ದಿನದ ಸುದ್ದಿ
ರಾಜವಂಶಸ್ಥೆ ಪುಟ್ಟ ಚೆನ್ನಮ್ಮಣ್ಣಿ ನಿಧನ ಹಿನ್ನೆಲೆ : ದಶಮಿ ಕಾರ್ಯಕ್ರಮಗಳ ಮುಂದೂಡಿಕೆ

ಸುದ್ದಿದಿನ ಡೆಸ್ಕ್ : ರಾಜ ವಂಶಸ್ಥೆ ಪ್ರಮೋದಾದೇವಿ ತಾಯಿ ನಿಧನ ಹಿನ್ನೆಲೆ ಮೈಸೂರು ಅರಮನೆ ದಶಮಿ ಕಾರ್ಯಕ್ರಮಗಳನ್ನುಮುಂದೂಡಲಾಗಿದೆ.ಅಕ್ಟೋಬರ್ 22ಕ್ಕೆ ದಶಮಿ ಕಾರ್ಯಕ್ರಮಗಳು ಮುಂದೂಡಿಕೆಯಾಗಿವೆ ಎಂದು ಸುದ್ದಿದಿನಕ್ಕೆ ಅರಮನೆ ಮೂಲಗಳು ತಿಳಿಸಿವೆ.
ಮುಂದೂಡಿದ ಕಾರ್ಯಕ್ರಮಗಳು
ಬೆಳಗ್ಗೆ 9.25ರಿಂದ 9.35ರೊಳಗೆ ಉತ್ತರ ಪೂಜೆ
ಖಾಸ್ ಆಯುಧಗಳಿಗೆ ಉತ್ತರ ಪೂಜೆ.ಅರಮನೆಯ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ ಪೂಜೆ.ಬೆಳಗ್ಗೆ 10.05ರಿಂದ 10.25ಕ್ಕೆ ಆಯುಧಗಳ ನಿರ್ಗಮನ.
ಶ್ರೀ ಭುವನೇಶ್ವರಿ ದೇವಾಲಯಕ್ಕೆ ಹೋಗಲಿರುವ ಆಯುಧಗಳು.ಬೆಳಗ್ಗೆ 10 ಗಂಟೆ ಸುಮಾರಿಗೆ ವಜ್ರಮುಷ್ಠಿ ಕಾಳಗಬೆಂಗಳೂರು, ಚಾಮರಾಜನಗರ, ಮೈಸೂರಿನ ಜಟ್ಟಿಗಳಿಂದ ಕುಸ್ತಿ. ವಜ್ರ ಮುಷ್ಠಿ ಹಿಡಿದು ಮಟ್ಟಿ ಮೇಲೆ ಕುಸ್ತಿ ಮಾಡಲಿರುವ ಜಟ್ಟಿಗಳು. ಜಟ್ಟಿಗಳ ತಲೆಯಿಂದ ರಕ್ತ ಚಿಮ್ಮಿದ ಮೇಲೆ ವಿಜಯ ಯಾತ್ರೆಗಳು.
ಹಾಗೂ ಬೆಳ್ಳಿ ರಥದಲ್ಲಿ ವಿಜಯ ಯಾತ್ರೆ ಮಾಡಲಿರುವ ರಾಜವಂಶಸ್ಥಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದ ವಿಜಯ ಯಾತ್ರೆ. ಬೆಳ್ಳಿ ರಥದಲ್ಲಿ ಕುಳಿತು ದೇವಾಲಯಕ್ಕೆ ಯಾತ್ರೆ. ಬನ್ನಿ ಮರಕ್ಕೆ ಪೂಜೆ ಸಲ್ಲಿಸಲಿರುವ ಯದುವೀರ್. ವಿಜಯ ಯಾತ್ರೆ ನಂತರ ಶ್ರೀ ಚಾಮುಂಡೇಶ್ವರಿ ಪ್ರತಿಮೆ ಸ್ಥಳಾಂತರ.ಕನ್ನಡಿ ತೊಟ್ಟಿಯಿಂದ ಚಾಮುಂಡಿ ತೊಟ್ಟಿಗೆ ಬಿಜಯ ಮಾಡಲಿರುವ ಪ್ರತಿಮೆ.ನಂತರ ಜಂಬೂ ಸವಾರಿಗೆ ತೆರಳಲಿರುವ ಉತ್ಸವ ಮೂರ್ತಿ ಈ ಎಲ್ಲಾ ಕಾರ್ಯಕ್ರಮಗಳು ಮುಂದೂಡಿಕೆಯಾಗಿವೆ.

ದಿನದ ಸುದ್ದಿ
ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ದಾವಣಗೆರೆ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಇವರ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಬಹುದು. ಅರ್ಜಿ ನಮೂನೆಯನ್ನು ಸಂಬಂಧಿಸಿದ ಕಾರ್ಮಿಕ ನಿರೀಕ್ಷಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಾರ್ಮಿಕ ನಿರೀಕ್ಷಕರಿಗೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 11 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಚೇರಿ ದೂ ಸಂ:08192-237332 ಸಂಪರ್ಕಿಸಲು ಕಾರ್ಮಿಕ ಅಧಿಕಾರಿ ಇಬ್ರಾಹಿಂ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ

ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ನಿನ್ನೆ ಹೇಳಿದ್ದಾರೆ.
ತಮಿಳುನಾಡಿಗೆ ನಾಳೆಯಿಂದ (ಸೆಪ್ಟಂಬರ್28) ಅಕ್ಟೋಬರ್ 15ರ ತನಕ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್ನಂತೆ ನೀರು ಹರಿಸುವಂತೆ, ಕಾವೇರಿ ನದಿ ನೀರು ಸಮಿತಿ ನಿನ್ನೆ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಕಾವೇರಿ ನದಿ ನೀರು ಸಮಿತಿ ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಈ ನಿರ್ದೇಶನ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ

ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಶಿಕ್ಷಕ ವೃತ್ತಿ ಧರ್ಮ ನೇ ತನ್ನ ಸರ್ವಸ್ವ ಎಂದು ತಿಳಿದುಕೊಂಡಂತಹ ಶ್ರೀಮತಿ ಸುಮಂಗಳಾ ಮೇಟಿಯವರು, ಶಿಕ್ಷಕ ವೃತ್ತಿಯಲ್ಲಿ ಉತ್ತಮ ಕರ್ತವ್ಯ ಹಾಗೂ ಸೇವೆಯನ್ನು ಸಲ್ಲಿಸಿದನ್ನು ಪರಿಗಣಿಸಿ ಈ ಹಿಂದೆಯೇ 2022-23 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿ ಪ್ರಶಸ್ತಿ ಪುರಸ್ಕೃತರಾಗಿದ್ದು, ಇವರ ಶಿಕ್ಷಣ ಕ್ಷೇತ್ರದಲ್ಲಿನ ಅಗಾಧವಾದ ಕರ್ತವ್ಯ ಮತ್ತು ಸೇವೆ ನಿಷ್ಠೆಯನ್ನು ಗುರುತಿಸಿದ ಶಾಲಾ ಶಿಕ್ಷಣ ಇಲಾಖೆ ಬಳ್ಳಾರಿ ವತಿಯಿಂದ 2023-24 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಇದೇ ಸಂದರ್ಭದಲ್ಲಿ ಗ್ರಾಮಸ್ಥರು, ಸಮಸ್ತ ಶಿಕ್ಷಕರ ವರ್ಗದವರು, ಅತಿಥಿ ಶಿಕ್ಷಕರು, ಹಿತೈಷಿಗಳು, ಹಳೆಯ ವಿದ್ಯಾರ್ಥಿ ಬಳಗ, ಶಿಕ್ಷಣ ಪ್ರೇಮಿಗಳು, ಅಭಿಮಾನಿ ಬಳಗ,
ಮುಂತಾದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ14 hours ago
ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ
-
ದಿನದ ಸುದ್ದಿ2 days ago
ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಬಿಗಿ ಬಂದೋಬಸ್ತ್ : ಪೊಲೀಸ್ ಕಮೀಷನರ್ ದಯಾನಂದ್
-
ದಿನದ ಸುದ್ದಿ4 hours ago
ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿ ಆಹ್ವಾನ
-
ದಿನದ ಸುದ್ದಿ15 hours ago
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ