ದಿನದ ಸುದ್ದಿ
ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ನಿಧನ
ಸುದ್ದಿದಿನ,ಬೆಂಗಳೂರು: ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ, ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ (68) ಶುಕ್ರವಾರ ನಸುಕಿನ ಎರಡು ಗಂಟೆ ಸುಮಾರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಒಂದು ವರ್ಷದ ಹಿಂದೆ ಕ್ಯಾನ್ಸರ್‌ಗೆ ತುತ್ತಾಗಿದ್ದ ಅವರು ಕೆಲವು ದಿನದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಇವರಿಗೆ ಇಬ್ಬರು ಪುತ್ರರು, ಮೂವರು ಸಹೋದರರು ಹಾಗೂ ಒಬ್ಬ ಸಹೋದರಿ ಇದ್ದಾರೆ. ರಾಮನಗರ ತಾಲ್ಲೂಕಿನ ಬಿಡದಿಯಲ್ಲಿ ಇರುವ ಅವರ ಸ್ವಗೃಹದಲ್ಲಿ ಕೆಲವೇ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಸಾರ್ವಜನಿಕರಿಗೆ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಅವಕಾಶ ಇಲ್ಲ ಎಂದು ಕುಟುಂಬದವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243