರೆ ಜಿಲ್ಲೆಯಲ್ಲಿ ಅತ್ಯಂತ ಹಿಂದುಳಿದ ತಾಲ್ಲೂಕು ಹಾಗೂ ಬರದ ತಾಲ್ಲೂಕು ಎಂದೇ ಖ್ಯಾತಿ ಪಡೆದ ಜಗಳೂರು ತಾಲ್ಲೂಕಿನ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿಯವರು ಏಪ್ರಿಲ್ 29 ರಂದು ರೂ.1404.15 ಕೋಟಿಯಷ್ಟು ಕಾಮಗಾರಿಗಳಿಗೆ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವರು ಹಾಗೂ ಸಂಸದರಾದ ಡಾ;ಜಿ.ಎಂ.ಸಿದ್ದೇಶ್ವರ್ ತಿಳಿಸಿದರು.
ಅವರು ಬುಧವಾರ ಏ.27 ರಂದು ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿ ಹಾಗೂ ಕಾರ್ಯಕ್ರಮದ ಸ್ಥಳ ಪರಿಶೀಲನೆ ನಡೆಸಿ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ರೂ.1383.10 ಕೋಟಿ ಮೌಲ್ಯದ 19 ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ರೂ.21.05 ಕೋಟಿ ಮೌಲ್ಯದ 18 ಕಾಮಗಾರಿಗಳಿಗೆ ಉದ್ಘಾಟನೆ ನೆರವೇರಿಸುವರು. ಮತ್ತು ಸುಮಾರು 12 ಇಲಾಖೆಗಳಿಂದ 1248 ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಣೆ ಮಾಡಲಿದ್ದು ಜಗಳೂರು ಪಟ್ಟಣದ ಬಯಲು ರಂಗಮಂದಿರದ ಆವರಣದಲ್ಲಿ ಏ.29 ರಂದು ಬೆಳಗ್ಗೆ 11.30 ಕ್ಕೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸುಮಾರು 25 ಸಾವಿರದಷ್ಟು ಜನರು ಭಾಗವಹಿಸಲಿದ್ದಾರೆ ಎಂದು ಸಂಸದರು ತಿಳಿಸಿದರು.
ಕಾರ್ಯಕ್ರಮದಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉಪಸ್ಥಿತರಿರುವರು. ಹಾಗೂ ಜಲ ಸಂಪನ್ಮೂಲ ಸಚಿವರಾದ ಗೋವಿಂದ ಎಂ.ಕಾರಜೋಳ, ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ, ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು, ವಸತಿ ಸಚಿವರಾದ ವಿ.ಸೋಮಣ್ಣ, ಲೋಕೋಪಯೋಗಿ ಸಚಿವರಾದ ಸಿ.ಸಿ.ಪಾಟೀಲ್, ಬೃಹತ್ ಕೈಗಾರಿಕೆ ಸಚಿವರಾದ ಮುರುಗೇಶ್ ನಿರಾಣಿಯವರು ಭಾಗವಹಿಸುವರು.
ಶಾಸಕರು ಹಾಗೂ ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಎಸ್.ವಿ.ರಾಮಚಂದ್ರ ಅಧ್ಯಕ್ಷತೆ ವಹಿಸುವರು. ಇದಲ್ಲದೆ ಬಳ್ಳಾರಿ ಸಂಸದರಾದ ವೈ.ದೇವೇಂದ್ರಪ್ಪ, ಜಿಲ್ಲೆಯ ಶಾಸಕರು ಹಾಗೂ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ಮಾಯಕೊಂಡ ಶಾಸಕರು ಹಾಗೂ ಡಾ; ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಪ್ರೊ; ಎನ್.ಲಿಂಗಣ್ಣ, ಚನ್ನಗಿರಿ ಶಾಸಕರು ಹಾಗೂ ಕರ್ನಾಟಕ ಸಾಬೂನು ಮತ್ತು ಮರ್ಜಕ ನಿಯಮಿತ ಅಧ್ಯಕ್ಷರಾದ ಮಾಡಾಳು ವಿರೂಪಾಕ್ಷಪ್ಪ, ಸರ್ಕಾರದ ಮುಖ್ಯ ಸಚೇತಕರು, ವಿಧಾನ ಪರಿಷತ್ ಡಾ; ವೈ.ಎ.ನಾರಾಯಣಸ್ವಾಮಿ, ಶಾಸಕರಾದ ಎಸ್.ಎ.ರವೀಂದ್ರನಾಥ್, ಡಾ; ಶಾಮನೂರು ಶಿವಶಂಕರಪ್ಪ, ಎನ್.ರಾಮಪ್ಪ, ವಿಧಾನಪರಿಷತ್ ಸದಸ್ಯರಾದ ಮೋಹನ್ ಕುಮಾರ್ ಕೊಂಡಜ್ಜಿ, ಕೆ.ಪಿ.ನಂಜುಂಡಿ ವಿಶ್ವಕರ್ಮ, ರವಿಕುಮಾರ್.ಎನ್, ಡಾ; ತೇಜಸ್ವಿಗೌಡ, ಆಯನೂರು ಮಂಜುನಾಥ್, ಎಸ್.ಎಲ್.ಭೋಜೇಗೌಡ, ಚಿದಾನಂದ ಎಂ.ಗೌಡ, ಆರ್.ಶಂಕರ್, ಡಿ.ಎಸ್.ಅರುಣ್, ಕೆ.ಎಸ್.ನವೀನ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಎಸ್.ಸಿದ್ದಪ್ಪ, ಉಪಾಧ್ಯಕ್ಷೆ ಮಂಜಮ್ಮ ಬಿ.ಮಂಜಣ್ಣ ಭಾಗವಹಿಸುವರು ಎಂದರು.
ಉದ್ಘಾಟನೆಯಾಗಲಿರುವ ಕಾಮಗಾರಿಗಳು
ತಲಾ ರೂ.3 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಪಟ್ಟಣ ಪಂಚಾಯತಿ ಕಚೇರಿ ಹಾಗೂ ರಂಗಮಂದಿರ, ರೂ.2.16 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಉಜ್ಜಪ್ಪವಡೇರಹಳ್ಳಿ ಗ್ರಾಮ ಆರೋಗ್ಯ ಕೇಂದ್ರ ಮತ್ತು ಮಲ್ಲಾಪುರ ಗ್ರಾಮದಲ್ಲಿ ನಿರ್ಮಿಸಲಾದ ಪ್ರಾಥಮಿಕ ಆರೋಗ್ಯ ಕೇಂದ್ರ, ರೂ.2 ಕೋಟಿ ವೆಚ್ಚದಲ್ಲಿ ಜಗಳೂರು ಪಟ್ಟಣದಲ್ಲಿ ನಿರ್ಮಿಸಿರುವ ವಿ.ಐ.ಪಿ.ಗೆಸ್ಟ್ ಹೌಸ್, ರೂ.2 ಕೋಟಿ ವೆಚ್ಚದ ಅಣಬೂರು ಗ್ರಾಮದ ವಡಕಸರ ಹಳ್ಳ ಹಾಗೂ ಜಂಗಮತುಂಬಿಗೆರೆ ಹತ್ತಿರದ ಹಳ್ಳಕ್ಕೆ ನಿರ್ಮಿಸಲಾಗಿರುವ ಚಕ್ ಡ್ಯಾಂ ರೂ.75 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಹುಚ್ಚಂಗಿಪುರದ ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ
ರೂ.50 ಲಕ್ಷ ವೆಚ್ಚದಲ್ಲಿ ದೇವಿಕೆರೆ ಗ್ರಾಮ ಪಂಚಾಯತಿಯ ಕೊಡದಗುಡ್ಡದಲ್ಲಿ ನಿರ್ಮಿಸಲಾಗಿರುವ ಯಾತ್ರಿ ನಿವಾಸ, ರೂ.1.68 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕೊಣಚಗಲ್ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ, ರೂ.2.68 ಕೋಟಿ ವೆಚ್ಚದಲ್ಲಿ ಮರು ನಿರ್ಮಾಣ ಮಾಡಿರುವ ಬಿಳಚೋಡು ಗ್ರಾಮದ ಸ.ಹಿ.ಪ್ರಾ.ಶಾಲೆ, ರೂ.4 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಅರಸೀಕೆರೆ ಗ್ರಾಮದ ರಸ್ತೆಗಳು, ಉಚ್ಚಂಗಿದುರ್ಗದ ಗ್ರಾಮದ ರಸ್ತೆಗಳು ಹಾಗೂ ರೂ.1.50 ಲಕ್ಷ ವೆಚ್ಚದ ಸೊಕ್ಕೆ ಗ್ರಾಮದ ಹೈಟೆಕ್ ಗ್ರಂಥಾಲಯ ಸೇರಿ ಒಟ್ಟು ರೂ.21.05 ಕೋಟಿ ವೆಚ್ಚದ ಒಟ್ಟು 18 ಪೂರ್ಣಗೊಂಡ ಕಾಮಗಾರಿಗಳನ್ನು ಮುಖ್ಯಮಂತ್ರಿ ಲೋಕಾರ್ಪಣೆ ಮಾಡಲಿದ್ದಾರೆ.
ರೂ.1383.10 ಕೋಟಿ ವೆಚ್ಚದಲ್ಲಿ 19 ಕಾಮಗಾರಿಗಳಿಗೆ ಶಂಕುಸ್ಥಾಪನೆ: ಚಿತ್ರದುರ್ಗ ಭದ್ರಾ ಮೇಲ್ದಂಡೆ ಯೋಜನಾ ವಲಯ ವಿಶ್ವೇಶ್ವರಯ್ಯ ಜಲನಿಗಮದ ವತಿಯಿಂದ ಭದ್ರಾ ಮೇಲ್ದಂಡೆ ಯೋಜನೆಯಡಿಯಲ್ಲಿ ಜಗಳೂರು ತಾಲ್ಲೂಕಿಗೆ 62 ಗ್ರಾಮಗಳಿಗೆ ಹನಿನೀರಾವರಿ ಸೌಲಭ್ಯ ಹಾಗೂ 9 ಕೆರೆಗಳಿಗೆ ನೀರು ತುಂಬಿಸುವ ರೂ. 125514 ಲಕ್ಷ ವೆಚ್ಚದ ಯೋಜನೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು.
ಕರ್ನಾಟಕ ಗೃಹ ಮಂಡಳಿ ವತಿಯಿಂದ ರೂ. 2670 ಲಕ್ಷ ವೆಚ್ಚದಲ್ಲಿ ಜಗಳೂರು ತಾಲ್ಲೂಕಿನ ಜಗಳೂರು ಮತ್ತು ಮರೇನಹಳ್ಳಿ ಗ್ರಾಮಗಳ ಸ.ನಂಗಳಲ್ಲಿ ಕರ್ನಾಟಕ ಗೃಹ ಮಂಡಳಿ ವತಿಯಿಂದ ನಿರ್ಮಾಣಗೊಳ್ಳುವ ನಿವೇಶನ ಮತ್ತು ಅಭಿವೃದ್ಧಿ ಕಾಮಗಾರಿ. ಲೋಕೋಪಯೋಗಿ ಇಲಾಖೆ ವತಿಯಿಂದ ರೂ.2250 ಲಕ್ಷ ವೆಚ್ಚದಲ್ಲಿ ಜಗಳೂರು ತಾಲ್ಲೂಕಿನ ಎಸ್ಹೆಚ್ಡಿಪಿ ಯೋಜನೆಯಡಿ 5 ರಸ್ತೆ ಕಾಮಗಾರಿ ಅಭಿವೃದ್ಧಿ, ರೂ.2600 ಲಕ್ಷ ವೆಚ್ಚದಲ್ಲಿ ಜಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಮಂಡ್ಯ ಹಡಗಲಿ ರಾಜ್ಯ ಹೆದ್ದಾರಿ 047ರ ರಸ್ತೆ ಸರಪಳಿ ಕೆರೆ ಏರಿಗೆ ಸುರಕ್ಷತಾ ತಡೆಗೋಡೆ, ಕ್ರಾಷ್ ಬ್ಯಾರಿಯಲ್, ಅಳವಡಿಕೆ, ಇತರೆ ಸುರಕ್ಷಾ ಕಾಮಗಾರಿಗೆ ಶಂಕುಸ್ಥಾಪನೆ.
ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ವತಿಯಿಂದ ರೂ.2131 ಲಕ್ಷ ವೆಚ್ಚದಲ್ಲಿ ಜಗಳೂರು ತಾಲ್ಲೂಕಿನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ 30 ಗ್ರಾಮಗಳ ಮನೆ ಮನೆಗೆ ಕಾರ್ಯಾತ್ಮಕ ನಳ ಸಂಪರ್ಕ ಒದಗಿಸುವ ಕಾಮಗಾರಿ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ರೂ.2123.07 ವೆಚ್ಚದಲ್ಲಿ ಜಗಳೂರು ಪಟ್ಟಣದ ವಿವಿಧ ಕೊಳಚೆ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ-ಸರ್ವರಿಗೂ ಸೂರು ಯೋಜನೆಯಡಿ 300 ಮನೆಗಳ ನಿರ್ಮಾಣ ಕಾಮಗಾರಿಗೆ ಚಾಲನೆ, ಕೃಷಿ ಇಲಾಖೆ ವತಿಯಿಂದ ರೂ.1174 ಲಕ್ಷ ವೆಚ್ಚದಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಜಲಾನಯನ ಅಭಿವೃದ್ಧಿ ಯೋಜನೆ2.00 5 ವರ್ಷದ ಕಾರ್ಯಕ್ರಮದ ಒಟ್ಟು ಪ್ರಾಜೆಕ್ಟ್ ವಿಸ್ತೀರ್ಣ 5340 ಹೆಕ್ಟೇರ್, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ರೂ. 500 ಲಕ್ಷ ವೆಚ್ಚದಲ್ಲಿ ಜಗಳೂರು ತಾಲ್ಲೂಕು ಬಿಳಿಚೋಡು ಹೋಬಳಿ ಬಗ್ಗೇನಹಳ್ಳಿ ಗ್ರಾಮದಲ್ಲಿ ಸ.ನಂ 13ರ ಜಮೀನಿನಲ್ಲಿ 9.36 ಎಕರೆ ಪ್ರದೇಶದಲ್ಲಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು.
ಸಮಾಜ ಕಲ್ಯಾಣ ಇಲಾಖೆಯಿಂದ ರೂ.450 ಲಕ್ಷ ವೆಚ್ಚದಲ್ಲಿ ಜಗಳೂರು ತಾಲ್ಲೂಕು ಅಣಬೂರು, ಅರಿಶಿನಗುಂಡಿ, ಬಿಸ್ತುವಳ್ಳಿ, ಸಾಗಲಕಟ್ಟೆ, ಗುತ್ತಿದುರ್ಗ, ಚದುರಗೊಳ್ಳ, ತುಪ್ಪದಹಳ್ಳಿ, ಅಸಗೋಡು, ಪಲ್ಲಾಗಟ್ಟೆ, ಯರಲಗಟ್ಟೆ, ಹನುಮಂತಾಪುರ, ಭರಮಸಮುದ್ರ ಗ್ರಾಮಗಳಲ್ಲಿ ಸ್ಮಶಾನ ಅಭಿವೃದ್ಧಿ ಕಾಮಗಾರಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ರೂ.80ಲಕ್ಷ ವೆಚ್ಚದಲ್ಲಿ ಜಗಳೂರು ತಾಲ್ಲೂಕು ಕಸ್ತೂರಿಪುರ, ಮಾಗಡಿ, ಐಯ್ಯನಹಳ್ಳಿ, ಗೋಪಾಲಪುರ ಗ್ರಾಮಗಳಲ್ಲಿ ಪರಿಶಿಷ್ಟ ಪಂಗಡ ಸ್ಮಶಾನ ಅಭಿವೃದ್ಧಿ ಕಾಮಗಾರಿ, ಶಿಕ್ಷಣ ಇಲಾಖೆಯಿಂದ ರೂ.31.50 ಲಕ್ಷ ವೆಚ್ಚದಲ್ಲಿ ಜಗಳೂರು ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಮತ್ತು ರೂ.16.50ಲಕ್ಷ ವೆಚ್ಚದಲ್ಲಿ ಪಲ್ಲಾಗಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಿರ್ಮಾಣ.
ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದಿಂದ ರೂ.485 ಲಕ್ಷದಲ್ಲಿ ಉಚ್ಚಂಗಿ ಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬೋಧನಾ ಕೊಠಡಿ, ಪಲ್ಲಾಗಟ್ಟೆ ಗ್ರಾಮ ರಸ್ತೆ, ವಿದ್ಯುತ್ ದೀಪ ಅಳವಡಿಕೆ, ಬಿಳಿಚೋಡು ಗ್ರಾಮದ ಮಹರ್ಷಿ ವಾಲ್ಮೀಕಿ ಭವನ, ಕೆಆರ್ಡಿಎಲ್ನಿಂದ ರೂ.465.85 ಲಕ್ಷ ವೆಚ್ಚದಲ್ಲಿ ಜಗಳೂರು ವಿಧಾನ ಸಭಾ ಕ್ಷೇತ್ರದಲ್ಲಿ ಉಚ್ಚಂಗಿ ದುರ್ಗ ಗ್ರಾಮದ ಡಾಮೆಂಟ್ರಿ ಮತ್ತು ಪ್ರವಾಸ ಅಭಿವೃದ್ಧಿ ಕಾಮಗಾರಿ, ಕೆರೆ ರಸ್ತೆ ಅಭಿವೃದ್ಧಿ ಕಾಮಗಾರಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ರೂ.75 ಲಕ್ಷದಲ್ಲಿ ವಸತಿ ನಿಲಯ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲಾಗುವುದು.
1248 ಫಲಾನುಭವಿಗಳು
ಕಂದಾಯ ಇಲಾಖೆಯಿಂದ ಬಗರ್ ಹುಕ್ಕುಂ ಸಾಗವಳಿಯ 100 ಫಲಾನುಭವಿಗಳಿಗೆ ಪತ್ರ ವಿತರಣೆ, 62 ಫಲಾನುಭವಿಗಳಿಗೆ 94 ಸಿ ಖಾಯಂ ಹಕ್ಕು ಪತ್ರ, ಜಗಳೂರು ತಾಲ್ಲೂಕು ವ್ಯಾಪ್ತಿಯಲ್ಲಿ ಕೋವಿಡ್ನಿಂದ ಮೃತಪಟ್ಟ 82 ಕುಟುಂಬದ ವಾರಸುದಾರರಿಗೆ ಪರಿಹಾರದ ಆದೇಶ ಪ್ರತಿ, ಇಂದಿರಾಗಾಂಧಿ ವೃದ್ಧಾಪ್ಯ ವೇತನದ 37 ಫಲಾನಿಭವಿಗಳಿಗೆ ಆದೇಶ ಪ್ರತಿ, 12 ಫಲಾನುಭವಿಗಳಿಗೆ ವಿಧವಾ ವೇತನ, ಅಂಗವಿಕಲ ವೇತನದ ಐವರು ಫಲಾನುಭವಿಗಳಿಗೆ ಆದೇಶ ಪ್ರತಿ, ಸಂಧ್ಯಾ ಸುರಕ್ಷಾ ಯೋಜನೆಯಲ್ಲಿ 60 ಫಲಾನುಭವಿಗಳಿಗೆ ಆದೇಶ ಪತ್ರ ವಿತರಣೆ ಮಾಡಲಾಗುವುದು.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡ ಅಭಿವೃದ್ಧಿ ನಿಗಮದಿಂದ 319 ಫಲಾನುಭವಿಗಳಿಗೆ ನೇರ ಸಾಲ , 10 ಫಲಾನುಭವಿಗಳಿಗೆ ಉದ್ಯಮಶೀಲತಾ ಯೋಜನೆಯಡಿತಯಲ್ಲಿ ಐರವಾತ ಕಾರು ವಿತರಣೆ. ಪ್ರೇರಣ ಮೈಕ್ರೋ ಕ್ರೆಡಿಟ್ ಯೋಜನೆಯಲ್ಲಿ 100 ಫಲಾನುಭವಿಗಳು, ಭೂ ಒಡೆತನ ಯೋಜನೆಯಡಿಯಲ್ಲಿ 2 ಫಲಾನುಭವಿಗಳಿಗೆ ಆದೇಶ ಪತ್ರ ವಿತರಿಸಲಾಗುವುದು.
ಶಿಶು ಅಭಿವೃದ್ಧಿ ಇಲಾಖೆಯಿಂದ ಅಮೃತ ಕಿರು ಉದ್ಯಮಿ ಯೋಜನೆಯಡಿ 33 ಸ್ವಸಹಾಯ ಗುಂಪುಗಳಿಗೆ ಬೀಜ ಧನಚೆಕ್ ವಿತರಣೆ, ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳ ಅಡಿಯಲ್ಲಿ ಇಲಾಖೆಯಿಂದ ಸೌಲಭ್ಯ ಪಡೆದ 95 ಫಲಾನುಭವಿ ರೈತರಿಗೆ ಸೌಲಭ್ಯ ವಿತರಣೆ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ 2 ಫಲಾನುಭವಿಗಳು, ಟ್ಯಾಕ್ಸಿ, ಗೂಡ್ಸ್ ಖರೀದಿ ಯೋಜನೆ ಅಡಿಯಲ್ಲಿ 2 ಫಲಾನುಭವಿಗಳು ಆದೇಶ ಪತ್ರ ವಿತರಣೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ 12 ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡಲಾಗುವುದು.
ಅರಣ್ಯ ಇಲಾಖೆಯಿಂದ 60 ಫಲಾನುಭವಿಗಳಿಗೆ ಪರಿಹಾರ ವಿತರಣೆ-ಜಗಳೂರು ವಲಯದಲ್ಲಿ ವನ್ಯಪ್ರಾಣಿ ದಾಳಿಯಿಂದ ಬೆಳೆ ಹಾನಿ, ಮಾನವ ಗಾಯ, ಮೃತಪಟ್ಟ ಸಾಕು ಪ್ರಾಣಿಗಳಿಗೆ ಪರಿಹಾರ ಧನ ವಿತರಣೆ ಮಾಡಲಾಗುವುದು. ರೇಷ್ಮೆ ಇಲಾಖೆಯಿಂದ ಜಿಲ್ಲಾ ಮಟ್ಟದ 3 ಪ್ರಗತಿಪರ ರೇಷ್ಮೆ ಬೆಳೆಗಾರರ ಪ್ರಶಸ್ತಿ ವಿತರಣೆ ಮಾಡಲಾಗುವುದು.
ಮೀನುಗಾರಿಗೆ ಇಲಾಖೆಯಿಂದ ಪ್ರಧಾನಮಂತ್ರಿ ಮತ್ಸ್ಯ ಯೋಜನೆಯಲ್ಲಿ 7 ಫಲಾನುಭವಿಗಳು ಸೌಲಭ್ಯ, ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ 34 ಫಲಾನುಭವಿಗಳಿಗೆ ಮೋಟಾರ್ ವಿತರಣೆ, ಗ್ರಾಮ ಪಂಚಾಯತ್ನಿಂದ ಗ್ರಾಮೀಣ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ 15 ಘನತ್ಯಾಜ್ಯ ವಿಲೇವಾರಿಯ ಸ್ವಚ್ಛ ವಾಹನಗಳ ಉದ್ಘಾಟನೆ ಮಾಡಲಾಗುತ್ತದೆ.
ಸಹಕಾರ ಇಲಾಖೆಯಿಂದ ದಾವಣಗೆರೆ ಜಿಲ್ಲಾ ಸಹಕಾರ ಬ್ಯಾಂಕ್, ಪಲ್ಲಾಗಟ್ಟೆ ಶಾಖೆ ಹಾಗೂ ದೊಣ್ಣೆ ಹಳ್ಳಿ ಶಾಖೆಯ 124 ಫಲಾನುಭವಿಗಳಿಗೆ ಕಿಸಾನ್ ಕ್ರೆಡಿಟ್ ಸಾಲ ಸೌಲಭ್ಯ ಮಂಜೂರಾತಿ ಆದೇಶ ಪತ್ರ ವಿತರಣೆ ಮಾಡಲಾಗುತ್ತದೆ.
ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ರಕ್ಷಣಾಧಿಕಾರಿ ಸಿ.ಬಿ.ರಿಷ್ಯಂತ್, ತಹಶೀಲ್ದಾರ್ ಸಂತೋಷ್ , ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀಪತಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.
ಹೌದು! 2023ರ ಆಗಸ್ಟ್ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.
http://Visit : www.suddidina.com
ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ:
ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.
ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.
ಕುಟುಂಬದ ಬಜೆಟ್ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:
ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.
ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

ದಿನದ ಸುದ್ದಿ
ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.
http://Visit : www.suddidina.com
ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.
ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:
1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.
2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.
3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.
4. ಖರಗ್ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.
ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.
ಕರ್ನಾಟಕಕ್ಕೆ ಏನು ಲಾಭ?
ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.
ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.
ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ದಿನದ ಸುದ್ದಿ
ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.
ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:
ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.
http://Visit : www.suddidina.com
ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ
ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.
ದೃಢ ಕರ್ನಾಟಕದ ಸಂಕಲ್ಪ
ಶತಕದ ಪಥ – ಪ್ರಗತಿಯ ರಥ100 ದಿನಗಳು.. ಇದು ಕೇವಲ ಆರಂಭವಷ್ಟೇ. ಜನರ ಆಶಯಗಳಿಗೆ ಸ್ಪಂದಿಸಿ, ರಾಜ್ಯದ ಸಮಗ್ರ ಅಭಿವೃದ್ಧಿಗೆ ವೇಗ ನೀಡುವ ಸಂಕಲ್ಪದೊಂದಿಗೆ ಕಳೆದ 100 ದಿನಗಳಲ್ಲಿ ಹಲವು ಮಹತ್ವದ ಹೆಜ್ಜೆಗಳನ್ನು ಇಡಲಾಗಿದೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿ, ಉದ್ಯೋಗ, ತಂತ್ರಜ್ಞಾನ, ಮೂಲಸೌಕರ್ಯ, ಶಿಕ್ಷಣ, ಕೃಷಿ ಹಾಗೂ… pic.twitter.com/NDViSWw6LV
— DK Shivakumar (@DKShivakumar) September 10, 2026
ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.
100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

-
ದಿನದ ಸುದ್ದಿ3 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ3 days agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ3 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ3 days agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
-
ದಿನದ ಸುದ್ದಿ3 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ3 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ3 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ3 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್



