Connect with us

ದಿನದ ಸುದ್ದಿ

ಸ್ಮಾರ್ಟ್ ಸಿಟಿ ಕಾಮಗಾರಿ ವೀಕ್ಷಿಸಿದ ಸಂಸದರು ಹಾಗೂ ಪಾಲಿಕೆ ಸದಸ್ಯರು ಕಳಪೆ ಕಾಮಗಾರಿಗಳಾಗದಂತೆ ಎಚ್ಚರ ವಹಿಸಲು ಅಧಿಕಾರಿಗಳಿಗೆ ಸೂಚನೆ : ಜಿ.ಎಂ.ಸಿದ್ದೇಶ್ವರ

Published

on

ಸುದ್ದಿದಿನ,ದಾವಣಗೆರೆ : ಸೋಮವಾರ ಬೆಳ್ಳಂ ಬೆಳಿಗ್ಗೆ ಸಂಸದರಾದ ಜಿ.ಎಂ.ಸಿದ್ದೇಶ್ವರ, ಪಾಲಿಕೆ ಸದಸ್ಯರು, ಜಿಲ್ಲಾಧಿಕಾರಿಗಳು ಹಾಗೂ ಅಧಿಕಾರಿಗಳ ತಂಡ ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ವೀಕ್ಷಿಸಿದರು.

ಸೋಮವಾರ ಸ್ಮಾರ್ಟ್‍ಸಿಟಿ ಯೋಜನೆಯಡಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಿಸಲು ನಗರಪಾಲಿಕೆ ಸದಸ್ಯರು ಹಾಗೂ ಜಿಲ್ಲಾಧಿಕಾರಿಗಳ ತಂಡದೊಂದಿಗೆ ನಗರದ ಜಿಎಂಐಟಿ ಕಾಲೇಜಿನಿಂದ ಹೊರಟ ತಂಡ ಶಿವಾಲಿ ಟಾಕೀಸ್, ಹಿಂದು ರುದ್ರಭೂಮಿ, ಗಾಂಧೀನಗರ ವೃತ್ತ, ಅಂಬೇಡ್ಕರ್ ವೃತ್ತ, ಭಾಷಾನಗರ, ಎಸ್‍ಪಿಎಸ್ ನಗರ, ಯಲ್ಲಮ್ಮ ನಗರ ಸೇರಿದಂತೆ ಕುಂದವಾಡ ಕೆರೆ ಹಾಗೂ ಸುತ್ತಮುತ್ತ ಇರುವ ಸ್ಥಳಗಳಿಗೆ ಭೇಟಿ ನೀಡಿ ಕಾಮಗಾರಿಗಳನ್ನು ವೀಕ್ಷಿಸಿದರು.

ಇದನ್ನೂ ಓದಿ | ಚನ್ನಗಿರಿ | ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ(ವಿ.ಆರ್.ಡಬ್ಲ್ಯೂ) ಹುದ್ದೆಗೆ ಅರ್ಜಿ ಆಹ್ವಾನ

ವೀಕ್ಷಣೆಯ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಸಂಸದರು, ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳು ಸಮರ್ಪಕವಾಗಿ, ವ್ಯವಸ್ಥಿತವಾಗಿ ನಡೆಯುತ್ತಿಲ್ಲ. ಶಿವಾಲಿ ಟಾಕೀಸ್ ಸುತ್ತಮುತ್ತ ಇರುವ ಒಳಚರಂಡಿ ಕಾಮಗಾರಿ ಅತ್ಯಂತ ನಿಧಾನಗತಿಯಲ್ಲಿ ಸಾಗುತ್ತಿದ್ದು, ಅಲ್ಲಿ ವಾಸಿಸುವ ಜನರು ಕಸ-ಕಡ್ಡಿಗಳನ್ನು ಎಲ್ಲೆಂದರಲ್ಲಿಯೇ ಎಸೆಯುತ್ತಿದ್ದಾರೆ. ಇದರಿಂದ ಮಾಲಿನ್ಯ ಉಂಟಾಗಿ ರೋಗ-ರುಜಿನಗಳು ಹೆಚ್ಚುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಗರದಲ್ಲಿ ಸ್ವಚ್ಛತೆಯ ಕೆಲಸವಾಗಬೇಕಾಗಿದ್ದು, ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಜನರಲ್ಲಿ ಸ್ವಚ್ಛತೆಯ ಕುರಿತು ಅರಿವು ಮೂಡಿಸಬೇಕು. 2021 ರ ವೇಳೆಗೆ ಮುಗಿಯಬೇಕಿದ್ದ ಜಲಸಿರಿ ಯೋಜನೆಯ ಕಾಮಗಾರಿಯನ್ನು 2022 ರೊಳಗೆ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಪೂರೈಸಬೇಕು. ಒಂದು ವೇಳೆ ಈ ಕಾಮಗಾರಿಗಳು ತ್ವರಿತ ಗತಿಯಲ್ಲಿ ನಡೆಯದಿದ್ದರೆ ಸಂಬಂಧಿಸಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಕುಂದುವಾಡ ಕೆರೆ ಕಾಮಗಾರಿ ಭರದಿಂದ ಸಾಗುತ್ತಿದ್ದು, ಹೆಚ್ಚು ನೀರು ಸಂಗ್ರಹದೊಂದಿಗೆ ಕೆರೆಯ ಸೌಂದರ್ಯೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಇದರಿಂದ ನಗರದ ನಾಗರಿಕರಿಗೆ ಸಾಕಷ್ಟು ನೀರು ಒದಗಿಸಲಾಗುತ್ತಿದೆ. ಹಾಗೂ ಬೆಳಗಿನ ವಾಯುವಿಹಾರಕ್ಕೆ ಉತ್ತಮ ಪರಿಸರವಿದ್ದು, ಆರೋಗ್ಯ ಕಾಪಾಡಿಕೊಳ್ಳಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಕೊರೋನ ಸೋಂಕಿನಿಂದ ಉಂಟಾದ ಲಾಕ್‍ಡೌನ್ ಪರಿಣಾಮದಿಂದಾಗಿ ನಗರ ವೀಕ್ಷಣೆ ಮಾಡಲು ಸಾಧ್ಯವಾಗಲಿಲ್ಲ. ಆದರೆ ಇದೀಗ ನಗರದ ಸ್ವಚ್ಚತೆಯತ್ತ ಗಮನಹರಿಸಿದ್ದು ಕಸಮುಕ್ತ ನಗರವನ್ನಾಗಿ ಮಾಡಲು ಪ್ರಯತ್ನಿಸುತ್ತಿದ್ದೇವೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮತ್ತು ಮಹಾನಗರಪಾಲಿಕೆ ಶ್ರಮಿಸಬೇಕು. ಹಾಗೂ ನಗರದ ಸುತ್ತಮುತ್ತ ಸ್ವಚ್ಚತೆಯನ್ನು ಕಾಯ್ದುಕೊಳ್ಳಲು ಜನರಲ್ಲಿ ಜಾಗೃತಿ ಮೂಡಿಸಬೇಕು. ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ನಿಧಾನಗತಿಯಲ್ಲಿ ಸಾಗುತ್ತಿರುವ ಕಾಮಗಾರಿಗಳನ್ನು ಪೂರೈಸಬೇಕು ಎಂದರು.

ಕುಂದವಾಡ ಕೆರೆಯ ಪಶ್ಚಿಮ ಭಾಗದಲ್ಲಿ ನೀರು ಸೋರಿಕೆಯಾಗುತ್ತಿದ್ದು ಅದನ್ನು ತಡೆಗಟ್ಟಲು ಹೆಚ್.ಡಿ.ಇ.ಪಿ ಪ್ಲಾಸ್ಟಿಕ್ ಅಳವಡಿಸಲಾಗಿದೆ. ಹಾಗೂ ಕೆರೆಯ ಸುತ್ತಮುತ್ತ ಇರುವ ಕಾರ್ಖಾನೆ, ಹೊಲ-ಗದ್ದೆ ಗಳಿಂದ ಬರುವ ಕಲುಷಿತ ನೀರನ್ನು ಕೆರೆಗೆ ಹರಿಸದಂತೆ ಎಚ್ಚರವಹಿಸಬೇಕು ಎಂದರು.

ಮುಂದಿನ ದಿನಗಳಲ್ಲಿ 10 ದಿನಗಳಿಗೊಮ್ಮೆ ಅಧಿಕಾರಿಗಳು ಮೂರು ನಾಲ್ಕು ತಂಡ ರಚಿಸಿಕೊಂಡು ನಗರದ ಸುತ್ತಮುತ್ತ ಸಂಚರಿಸಿ ಕಾಮಗಾರಿ ಹಾಗೂ ಸ್ವಚ್ಚತೆಯ ಕುರಿತು ಪರಿಶೀಲನೆ ನಡೆಸಿ, ನನಗೆ ವರದಿ ನೀಡಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಮಹಾನಗರಪಾಲಿಕೆ ಉಪಮೇಯರ್ ಶಿಲ್ಪ ಜಯಪ್ರಕಾಶ್, ಆಯುಕ್ತರಾದ ವಿಶ್ವನಾಥ್ ಮುದಜ್ಜಿ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಡಿ. ಮಲ್ಲಾಪುರ ಸೇರಿದಂತೆ ಮಹಾನಗರಪಾಲಿಕೆಯ ಸದಸ್ಯರು ಪಾಲ್ಗೊಂಡಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ ಮತ್ತು ನಿಸಾರ್ ಅಹಮದ್ ಬಿನ್ ಮಹಮ್ಮದ್ ಅಬಿದ್ ಮತ್ತು ಇನ್ನೊಬ್ಬರು, ಬೇತೂರು ರೋಡ್, ಸಿದ್ಧರಾಮೇಶ್ವರ ಬಡಾವಣೆ ಇವರು ತಮ್ಮ ಮಗ ತಾಜು @ ತಾಜುದ್ದೀನ್ ಇವರು ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜಾಡುವ ಸಂಧರ್ಭದಲ್ಲಿ ಮರಣ ಹೊಂದಿರುತ್ತಾರೆ.

ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 4ನೇ ಎದುರುದಾರರಾದ ಸದಾನಂದ ವಗಲೆ ಹಾಗೂ 1 ರಿಂದ 3ನೇ ಎದುರುದಾರರ ವಿರುದ್ಧ, ತಮ್ಮ ಸೇವೆಯಲ್ಲಿನ ನಿರ್ಲಕ್ಷತೆಯಿಂದ ಘಟನೆ ಸಂಭವಿಸಿದ್ದು ಎಂಬ ತೀರ್ಮಾನಕ್ಕೆ ಆಯೋಗವು ಬಂದಿದ್ದು, ಈಗಾಗಲೇ, 1 ರಿಂದ 3ನೇ ಎದುರುದಾರರು, ದೂರುದಾರರಿಗೆ ರೂ.500,000/- ಲಕ್ಷವನ್ನು ಪರಿಹಾರವಾಗಿ ಈಗಾಗಲೆ ಕೊಟ್ಟಿದ್ದು, ಆದ್ದರಿಂದ 1 ರಿಂದ 3ನೇ ಎದುರುದಾರರ ವಿರುದ್ಧ ಪ್ರಕರಣವನ್ನು ವಜಾ ಮಾಡಿದೆ.

4ನೇ ಎದುರುದಾರರಾದ ಸದಾನಂದ ವಗಲೆ, ಕಾಂಟ್ರಕ್ಟರ್, ಇವರು ಈ ಎರಡು ಪ್ರಕರಣದ ದೂರುದಾರರಿಗೆ ಆದೇಶಿಸಿದ ದಿನದಿಂದ ಒಂದು ತಿಂಗಳೊಳಗೆ ಆದೇಶದ ಪ್ರಕಾರ ಪಾವತಿಸುವಂತೆ ಮೇ.19 ರಂದು ಆದೇಶಿಸಿ ರೂ. 5 ಲಕ್ಷಗಳನ್ನು ಶೇಕಡಾ 6 ವಾರ್ಷಿಕ ಬಡ್ಡಿಯೊಂದಿಗೆ ಹಾಗೂ ದೂರು ಖರ್ಚು ಹಾಗೂ ಮಾನಸಿಕ ಯಾತನೆಗೆ ತಲಾ ರೂ.5 ಸಾವಿರದಂತೆ, ಒಟ್ಟು ರೂ.10,000/-ಗಳನ್ನು ಪರಿಹಾರ ರೂಪವಾಗಿ ದೂರುದಾರರಿಗೆ ನೀಡುವಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಹೆಚ್.ಎನ್.ಮೀನಾ ಮತ್ತು ಸದಸ್ಯರಾದ ಸಿ.ಎಸ್. ತ್ಯಾಗರಾಜನ್ ಆದೇಶಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಯುವಜನತೆಗೆ ಪ್ರೇರಣೆ ; ವಿಶ್ವನಾಥ.ಡಿ. ಅರ್

Published

on

ಸುದ್ದಿದಿನ,ಬನ್ನಿಕೋಡು:ಮಾ.ಸ.ಬ. ಕಾಲೇಜ್, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಎರಡನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ರಂಗಸ್ವಾಮಿ ಟಿ.ಆರ್. ವಹಿಸಿ, ವಿದ್ಯಾರ್ಥಿಗಳಿಗೆ ಲಭ್ಯವಾಗಿರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ವಿಶೇಷ ಉಪನ್ಯಾಸದಲ್ಲಿ ಶ್ರೀ ವಿಶ್ವನಾಥ್ ಡಿ.ಆರ್., ಉಪನ್ಯಾಸಕರು ಹಾಗೂ ಪತ್ರಿಕಾ ವರದಿಗಾರರು, ಕೆ. ಬೇವಿನಹಳ್ಳಿ ಅವರು “ಸ್ವಾಮಿ ವಿವೇಕಾನಂದ ಮತ್ತು ಯುವಜನತೆ” ವಿಷಯದ ಕುರಿತು ಪ್ರೇರಣಾದಾಯಕ ಉಪನ್ಯಾಸ ನೀಡಿದರು. ಸ್ವಾಮಿ ವಿವೇಕಾನಂದರ ಜೀವನ ಸಾಧನೆ, ವ್ಯಕ್ತಿತ್ವ ಹಾಗೂ ದೇಶಭಕ್ತಿ ಕುರಿತು ವಿವರಿಸಿ, ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಅನುಸರಿಸಿ ಉತ್ತಮ ಆಚಾರ-ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಯುವಜನತೆ ತಮ್ಮ ಶಕ್ತಿಯನ್ನು ಸಮಾಜಸೇವೆ ಹಾಗೂ ದೇಶದ ಅಭಿವೃದ್ಧಿಗೆ ಬಳಸಬೇಕು ಎಂದು ಕರೆ ನೀಡಿದರು.

“ಎದ್ದು ನಿಲ್ಲಿ, ಜಾಗ್ರತವಾಗಿರಿ, ಗುರಿ ಸಾಧಿಸುವ ತನಕ ನಿಲ್ಲಬೇಡಿ” ಎಂಬ ಸ್ವಾಮಿ ವಿವೇಕಾನಂದರ ಅಮೂಲ್ಯ ವಾಕ್ಯವನ್ನು ಉಲ್ಲೇಖಿಸಿ, ಯುವಕರಲ್ಲಿ ಆತ್ಮವಿಶ್ವಾಸ ಮತ್ತು ಗುರಿನಿಷ್ಠೆ ಬೆಳೆಸುವಂತೆ ಪ್ರೇರೇಪಿಸಿದರು.

ಶ್ರೀ ಎ. ಜಯಪ್ಪ ಅವರು ಎನ್‌.ಎಸ್‌.ಎಸ್‌. ಕಾರ್ಯಚಟುವಟಿಕೆಗಳು ಸಮಾಜಸೇವೆ ಹಾಗೂ ಸಾಮಾಜಿಕ ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.

ಶ್ರೀ ಪಿ.ವಿ. ಸತೀಶ್ ಅವರು ಹಳ್ಳಿ ಜೀವನದ ಮಹತ್ವ ಹಾಗೂ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಿದರು.

ಉಪನ್ಯಾಸಕಿ ಕಾವ್ಯ ಶ್ರೀ ಅವರು ಮಹಿಳಾ ಸಬಲೀಕರಣದ ಕುರಿತು ಮಾತನಾಡಿ, ಮಹಿಳೆಯರು ಶಿಕ್ಷಣ ಹಾಗೂ ಆತ್ಮವಿಶ್ವಾಸದಿಂದ ಸಮಾಜದಲ್ಲಿ ತಮ್ಮದೇ ಆದ ಸ್ಥಾನಮಾನವನ್ನು ಪಡೆಯಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು ಹಾಗೂ ಮುಖಂಡರಾದ ವಾಗೀಶ್ ಸುದರ್ಶನ ಎಸ್.ಸಿ., ವಿಜಯ, ಹನುಮಂತಪ್ಪ ಯು., ಕೆ.ಎಸ್‌. ಬಸವರಾಜು, ಕೆ. ರೇವಣಸಿದ್ಧಪ್ಪ ಮುಂತಾದವರು ಭಾಗವಹಿಸಿದ್ದರು.

ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಹಾಗೂ ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್ ಹಾಗೂ ಉಪನ್ಯಾಸಕರಾದ ಶ್ರೀ ಶಾಂತಕುಮಾರ್ ಉಪಸ್ಥಿತರಿದ್ದರು.

ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಎರಡನೇ ದಿನದ ಶಿಬಿರವು ಮುಕ್ತಾಯಗೊಂಡಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಲೋಕಾಯುಕ್ತ ಪೋಲಿಸ್ ಇನ್ಸ್‌ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

Published

on

ಸುದ್ದಿದಿನ,ಬನ್ನಿಕೋಡು: ಮಾ.ಸ.ಬ. ಕಾಲೇಜು, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಅಧ್ಯಕ್ಷತೆಯನ್ನು ಮಾ.ಸ.ಬ. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಿಜಯಕುಮಾರ್ ಎ.ಬಿ. ವಹಿಸಿದ್ದರು.

ಮುಖ್ಯ ಉಪನ್ಯಾಸಕರಾಗಿ ಕರ್ನಾಟಕ ಲೋಕಾಯುಕ್ತ, ದಾವಣಗೆರೆ ಇವರ ಪೋಲಿಸ್ ಇನ್ಸ್‌ಪೆಕ್ಟರ್ ಶ್ರೀ ಪ್ರಭು ಬಿ. ಸೂರಿನ ಭಾಗವಹಿಸಿ “ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆ” ಕುರಿತು ಸಮಗ್ರ ಮಾಹಿತಿ ನೀಡಿದರು. ಕರ್ನಾಟಕ ಲೋಕಾಯುಕ್ತದ ಸ್ಥಾಪನೆ ಮತ್ತು ಹಿನ್ನೆಲೆ, ಸಂಸ್ಥೆಯ ವ್ಯಾಪ್ತಿ, ದೂರು ಸಲ್ಲಿಸುವ ವಿಧಾನ, ವಿಚಾರಣೆ ಕ್ರಮ, ಭ್ರಷ್ಟಾಚಾರ ತಡೆ ಕಾಯ್ದೆಯ ಪ್ರಮುಖ ಅಂಶಗಳು, ಲೋಕಾಯುಕ್ತ ಸಂಸ್ಥೆಯ ವೈಶಿಷ್ಟ್ಯತೆಗಳು, ಹಗರಣಗಳ ತನಿಖಾ ವಿಧಾನ ಹಾಗೂ ಸರ್ಕಾರಿ ಹಣದ ದುರುಪಯೋಗ ತಡೆ ಕ್ರಮಗಳ ಬಗ್ಗೆ ವಿವರಿಸಿದರು. ಉಪನ್ಯಾಸದ ಅಂತ್ಯದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದರು.

ಜಿಲ್ಲಾ ನೋಡಲ್ ಅಧಿಕಾರಿಗಳಾದ ಡಾ. ಹೆಚ್.ಆರ್. ತಿಪ್ಪೇಸ್ವಾಮಿ ಅವರು ಯುವಜನತೆ ಹಾಗೂ ಸಾಮಾಜಿಕ ಸಾಮರಸ್ಯ ಕುರಿತು ಪ್ರೇರಣಾದಾಯಕ ಸಂದೇಶ ನೀಡಿದರು.

ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಮತ್ತು ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್, ಗ್ರಾಮದವರಾದ ಬಸವರಾಜ್, ಹಾಲಪ್ಪ, ಮಹದೇವಪ್ಪ, ಕುರಿಯರ್ ದುರುಗಪ್ಪ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕಾನೂನು ಜಾಗೃತಿ ಹಾಗೂ ಭ್ರಷ್ಟಾಚಾರ ವಿರೋಧಿ ಮನೋಭಾವ ಬೆಳೆಸುವಲ್ಲಿ ಯಶಸ್ವಿಯಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending