Connect with us

ದಿನದ ಸುದ್ದಿ

ಮೈಸೂರು ದಸರಾ ಗಜಪಯಣ ಹಿನ್ನೆಲೆ; ಆನೆಗಳ ಆಯ್ಕೆ ಪ್ರಕ್ರಿಯೆ ಹೇಗಿರುತ್ತೆ ಗೊತ್ತಾ..?

Published

on

ಸುದ್ದಿದಿನ,ಮೈಸೂರು: ಮೈಸೂರು ದಸರಾ ಮಹೋತ್ಸವದಲ್ಲಿ ಗಜಪಯಣ ವಿಶಿಷ್ಟ ಕಾರ್ಯಕ್ರಮವಾಗಿದ್ದು, ಇದು ಮಹಾರಾಜರ ಕಾಲದಿಂದಲೂ ಸಹ ಗಜಪಯಣ ಕಾರ್ಯಕ್ರಮವು ಜರುಗುತ್ತಿದ್ದು, ಇಂದಿನ ಕಾರ್ಯಕ್ರಮಗಳಿಗಿಂತ ವಿಭನ್ನವಾಗಿತ್ತು. ಮೈಸೂರು ಮಹಾರಾಜರು ದಸರಾ ಮಹೋತ್ಸವದ ಸಂದರ್ಭದಲ್ಲಿ ಅಂಬಾರಿಯನ್ನು ಹೊರುವುದಕ್ಕಾಗಿ ಹಾಗೂ ವಿವಿಧ ಕಾರ್ಯಕ್ರಮಗಳಿಗಾಗಿ ಕಾಡಿನಲ್ಲಿ ಪಳಗಿಸಿರುವ ಆನೆಗಳನ್ನು ಆಯ್ಕೆ ಮಾಡಿ ನಿಗದಿತ ಶುಭದಿನದಂದು ಶ್ಲೋಕಗಳನ್ನು ಪಠಿಸುವ ಮೂಲಕ ಆನೆಗಳಿಗೆ ಸಾಂಪ್ರದಾಯಿಕ ಸ್ವಾಗತವನ್ನು ಮಾಡಿ ನಂತರ ಸದರಿ ಸ್ಥಳದಿಂದ ಕಾಲ್ನಡಿಗೆ ಮೂಲಕ ಮೈಸೂರು ಅರಮನೆ ಆವರಣಕ್ಕೆ ಕರೆತರುತ್ತಿದ್ದರು. ಆನೆಗಳಿಗೆ ಭಕ್ತಿ ಮತ್ತು ಶ್ರದ್ದೆಯಿಂದ ವಿಶೇಷ ಪೂಜೆ ಸಲ್ಲಿಸುವ ಮೂಲಕ ನವರಾತ್ರಿ ದಿನಗಳನ್ನು ಆಚರಣೆ ಮಾಡಲಾಗುತ್ತಿತ್ತು.

ಇಂದು ಮಾನವ ಜಗತ್ತನ್ನು ಆಧುನೀಕರಣಗೊಳಿಸುವ ತವಕದಲ್ಲಿ ಕಾಡುಗಳನ್ನು ನಾಶಮಾಡಿ ಕಾಂಕ್ರೀಟಿಕರಣಗೊಳಿಸುವಲ್ಲಿ ಯಶಸ್ವಿಯಾಗಿದ್ದಾನೆ. ಇದರಿಂದ ಜಾಗತಿಕ ವಲಯದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ರೀತಿ ವಾತವರಣ ಬದಲಾವಣೆ, ರಸ್ತೆಯ ಮೇಲೆ ವಾಹನಗಳ ದಟ್ಟಣೆ, ಶಬ್ದ ಮಾಲಿನ್ಯದಿಂದ ಆನೆಗಳನ್ನು ಕಾಡಿನಿಂದ ಮೈಸೂರಿಗೆ ಕಾಲ್ನಡಿಗೆ ಮೂಲಕ ಕರೆತರಲು ಕಷ್ಟವಾಗಿರುವುದನ್ನು ಅರಿತ ಅರಣ್ಯ ಇಲಾಖೆ, ಆನೆಗಳ ಸುರಕ್ಷತೆಗಾಗಿ ಲಾರಿಗಳ ಮೂಲಕ ಸಾಗಾಣಿಕೆ ಮಾಡಲು 2004ರಲ್ಲಿ ತೀರ್ಮಾನಿಸಲಾಯಿತು. 2004ನೇ ಸಾಲಿನಿಂದ ಗಜಪಯಣ ಕಾರ್ಯಕ್ರಮದಲ್ಲಿ ಮೊದಲನೇ ತಂಡದಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ರಾಜೀವ್‍ಗಾಂಧಿ ರಾಷ್ಟ್ರೀಯ ಉದ್ಯಾನದ ವೀರನಹೊಸಳ್ಳಿ ಬಳಿ ಸಾಂಪ್ರದಾಯಿಕ ಪೂಜೆಗಳೊಂದಿಗೆ ಚಾಲನೆ ನೀಡಲಾಗುತ್ತಿರುತ್ತದೆ.

ಸಾಂಪ್ರದಾಯಿಕ ಪೂಜೆಗಳು ನೆರವೇರಿದ ನಂತರ ಆನೆಗಳನ್ನು ಲಾರಿಯ ಮೂಲಕ ಸುರಕ್ಷಿತವಾಗಿ ಮೈಸೂರಿಗೆ ಸಾಗಾಣಿಕೆ ಮಾಡಲಾಗುವುದು.
ನಂತರದ ದಿನಗಳಲ್ಲಿ ಗಜಪಯಣ ಕಾರ್ಯಕ್ರಮದಲ್ಲಿ ಮೊದಲನೇ ತಂಡದಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ರಾಜೀವ್‍ಗಾಂಧಿ ರಾಷ್ಟ್ರೀಯ ಉದ್ಯಾನದ ವೀರನಹೊಸಳ್ಳಿ ಬಳಿ ನಡೆಯುತ್ತಿದ್ದ ಸಾಂಪ್ರದಾಯಿಕ ಪೂಜೆ ಕಾರ್ಯಕ್ರಮವನ್ನು ಹುಣಸೂರು ತಾಲ್ಲೂಕು, ನಾಗಪುರ ಗಿರಿಜನ ಹಾಡಿಯ ಸರ್ಕಾರಿ ಶಾಲೆಯ ಆವರಣದಲ್ಲಿ ಜನಪ್ರತಿನಿಧಿಗಳು, ಗಣ್ಯವ್ಯಕ್ತಿಗಳು, ಅಧಿಕಾರಿಗಳು, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಸಮ್ಮುಖದಲ್ಲಿ ಸಾಂಪ್ರದಾಯಿಕ ಪೂಜೆಯನ್ನು ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಾರ್ವಜನಿಕರಲ್ಲಿ ಅರಣ್ಯ ಮತ್ತು ವನ್ಯಪ್ರಾಣಿಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆಯ ವತಿಯಿಂದ ನೆರವೇರಿಸಿಕೊಂಡು ಬರಲಾಗುತ್ತಿರುತ್ತದೆ.

ಸದರಿ ಸಂದರ್ಭದಲ್ಲಿ ಸಾಂಪ್ರದಾಯಿಕ ರಾಗಗಳನ್ನು ನುಡಿಸುವ ಸಂಗೀತಗಾರರು ಹಾಗೂ ಪೂರ್ಣಕುಂಬದೊಂದಿಗೆ ಶ್ಲೋಕಗಳನ್ನು ಪಠಿಸುವುದು ಹಾಗೂ ಆನೆಗಳ ಸುರಕ್ಷತೆ ಮತ್ತು ಸಮಾಜ ಸಾಮೂಹಿಕ ಕಲ್ಯಾಣಕ್ಕಾಗಿ ಗಣೇಶ ಅಷ್ಟೋತ್ತರ ಸೇರಿದಂತೆ ವಿಶೇಷ ಪ್ರಾರ್ಥನೆಗಳನ್ನು ನಡೆಸಲಾಗುತ್ತದೆ. ಅಲ್ಲದೆ ಆನೆಗಳಿಗೆ ತೆಂಗಿನಕಾಯಿ, ಬೆಲ್ಲ ಮತ್ತು ಕಬ್ಬನ್ನು ನೀಡಿ ಸ್ವಾಗತವನ್ನು ಕೋರಲಾಗುತ್ತದೆ. ಗಜಪಯಣ ಕಾರ್ಯಕ್ರಮದ ದಿನ ಆನೆಗಳನ್ನು ವಿವಿಧ ಬಣ್ಣಗಳಿಂದ ಅಲಂಕಾರ ಗೊಳಿಸಿ, ವಿಶೇಷ ವಿನ್ಯಾಸವುಳ್ಳ ಹಣೆಪಟ್ಟಿಯನ್ನು ಹಾಕಲಾಗುವುದು. ಅಲ್ಲದೆ ಆನೆಗಳ ಮಾವುತರು ಮತ್ತು ಕವಾಡಿಗಳು ಸಹಾ ಸಮವಸ್ತ್ರಗಳನ್ನು ಧರಿಸುತ್ತಾರೆ. ಕಾರ್ಯಕ್ರಮಕ್ಕೆ ಆಗಮಿಸುವ ಅತಿಥಿಗಳು ಹಾಗೂ ಗಣ್ಯವ್ಯಕ್ತಿಗಳು ಅಲಂಕೃತ ಆನೆಗಳಿಗೆ ಪೂಜೆ ಸಲ್ಲಿಸಿ ಬೆಲ್ಲ ಮತ್ತು ಕಬ್ಬನ್ನು ನೀಡುತ್ತಾರೆ. ಮಾವುತರು ಮತ್ತು ಕವಾಡಿಗಳವರಿಗೆ ತಾಂಬೂಲಗಳನ್ನು ನೀಡಿ ಸ್ವಾಗತವನ್ನು ಕೋರಲಾಗುವುದು. ನಂತರ ಅವರಿಗೆ ವಿಶೇಷ ಭೋಜನವನ್ನು ಏರ್ಪಡಿಸಲಾಗುತ್ತದೆ. ಆನೆಗಳನ್ನು ರ್ಯಾಂಪ್ಸ್‍ಗಳ ಮೂಲಕ ಲಾರಿಗಳಿಗೆ ಹತ್ತಿಸಿ, ಅರಣ್ಯ ಇಲಾಖೆಯ ಮತ್ತು ಪೋಲೀಸ್ ಸಿಬ್ಬಂದಿ ಬಂದೂಬಸ್ತಿನೊಂದಿಗೆ ಮೈಸೂರಿಗೆ ಸಾಗಾಣಿಕೆ ಮಾಡಲಾಗುತ್ತದೆ.

ಆನೆಗಳ ಆಯ್ಕೆಯ ಪ್ರಕ್ರಿಯೆ, ಆರೋಗ್ಯ ತಪಾಸಣೆ

ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವ ಆನೆಗಳನ್ನು ಈ ಎಲ್ಲಾ ಕಾರ್ಯಕ್ರಮಗಳಿಗಿಂತ ಮುಂಚೆ ಮೈಸೂರು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಪಶುವೈದ್ಯಾಧಿಕಾರಿಗಳೊಂದಿಗೆ ವಿವಿಧ ಆನೆ ಶಿಬಿರಗಳಿಗೆ ತೆರಳಿ ಆನೆಗಳ ಆರೋಗ್ಯವನ್ನು ಪರಿಶೀಲಿಸುತ್ತಾರೆ. ಈ ಬಾರಿ ದಸರಾ ಮಹೋತ್ಸವಕ್ಕಾಗಿ ಆನೆಗಳನ್ನು ಆಯ್ಕೆ ಮಾಡಲು ಮೈಸೂರು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿದ್ರಾಮಪ್ಪ ಎಂ ಚಳಕಾಪುರೆ ಮತ್ತು ಪಶುವೈದ್ಯಾಧಿಕಾರಿ ಡಾ. ಡಿ.ಎನ್. ನಾಗರಾಜು ಅವರು ನಾಗರಹೊಳೆ, ಬಂಡೀಪುರ ಮತ್ತು ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶಗಳ ವ್ಯಾಪ್ತಿಗೆ ಬರುವ ವಿವಿಧ ಆನೆಗಳ ಶಿಬಿರಗಳಲ್ಲಿ ಇರುವ ಸಾಕಾನೆಗಳ ಆರೋಗ್ಯ ತಪಾಸಣೆ ಮಾಡಿ ಒಟ್ಟು 16 ಆನೆಗಳನ್ನು ಆಯ್ಕೆ ಮಾಡಿರುತ್ತಾರೆ. ನಂತರ ದಿನಾಂಕ:19-7-2018 ರಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅಧ್ಯಕ್ಷತೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆಯನ್ನು ಜರುಗಿಸಿ,
16 ಆನೆಗಳ ವಿವರಗಳನ್ನು ಪಡೆದು ಅದರಲ್ಲಿ 12 ಆನೆಗಳನ್ನು ಆಯ್ಕೆ ಮಾಡಿ ದಸರಾ ಮಹೋತ್ಸವಕ್ಕೆ ಕರೆತರಲು ತೀರ್ಮಾನಿಸಲಾಯಿತು.

ಗಜಪಯಣ-2018 (ವೀರನಹೊಸಹಳ್ಳಿ ಬಳಿ)
ಪ್ರತಿ ವರ್ಷದಂತೆ ಪ್ರಸಕ್ತ ವರ್ಷದಲ್ಲಿಯೂ 2018ರ ಮೈಸೂರು ದಸರಾ ಮಹೋತ್ಸವದ
ಅಂಗವಾಗಿ ಗಜಪಯಣ ಕಾರ್ಯಕ್ರಮವನ್ನು ಸೆಪ್ಟಂಬರ್ ಮಾಹೆಯ 2ನೇ ತಾರೀಖಿನಂದು
ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವೀರನಹೊಸಹಳ್ಳಿ ವಲಯದ ಹೆಬ್ಬಾಗಲಿನಲ್ಲಿ ಪೂಜಾ ಕಾರ್ಯಕ್ರಮವನ್ನು ಹಾಗೂ ಗ್ರಾಮದ ಬಳಿ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸದರಿ ಕಾರ್ಯಕ್ರಮವನ್ನು ಹುಣಸೂರು ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಅಡಗೂರು ಹೆಚ್ ವಿಶ್ವನಾಥ್ ಅಧ್ಯಕ್ಷತೆಯಲ್ಲಿ ಮಾನ್ಯ ಉನ್ನತ ಶಿಕ್ಷಣ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಜಿ.ಟಿ.ದೇವೇಗೌಡ ರವರು ವಿದ್ಯುಕ್ತ ಚಾಲನೆಯನ್ನು ನೀಡಿರುತ್ತಾರೆ. ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾನ್ಯ ಪ್ರವಾಸೋದ್ಯಮ, ರೇಷ್ಮೆ ಖಾತೆ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸಾ.ರಾ.ಮಹೇಶ್ ಮತ್ತು ಮಾನ್ಯ ಕನ್ನಡ ಮತ್ತು ಸಂಸ್ಕøತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ
ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಶ್ರೀಮತಿ ಜಯಮಾಲ
ರವರು ಭಾಗವಹಿಸಿರುತ್ತಾರೆ. ಅಲ್ಲದೇ ಮೈಸೂರು ಪ್ರಾಂತ್ಯದ ಮಾನ್ಯ ಲೋಕಸಭಾ ಸದಸ್ಯರು, ಮಾನ್ಯ ಶಾಸಕರು, ಜಿಲ್ಲಾ ಪಂಚಾಯತ್ ಮತ್ತು ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಹಾಗೂ
ಉಪಾಧ್ಯಕ್ಷರುಗಳು ಭಾಗವಹಿಸಿರುತ್ತಾರೆ.

ಗಜಪಯಣದ ಕಾರ್ಯಕ್ರಮದ ನಂತರ ಮೊದಲನೆ ತಂಡದಲ್ಲಿ ಅರ್ಜುನ, ವರಲಕ್ಷ್ಮಿ,
ಚೈತ್ರ, ಗೋಪಿ, ವಿಕ್ರಮ ಮತ್ತು ಧನಂಜಯ ಆನೆಗಳನ್ನು ಮೈಸೂರಿನ ಅರಣ್ಯ ಭವನಕ್ಕೆ
ಕರೆತರಲಾಯಿತು. ಸದರಿ ಆನೆಗಳನ್ನು ದಿನಾಂಕ:5-9-2018 ರಂದು ಮೈಸೂರು ಅರಮನೆ
ಆವರಣಕ್ಕೆ ಬರಮಾಡಿಕೊಳ್ಳಲು ಶುಭ ದಿನ ನಿಗಧಿಯಾದ್ದರಿಂದ, ಮೂರು ದಿನಗಳವರೆಗೆ
ಮೈಸೂರು ಅರಣ್ಯ ಭವನದಲ್ಲಿ ವಾಸ್ತವ್ಯ ಮಾಡಿದ್ದವು. ದಿನಾಂಕ: 5-9-2018 ರಂದು ಅರಣ್ಯ ಭವನದಲ್ಲಿ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾದಿಕಾರಿಗಳು (ಹುಲಿ ಮತ್ತು ಆನೆ ಯೋಜನೆ) ಮೈಸೂರು ರವರಾದ ಶ್ರೀ ಜಗತ್ ರಾಮ್ ಭಾ.ಅ.ಸೇ. ಮುಖ್ಯ ಅರಣ್ಯ
ಸಂರಕ್ಷಣಾಧಿಕಾರಿಗಳು, ಮೈಸೂರು ವೃತ್ತ, ಮೈಸೂರು ರವರಾದ ಶ್ರೀ ವೆಂಕಟೇಸನ್ ಎಸ್
ಬಾs .ಅ.ಸೇ. ಹಾಗೂ ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಾಂಪ್ರಾದಾಯಿಕ ಪೂಜೆಯನ್ನು ಸಲ್ಲಿಸಿದ ನಂತರ ಬಲ್ಲಾಳ್ ವೃತ್ತ–ರಾಮಸ್ವಾಮಿ ವೃತ್ತ ಮತ್ತು 100 ಅಡಿ ರಸ್ತೆಯ ಮೂಲಕ ಕಾಲ್ನಡಿಗೆಯಲ್ಲಿ ಅರಮನೆಯ ಜಯಮಾರ್ತಾಂಡ ಗೇಟ್‍ನ ಬಳಿ ಕರೆತರಲಾಗುತ್ತದೆ. ಅಲ್ಲಿ
ಗಣ್ಯರು ಹಾಗೂ ಅಧಿಕಾರಿಗಳು ಪೂಜೆಯನ್ನು ನೆರವೇರಿಸುವ ಮೂಲಕ ಅರಮನೆಯ ಆವರಣಕ್ಕೆ ಬರಮಾಡಿಕೊಳ್ಳಲಾಯಿತು.

ಸೌಲಭ್ಯಗಳು : ಮಾವುತರು ಹಾಗೂ ಅವರ ಕುಟುಂಬ ವರ್ಗದವರಿಗೆ

ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವ ಆನೆಗಳ ಮಾವುತರು ಮತ್ತು
ಕವಾಡಿಗಳವರೊಂದಿಗೆ ಅವುರುಗಳ ಕುಟುಂಬ ವರ್ಗದವರು ಸಹಾ ಜೊತೆಯಲ್ಲಿ ಬರುವುದರಿಂದ ಅವರ ವಾಸ್ತವ್ಯಕ್ಕಾಗಿ ಮೈಸೂರು ಅರಮನೆ ಆವರಣದಲ್ಲಿ ಅರಣ್ಯ ಇಲಾಖೆಯ ವತಿಯಿಂದ
ನೀರು ನಿರೋಧಕ ಶೆಡ್ಡಗಳನ್ನು ನಿರ್ಮಾಣ ಮಾಡಿಕೊಡಲಾಗುತ್ತದೆ. ಅಲ್ಲದೇ ಅವರ ದಿನನಿತ್ಯದ ನಿರ್ವಹಣೆಗೆ ಅಗತ್ಯವಾದ ವಸ್ತುಗಳನ್ನು ಸಹಾ ಪೂರೈಸಲಾಗುತ್ತದೆ. ಇವರೊಂದಿಗೆ ಆನೆಗಳಿಗೂ
ಸಹಾ ಶೆಡ್ಡುಗಳನ್ನು ನಿರ್ಮಾಣ ಮಾಡಲಾಗುತ್ತದೆ. ಅಲ್ಲದೆ ಮಾವುತ ಮತ್ತು ಕವಾಡಿಗಳ ಮಕ್ಕಳ ವಿದ್ಯಾಬ್ಯಾಸಕ್ಕೆ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ತಾತ್ಕಾಲಿಕವಾಗಿ ಗ್ರಂಥಾಲಯನ್ನು ಹಾಗೂ ಪಾಠಶಾಲೆಯನ್ನು ಮತ್ತು ಆರೋಗ್ಯ ರಕ್ಷಣೆಯ ದೃಷ್ಟಿಯಿಂದ ಸದರಿ ಸ್ಥಳದಲ್ಲಿ ಒಂದು ಆರ್ಯವೇದದ ಆಸ್ಪತ್ರೆಯನ್ನು ಸಹಾ ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ತೆರೆಯಲಾಗಿರುತ್ತದೆ. ಇವುಗಳಲ್ಲದೆ ರಕ್ಷಣೆಯ ದೃಷ್ಟಿಯಿಂದ ಆನೆಗಳ ಶಿಬಿರ
ಹಾಗೂ ಶೆಡ್ಡ ಆವರಣಗಳಲ್ಲಿ ಸಿಸಿಟಿವಿಯನ್ನು ಸಹಾ ಅಳವಡಿಸಲಾಗಿರುತ್ತದೆ.

ಎರಡನೇ ತಂಡದ ಆನೆಗಳ ಆಗಮನ

ದಿನಾಂಕ:14-9-2018 ರಂದು ಎರಡನೇ ತಂಡದಲ್ಲಿ ಅಭಿಮನ್ಯು, ಬಲರಾಮ, ಕಾವೇರಿ,
ವಿಜಯ, ಪ್ರಶಾಂತ ಮತ್ತು ದ್ರೋಣ ಆನೆಗಳನ್ನು ಮೈಸೂರು ಅರಮನೆಯ ಜಯಮಾರ್ತಾಂಡ
ಗೇಟ್‍ನ ಬಳಿ ಗಣ್ಯರು ಹಾಗೂ ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಪೂಜಾ
ಕಾರ್ಯಕ್ರಮವನ್ನು ನೆರವೇರಿಸುವ ಮೂಲಕ ಬರಮಾಡಿಕೊಳ್ಳಲಾಯಿತು.

ವಿಶೇಷ ತರಬೇತಿ ಮತ್ತು ತಾಲೀಮು

ದಿನಾಂಕ: 6-9-2018 ರಿಂದ ಮೊದಲನೆ ತಂಡದ ಆನೆಗಳಿಗೆ ಯಾವುದೇ ಭಾರವಿಲ್ಲದೆ
ವಾಹನಗಳ ಶಬ್ದಕ್ಕೆ ಹಾಗೂ ಜನಸಂದಣಿಗೆ ಮತ್ತು ರಾತ್ರಿ ದೀಪದ ಬೆಳೆಕಿಗೆ ಹೊಂದಿಕೊಳ್ಳುವ
ಸಲುವಾಗಿ ಪ್ರತಿ ದಿನ ಬೆಳಗ್ಗೆ ಮತ್ತು ಸಂಜೆ ಸಮಯದಲ್ಲಿ ಮೈಸೂರು ಅರಮನೆಯಿಂದ
ಬನ್ನಿಮಂಟಪದವರೆಗೆ ತಾಲೀಮು ನೀಡಲಾಗುತ್ತಿದ್ದು, ನಂತರ ದಿನಾಂಕ 14-9-2018 ರಿಂದ
ಹಂತಹಂತವಾಗಿ 350 ಕೆ.ಜಿ ಯಿಂದ 750 ಕೆಜಿಯರವರೆಗೆ ಭಾರವನ್ನು ಗಂಡು ಆನೆಗಳ ಬೆನ್ನಿಗೆ ಕಟ್ಟುವ ತೊಟ್ಟಿಲಿಗೆ ಮರಳು ಮೂಟೆಗಳನ್ನು ತುಂಬಿ ಪ್ರತಿ ದಿನ ತಾಲೀಮು ನೀಡಲಾಗುತ್ತಿದೆ. ಅಲ್ಲದೇ ವಿಜಯದಶಮಿಯಂದು ಹಾರಿಸುವ ಕುಶಲತೋಪುಗಳ ಶಬ್ದಕ್ಕೆ ಅಂಜದೆ ಇರುವುದಕ್ಕಾಗಿ ದಿನಾಂಕ: 27-9-2018 ರಂದು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಹಾಗೂ ಪೋಲಿಸ್ ಹಿರಿಯ ಅಧಿಕಾರಿಗಳು ಉಪಸ್ಥಿತಿಯಲ್ಲಿ ಆನೆಗಳನ್ನು ಸಾಲಾಗಿ ನಿಲ್ಲಿಸಿ ಅವುಗಳ ಮುಂದೆ ಅಂದರೆ ಸ್ವಲ್ಪ ದೂರದಲ್ಲಿ ಕುಶಲ ತೋಪುಗಳನ್ನು ಇಟ್ಟು ಸಿಡಿಮದ್ದನ್ನು ಸಿಡಿಸುತ್ತಾರೆ. ಈ ರೀತಿ 3-4 ಬಾರಿ ಆನೆಗಳಿಗೆ ಸಿಡಿಮದ್ದಿನ ತಾಲೀಮನ್ನು ಮಾಡಿಸಲಾಗುವುದು.

ವಿಶೇಷ ಆಹಾರಪದಾರ್ಥಗಳು ಮತ್ತುಮೇವು ಪೂರೈಕೆ

ದಸರಾ ಮಹೋತ್ಸವದಲ್ಲಿ ಭಾಗವಹಿಸುತ್ತಿರುವ ಇಲಾಖಾ ಆನೆಗಳು ಸುಮಾರು 50
ರಿಂದ 55 ದಿನಗಳವರಿಗೆ ಮೈಸೂರಿನಲ್ಲಿ ವಾಸ್ತವ್ಯ ಮಾಡಲಾಗುತ್ತದೆ. ಈ ಅವಧಿಯಲ್ಲಿ ಆನೆಗಳ ಬಗ್ಗೆ ವಹಿಸುವ ಎಚ್ಚರ ತುಂಬ ನಾಜೂಕಿನ ಹಾಗೂ ಜವಾಬ್ದಾರಿಯುತ ಕೆಲಸವಾಗಿದ್ದು, ಆನೆಗಳಿಗೆ ಪೌಷ್ಟಿಕ ಆಹಾರಗಳನ್ನು ನೀಡಿ ಹೆಚ್ಚಿನ ಮುತುವರ್ಜಿಯಿಂದ ನೋಡಿಕೊಳ್ಳಲಾಗುತ್ತಿದೆ.ಆನೆಗಳಿಗೆ ಪ್ರತಿ ದಿನ ಮರದ ಸೊಪ್ಪು, ಹಸಿಹುಲ್ಲು, ಕಬ್ಬುಗಳನ್ನು ನೀಡಲಾಗುತ್ತಿದ್ದು ಅದರ ಜೊತೆಗೆ ಪ್ರತಿ ದಿನ ಎರಡು ಬಾರಿ ಭತ್ತ, ಹಿಂಡಿ, ಕಾಯಿ, ಬೆಲ್ಲ ಯುಕ್ತ ಪ್ರಮಾಣದಲ್ಲಿ ಉಪ್ಪನ್ನು ಸೇರಿಸಿ ಭತ್ತದ ಹುಲ್ಲಿನಲ್ಲಿ ಕುಸುರೆ ಕಟ್ಟಿ ತಿನ್ನಿಸಲಾಗುತ್ತದೆ. ಅಲ್ಲದೆ ದಿನಕ್ಕೆರಡು ಬಾರಿ ಬೆಳಗ್ಗೆ 6.30 ಗಂಟೆಗೆ ಮತ್ತು ಸಂಜೆ 7.30 ಗಂಟೆಗೆ ಬೇಯಿಸಿದ ಹೆಸರುಕಾಳು, ಉದ್ದಿನಕಾಳು, ಕುಸುಬಲಕ್ಕಿ, ಗೋದಿ, ಈರುಳ್ಳಿ ಜೊತೆಯಲ್ಲಿ ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಬೇಯಿಸಿ ಆದು ತಣ್ಣಗಾದ ಮೇಲೆ ಹಸಿ ತರಕಾರಿಗಳನ್ನು ಮತ್ತು ಬೆಣ್ಣೆಯನ್ನು ಸೇರಿಸಿ ಪ್ರತಿಯೊಂದು ಆನೆಗೂ ಯುಕ್ತ ಪ್ರಮಾಣದಲ್ಲಿ ತಿನ್ನಿಸಲಾಗುತ್ತದೆ.
ಅಲ್ಲದೇ ಪಶುವೈದ್ಯಾಧಿಕಾರಿಗಳು ಪ್ರತಿ ದಿನ ಆನೆ ಶಿಬಿರಗಳಿಗೆ ಬೇಟಿ ಅವುಗಳ ಆರೋಗ್ಯ ತಪಾಸಣೆ, ಆಹಾರ ಪರಿಶೀಲನೆ, ಆನೆಗಳಿಗೆ ತರಬೇತಿ ಮತ್ತು ಅವಶ್ಯವಿದ್ದಲ್ಲಿ ಚಿಕಿತ್ಸೆಯನ್ನು ನೀಡಿ ಔಷಧಿಗಳನ್ನು ನೀಡುತ್ತಾರೆ.

ಪೂಜಾ ಕಾರ್ಯಕ್ರಮಗಳು

ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಇಲಾಖಾ ಆನೆಗಳಿಗೆ ವಿಶೇಷ ದಿನಗಳಂದು
ಅಂದರೆ ಗಣೇಶ ಚತುರ್ಥಿ ಮತ್ತು ಇತರೆ ಹಬ್ಬದ ದಿನಗಳಂದು ಅರಣ್ಯ ಇಲಾಖೆಯ ಹಿರಿಯ
ಅಧಿಕಾರಿಗಳು ಮತ್ತು ಜಿಲ್ಲಾಡಳಿತ ಅಧಿಕಾರಿಗಳು ಉಪಸ್ಥಿತಿಯಲ್ಲಿ ಪೂಜಾ ಕಾರ್ಯಕ್ರಮಗಳನ್ನು
ನೆರವೇರಿಸಲಾಗುತ್ತದೆ.

ವನ್ಯಜೀವಿ ಸಪ್ತಾಹ-2018

ವನ್ಯಜೀವಿ ಸಪ್ತಾಹವನ್ನು ಪ್ರತಿ ವರ್ಷವು ಅಕ್ಟೋಬರ್ ಮಾಹೆಯ 2ನೇ ತಾರೀಖಿನಿಂದ
8ನೇ ತಾರೀಖಿನವರಗೆ ಆಚರಣೆ ಮಾಡಲಾಗುತ್ತದೆ. ವನ್ಯಜೀವಿ ಸಪ್ತಾಹವು ಸಾರ್ವಜನಿಕರಲ್ಲಿ ವನ್ಯಜೀವಿ ಸಂಪತನ್ನು ಉಳಿಸಿಕೊಳ್ಳುವ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವಾಗಿರುತ್ತದೆ. 2018ನೇ ಸಾಲಿನಲ್ಲಿ ಅಕ್ಟೋಬರ್ 2 ರಿಂದ 8ನೇ ತಾರೀಖಿನವರಗೆ ವನ್ಯಜೀವಿ ಸಪ್ತಾಹವನ್ನು ಆಚರಣೆ ಮಾಡಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ದಸರಾ ಮಹೋತ್ಸವದಲ್ಲಿ
ಭಾಗವಹಿಸಲಿರುವ ಇಲಾಖಾ ಆನೆಗಳಿಗೆ ಬಟ್ಟೆಯಿಂದ ತಯಾರಿಸಿದ ಗೌನಗಳ ಮೇಲೆ ವನ್ಯಜೀವಿಗಳ ವಿವಿಧ ಸ್ಲೋಗನ್‍ಗಳನ್ನು ಬರೆದು ಅವುಗಳನ್ನು ಆನೆಗಳು ಬೆಳಗ್ಗೆ ಮತ್ತು ಸಂಜೆ ತಾಲೀಮು ಮಾಡುವ ವೇಳೆ ಅಂದರೆ ಅರಮನೆ ಆವರಣದಿಂದ ಬನ್ನಿಮಂಟಪದವರೆಗೆ ನಡೆಯುವ ತಾಲೀಮಿನ ವೇಳೆ ಆನೆಗಳ ಮೇಲೆ ಅವುಗಳನ್ನು ಹೊದಿಸಿ ತಾಲೀಮು ನಡೆಸಲಾಯಿತು. ಈ
ರೀತಿಯಾಗಿ ಸಾರ್ವಜನಿಕರಿಗೆ ವನ್ಯಜೀವಿಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು
ಯಶಸ್ವಿಗೊಳಿಸಲಾಯಿತು.

ಕಿಟ್ ವಿತರಣೆ ಹಾಗೂ ಇತರೆ ಕಾರ್ಯಕ್ರಮಗಳು

ದಿನಾಂಕ: 5-10-2018 ರಂದು ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯ ಅರಣ್ಯ ಸಚಿವರಾದ
ಶ್ರೀ ಶಂಕರ್ ಆರ್ ರವರ ಅಧ್ಯಕ್ಷತೆಯಲ್ಲಿ ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ
ಉಪಸ್ಥಿತಿಯಲ್ಲಿ ಕಿಟ್ ವಿತರಣಾ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಸದರಿ ದಿನದಂದು ಮಾನ್ಯ ಅರಣ್ಯ ಸಚಿವರು ಆನೆಗಳಿಗೆ ಪೂಜೆಯನ್ನು ನೆರವೇರಿಸಿ, ಮಾವುತರು ಮತ್ತು ಕವಾಡಿಗಳಿಗೆ ದಿನನಿತ್ಯದ ನಿರ್ವಹಣೆಗೆ ಅವಶ್ಯವಿದ್ದ ಕೊಡೆ, ವಾಟರ್ ಬಾಟಲ್, ಜಿರ್ಕಿನ್, ಟೋಪಿ, ಟಿ-ಶರ್ಟ, ಶೂ ಮತ್ತು ಬ್ಯಾಗುಗಳನ್ನೊಳಗೊಂಡ ಕಿಟ್‍ನ್ನು ವಿತರಣೆ ಮಾಡಿದರು. ಗಣ್ಯರು ಮತ್ತು ವಿವಿಧ ಸಂಘ ಸಂಸ್ಥೆಗಳು ಆನೆಗಳ ಮಾವುತರು ಮತ್ತು ಕವಾಡಿಗಳು ಹಾಗೂ ಅವರ ಕುಟುಂಬ ವರ್ಗದವರಿಗೆ ವಿವಿಧ ದಿನಗಳಂದು ಉಚಿತವಾಗಿ ಆರೋಗ್ಯ ತಪಾಸಣೆ, ವಸ್ತ್ರಗಳನ್ನು ನೀಡುವುದು ಮತ್ತು ಭೋಜನಕೂಟವನ್ನು ಏರ್ಪಡಿಸಿರುತ್ತಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ13 hours ago

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ. ಆಸಕ್ತ...

ದಿನದ ಸುದ್ದಿ4 days ago

ವಸತಿ ಯೋಜನೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ. ಈ...

ದಿನದ ಸುದ್ದಿ4 days ago

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ...

ದಿನದ ಸುದ್ದಿ5 days ago

ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ...

ದಿನದ ಸುದ್ದಿ5 days ago

ಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ 12 ದಿನಗಳ ಉಚಿತ ಕೋಳಿ ಸಾಕಾಣಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ....

ದಿನದ ಸುದ್ದಿ5 days ago

ಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಕೃಷಿ ಇಲಾಖೆ ಹಾಗೂ ಆತ್ಮ (ATMA) ಯೋಜನೆಯಡಿ 2026-27ನೇ ಸಾಲಿನ ವಿವಿಧ ಕೃಷಿ ಪ್ರಶಸ್ತಿಗಳಿಗಾಗಿ ದಾವಣಗೆರೆ ಜಿಲ್ಲೆಯ ಅರ್ಹ ಹಾಗೂ ಆಸಕ್ತ ರೈತ ಮತ್ತು ರೈತ...

ಅಂಕಣ6 days ago

ಕವಿತೆ | ದೇವರ ಹೂವು

~ ಡಾ. ಸಿ.ಬಿ.ಐನಳ್ಳಿ ಊಟ ಮಾಟ ವೇಷ ಭಾಷೆ ಪ್ರಾರ್ಥನೆ ಬೇರೆ ಬೇರೆ ಪವಿತ್ರಪಠ್ಯ ಅವನದೊಂದು ನನ್ನದಿನ್ನೊಂದಂತೆ ನದಿ ದಂಡೆಯ ಮೇಲೆ ನೋಟ ಬೆರೆತು ಮಾತು ಮರೆತು...

ದಿನದ ಸುದ್ದಿ6 days ago

ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ

ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ...

ದಿನದ ಸುದ್ದಿ7 days ago

ಆಶ್ರಯ ಯೋಜನೆ – ಆವಧಿ ವಿಸ್ತರಣೆ

ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್‌ 30...

ದಿನದ ಸುದ್ದಿ1 week ago

ಗರಿಕೆ ಹುಲ್ಲಿನ ಜ್ಯೂಸ್‌ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ

ಗಿರೀಶ್ ಮುತ್ತು ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು...

Trending