ದಿನದ ಸುದ್ದಿ
ಸ್ಮಾರ್ಟ್ ಸಿಟಿ ಕಾಮಗಾರಿ ವೀಕ್ಷಿಸಿದ ಸಂಸದರು ಹಾಗೂ ಪಾಲಿಕೆ ಸದಸ್ಯರು ಕಳಪೆ ಕಾಮಗಾರಿಗಳಾಗದಂತೆ ಎಚ್ಚರ ವಹಿಸಲು ಅಧಿಕಾರಿಗಳಿಗೆ ಸೂಚನೆ : ಜಿ.ಎಂ.ಸಿದ್ದೇಶ್ವರ
ಸುದ್ದಿದಿನ,ದಾವಣಗೆರೆ : ಸೋಮವಾರ ಬೆಳ್ಳಂ ಬೆಳಿಗ್ಗೆ ಸಂಸದರಾದ ಜಿ.ಎಂ.ಸಿದ್ದೇಶ್ವರ, ಪಾಲಿಕೆ ಸದಸ್ಯರು, ಜಿಲ್ಲಾಧಿಕಾರಿಗಳು ಹಾಗೂ ಅಧಿಕಾರಿಗಳ ತಂಡ ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ವೀಕ್ಷಿಸಿದರು.
ಸೋಮವಾರ ಸ್ಮಾರ್ಟ್‍ಸಿಟಿ ಯೋಜನೆಯಡಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಿಸಲು ನಗರಪಾಲಿಕೆ ಸದಸ್ಯರು ಹಾಗೂ ಜಿಲ್ಲಾಧಿಕಾರಿಗಳ ತಂಡದೊಂದಿಗೆ ನಗರದ ಜಿಎಂಐಟಿ ಕಾಲೇಜಿನಿಂದ ಹೊರಟ ತಂಡ ಶಿವಾಲಿ ಟಾಕೀಸ್, ಹಿಂದು ರುದ್ರಭೂಮಿ, ಗಾಂಧೀನಗರ ವೃತ್ತ, ಅಂಬೇಡ್ಕರ್ ವೃತ್ತ, ಭಾಷಾನಗರ, ಎಸ್‍ಪಿಎಸ್ ನಗರ, ಯಲ್ಲಮ್ಮ ನಗರ ಸೇರಿದಂತೆ ಕುಂದವಾಡ ಕೆರೆ ಹಾಗೂ ಸುತ್ತಮುತ್ತ ಇರುವ ಸ್ಥಳಗಳಿಗೆ ಭೇಟಿ ನೀಡಿ ಕಾಮಗಾರಿಗಳನ್ನು ವೀಕ್ಷಿಸಿದರು.
ಇದನ್ನೂ ಓದಿ | ಚನ್ನಗಿರಿ | ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ(ವಿ.ಆರ್.ಡಬ್ಲ್ಯೂ) ಹುದ್ದೆಗೆ ಅರ್ಜಿ ಆಹ್ವಾನ
ವೀಕ್ಷಣೆಯ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಸಂಸದರು, ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳು ಸಮರ್ಪಕವಾಗಿ, ವ್ಯವಸ್ಥಿತವಾಗಿ ನಡೆಯುತ್ತಿಲ್ಲ. ಶಿವಾಲಿ ಟಾಕೀಸ್ ಸುತ್ತಮುತ್ತ ಇರುವ ಒಳಚರಂಡಿ ಕಾಮಗಾರಿ ಅತ್ಯಂತ ನಿಧಾನಗತಿಯಲ್ಲಿ ಸಾಗುತ್ತಿದ್ದು, ಅಲ್ಲಿ ವಾಸಿಸುವ ಜನರು ಕಸ-ಕಡ್ಡಿಗಳನ್ನು ಎಲ್ಲೆಂದರಲ್ಲಿಯೇ ಎಸೆಯುತ್ತಿದ್ದಾರೆ. ಇದರಿಂದ ಮಾಲಿನ್ಯ ಉಂಟಾಗಿ ರೋಗ-ರುಜಿನಗಳು ಹೆಚ್ಚುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನಗರದಲ್ಲಿ ಸ್ವಚ್ಛತೆಯ ಕೆಲಸವಾಗಬೇಕಾಗಿದ್ದು, ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಜನರಲ್ಲಿ ಸ್ವಚ್ಛತೆಯ ಕುರಿತು ಅರಿವು ಮೂಡಿಸಬೇಕು. 2021 ರ ವೇಳೆಗೆ ಮುಗಿಯಬೇಕಿದ್ದ ಜಲಸಿರಿ ಯೋಜನೆಯ ಕಾಮಗಾರಿಯನ್ನು 2022 ರೊಳಗೆ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಪೂರೈಸಬೇಕು. ಒಂದು ವೇಳೆ ಈ ಕಾಮಗಾರಿಗಳು ತ್ವರಿತ ಗತಿಯಲ್ಲಿ ನಡೆಯದಿದ್ದರೆ ಸಂಬಂಧಿಸಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಕುಂದುವಾಡ ಕೆರೆ ಕಾಮಗಾರಿ ಭರದಿಂದ ಸಾಗುತ್ತಿದ್ದು, ಹೆಚ್ಚು ನೀರು ಸಂಗ್ರಹದೊಂದಿಗೆ ಕೆರೆಯ ಸೌಂದರ್ಯೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಇದರಿಂದ ನಗರದ ನಾಗರಿಕರಿಗೆ ಸಾಕಷ್ಟು ನೀರು ಒದಗಿಸಲಾಗುತ್ತಿದೆ. ಹಾಗೂ ಬೆಳಗಿನ ವಾಯುವಿಹಾರಕ್ಕೆ ಉತ್ತಮ ಪರಿಸರವಿದ್ದು, ಆರೋಗ್ಯ ಕಾಪಾಡಿಕೊಳ್ಳಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.
ಕೊರೋನ ಸೋಂಕಿನಿಂದ ಉಂಟಾದ ಲಾಕ್‍ಡೌನ್ ಪರಿಣಾಮದಿಂದಾಗಿ ನಗರ ವೀಕ್ಷಣೆ ಮಾಡಲು ಸಾಧ್ಯವಾಗಲಿಲ್ಲ. ಆದರೆ ಇದೀಗ ನಗರದ ಸ್ವಚ್ಚತೆಯತ್ತ ಗಮನಹರಿಸಿದ್ದು ಕಸಮುಕ್ತ ನಗರವನ್ನಾಗಿ ಮಾಡಲು ಪ್ರಯತ್ನಿಸುತ್ತಿದ್ದೇವೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮತ್ತು ಮಹಾನಗರಪಾಲಿಕೆ ಶ್ರಮಿಸಬೇಕು. ಹಾಗೂ ನಗರದ ಸುತ್ತಮುತ್ತ ಸ್ವಚ್ಚತೆಯನ್ನು ಕಾಯ್ದುಕೊಳ್ಳಲು ಜನರಲ್ಲಿ ಜಾಗೃತಿ ಮೂಡಿಸಬೇಕು. ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ನಿಧಾನಗತಿಯಲ್ಲಿ ಸಾಗುತ್ತಿರುವ ಕಾಮಗಾರಿಗಳನ್ನು ಪೂರೈಸಬೇಕು ಎಂದರು.
ಕುಂದವಾಡ ಕೆರೆಯ ಪಶ್ಚಿಮ ಭಾಗದಲ್ಲಿ ನೀರು ಸೋರಿಕೆಯಾಗುತ್ತಿದ್ದು ಅದನ್ನು ತಡೆಗಟ್ಟಲು ಹೆಚ್.ಡಿ.ಇ.ಪಿ ಪ್ಲಾಸ್ಟಿಕ್ ಅಳವಡಿಸಲಾಗಿದೆ. ಹಾಗೂ ಕೆರೆಯ ಸುತ್ತಮುತ್ತ ಇರುವ ಕಾರ್ಖಾನೆ, ಹೊಲ-ಗದ್ದೆ ಗಳಿಂದ ಬರುವ ಕಲುಷಿತ ನೀರನ್ನು ಕೆರೆಗೆ ಹರಿಸದಂತೆ ಎಚ್ಚರವಹಿಸಬೇಕು ಎಂದರು.
ಮುಂದಿನ ದಿನಗಳಲ್ಲಿ 10 ದಿನಗಳಿಗೊಮ್ಮೆ ಅಧಿಕಾರಿಗಳು ಮೂರು ನಾಲ್ಕು ತಂಡ ರಚಿಸಿಕೊಂಡು ನಗರದ ಸುತ್ತಮುತ್ತ ಸಂಚರಿಸಿ ಕಾಮಗಾರಿ ಹಾಗೂ ಸ್ವಚ್ಚತೆಯ ಕುರಿತು ಪರಿಶೀಲನೆ ನಡೆಸಿ, ನನಗೆ ವರದಿ ನೀಡಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಮಹಾನಗರಪಾಲಿಕೆ ಉಪಮೇಯರ್ ಶಿಲ್ಪ ಜಯಪ್ರಕಾಶ್, ಆಯುಕ್ತರಾದ ವಿಶ್ವನಾಥ್ ಮುದಜ್ಜಿ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಡಿ. ಮಲ್ಲಾಪುರ ಸೇರಿದಂತೆ ಮಹಾನಗರಪಾಲಿಕೆಯ ಸದಸ್ಯರು ಪಾಲ್ಗೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇಲ್ಲಿಯ ಜಂಟಿ ನಿರ್ದೇಶಕರಾದ ಶ್ರೀ ಕೇಶವ ಹೆಚ್. ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ 2022ನೇ ಸಾಲಿನಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ಅರ್ಥಶಾಸ್ತç (ಎಸ್.ಟಿ), ರಾಜ್ಯಶಾಸ್ತç (ಎಸ್.ಸಿ), ಗ್ರಂಥಪಾಲಕರು (ಎಸ್.ಟಿ) ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇಲ್ಲಿ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾದ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರಿಗೆ ದಿನಾಂಕ: 24-11-2025 ರಂದು ಅರ್ಜಿ ಸಲ್ಲಿಸಿ, ಬ್ಯಾಕ್ ಲಾಗ್ ನೇಮಕಾತಿಯ ಬಗ್ಗೆ ತನಿಖೆ ನಡೆಸಿ, ತನಿಖಾ ವರದಿಯನ್ನು ನೀಡುವಂತೆ ಕೋರಲಾಗಿತ್ತು.
ಅರ್ಜಿ ಸಲ್ಲಿಸಿ ಒಂದು ತಿಂಗಳಾದರೂ ಯಾವುದೇ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ಜ್ಞಾಪನ ನೀಡಿ 7 ದಿನಗಳ ಒಳಗಾಗಿ ತನಿಖಾ ವರದಿಯನ್ನು ನೀಡುವಂತೆ ವಿನಂತಿಸಲಾಗಿತ್ತು. ಆದರೆ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರು ಅರ್ಜಿ ಸಲ್ಲಿಸಿ 2 ತಿಂಗಳಾದರೂ ಕನಿಷ್ಠ ಹಿಂಬರಹವನ್ನಾದರೂ ನೀಡದೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.


