ದಿನದ ಸುದ್ದಿ
ಚಿತ್ರದುರ್ಗ | ಐವರು ಸಾಧಕರಿಗೆ ‘ಮುರುಘಾ ಶ್ರೀ ಪ್ರಶಸ್ತಿ’ ಘೋಷಣೆ..!
ಸುದ್ದಿದಿನ, ಚಿತ್ರದುರ್ಗ : ಬಸವಕೇಂದ್ರ, ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ, ಚಿತ್ರದುರ್ಗ ಶರಣಸಂಸ್ಕೃತಿ ಉತ್ಸವದಲ್ಲಿ ಕೊಡಮಾಡುವ ‘ಮುರುಘಾಶ್ರೀ ಪ್ರಶಸ್ತಿ‘ಗೆ ಈ ಬಾರಿ ನಟ ಡಾ. ಮುಖ್ಯಮಂತ್ರಿ ಚಂದ್ರು ಸೇರಿದಂತೆ ಐವರು ಸಾಧಕರು ಭಾಜನರಾಗಿದ್ದಾರೆ ಎಂದು ಡಾ. ಶಿವಮೂರ್ತಿ ಮುರುಘಾ ಶರಣರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು ಶರಣ ಸಂಸ್ಕೃತಿ ಉತ್ಸವ 2020 ರ ‘ಮುರುಘಾ ಶ್ರೀ ಪ್ರಶಸ್ತಿ‘ಯನ್ನು, ಡಾ. ಮುಖ್ಯಮಂತ್ರಿ ಚಂದ್ರು
ಚಲನಚಿತ್ರ ನಟರು, ಬೆಂಗಳೂರು, ಜಸ್ಟೀಸ್ ಶ್ರೀ ಹೆಚ್. ಬಿಲ್ಲಪ್ಪ ವಿಶ್ರಾಂತ ನ್ಯಾಯಮೂರ್ತಿಗಳು, ಕರ್ನಾಟಕ ಉಚ್ಛನ್ಯಾಯಾಲಯ,ಪೂಜ್ಯಶ್ರೀ ಮ.ನಿ.ಪ್ರ. ಶಿವಾನಂದ ಮಹಾಸ್ವಾಮಿಗಳು
ಶ್ರೀ ಗುರುಬಸವೇಶ್ವರ ಸಂಸ್ಥಾನ ಮಠ, ಹುಲಸೂರು
,ಮದ್ಯಪಾನ ವಿರೋಧಿ ಆಂದೋಲನ ಸಮಿತಿ
ಸುರತ್ಕಲ್, ಕರ್ನಾಟಕ ಹಾಗೂ ಎಸ್. ಷಣ್ಮುಖಪ್ಪ
ಧರ್ಮದರ್ಶಿಗಳು ಎಸ್. ನಿಜಲಿಂಗಪ್ಪ ಟ್ರಸ್ಟ್, ಚಿತ್ರದುರ್ಗ ಇವರುಗಳಿಗೆ ನೀಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಉತ್ಸವ ಸಮಿತಿ ಗೌರವಾಧ್ಯಕ್ಷರಾದ ಜ. ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮಿಗಳು,
ಶ್ರೀ ತಿಪ್ಪೇರುದ್ರ ಸ್ವಾಮಿಗಳು, ಉತ್ಸವ ಸಮಿತಿ ಕಾರ್ಯಾಧ್ಯಕ್ಷ ಟಿ.ಎಸ್.ಎನ್. ಜಯಣ್ಣ, ಎಸ್.ಜೆ.ಎಂ. ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ.ಪರಮಶಿವಯ್ಯ, ಪಟೇಲ್ ಶಿವಕುಮಾರ್, ಎಂ.ಟಿ.ಮಲ್ಲಿಕಾರ್ಜುನ ಸ್ವಾಮಿ, ಎಸ್.ಷಣ್ಮುಖಪ್ಪ, ರೆ.ಫಾದರ್ ರಾಜು, ಶ್ರೀಮತಿ ಗಾಯತ್ರಿ ಶಿವರಾಂ ಮುಂತಾದವರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೆ.ಆರ್.ಐ.ಡಿ.ಎಲ್, ಮಾಯಕೊಂಡ ವ್ಯಾಪ್ತಿ ; 20 ಕೋಟಿ ಅನುದಾನ : ತನಿಖೆಗೆ ಒಳಪಡಿಸಲು ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಕೆಆರ್.ಐ.ಡಿ.ಎಲ್ ವಿಭಾಗ-2ರ ವ್ಯಾಪ್ತಿಗೆ 2023-24ನೇ ಸಾಲಿನಲ್ಲಿ ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದಡಿ ದಾವಣಗೆರೆ ಜಿಲ್ಲೆ ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬಿಡುಗಡೆಯಾದ ರೂ. 20 ಕೋಟಿ ಮೊತ್ತದ 51 ಕಾಮಗಾರಿಗಳನ್ನು ಸೂಕ್ತ ತನಿಖೆಗೆ ಒಳಪಡಿಸುವಂತೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ 2023-24ನೇ ಸಾಲಿನಲ್ಲಿ ಬಿಡುಗಡೆಯಾಗಿರುವ ರೂ. 20 ಕೋಟಿ ಅನುದಾನದಲ್ಲಿ ನಡೆದಿರುವ 51 ಕಾಮಗಾರಿಗಳ ಬಗ್ಗೆ ಅನುಮಾನ ಕಂಡುಬಂದಿದ್ದು, ಮಾಹಿತಿಹಕ್ಕು ಅಡಿಯಲ್ಲಿ ದಾಖಲೆ ಕೋರಿದಾಗ ಬಹುತೇಕ ಕಾಮಗಾರಿಗಳು ನಡೆದಿರುವುದಿಲ್ಲ ಎಂಬುದಾಗಿ ಹಿಂಬರಹ ನೀಡಿರುತ್ತಾರೆ. ಹೀಗಾಗಿ 51 ಕಾಮಗಾರಿಗೆ ಸಂಬಂಧಿಸಿದಂತೆ ನಿತೀನ್ ಎಸ್. ಜಾಧವ್, ಸಹಾಯಕ ಕಾರ್ಯಪಾಲಕ ಅಭಿಯಂತರು, ಕೆ.ಆರ್.ಐ.ಡಿ.ಎಲ್, ಮಾಯಕೊಂಡ ಇವರ ವಿರುದ್ಧ ಪ್ರಕರಣ ದಾಖಲಿಸಿ ರೂ. 20 ಕೋಟಿ ಮೊತ್ತದಲ್ಲಿ ನಡೆದಿರುವ 51 ಕಾಮಗಾರಿಗಳನ್ನು ನಿಯಮಾನುಸಾರ ತನಿಖೆಗೆ ಒಳಪಡಿಸುವಂತೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಲೇಜು ಶಿಕ್ಷಣ ಇಲಾಖೆ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ನೀಡಿರುವ ಮುಂಬಡ್ತಿಯ ಸ್ಥಳ ನಿಯುಕ್ತಿಗೆ ಸಂಬAಧಿಸಿದ ಆನ್ಲೈನ್ ಕೌನ್ಸಿಲಿಂಗ್ನಲ್ಲಿ ಪಾರದರ್ಶಕತೆಯನ್ನು ಉಲ್ಲಂಘಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಅಡಿಯಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಹಿಂದಿನ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ಲೋಕಾಯುಕ್ತಗೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳನ್ನು ಸೇವಾ ಜೇಷ್ಠತೆ ಹಾಗೂ ಅರ್ಹತೆ ಆಧಾರದ ಮೇಲೆ ಅರ್ಹ ದ್ವಿತೀಯ ದರ್ಜೆ ಸಹಾಯಕರ ವೃಂದದಿAದ ಮುಂಬಡ್ತಿ ಮೂಲಕ ಭರ್ತಿ ಮಾಡಲು ಮುಂದಾಗಿದ್ದು, ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ದಿನಾಂಕ: 12-11-2025 ರಂದು ಆನ್ಲೈನ್ ಕೌನ್ಸಿಲಿಂಗ್ ನಡೆಸಿ, ಸ್ಥಳ ನಿಯುಕ್ತಿ ಮಾಡಿ, ಕೌನ್ಸಿಲಿಂಗ್ ಮೂಲಕ ಸ್ಥಳ ಆಯ್ಕೆ ಮಾಡಿಕೊಂಡ ಪ್ರಥಮ ದರ್ಜೆ ಸಹಾಯಕರ ಪಟ್ಟಿಯನ್ನು ಬಿಡುಗಡೆಗೊಸಲಾಗಿರುತ್ತದೆ.
ಆದರೆ ಕಾಲೇಜು ಶಿಕ್ಷಣ ಇಲಾಖೆಯಿಂದ ಹೊರಡಿಸಿರುವ ಪಟ್ಟಿಯಲ್ಲಿ ಆಯುಕ್ತರ ಕಛೇರಿ, ಬೆಂಗಳೂರು ಇಲ್ಲಿ 03 ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಯನ್ನು ಗುರುತಿಸಲಾಗಿರುತ್ತದೆ. ಆದರೆ ಆದೇಶ ಪ್ರತಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕರ ಮುಂಬಡ್ತಿಯಲ್ಲಿ 10 ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಅವಕಾಶ ಕಲ್ಪಿಸಲಾಗಿದೆ. ಕೇಂದ್ರ ಕಛೇರಿ, ಬೆಂಗಳೂರು ಇಲ್ಲಿಗೆ ಆಯ್ಕೆ ಮಾಡಿಕೊಂಡಿರುವ 10 ಅಭ್ಯರ್ಥಿಗಳಲ್ಲಿ 05 ಅಭ್ಯರ್ಥಿಗಳನ್ನು ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಮುಂಬಡ್ತಿ ನೀಡಿ ಯಥಾ ಪ್ರಕಾರ ಮುಂದುವರೆಸಲಾಗಿರುತ್ತದೆ.
ಹೀಗಾಗಿ ಸದರಿ ಮುಂಬಡ್ತಿ ಪ್ರಕ್ರಿಯೆಯು ನಿಯಮಬಾಹಿರವಾಗಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ನೀಡಿ 10 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾಲೇಜು ಶಿಕ್ಷಣ ಇಲಾಖೆಯ ಹಿಂದಿನ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ಪ್ರಕಟ
ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ ಕತೆ ಪಡೆದ ಪ್ರಥಮ ಸ್ಥಾನವನ್ನು ಅಮಾನ್ಯ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕತೆ-ಕವಿತೆ ಸ್ಪರ್ಧೆಯ ನಿಯಮಾವಳಿಗಳ ಪ್ರಕಾರ ‘ “ಸ್ವತಂತ್ರ ರಚನೆಯಾಗಿರ ಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು” ಎನ್ನುವ ನಿಯಮಾವಳಿಗಳನ್ನು ಉಲಂಘಿಸಿರುವುದರಿಂದ ಪ್ರಥಮ ಸ್ಥಾನ ಪಡೆದ ” ಸಂಸ” ಕತೆಯನ್ನು ಅಮಾನ್ಯಗೊಳಿಸಲಾಗಿದೆ.
‘ಸಂಸ’ ಕತೆಯ ಕತೆಗಾರರಾದ ಅನಂತ ಕುಣಿಗಲ್ ಅವರು
ಸ್ವತಃ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ‘ ಸಂಸ’ ಕತೆಯು ಈ ಹಿಂದೆ ಯಾವುದೋ ಕತಾ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿತ್ತು. ಮತ್ತೊಂದೆಡೆ ತೃತೀಯ, ಮಗದೊಂದೆಡೆ ದ್ವಿತೀಯ ಬಹುಮಾನ ಲಭಿಸಿತ್ತು, ಅಲ್ಲದೆ ‘ಟೋಟೋ’ ಅವಾರ್ಡ್ ನ ಅಂತಿಮ ಸುತ್ತಿಗೆ ಎರಡು ಬಾರಿ ಶಾರ್ಟ್ ಲಿಸ್ಟ್ ಆಗಿತ್ತು ಎಂದು ಬರೆದು ಕೊಂಡಿರುತ್ತಾರೆ. ಆದಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.
ಕತಾ ಸ್ಪರ್ಧೆಯ ಪರಿಷ್ಕೃತ ಫಲಿತಾಂಶ
ಕತಾ ಸ್ಪರ್ಧೆಯಲ್ಲಿ ರವಿಮುಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ಪ್ರಥಮ ಬಹುಮಾನ, ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ದ್ವಿತೀಯ ಬಹುಮಾನ ಹಾಗೂ ಅಜೇಯ ಸಿಂಹ ಕೆ.ವಿ ಅವರ ‘ ಮಾರ್ಜಕದ ಶ್ರೀಮುಡಿ’ ಕತೆಗೆ ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕ ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


