ದಿನದ ಸುದ್ದಿ
ಮುಂಗಾರು ಹಂಗಾಮಿನ ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ
ಸುದ್ದಿದಿನ ಡೆಸ್ಕ್ : 2023-24ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಕುರಿತ ಸಚಿವ ಸಮಿತಿ ಅನುಮೋದಿಸಿದೆ.
ಸಾಮಾನ್ಯ ದರ್ಜೆ ಭತ್ತಕ್ಕೆ ಕ್ವಿಂಟಲ್‌ಗೆ 2 ಸಾವಿರದ 40 ರೂಪಾಯಿಯಿಂದ 2ಸಾವಿರದ 183 ರೂಪಾಯಿಗೆ ಹಾಗೂ ’ಎ’ ದರ್ಜೆ ಭತ್ತಕ್ಕೆ 2 ಸಾವಿರದ 60 ರಿಂದ 2 ಸಾವಿರದ 203 ರೂಪಾಯಿಗೆ ಹೆಚ್ಚಿಸಲಾಗಿದೆ.
ರಾಗಿಗೆ ಪ್ರತಿ ಕ್ವಿಂಟಲ್‌ಗೆ 3 ಸಾವಿರದ 578 ರೂಪಾಯಿಯಿಂದ 3 ಸಾವಿರದ 846 ರೂಪಾಯಿಗೆ ಹೆಚ್ಚಿಸಲಾಗಿದೆ. ತೊಗರಿಗೆ ಪ್ರತಿ ಕ್ವಿಂಟಲ್‌ಗೆ 6 ಸಾವಿರದ 600 ರಿಂದ 7 ಸಾವಿರ ರೂಪಾಯಿಗೆ, ಹೆಸರು ಕಾಳಿಗೆ ಪ್ರತಿ ಕ್ವಿಂಟಲ್‌ಗೆ 7 ಸಾವಿರದ 755 ರಿಂದ 8 ಸಾವಿರದ 558 ರೂಪಾಯಿಗೆ, ಪ್ರತಿ ಕ್ವಿಂಟಲ್ ಉದ್ದಿಗೆ 6 ಸಾವಿರದ 600 ರಿಂದ 6 ಸಾವಿರದ 950 ರೂಪಾಯಿಗೆ ಹೆಚ್ಚಿಸಲಾಗಿದೆ.
ಸಚಿವ ಸಂಪುಟ ಸಭೆಯ ನಂತರ ಮಾತನಾಡಿದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪಿಯೂಷ್ ಗೋಯಲ್ 2022-23ನೇ ಸಾಲಿಗೆ 330.5 ದಶಲಕ್ಷ ಟನ್‌ನಷ್ಟು ಆಹಾರ ಧಾನ್ಯ ಉತ್ಪಾದನೆ ಅಂದಾಜಿಸಲಾಗದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243