ದಿನದ ಸುದ್ದಿ

ಮುಡಾ ಪ್ರಕರಣ ; ಅರ್ಜಿ ವಿಚಾರಣೆ ಮುಂದೂಡಿಕೆ

Published

on

ಸುದ್ದಿದಿನಡೆಸ್ಕ್:ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ವಿಚಾರಣೆಗೆ ಅನುಮತಿ ನೀಡಿರುವ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಉಚ್ಛ ನ್ಯಾಯಾಲಯ ಮುಂದೂಡಿದೆ.

ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಮನವಿ ಪುರಸ್ಕರಿಸಿದ ನ್ಯಾಯಾಲಯ ವಿಚಾರಣೆಯನ್ನು ಇದೇ ತಿಂಗಳ 9 ಕ್ಕೆ ಮುಂದೂಡಿದೆ.

ಇದೇ ವೇಳೆ ಮಧ್ಯಂತರ ಆದೇಶವನ್ನು ನ್ಯಾಯಾಲಯ ವಿಸ್ತರಿಸಿದೆ. ಇದೇ 9 ರಂದು ಎ.ಜೆ.ಶಶಿಕಿರಣ್ ಶೆಟ್ಟಿ ವಾದ ಮಂಡಿಸಲಿದ್ದು, ಇದೇ 12 ರಂದು ಮುಖ್ಯಮಂತ್ರಿ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡನೆ ಮಾಡುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ನಾಗಪ್ರಸನ್ನ, ಸೆಪ್ಟೆಂಬರ್ 12ರಂದು ಸಂಪೂರ್ಣ ವಿಚಾರಣೆ ಮುಗಿಸೋಣ ಎಂದು ಹೇಳಿ ನ್ಯಾಯಾಲಯದ ಕಲಾಪ ಮುಂದೂಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version