ದಿನದ ಸುದ್ದಿ
ಮೂಡ ಹಗರಣ ; ಸಿಬಿಐ ತನಿಖೆಗೆ ಸಿ.ಟಿ. ರವಿ ಆಗ್ರಹ
ಸುದ್ದಿದಿನಡೆಸ್ಕ್:ಮೈಸೂರಿನ ಮೂಡಾ ನಿವೇಶನಗಳ ಹಂಚಿಕೆಯಲ್ಲಿ ನಡೆದಿರುವ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಆಗ್ರಹಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದ ಮೇಲೆಯೇ ನಿಯಮ ಮೀರಿ 14 ನಿವೇಶನ ಪಡೆದಿರುವ ಆರೋಪ ಕೇಳಿ ಬಂದಿದೆ.
ಭ್ರಷ್ಟಾಚಾರ ನಡೆದಿರುವುದಕ್ಕೆ ಪೂರಕವಾದ ದಾಖಲೆಗಳು ಇವೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಕಾನೂನು ಬಾಹಿರವಾಗಿ ಹಂಚಿಕೆಯಾದ ಎಲ್ಲಾ ನಿವೇಶನಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿದ್ದಾರೆ.ಸುದ್ದಿದಿನ.ಕಾಂ|ವಾಟ್ಸಾಪ್|9980346243