ದಿನದ ಸುದ್ದಿ
ಮೈಸೂರು ದಸರಾ : ಕೋರ್ಟ್ ರಸ್ತೆಗೆ ಓಪನ್ ಸ್ಟ್ರೀಟ್ ಫೆಸ್ಟಿವಲ್ ಶಿಫ್ಟ್
ಸುದ್ದಿದಿನ ಡೆಸ್ಕ್ : ಮೈಸೂರು ದಸರಾ ಮಹೋತ್ಸವ ಹಿನ್ನಲೆ ಕೋರ್ಟ್ ರಸ್ತೆಗೆ ಓಪನ್ ಸ್ಟ್ರೀಟ್ ಫೆಸ್ಟಿವಲ್ ಶಿಫ್ಟ್ ಮಾಡಲಾಗಿದೆ. ಈ ಹಿಂದೆ ದೇವರಾಜ ಅರಸು ರಸ್ತೆಯಲ್ಲಿ ನಡೆಯುತ್ತಿತ್ತು ಓಪನ್ ಸ್ಟ್ರೀಟ್ ಫೆಸ್ಟಿವಲ್. ಪಾರ್ಕಿಂಗ್, ಟ್ರಾಫಿಕ್ ಸಮಸ್ಯೆ ಹಿನ್ನಲೆ ಈ ಬಾರಿಯ ಓಪನ್ ಸ್ಟ್ರೀಟ್ ಫೆಸ್ಟಿವಲ್ ಸ್ಥಳ ಬದಲಿಸಲು ಜಿಲ್ಲಾಡಳಿತ ನಿರ್ಧಾರ ಮಾಡಿದೆ ಎಂದು ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಜನಾರ್ಧನ್ ಮಾಹಿತಿ ನೀಡಿದ್ದಾರೆ.
ಸುಮಾರು 1200 ಮೀಟರ್ ಉದ್ದ ರಸ್ತೆಯಲ್ಲಿ ನಡೆಯಲಿರುವ ಓಪನ್ ಸ್ಟ್ರೀಟ್ ಫೆಸ್ಟಿವಲ್ ಗೆ ಮಹಾರಾಜ ಕಾಲೇಜು ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲು ಚಿಂತನೆ ನಡೆಸಿದೆ. ಇದು ಜಿಲ್ಲಾಧಿಕಾರಿ ಡಿ.ರಂದೀಪ್ ಆರಂಭಿಸಿದ್ದ ಓಪನ್ ಸ್ಟ್ರೀಟ್ ಫೆಸ್ಟಿವಲ್ ಆಗಿದೆ. ಸಾಕಷ್ಟು ಜನಮನ್ನಣೆ ಗಳಿಸಿದ್ದ ಹಿನ್ನಲೆ ಈ ಬಾರಿ ಜಾಗ ಬದಲಿಸಲು ನಿರ್ಧಾರ ಮಾಡಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401