ದಿನದ ಸುದ್ದಿ
ಸಾಹಿತ್ಯ ವಿವೇಕವನ್ನು ಜಾಗೃತಗೊಳಿಸಬೇಕು : ಸಾಹಿತಿ ಡಾ. ನಿಂಗಪ್ಪ ಮುದೇನೂರು

ಸುದ್ದಿದಿನ,ದಾವಣಗೆರೆ : ವಿವೇಕವನ್ನು ಜಾಗೃತಿಗೊಳಿಸಿ ಪ್ರಜ್ಞಾಪೂರ್ವಕ ಬದುಕನ್ನು ಕಟ್ಟಿಕೊಡುವುದೇ ನಿಜವಾದ ಸಾಹಿತ್ಯ ಎಂದು ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ, ಸಾಹಿತಿ ಡಾ. ನಿಂಗಪ್ಪ ಮುದೇನೂರು ವ್ಯಾಖ್ಯಾನಿಸಿದರು.
ದಾವಣಗೆರೆ ತಿಂಗಳ ಅಂಗಳ ಸಾಹಿತ್ಯ – ಸಾಂಸ್ಕೃತಿಕ ಬಳಗದ ವತಿಯಿಂದ ದಿನಾಂಕ : 16.07.2021 ರ ಶುಕ್ರವಾರ ಸಂಜೆ 6.30ಕ್ಕೆ ಆಯೋಜಿಸಲಾಗಿದ್ದ ಆನ್ ಲೈನ್ ಸಾಹಿತ್ಯ ಸಂಭ್ರಮ ಕಾರ್ಯಕ್ರಮವನ್ನು ತಮ್ಮ ಸ್ವರಚಿತ ಕವನದ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಮನಸ್ಸನ್ನು ಅರಳಿಸಿ ಬದುಕಿನ ವಿಕಸನಕ್ಕೆ ಪ್ರೇರಪಣೆ ನೀಡುವುದೇ ಸಾಹಿತ್ಯದ ಮೂಲ ಉದ್ದೇಶ ಎಂದು ಅಭಿಪ್ರಾಯಿಸಿದರು.
ನಮ್ಮ ಜಾನಪದ, ವಚನ, ದಾಸ ಸಾಹಿತ್ಯದಂತಹ ಪ್ರಮುಖ ಪ್ರಕಾರಗಳು ಇಂದಿಗೂ ಜೀವಂತವಾಗಿರುವುದಕ್ಕೆ ಕಾರಣ ಅದರೊಳಗಿನ ಮಾನವೀಯ ಸೆಲೆಯೇ ಆಗಿದೆ. ಅಂತಃಕರಣವನ್ನು ಮುಟ್ಟುವ ಸಾಹಿತ್ಯ ಮಾತ್ರ ಜನಮಾನಸದಲ್ಲಿ ಶಾಶ್ವತ ಸ್ಥಾನ ಪಡೆಯುತ್ತದೆ. ಆ ಸಾಮಾಜಿಕ ಪ್ರಜ್ಞೆಯ ನೆಲೆಗಟ್ಟಲ್ಲಿ ಸಾಹಿತ್ಯ ಸೃಜಿಸುವ ಇಂಗಿತ ರಚನೆಕಾರರಿಗೆ ಅವಶ್ಯ ಎಂದು ನುಡಿದರು.
ಕಾವ್ಯದ ನೆಲೆಗಳು ವಿಷಯ ಕುರಿತು ಮಾತನಾಡಿದ ಸಾಹಿತಿ ಡಾ. ಆನಂದ್ ಋಗ್ವೇದಿ ಅವರು ಮಾನವೀಯ ಪ್ರೀತಿ ಮತ್ತು ಅದರ ಅವಕಾಶದ ಹುಡುಕಾಟದಲ್ಲಿ ಕಾವ್ಯದ ನೆಲೆ ಅಡಗಿದೆ. ಆ ಹುಡುಕಾಟದ ತವಕ ಇದ್ದವರಿಂದ ಮಾತ್ರ ಒಳನೋಟದ ಸಾಹಿತ್ಯ ರಚನೆಯನ್ನು ನಿರೀಕ್ಷಿಸಬಹುದು ಎಂದರು.
ಆನ್ ಲೈನ್ ಕಾರ್ಯಕ್ರಮವನ್ನು ನಿರ್ವಹಿಸಿ, ಸರ್ವರನ್ನು ಸ್ವಾಗತಿಸಿ, ವಂದನೆ ಸಲ್ಲಿಸಿದ ಬಳಗದ ಸಂಚಾಲಕ ಗಂಗಾಧರ ಬಿ ಎಲ್ ನಿಟ್ಟೂರ್ ಮನೆ – ಮನೆಯಂಗಳದಲ್ಲಿ ಹಬ್ಬದ ವಾತಾವರಣವನ್ನು ಕಟ್ಟಿಕೊಟ್ಟಿದ್ದ ತಿಂಗಳ ಅಂಗಳದ ಕಾವ್ಯ ಮಲ್ಲಿಗೆ ಆನ್ ಲೈನ್ ಮೂಲಕವೂ ಮನದಂಗಳ ತಲುಪಿ ಸುವಾಸನೆ ಬೀರಲು ಅಣಿಯಾಗಿದೆ. ಈ ನಿಟ್ಟಿನಲ್ಲಿ ದಾವಣಗೆರೆ ಸಾಹಿತ್ಯ ವಲಯ ನೀಡುತ್ತಿರುವ ಬೆಂಬಲ ಮತ್ತು ಹಿರಿಯ ಸಾಹಿತಿಗಳ ಮಾರ್ಗದರ್ಶನ ಅಪಾರ ಎಂದು ಸ್ಮರಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಹಿರಿಯ ಲೇಖಕಿ ಶ್ರೀಮತಿ ಮಲ್ಲಮ್ಮ ನಾಗರಾಜ್ ಸಾಹಿತ್ಯ ಹರಿಯುವ ನೀರಿನಂತೆ. ಆ ನೀರು ಸದಾ ತಿಳಿಯಾಗಿ, ಸ್ವಚ್ಛ, ಶುದ್ಧವಾಗಿ ಹರಿಯುತ್ತಲೇ ಇರಬೇಕು. ಆಗ ಸಮಾಜ ಹಸಿರಾಗಿ, ಸುಂದರವಾಗಿರಲು ಸಾಧ್ಯ. ಆ ದಿಸೆಯಲ್ಲಿ ಹಿರಿಯರು ಬೆನ್ನು ತಟ್ಟಿದಾಗ ಯುವಪೀಳಿಗೆ ಮೂಲಕ ಆ ಪ್ರಕ್ರಿಯೆ ನಿತ್ಯ, ನಿರಂತರ ಮುಂದುವರಿಯುತ್ತದೆ. ತಿಂಗಳ ಅಂಗಳ ಬಳಗದ ಕಾರ್ಯ ಇದಕ್ಕೆ ಮಾದರಿ ಎಂದು ಶ್ಲಾಘಿಸಿದರು.
ಸಾಹಿತಿ ಮಹಾಂತೇಶ್ ಬಿ ನಿಟ್ಟೂರು ಆಶಯ ನುಡಿಯಾಡಿದರು. ಜೀವರಾಜ್ ಛತ್ರದ, ಬ್ಯಾಡಗಿ, ಸಂತೆಬೆನ್ನೂರು ಫೈಜ್ನಟ್ರಾಜ್, ರಾಜೇಂದ್ರ ಪ್ರಸಾದ್ ನೀಲಗುಂದ, ಶ್ರೀಮತಿ ಅನ್ನಪೂರ್ಣ ಪಾಟೀಲ್, ಮಂಜುನಾಥ ಚಿತ್ರದುರ್ಗ ಅವರು ಕವನ ವಾಚಿಸಿದರು.
ಹಿರಿಯ ಕವಯಿತ್ರಿಯರಾದ ಶ್ರೀಮತಿ ಅರುಂಧತಿ ರಮೇಶ್, ಶ್ರೀಮತಿ ಸುಭಾಷಿಣಿ ಮಂಜುನಾಥ್, ಶ್ರೀಮತಿ ಜಯಮ್ಮ ಸೇರಿದಂತೆ ಹಲವರು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.
ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್‌ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ.
ಕೆಎಸ್‌ಆರ್‌ಟಿಸಿ ಮಹಾನಿರ್ದೆಶಕರನ್ನಾಗಿ ಅಕ್ರಂ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ

ಸುದ್ದಿದಿನಡೆಸ್ಕ್:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸಂತ್ರಸ್ಥರು ಮತ್ತು ಅವರ ಕುಟುಂಬಗಳಿಗೆ ಪಾರದರ್ಶಕತೆ ನ್ಯಾಯ ದೊರಕುವಂತಾಗಲು ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.
ಸಂತ್ರಸ್ಥರಿಗೆ ನ್ಯಾಯ ಒದಗಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್ ಜಾರಿ ಮಾಡಿದೆ.
ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago
ವಿಜ್ಞಾನಿಗಳ ಮೂಲಕ ರೈತರ ಸಮಸ್ಯೆಗಳಿಗೆ ಪರಿಹಾರ : ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್
-
ದಿನದ ಸುದ್ದಿ2 days ago
ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ2 days ago
ರಾಜ್ಯದ ಹಲವೆಡೆ ಧಾರಾಕಾರ ಮಳೆ ; ಜನಜೀವನ ಅಸ್ತವ್ಯಸ್ತ
-
ದಿನದ ಸುದ್ದಿ2 days ago
ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ
-
ದಿನದ ಸುದ್ದಿ5 days ago
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ ; ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago
ಗುಜರಾತ್ನ ಅಹಮದಾಬಾದ್ನಲ್ಲಿ ಏರ್ಇಂಡಿಯಾ ಪ್ರಯಾಣಿಕ ವಿಮಾನ ಪತನ : 242 ಪ್ರಯಾಣಿಕರು ಸಾವು
-
ದಿನದ ಸುದ್ದಿ5 days ago
ಜೂನ್ 9, 2025 ರ ಅಡಿಕೆ ರೇಟು ಹೀಗಿದೆ
-
ದಿನದ ಸುದ್ದಿ2 days ago
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ