ರಾಜಕೀಯ

ನಗರ ಸಭೆ ಚುನಾವಣೆ |ಕಾಂಗ್ರೆಸ್ ಟಿಕೆಟ್ ಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು..!

Published

on

ಸುದ್ದಿದಿನ, ಚಿತ್ರದುರ್ಗ: ನಗರಸಭೆ ಚುನಾವಣೆಗೆ ಇನ್ನು ಕೇವಲ ಇಪ್ಪತ್ತು ದಿನಗಳಿರುವುದರಿಂದ ಕಾಂಗ್ರೆಸ್ ಪಕ್ಷದ ಟಿಕೇಟ್‍ಗೆ ಬೇಡಿಕೆ ಹೆಚ್ಚಾಗಿ ಟಿಕೇಟ್‍ಗಾಗಿ ಅರ್ಜಿ ಸಲ್ಲಿಸುವವರ ಸಂಖ್ಯೆಯೂ ದಿನದಿಂದ ದಿನೇ ಅಧಿಕವಾಗತೊಡಗಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಪರಿಶಿಷ್ಟ ವರ್ಗಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಮಂಜುನಾಥ್ ಹದಿನಾರನೇ ವಾರ್ಡ್‍ನಿಂದ ನಗರಸಭೆ ಚುನಾವಣೆಗೆ ಸ್ಪರ್ಧೆ ಬಯಸಿ ಕಾಂಗ್ರೆಸ್ ಟಿಕೇಟ್‍ಗೆ ಬುಧವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್‍ಅಲ್ಲಾಭಕ್ಷ್‍ರವರಿಗೆ ಅರ್ಜಿ ಸಲ್ಲಿಸಿದರು.

ಕಳೆದ ಮೇ ತಿಂಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹನುಮಲಿ ಷಣ್ಮುಖಪ್ಪನವರ ಪರ ಸಾಕಷ್ಟು ಪ್ರಚಾರ ನಡೆಸಿದರಲ್ಲದೆ ಇಂದಿಗೂ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಹದಿನೇಳನೇ ವಾರ್ಡ್‍ನಿಂದ ತಿಪ್ಪೇಸ್ವಾಮಿ ಕಾಂಗ್ರೆಸ್ ಟಿಕೇಟ್‍ಗಾಗಿ ಅರ್ಜಿ ಸಲ್ಲಿಸಿದರು.

ನಗರಸಭೆ ಮಾಜಿ ಅಧ್ಯಕ್ಷ ಮಹಮದ್ ಅಹಮದ್ ಪಾಷ, ಬಾಬ್‍ಜಾನ್, ಎ.ಪಿ.ಎಂ.ಸಿ.ಮಾಜಿ ಅಧ್ಯಕ್ಷ ನಾಗರಾಜ್‍ರೆಡ್ಡಿ, ರಹಮತ್‍ವುಲ್ಲಾ, ಅಂಜಿನಪ್ಪ, ಎಂ.ಮೈಲಾರಪ್ಪ, ಬಸವರಾಜ್, ಮಂಜುನಾಥ್, ಡಿ.ಕುಮಾರ್ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Leave a Reply

Your email address will not be published. Required fields are marked *

Trending

Exit mobile version