Connect with us

ದಿನದ ಸುದ್ದಿ

“ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಮ್ಯಾಸ ಬೇಡರ ಅಭಿವೃಧ್ದಿ ನಿಗಮ” ಸ್ಥಾಪನೆಗೆ ಮ್ಯಾಸ ಬೇಡ ಬುಡಕಟ್ಟು ಸಂಸ್ಕೃತಿ ಸಂರಕ್ಷಣಾ ಸಮಿತಿ ಮನವಿ

Published

on

ಸುದ್ದಿದಿನ, ದಾವಣಗೆರೆ : ಮ್ಯಾಸ ಬೇಡ ಬುಡಕಟ್ಟು ಜನರ ಅಭಿವೃದ್ದಿಗಾಗಿ “ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಮ್ಯಾಸ ಬೇಡರ ಅಭಿವೃಧ್ದಿ ನಿಗಮ” ಸ್ಥಾಪನೆ ಮಾಡಲು ಕೋರಿ ಸೋಮವಾರ ಮ್ಯಾಸ ಬೇಡ (ಮ್ಯಾಸ ನಾಯಕ) ಬುಡಕಟ್ಟು ಸಂಸ್ಕೃತಿ ಸಂರಕ್ಷಣಾ ಸಮಿತಿವತಿಯಿಂದ ಉಪವಿಭಾಗಾಧಿಕಾರಿಗಳಿಗೆ ಮನವಿ ಮಾಡಲಾಯಿತು.

ಮನವಿಯು ಈ ಕೆಳಕಂಡ ಅಂಶಗಳನ್ನು ಒಳಗೊಂಡಿದೆ

ಕರ್ನಾಟಕ ಆಂದ್ರ ಗಡಿ ಜಿಲ್ಲೆಗಳಾದ ಬಳ್ಳಾರಿ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ನಾಯಕ ಪಂಗಡದವರಾದ ಮ್ಯಾಸ ನಾಯಕ/ಮ್ಯಾಸ ಬೇಡರು ನೆಲೆಸಿರುತ್ತೇವೆ. ನಮ್ಮ ಬುಡಕಟ್ಟಿನಲ್ಲಿ ಮಂದ ನಾಯಕ ಮತ್ತು ಮಲ್ಲ ನಾಯಕ ಎಂಬ ಎರಡು ಗುಂಪುಗಳಿರುತ್ತವೆ. ಮ್ಯಾಸ ಬೇಡರ ಭಾಷೆ ತೆಲುಗು ಭಾಷೆಯ ಉಪ ಭಾಷೆ. ವಿದ್ವಾಂಸರು ಇದನ್ನು “ಮ್ಯಾಸ ಭಾಷೆ “ಎಂದೇ ಕರೆದಿರುತ್ತಾರೆ.

ನಾವು ಮೂಲತ: ಗೊಂಡವಾನ ಪ್ರದೇಶದ ಬುಡಕಟ್ಟುಗಳಲ್ಲಿ ಒಂದಾದ ‘ಭಿಲ್’ ಬುಡಕಟ್ಟು ಜನಾಂಗದಿಂದ ಬೇರ್ಪಟ್ಟ ‘ನಾಯ್ಕಡ’ ಬುಡಕಟ್ಟಿಗೆ ಸೇರಿರುತ್ತೇವೆ. ಆಂದ್ರದ ಶ್ರೀಶೈಲದ ಮೂಲಕ ಕರ್ನಾಟಕ ಆಂದ್ರ ಗಡಿಗೆ ಹೊಂದಿಕೊಂಡಂತೆ ಬಂದು ನೆಲೆಸಿರುತ್ತೇವೆ. ನಾಯ್ಕಡ ನಾಯಕ ಪಂಗಡದವರಾದ ಮ್ಯಾಸ ನಾಯಕ / ಮ್ಯಾಸ ಬೇಡ ಬುಡಕಟ್ಟು ಜನರು ಆದ ನಾವು ಮೂರ್ತಿ ಪೂಜಕರು ಅಲ್ಲ. ‘ಉದಿ-ಪದಿ’ ಎಂಬ ಬುಡಕಟ್ಟು ಧಾರ್ಮಿಕ ಸಂಪ್ರದಾಯವನ್ನು ಪಾಲಿಸುತ್ತೇವೆ.

‘ಉದಿ’ ಎಂದರೆ ಪೆಟ್ಟಿಗೆ, ಬುಟ್ಟಿಗಳಲ್ಲಿ ಇಟ್ಟಿರುವ ಪವಿತ್ರ ವಸ್ತುಗಳ ಪುಟ್ಟಿ ಅಥವಾ ಪೆಟ್ಟಿಗೆ ಇವುಗಳನ್ನೇ ದೇವರೆಂದು ನಾವು ಪೂಜಿಸುವುದರಿಂದ ಇವುಗಳನ್ನು ಪೆಟ್ಟಿಗೆ ದೇವರುಗಳೆಂದು ಕರೆಯುತ್ತೇವೆ.. ಬಿಲ್ಲು, ಕತ್ತಿ, ಕೋಲು ಮುಂತಾದ ಆಯುಧಗಳನ್ನು ಸಹ ಪೂಜಿಸುತ್ತೇವೆ. ಈ ಪೆಟ್ಟಿಗೆ ಮತ್ತು ಆಯುಧಗಳನ್ನು ನಮ್ಮ ಹಟ್ಟಿಗಳಲ್ಲಿ ಇರುವ ಗುಬ್ಬ (ಹುಲ್ಲಿನ ಗುಡಿಸಲು) ಗಳಲ್ಲಿ ಇಟ್ಟು ದೇವರೆಂದು ಪೂಜೆಮಾಡುವವರನ್ನು ‘ಉದಿ’ ಪೂಜಾರಿ ಎಂದು ಕರೆಯುತ್ತೇವೆ.

ದೇವರ ಎತ್ತುಗಳನ್ನು ಸಾಕುವುದಕ್ಕಾಗಿ ನೇಮಿಸಿರುವವರನ್ನು ‘ಪದಿ ಪೂಜಾರಿ’ ಅಥವಾ ‘ಕಿಲಾರಿ’ ಎನ್ನುತ್ತೇವೆ. ಈ ದೇವರ ಎತ್ತುಗಳು ನಮ್ಮ ಪೂರ್ವಿಕರ ಆತ್ಮವನ್ನು ಹೊಂದಿರುವ ಪ್ರಾಣಿಗಳೆಂದು ಪೂಜಿಸುತ್ತೇವೆ. ನಾವು ಪ್ರಾಣಿ ಪೂಜಕರೆ ಹೊರತು, ಮೂರ್ತಿ ಪೂಜಕರಲ್ಲ ಮತ್ತು ವೈಧಿಕ ಸಂಪ್ರದಾಯಗಳನ್ನು ಪಾಲಿಸುವವರಲ್ಲ. ಮ್ಯಾಸ ಬೇಡರ ಉಡುಪು, ಬಿಳಿ ಚಲ್ಲಣ, ಬಿಳಿ ರುಮಾಲು, ಹೆಗಲ ಮೇಲೆ ಕರಿ ಕಂಬಳಿ ಕೈಯಲ್ಲಿ ಕೋಲು. ನಾವು ‘ಮ್ಯಾಸರಟ್ಟಿ’ ಎಂಬ ಪ್ರತ್ಯೇಕ ಹಟ್ಟಿಗಳಲ್ಲಿ ಮುಖ್ಯವಾಹಿನಿಯಿಂದ ಪ್ರತ್ಯೇಕವಾಗಿ ವಾಸಿಸುತ್ತೇವೆ. ನಾವು ತೆಲುಗಿನ ಉಪ ಭಾಷೆಯನ್ನು ಮಾತನಾಡುತ್ತೇವೆ.

ನಾವು ಕೋಳಿ ಮಾಂಸವನ್ನು ತಿನ್ನುವುದಿಲ್ಲ ಮತ್ತು ಕೋಣದ ಮಾಂಸವನ್ನು ಸಮಾನ್ಯವಾಗಿ ಮುಖ್ಯ ಮಾಂಸ ಭೋಜನವಾಗಿ ಉಪಯೋಗಿಸುತ್ತೇವೆ. ನಾವು ಶಟ್ಲು ದ್ಯಾವರಿ, ದೂಲಿಹಬ್ಬ, ಗುಗ್ಗರಿ ಹಬ್ಬ ಮುಂತಾದ ನಮ್ಮದೇ ಹಬ್ಬಗಳನ್ನು ಆಚರಿಸುತ್ತೇವೆ. ದೇವರ ಕುಣಿತ, ಮಣೇವು ಕಣಿತ, ಪೋತಪ್ಪಗಳ ಕುಣಿತ ಮುಂತಾದವು ನಮ್ಮ ಬುಡಕಟ್ಟು ನೃತ್ಯಗಳಾಗಿವೆ. ಪೋತಪ್ಪಗಳು ಎಂದರೆ ದಡ್ಡಲು ಮಾರಮ್ಮ ಮತ್ತು ಗೌರಸಮುದ್ರ ಮಾರಮ್ಮನ ಮತ್ತು ಮಾದಲಿಂಗಪ್ಪನ ಪೂಜಿಸುವ ಬುಟುಗಲರು ಬೆಡಗಿನವರು ಮೇಕೆಯ (ಆಡು) ಮರಿಯ ಬಿಸಿ ರಕ್ತವನ್ನು ಕುಡಿಯುತ್ತಾರೆ ಮತ್ತು ಹಸಿ ಮಾಂಸವನ್ನು ತಿನ್ನುತಾರೆ.

ಚಾಟಿಯಿಂದ ಮೈಯಿಗೆ ಹೊಡೆದು ಕೊಳ್ಳುತ್ತಾ ಕುಪ್ಪಳಿಸುತ್ತಾ ಮಾಡುವ ಸಹಾಸ ಭಯಾನಕವಾಗಿರುತ್ತವೆ. ಇವೆಲ್ಲಾ ಮ್ಯಾಸ ಬೇಡರ ವಿಶೇಷ ಬುಡಕಟ್ಟು ಅಚಾರ ಮತ್ತು ಸಂಪ್ರದಾಯಗಳಾಗಿವೆ. ಚಿತ್ರದುರ್ಗ ಪಾಳೆಯಗಾರರು ನಮ್ಮ ಮ್ಯಾಸ ಬೇಡ ಬುಡಕಟ್ಟಿನ ಕಾಮಗೇತಿ ಬೆಡಗಿಗೆ ಸೇರಿದ ವೀರರಾಗಿರುತ್ತಾರೆ. ರಾಜ್ಯದ ಬಳ್ಳಾರಿ ಜಿಲ್ಲೆ, ಚಿತ್ರದುರ್ಗ ಜಿಲ್ಲೆ ಮತ್ತು ಜಗಳೂರು ತಾಲ್ಲೂಕಿನಲ್ಲಿ ನಮ್ಮ ನಾಯಕ ಪಂಗಡ ಮ್ಯಾಸ ಬೇಡರು ಜನ ಸಂಖ್ಯೆಯಲ್ಲಿ ಬಹುಸಂಖ್ಯಾತರಾಗಿರುತ್ತೇವೆ.

ಮ್ಯಾಸ ಬೇಡ ಸಮುದಾಯದ ಜನರು ಆರ್ಥಿಕ, ಸಮಾಜಿಕ, ಶೈಕ್ಷಣಿಕವಾಗಿ ತುಂಬಾ ಹಿಂದುಳಿದಿದ್ದೇವೆ. ಬುಡಕಟ್ಟು ಹಿನ್ನೆಲೆಯನ್ನು ಹೊಂದಿರುವ ಮ್ಯಾಸ ಬೇಡ ಸಮುದಾಯದ ಜನರನ್ನು ಈಗಾಗಲೇ ನಾಯಕ ವಾಲ್ಮೀಕಿ ಎಂಬ ಹೆಸರಿನಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಿ ಮೀಸಲಾತಿಯನ್ನು ನೀಡಿ 45ವರ್ಷಗಳೇ ಗತಿಸಿದರು ಸಹ ಈ ಬುಡಕಟ್ಟು ಜನರು ಮುಖ್ಯವಾಹಿನಿಗೆ ಬರಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಮ್ಯಾಸ ಬೇಡ ಸಮುದಾಯವು ನೆಲೆಸಿರುವ ಹಟ್ಟಿಗಳು ಇದುವರೆಗೂ ಕಂದಾಯ ಗ್ರಾಮಗಳು ಆಗಿರುವುದಿಲ್ಲ. ನಮ್ಮ ಬುಡಕಟ್ಟು ಜನಾಂಗದ ಸಾಂಸ್ಕೃತಿಕ ವೀರರ ಹೆಸರಲ್ಲಿ ಮತ್ತು ಮ್ಯಾಸರಹಟ್ಟಿ ಎಂಬ ಹೆಸರಿನಲ್ಲಿ ಊರುಗಳು ಇರುತ್ತವೆ. ನಮ್ಮ ಬುಡಕಟ್ಟು ಸಮುದಾಯದ ಧಾರ್ಮಿಕ ನಂಬಿಕೆಯ ಪ್ರತೀಕವಾದ ದೇವರು ಎತ್ತುಗಳು ಇವೆ.

ಸುಮಾರು ಗುಡಿಕಟ್ಟೆಯ ದೇವರ ಎತ್ತುಗಳು ದಶಕಗಳಿಂದ ಮೇವು ನೀರಿಲ್ಲದೆ ಸತ್ತುಹೋಗಿರುತ್ತವೆ. ಬಯಲು ಸಿಮೇಯಲ್ಲಿ ಇರುವುದರಿಂದ ಇವುಗಳನ್ನು ಉಳಿಸಿಕೊಳ್ಳಲು ಕಿಲಾರಿಗಳು ತುಂಬಾ ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಹಾಲವಾರು ಬಾರಿ ಮಾದ್ಯಮಗಳಲ್ಲಿಯು ವರದಿಯಾಗಿರುತ್ತದೆ. ನಾವು ಕೂಡ ಹಾಲವಾರು ಬಾರಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿಯನ್ನು ಸಹ ಸಲ್ಲಿಸಲಾಗಿದೆ ಆದರೆ ಯಾವುದೇ ರೀತಿ ಕ್ರಮಕೈಗೊಂಡಿರುವುದಿಲ್ಲ.

ಸರ್ಕಾರದಿಂದ ಸಿಗಬೇಕಾದ ಮೂಲಭೂತ ಸೌಲಭ್ಯಗಳು ಮತ್ತು ಅನುಧಾನವು ತಳವಾರ ಪರಿವಾರ ಜಾತಿಯವರ ಪಾಲಗುತ್ತಿದೆ. ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿರುವುದರಿಂದ ನಿಧಾನವಾಗಿ ನಮ್ಮ ಬುಡಕಟ್ಟು ಸಂಸ್ಕೃತಿಯು ನಾಶವಾಗುವ ಹಂತಕ್ಕೆ ತಲುಪಿರುತ್ತದೆ. ಈ ಸಮುದಾಯದ ಹಟ್ಟಿಗಳು ಮತ್ತು ಜನರು ಮೂಲ ಸೌಲಭ್ಯಗಳಿಲ್ಲದೆ ಸಂಪೂರ್ಣವಾಗಿ ಅಭಿವೃದ್ದಿಯಿಂದ ವಂಚಿತವಾಗಿದ್ದೇವೆ.

ನಮ್ಮ ಮ್ಯಾಸ ಬೇಡ ಬುಡಕಟ್ಟಿಗೆ ಸಂಬಂಧವಿರದ ತಳವಾರ ಪರಿವಾರ ಸಮುದಾಯವು ಸಹ ನಾಯಕ ವಾಲ್ಮೀಕಿ ಹೆಸರಲ್ಲಿ ಮೀಸಲಾತಿಯನ್ನು ಪಡೆಯುವುದರಿಂದ ನಮಗೆ ತುಂಬಾ ಅನ್ಯಾಯವಾಗಿದೆ. ಶ್ರೀ ಮಹರ್ಷಿ ವಾಲ್ಮೀಕಿ ಮಠ ರಾಜನಹಳ್ಳಿಯಿಂದಲೂ ಸಹ ಸಾಕಷ್ಟು ಅನ್ಯಾಯವಾಗಿರುತ್ತದೆ. ವಾಲ್ಮೀಕಿ ಮಠವನ್ನು ಮ್ಯಾಸ ನಾಯಕ ಬುಡಕಟ್ಟಿಗೆ ಸೇರಿದ ಮಾಜಿ ಮಂತ್ರಿಗಳಾದ ದಿ.ತಿಪ್ಪೇಸ್ವಾಮಿ ಚಳ್ಳಕೆರೆಯವರು ಮತ್ತು ಇತರೆ ಮ್ಯಾಸ ನಾಯಕ ಮುಖಂಡರು ಸ್ಥಾಪನೆ ಮಾಡಿರುತ್ತಾರೆ.

ಆದರೆ 2014 ರಲ್ಲಿ ಬುಡಕಟ್ಟು ಸಂಶೋಧನ ಸಂಸ್ಥೆ ಮೈಸೂರು ರವರು ಸರ್ಕಾರಕ್ಕೆ ನೀಡಿರುವ ವರದಿಯಲ್ಲಿ ವಾಲ್ಮೀಕಿ ಮಠವನ್ನು ತಳವಾರ ಪರಿವಾರದವರು ಸ್ಥಾಪನೆ ಮಾಡಿಕೊಂಡಿದ್ದಾರೆ ಎಂದು ಬರೆಯಿಸಿ ಮ್ಯಾಸ ನಾಯಕರಿಗೆ ವಂಚನೆ ಮಾಡಿರುತ್ತಾರೆ. ಈಗಾಗಲೇ ಇರುವ ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮದಿಂದ ನಮಗೆ ಯಾವುದೇ ರೀತಿಯ ಅನುಕೂಲವಿಲ್ಲ.

ಆದ್ದರಿಂದ ಕರ್ನಾಟಕ ಆಂದ್ರ ಗಡಿ ಭಾಗದಲ್ಲಿರುವ ನಾಯಕ ಪಂಗಡದ ಮ್ಯಾಸ ಬೇಡ ಬುಡಕಟ್ಟು ಜನಾಂಗದ ಅಳಿವು ಉಳಿವು ನಿಮ್ಮ ಕೈಯಲ್ಲಿ ಇದೆ. ರಾಜಕೀಯ ಮುಖಂಡರ ಇಚ್ಛಾಶಕ್ತಿಯ ಕೊರೆತೆಯಿಂದಾಗಿ ಇಂದು ಈ ಸಮುದಾಯ ಜ್ವಾಲಂತ ಸಮಸ್ಯೆಗಳ ಸುಳಿಯಲ್ಲಿ ಸಿಲುಕಿದೆ.

ಮುಗ್ದ ಸಾಮಾನ್ಯ ಮ್ಯಾಸ ಬೇಡ ಬುಡಕಟ್ಟು ಜನರ ಉಳಿವಿಗಾಗಿ ಮತ್ತು ಅಭಿವೃದ್ದಿಗಾಗಿ ತಮ್ಮ ಅಧಿಕಾರ ಅವಧಿಯಲ್ಲಿ “ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಮ್ಯಾಸ ಬೇಡರ ಅಭಿವೃಧ್ದಿ ನಿಗಮ” ಸ್ಥಾಪನೆ ಮಾಡಿ ಪ್ರತ್ಯೇಕ ಅನುದಾನವನ್ನು ಮೀಸಲಿಡುವುದರ ಮೂಲಕ ಸಂವಿಧಾನ ಬದ್ದ ನಮ್ಮ ಹಕ್ಕುಗಳು ಮತ್ತು ಸೌಲಭ್ಯಗಳು ನಮಗೆ ಸಿಗುವಂತೆ ಮಾಡಿ ನಮಗೆ ನ್ಯಾಯ ಒದಗಿಸಿಕೊಡಬೇಕೆಂದು ಈ ಮೂಲಕ ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇವೆ.

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಡಾ.ಗೆರೆಗಲ್‌ ಪಾಪಯ್ಯ, ಕಾರ್ಯದರ್ಶಿ ದೊಡ್ಡಮನಿ ಪ್ರಸಾದ್‌, ಡಾ. ಓಬಳೇಶ್, ಮಂಜುನಾಥ್ ಗೋಣಿವಾಡ, ಪ್ರಕಾಶ್ ಹಾಗೂ ಸದಸ್ಯರು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending