ದಿನದ ಸುದ್ದಿ
ಮುಡಾ ಪ್ರಕರಣ ಸಂಬಂಧಿತ ವಿಚಾರಣೆ ಶನಿವಾರಕ್ಕೆ ಮುಂದೂಡಿದ ಉಚ್ಛನ್ಯಾಯಾಲಯ
ಸುದ್ದಿದಿನಡೆಸ್ಕ್:ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಸಂಬಂಧದ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ನಾಡಿದ್ದು ಶನಿವಾರಕ್ಕೆ ಮುಂದೂಡಿದೆ.
ಡಿನೋಟಿಫಿಕೇಷನ್ ಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಪ್ರತಿಫಲ ಪಡೆದಿಲ್ಲ. 2010 ರಲ್ಲಿ ಮುಖ್ಯಮಂತ್ರಿ ಪತ್ನಿ ಭೂಮಿಯನ್ನು ಖರೀದಿ ಮಾಡಿದ್ದು ಜಮೀನಿಗೆ ಬದಲಿಯಾಗಿ ನಿವೇಶನ ಪಡೆದಿದ್ದಾರೆ. ಇದನ್ನು ದೊಡ್ಡ ಹಗರಣದಂತೆ ಬಿಂಬಿಸಲಾಗುತ್ತಿದೆ. ರಾಜ್ಯಪಾಲರು ತಮ್ಮ ನಿರ್ಧಾರಕ್ಕೆ ಕಾರಣಗಳನ್ನು ನೀಡಿಲ್ಲ. ಕೇವಲ 4 ಪುಟಗಳ ಅನುಮತಿಯನ್ನಷ್ಟೇ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಪರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ನ್ಯಾಯಮೂರ್ತಿಗಳ ಗಮನಕ್ಕೆ ತಂದರು. ರಾಜ್ಯಪಾಲರ ಪರ ವಕೀಲ ತುಷಾರ್ ಮೆಹ್ತಾ ಶನಿವಾರ ವಾದ ಮಂಡಿಸುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243