ದಿನದ ಸುದ್ದಿ
ಲೋಕಸಭಾ ಚುನಾವಣೆ ; ಮತ ಎಣಿಕೆ | ಯಾರಿಗೆ ? ಎಷ್ಟು ಮತ : ಇಲ್ಲಿದೆ ಸಂಪೂರ್ಣ ಮಾಹಿತಿ
ಸುದ್ದಿದಿನ ಡೆಸ್ಕ್ : ಲೋಕಸಭೆಯ 543 ಸ್ಥಾನಗಳ ಪೈಕಿ ಒಂದು ಸ್ಥಾನದಲ್ಲಿ ಬಿಜೆಪಿ ಜಯ ಗಳಿಸಿದೆ. ಉಳಿದ 542 ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿದೆ.
ಬಿಜೆಪಿ-233, ಐಎನ್‌ಸಿ-94, ಎಸ್‌ಪಿ-35, ಆಲ್ ಇಂಡಿಯಾ ತೃಣಮೂಲ ಕಾಂಗ್ರೆಸ್-ಎಐಟಿಸಿ-24, ಡಿಎಂಕೆ-19, ತೆಲುಗುದೇಶಂ-ಟಿಡಿಪಿ-15, ಜೆಡಿಯು-13, ಶಿವಸೇನಾ ಉದ್ಧವ್ ಬಾಳೆ ಸಾಹೇಬ್ಠಾಕ್ರೆ-ಎಸ್‌ಎಚ್‌ಎಸ್‌ಯುಬಿಟಿ-10, ಶಿವಸೇನೆ ಶಿಂಥೆ ಬಣ-6, ರಾಷ್ಟ್ರೀಯ ಕಾಂಗ್ರೆಸ್ ಪಾರ್ಟಿ ಶರದ್ ಪವರ್-8, ಆಮ್ ಆದ್ಮಿ ಪಾರ್ಟಿ-4, ರಾಷ್ಟ್ರೀಯ ಜನತಾದಲ್-4, ಜನತಾದಳ್ ಜೆಡಿಎಸ್-3 ಇಂಡಿಯನ್ ಯುನಿಯನ್ ಮುಸ್ಲಿಂ ಲೀಗ್-ಇಯುಎಂಎಲ್-3 ಸ್ಥಾನಗಳಲ್ಲಿ ಮುನ್ನಡೆ ಪಡೆದಿದೆ.
ಗುಜರಾತ್-ಗಾಂಧಿನಗರ ಕ್ಷೇತ್ರದಲ್ಲಿ ಅಮಿತ್ ಶಾ, ಬಿಜೆಪಿ-2,09,736ಸೋನಾಲ್ ಪಟೇಲ್, ಕಾಂಗ್ರೆಸ್-42,642
ಉತ್ತರ ಪ್ರದೇಶ, ಲಕ್ನೋ ರಾಜನಾಥ್ ಸಿಂಗ್-62,210
ರವಿದಾಸ್ ಮೆಹ್ರೋತ್ರಾ- 55,941ಉತ್ತರ ಪ್ರದೇಶದ ರಾಯಬರೇಲಿಯಲ್ಲಿ ರಾಹುಲ್ ಗಾಂಧಿ, ಕಾಂಗ್ರೆಸ್-81,407
ದಿನೇಶ ಪ್ರತಾಪ್ ಸಿಂಗ್, ಬಿಜೆಪಿ-42,069
ಕೇರಳ, ವಯಾನಾಡು ರಾಹುಲ್ ಗಾಂಧಿ-1,32,553
ಅಣ್ಣೆರಾಜ, ಸಿಪಿಐ-52,350 ತೆಲಂಗಾಣ, ಹೈದರಾಬಾದ್, ಅಸ್ಸಾಸುದ್ದೀನ್ ಓವೈನಿ-1,28,693 ಮತಗಳನ್ನು ಪಡೆದ್ದಾರೆ.
ಮಾಧವಿ ಲತಾ-95,684
ಉತ್ತರ ಪ್ರದೇಶ, ಅಮೇಥಿ ಕಿಶೋರಿ ಲಾಲ್, ಕಾಂಗ್ರೆಸ್-70,252ಸ್ಮೃತಿ ಇರಾನಿ, ಬಿಜೆಪಿ-50,995
ಹಿಮಾಚಲ ಪ್ರದೇಶ- ಮಂಡಿ ಕಂಗನಾ ರನೌತ್, ಬಿಜೆಪಿ-2,25,654ವಿಕ್ರಮಾದಿತ್ಯ ಸಿಂಗ್-ಕಾAಗ್ರೆಸ್-1,94,562
ಕರ್ನಾಟಕದಲ್ಲಿ ಭಾರತೀಯ ಜನತಾ ಪಾರ್ಟಿ-ಬಿಜೆಪಿ 17 ಕ್ಷೇತ್ರಗಳಲ್ಲಿ, ಜೆಡಿಎಸ್ 3, ಹಾಗೂ ಕಾಂಗ್ರೆಸ್ 8 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ.
ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು, ಕಾಂಗ್ರೆಸ್‌ನ ಮೃಣಾಲ್ ಹೆಬ್ಬಾಳ್ಕರ್ ಅವರಿಗಿಂತ 39 ಸಾವಿರದ 738 ಮಗಳಿಂದ ಮುಂದಿದ್ದಾರೆ. ಜಗದೀಶ್ ಶೆಟ್ಟರ್ ಅವರು ಒಂದು ಲಕ್ಷದ 54 ಸಾವಿರದ 506 ಮತಗಳಿಂದ ಪಡೆದಿದ್ದಾರೆ.
ಬಾಗಲಕೋಟೆಯಲ್ಲಿ ಬಿಜೆಪಿಯ ಪಿ.ಸಿ.ಗದ್ದಿಗೌಡರ್ ಅವರು, ಕಾಂಗ್ರೆಸ್‌ನ ಸಂಯುಕ್ತ ಶಿವಾನಂದ ಪಾಟೀಲ್ ಅವರಿಗಿಂತ ಸುಮಾರು 10 ಸಾವಿರ ಮತಗಳಿಂದ ಮುಂದಿದ್ದಾರೆ.
ಹಾವೇರಿಯಲ್ಲಿ ಬಿಜೆಪಿ ಬಸವರಾಜ ಬೊಮ್ಮಾಯಿ ಅವರು, ಕಾಂಗ್ರೆಸ್‌ನ ಆನಂದ ಸ್ವಾಮಿ ಗಡ್ಡದೇವರ ಮಠ ಅವರಿಗಿಂತ 15 ಸಾವಿರ ಮತಗಳ ಮೇಲುಗೈ ಸಾಧಿಸಿದ್ದಾರೆ.
ಧಾರವಾಡದಲ್ಲಿ ಬಿಜೆಪಿಯ ಪ್ರಲ್ಹಾದ್ ಜೋಶಿ 42 ಲಕ್ಷದ 50 ಸಾವಿರದ 618 ಮತಗಳಿಸಿದ್ದು, ಕಾಂಗ್ರೆಸ್‌ನ ವಿನೋದ್ ಆಸೂಟಿ ಅವರಿಗಿಂತ 42 ಸಾವಿರದ 430 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಉತ್ತರ ಕನ್ನಡದಲ್ಲಿ ಬಿಜೆಪಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಕಾಂಗ್ರೆಸ್ ಅಂಜಲಿ ನಿಬಾಳ್ಕರ್ ಅವರಿಗಿಂತ ಒಂದು ಲಕ್ಷದ 21 ಸಾವಿರದ 140 ಮತಗಳಿಂದ ಮುಂದಿದ್ದಾರೆ. ವಿಶ್ವೇಶ್ವರ ಹೆಗಡೆ ಕಾಗೇರಿ ಅವರು 2 ಲಕ್ಷದ 44 ಸಾವಿರದ 788 ಮತ ಪಡೆದಿದ್ದಾರೆ.
ದಾವಣಗೆರೆಯಲ್ಲಿ ಬಿಜೆಪಿಯ ಗಾಯಿತ್ರಿ ಸಿದ್ದೇಶ್ವರ್ ಹಾಗೂ ಕಾಂಗ್ರೆಸ್ ಪ್ರಭಾ ಮಲ್ಲಿಕಾರ್ಜುನ ಅವರ ನಡುವೆ ತೀವ್ರ ಪೈಪೋಟಿ ನಡೆದಿದೆ. ಪ್ರಭಾ ಮಲ್ಲಿಕಾರ್ಜುನ ಒಂದು ಲಕ್ಷದ 7 ಸಾವಿರದ 481 ಹಾಗೂ ಗಾಯತ್ರಿ ಅವರು ಒಂದು ಲಕ್ಷದ 4 ಸಾವಿರದ 61 ಮತಗಳಿಸಿದ್ದಾರೆ.
ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಬಿಜೆಪಿ ಬ್ರಿಜೇಶ್‌ಚೌಟಾ 1 ಲಕ್ಷದ 93 ಸಾವಿರದ 707 ಮತಗಳಿಸಿ ಮುನ್ನಡೆಯಲಿದ್ದಾರೆ. ಕಾಂಗ್ರೆಸ್‌ನ ಪದ್ಮರಾಜ್ ಪೂಜಾರಿ 1 ಲಕ್ಷದ 58 ಸಾವಿರದ 824 ಮತಗಳಿಸಿದ್ದಾರೆ.
ಚಿತ್ರದುರ್ಗ ಕ್ಷೇತ್ರ ಬಿಜೆಪಿಯ ಗೊವಿಂದ ಕಾರಜೋಳ- 3 ಲಕ್ಷದ 40 ಸಾವಿರದ 746 ಮತಗಳಿಸಿದ್ದಾರೆ. ಕಾಂಗ್ರೆಸ್ 135 ಚಂದ್ರಪ್ಪ 3 ಲಕ್ಷದ 2 ಸಾವಿರದ 60 ಮತಗಳಿಸಿದ್ದಾರೆ.
ತುಮಕೂರು; ಬಿಜೆಪಿ ವಿ.ಸೋಮಣ್ಣ-2,32 ಸಾವಿರದ 428 ಮತ್ತು ಕಾಂಗ್ರೆಸ್-ಮುದ್ದ ಹನುಮಗೌಡ-1 ಲಕ್ಷದ 74 ಸಾವಿರದ 108 ಮತ
ಮಂಡ್ಯ: ಜೆಡಿಎಸ್ ಜೆಡಿಎಸ್-ಎಚ್.ಡಿ.ಕುಮಾರಸ್ವಾಮಿ-3 ಲಕ್ಷದ 38 ಸಾವಿರದ 13 ಮತಗಳಿಸಿದ್ದಾರೆ.
ಕಾಂಗ್ರೆಸ್‌ನ-ವೆAಕಟರಮಣೇಗೌಡ- 2 ಲಕ್ಷದ 3 ಸಾವಿರದ 580 ಮತಗಳಿಸಿದ್ದಾರೆ. ಜೆಡಿಎಸ್-1 ಲಕ್ಷದ 34 ಸಾವಿರದ 433 ಮತಗಳ ಮುನ್ನಡೆ ಪಡೆದಿದೆ.
ಮೈಸೂರು- ಬಿಜೆಪಿಯ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ 3 ಲಕ್ಷದ 4 ಸಾವಿರದ 365 ಮತಗಳಿಸಿದ್ದಾರೆ. ಕಾಂಗ್ರೆಸ್‌ನ ಎಂ.ಲಕ್ಷ್ಮಣ್ 2 ಲಕ್ಷದ 41 ಸಾವಿರದ 399 ಮತಗಳಿಸಿದ್ದಾರೆ.
ಇತ್ತೀಚಿನ ವರದಿ ಪ್ರಕಾರ
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ 2 ಲಕ್ಷದ 44 ಸಾವಿರದ 98 ಮತಗಳ ಮುನ್ನಡೆಯಲಿದೆ. ಕಾಂಗ್ರೆಸ್‌ನ ಗೀತಾ ಶಿವಕುಮಾರ್ 1 ಲಕ್ಷದ 70 ಸಾವಿರದ 102 ಮತಗಳಿಸಿದ್ದಾರೆ.
ಪಕ್ಷೇತರ ಕೆ.ಎಸ್.ಈಶ್ವರಪ್ಪ 9 ಸಾವಿರದ 557 ಮತಗಳಿಸಿದ್ದಾರೆ.
ಉಡುಪಿ-ಚಿಕ್ಕಮಗಳೂರಿನಲ್ಲಿ ಬಿಜೆಪಿ ಕೋಟಾಶ್ರೀನಿವಾಸ ಪೂಜಾರಿ 1 ಲಕ್ಷ 6 ಸಾವಿರದ 233 ಮತಗಳಿಸಿ ಮುನ್ನಡೆಯಲಿದ್ದಾರೆ. ಕಾಂಗ್ರೆಸ್‌ನ ಜಯಪ್ರಕಾಶ್ ಹೆಗ್ಡೆ 64 ಸಾವಿರದ 519 ಮತ ಗಳಿಸಿದ್ದಾರೆ.
ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ 1 ಲಕ್ಷ 95 ಸಾವಿರದ 538 ಮತಗಳಿಸಿದ್ದಾರೆ. ಕಾಂಗ್ರೆಸ್‌ನ ಶ್ರೇಯಸ್ ಪಟೇಲ್ 1 ಲಕ್ಷದ 90 ಸಾವಿರದ 337 ಮತಗಳಿಸಿ ಗೆದ್ದಿದ್ದಾರೆ.
ಪ್ರಿಯಾಂಕಾ ಜಾರಕಿಹೊಳಿಗೆ ಗೆಲುವಿನ ನಗು
ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಜಯಭೇರಿ ಬಾರಿಸಿದ್ದು, ಚೊಚ್ಚಲ ಬಾರಿಗೆ ಸಂಸತ್ ಪ್ರವೇಶಿಸಲಿದ್ದಾರೆ. ಹಾಲಿ ಸಂಸದ ಬಿಜೆಪಿಯ ಅಣ್ಣಾ ಸಾಹೇಬ್ ಜೊಲ್ಲೆ ಹೀನಾಯ ಸೋಲುಂಡಿದ್ದಾರೆ. ಪ್ರಿಯಾಂಕಾ 80 ಸಾವಿರಕ್ಕೂ ಅಧಿಕ ಮತಗಳಿಂದ ಗೆಲುವು ಕಂಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ
ಸುದ್ದಿದಿನ,ದಾವಣಗೆರೆ: ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಶುರನ್ಸ್ ಕಂಪನಿ ಲಿಮಿಟೆಡ್, ಕರ್ನಾಟಕದಲ್ಲಿ ಮಳೆಗಾಲದಲ್ಲಿ ಜನರನ್ನು ಕಾಡುವ ವಿವಿಧ ಬಗೆಯ ಕಾಯಿಲೆಗಳ ಚಿಕಿತ್ಸಾ ಸೌಲಭ್ಯವನ್ನು ವಿಸ್ತರಿಸಿದೆ.
ಈ ಉಪಕ್ರಮದ ಮೂಲಕ, ಪಾಲಿಸಿದಾರರಿಗೆ ‘ಟಾಕ್ ಟು ಸ್ಟಾರ್’ ಸೇವೆ ಹಾಗೂ ಮನೆ ಬಾಗಿಲಿನ ಆರೋಗ್ಯ ಸೇವೆ ಕಲ್ಪಿಸಿಕೊಡಲಾಗುತ್ತಿದೆ. ಇದರ ನೆರವಿನಿಂದ ಆರಂಭಿಕ ಹಂತದಲ್ಲೇ ಅಗತ್ಯ ವೈದ್ಯಕೀಯ ಸಲಹೆ ಮತ್ತು ಪರೀಕ್ಷೆಗಳ ನೆರವು ಒದಗಿಸಲಾಗುತ್ತಿದೆ. ಜೊತೆಗೆ, ಸಾರ್ವಜನಿಕರು ಸ್ಟಾರ್ ಹೆಲ್ತ್ ಕಸ್ಟಮರ್ ಆ್ಯಪ್ ಮೂಲಕ 24*7 ಉಚಿತ ವರ್ಚುವಲ್ ವೈದ್ಯರ ಸಮಾಲೋಚನೆ ಪಡೆಯುವ ಅವಕಾಶವನ್ನೂ ಕಲ್ಪಿಸಲಾಗಿದೆ ಎಂದು ಸ್ಟಾರ್ ಹೆಲ್ತ್ ಇನ್ಶುರನ್ಸ್ ಕರ್ನಾಟಕ ವಹಿವಾಟು ವಿಭಾಗದ ಮುಖ್ಯಸ್ಥ ಆದಿತ್ಯ ಓಂಪ್ರಕಾಶ್ ಬಿಯಾನಿ ಹೇಳಿದ್ದಾರೆ.
ಪಾಲಿಸಿದಾರರಿಗೆ ಅನಿಯಮಿತ ಟೆಲಿ ಸಮಾಲೋಚನೆಯಡಿ ಪಾಲಿಸಿ ಅವಧಿಯಲ್ಲಿ ಎಷ್ಟೇ ಬಾರಿ ಬೇಕಾದರೂ ದೂರವಾಣಿ ಅಥವಾ ಆನ್‍ಲೈನ್ ಮೂಲಕ ವೈದ್ಯರ ಸಲಹೆ ಪಡೆಯಬಹುದು. ಜ್ವರ ಅಥವಾ ಸೋಂಕಿನ ಆರಂಭಿಕ ಲಕ್ಷಣಗಳು ಕಂಡುಬಂದ ಕೂಡಲೇ ವೈದ್ಯಕೀಯ ಸಲಹೆ ಪಡೆಯಲು ಇದು ನೆರವಾಗುತ್ತದೆ. ಸಾರ್ವಜನಿಕರಿಗೆ ಉಚಿತ ವರ್ಚುವಲ್ ವೈದ್ಯರ ಸಮಾಲೋಚನೆಯೂ ಇರುತ್ತದೆ.
ಅಂತೆಯೇ ಪಾಲಿಸಿದಾರರು ‘ಟಾಕ್ ಟು ಸ್ಟಾರ್’ ಸೇವೆಯಡಿ 7200 222 333 ಸಂಖ್ಯೆಗೆ ಕರೆ ಮಾಡಿ ಮಾರ್ಗದರ್ಶನ ಪಡೆಯಬಹುದು. ನಗದುರಹಿತ ಮನೆ ಬಾಗಿಲಿನ ಆರೋಗ್ಯ ಸೇವೆಯಡಿ ಅರ್ಹ ಪಾಲಿಸಿದಾರರಿಗೆ ಸ್ಟಾರ್ ಹೆಲ್ತ್ ಕ್ಯಾಷ್‍ಲೆಸ್- ಸೌಲಭ್ಯದ ಮೂಲಕ ಮನೆ ಬಾಗಿಲಿಗೇ ಆರೋಗ್ಯ ಸೇವೆ ಒದಗಿಸಲಾಗುತ್ತದೆ. ವೈದ್ಯರ ಸಲಹೆಯಂತೆ ನಸಿರ್ಂಗ್ ಸೇವೆ, ರಕ್ತ ಪರೀಕ್ಷೆ, ಆರೋಗ್ಯ ಮೇಲ್ವಿಚಾರಣೆ, ಐವಿ ಫ್ಲೂಯಿಡ್ಸ್ ಹಾಗೂ ಚುಚ್ಚುಮದ್ದು ಸೇರಿದಂತೆ ಅಗತ್ಯ ಚಿಕಿತ್ಸೆಗಳನ್ನು ಮನೆಯಲ್ಲೇ ನೀಡಲಾಗುತ್ತದೆ ಎಂದು ಪ್ರಕಟಣೆ ಹೇಳಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್.ಐ.ಆರ್.ಕುರಿತು ಮಾಹಿತಿ ನೀಡಲು ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಜಿಲ್ಲೆಯ ಎಲ್ಲಾ ಬಿಎಲ್‌ಒಗಳು ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಅರ್ಜಿಗಳನ್ನು ವಿತರಿಸಿ, ಸ್ವೀಕರಿಸುತ್ತಿದ್ದಾರೆ. ಶೇ. 91 ರಷ್ಟು ಜನರಿಗೆ ಫಾರಂ ಭರ್ತಿ ಮಾಡಲು ತಿಳಿಯದ ಕಾರಣ ಬಿಎಲ್‌ಒಗಳೇ ಸಾರ್ವಜನಿಕರಿಗೆ ಸಹಾಯ ಮಾಡುತ್ತಿದ್ದಾರೆ ಎಂದರು.
ಸಾರ್ವಜನಿಕರ ಅನುಕೂಲಕ್ಕಾಗಿ ದಾವಣಗೆರೆ ನಗರದಲ್ಲಿ 45 ಕೇಂದ್ರಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ತಾಲೂಕು ಕಚೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಯಾವುದೇ ಅನುಮಾನಗಳಿದ್ದಲ್ಲಿ ಸಾರ್ವಜನಿಕರು ಬಿಎಲ್‌ಒಗಳನ್ನು ಅಥವಾ ಚುನಾವಣಾ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ನೋಡಲ್ ಅಧಿಕಾರಿಗಳು ಮತ್ತು ಸೂಪರ್‌ವೈಸರ್‌ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.
ಸದ್ಯಕ್ಕೆ ಸಾರ್ವಜನಿಕರಿಂದ ಯಾವುದೇ ದಾಖಲೆಗಳನ್ನು ಸಂಗ್ರಹಿಸುತ್ತಿಲ್ಲ. ಆಗಸ್ಟ್ 7 ರ ನಂತರ ಯಾರು ಯಾವ ದಾಖಲೆಗಳನ್ನು ನೀಡಬೇಕು ಎಂಬುದನ್ನು ಸ್ಪಷ್ಟಪಡಿಸಲಾಗುವುದು. ಅಲ್ಲಿಯವರೆಗೆ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದರು.
ವಿವಿಧ ತಾಂತ್ರಿಕ ಹಾಗೂ ನೈಜ ಕಾರಣಗಳಿಂದಾಗಿ ಒಟ್ಟು 17,499 ಮತದಾರರ ಗಣತಿ ನಮೂನೆಗಳು ವಾಪಸ್ ಬಂದಿಲ್ಲ. ಇದರಲ್ಲಿ ಪ್ರಮುಖವಾಗಿ 7,487 ಮರಣ ಪ್ರಕರಣಗಳು , 263 ವಿಳಾಸ ಪತ್ತೆಯಾಗದವರು , 6,677 ಶಾಶ್ವತವಾಗಿ ಸ್ಥಳಾಂತರಗೊಂಡವರು , 2,994 ದ್ವಿಪ್ರತಿ ದಾಖಲಾತಿ (Double Entry) ಹಾಗೂ 78 ಇತರೆ ಕಾರಣ ಎಂದು ತಿಳಿಸಿದರು.
1,200 ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳನ್ನು ಗುರುತಿಸಿ, ಅಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮತದಾರರ ಪರಿಷ್ಕರಣೆಯ ಕಾರ್ಯವಿಧಾನದ ಕುರಿತು ವಿವಿಧ ರಾಜಕೀಯ ಪಕ್ಷಗಳೊಂದಿಗೆ ನಡೆದ ಸಭೆ ಯಲ್ಲಿ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸುವ ಕುರಿತು ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.
ಜುಲೈ 29ರ ವರೆಗೆ ಮಾತ್ರ ಕಾಲಾವಕಾಶ ಇರುವುದರಿಂದ ಬಿಎಲ್‌ಒಗಳು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರು ಅವರೊಂದಿಗೆ ಶಾಂತಿಯುತವಾಗಿ ವರ್ತಿಸಿ, ಸೂಕ್ತ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಒಂದು ವೇಳೆ ದ್ವಿಪ್ರತಿ (Double Entry) ಸೇರಿದಂತೆ ಯಾವುದೇ ತಪ್ಪು ಮಾಹಿತಿಗಳನ್ನು ಉದ್ದೇಶಪೂರ್ವಕವಾಗಿ ನೀಡಿದಲ್ಲಿ, ಅಂತವರ ವಿರುದ್ಧ ಎಫ್‌ಐಆರ್ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಡಾ.ಮಹಾಂತೇಶ್ ಚುನಾವಣಾ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆ ನಡೆಸುವಂತೆ ದೂರು ನೀಡಿ 5 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿ, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತಾಗೆ ದೂರು ಸಲ್ಲಿಸಿದ್ದಾರೆ.
ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ವಿಭಾಗ-2 ರ ವ್ಯಾಪ್ತಿಗೆ ಒಳಪಡುವ ಮಾಯಕೊಂಡ, ಹೊನ್ನಾಳಿ, ಚನ್ನಗಿರಿ ಉಪ ವಿಭಾಗಗಳು ಹಾಗೂ ವಿಭಾಗ-2ರ ಕಛೇರಿಯ ವ್ಯಾಪ್ತಿಗೆ 2023-24 ರಿಂದ 2025-26ನೇ ಸಾಲಿನ ಅವಧಿಯಲ್ಲಿ ಬಿಡುಗಡೆಯಾಗಿರುವ ಸ್ಥಳೀಯ ಶಾಸಕರ ಅನುದಾನದಲ್ಲಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಹಣವನ್ನು ಇಲಾಖೆಯ ವಾಹನಗಳ ಇಂಧನ ವೆಚ್ಚಕ್ಕೆಂದು ನಿಯಮಬಾಹಿರವಾಗಿ ದುರ್ಬಳಕೆ ಮಾಡಿಕೊಂಡಿರುವುದು ಮಾತ್ರವಲ್ಲದೆ, ಬಹುತೇಕ ಕಡೆಗಳಲ್ಲಿ ಯಾವುದೇ ಕಾಮಗಾರಿ ನಡೆಸದೆ ನಕಲಿ ಕಡತ ಸೃಷ್ಟಿಸಿ ಸ್ಥಳೀಯ ಶಾಸಕರ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ವಿಷಯವು ಅಧಿಕೃತ ಮೂಲಗಳಿಂದ ತಿಳಿದು ಬಂದ ಕಾರಣ ಮಾಹಿತಿಹಕ್ಕು ಅಡಿಯಲ್ಲಿ ಹಲವಾರು ಭಾರಿ ಅರ್ಜಿ ಸಲ್ಲಿಸಿ, ಮಾಹಿತಿ ಕೋರಿದಾಗಲೂ ನಿಯಮಬಾಹಿರವಾಗಿ ಹಿಂಬರಹ ನೀಡುತ್ತ ಬಂದಿರುತ್ತಾರೆ.
ಆದ ಕಾರಣ ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸಿ, ಕೈಗೊಂಡ ಕ್ರಮದ ವರದಿಯನ್ನು ನೀಡುವಂತೆ ವ್ಯವಸ್ಥಾಪಕ ನಿರ್ದೇಶಕರು, ಕೆ.ಆರ್.ಐ.ಡಿ.ಎಲ್, ಬೆಂಗಳೂರು ಇವರಿಗೆ ದಿನಾಂಕ: 06-02-2026 ರಂದು ದೂರು ನೀಡಲಾಗಿತ್ತು. ಆದರೆ ದೂರು ನೀಡಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ದಿನಾಂಕ: 21-04-2026 ರಂದು ಜ್ಞಾಪನ ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ 2 ತಿಂಗಳು ಕಳೆದರೂ ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್‌ಗೌಡ ಎಂ.ಬಿ ಇವರು ಇದುವರೆಗೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.
ಆದ ಕಾರಣ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್‌ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತ ಕಾಯ್ದೆಯ ಅನುಸಾರ ಪ್ರಕರಣ ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ಸಲ್ಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ6 days agoಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
-
ದಿನದ ಸುದ್ದಿ5 days agoಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ
-
ದಿನದ ಸುದ್ದಿ4 days agoಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ
-
ದಿನದ ಸುದ್ದಿ1 day agoಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

