ದಿನದ ಸುದ್ದಿ
ಚಾಮುಂಡಿ ಬೆಟ್ಟದ ಮೇಲಿನ ನಿವಾಸಿಗಳನ್ನು ಸ್ಥಳಾಂತರಿಸಲು ಮೈಸೂರು ಜಿಲ್ಲಾಡಳಿತ ಚಿಂತನೆ
ಸುದ್ದಿದಿನ,ಮೈಸೂರು : ಚಾಮುಂಡಿ ಬೆಟ್ಟದ ಮೇಲಿನ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರಿಸಲು ಜಿಲ್ಲಾಡಳಿತ ಚಿಂತನೆ ನಡೆಸಿದೆ. ಚಾಮುಂಡಿ ಬೆಟ್ಟದ ಮೇಲೆ ವಸತಿ ಸಮುಚ್ಚಯಗಳನ್ನು ನಿರ್ಮಿಸಲು ಇನ್ನು ಮುಂದೆ ಅವಕಾಶ ನೀಡುವುದಿಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಟ್ಟದ ಮೇಲಿನ ಒತ್ತಡ ಕಡಿಮೆ ಮಾಡುವ ಸಲುವಾಗಿ ಅಲ್ಲಿನ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರಿಸುವ ಚಿಂತನೆಯಿದೆ. ನಾಲ್ಕೈದು ಎಕರೆ ಸರ್ಕಾರಿ ಜಾಗ ಗುರುತಿಸಿ, ಬೆಟ್ಟದ ಮೇಲಿನ ನಿವಾಸಿಗಳು ಅಲ್ಲಿ ವಾಸಿಸಲು ವ್ಯವಸ್ಥೆ ಮಾಡಿಕೊಡಲಾಗುವುದು ಎಂದರು.
ಚಾಮುಂಡಿ ಬೆಟ್ಟದಲ್ಲಿ ಹೊಸ ಮನೆಗಳು ಬರದಂತೆ ಕ್ರಮ ವಹಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗಿದೆ. ಚಾಮುಂಡಿ ಬೆಟ್ಟ ಪ್ರವಾಸಿ ತಾಣಕ್ಕಿಂತ ಹೆಚ್ಚಾಗಿ ಧಾರ್ಮಿಕ ಕೇಂದ್ರ. ಅದನ್ನು ಧಾರ್ಮಿಕ ಕೇಂದ್ರವಾಗಿ ಉಳಿಸಿಕೊಳ್ಳುವ ಎಲ್ಲಾ ಕ್ರಮ ಕೈಗೊಳ್ಳಲಾಗುವುದು. ವ್ಯಾಪಾರಿಗಳು ಸಬ್ ಲೀಸ್ ಮಾಡಿರುವ ಬಗ್ಗೆ ದೇವಸ್ಥಾನ ಆಡಳಿತ ಮಂಡಳಿ ಕ್ರಮ ತೆಗೆದುಕೊಳ್ಳಲಿದೆ ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243