ದಿನದ ಸುದ್ದಿ
ಶೀಲ ಶಂಕಿಸಿ ಎರಡನೇ ಪತ್ನಿ ರುಂಡ ಕತ್ತರಿಸಿದ ಪತಿ
ಸುದ್ದಿದಿನ,ಮೈಸೂರು : ಪತ್ನಿಯ ಶೀಲ ಶಂಕಿಸಿ ಪತಿಯೇ ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ತಾಲೂಕಿನ ಚೆಟ್ಟನಹಳ್ಳಿ ಗ್ರಾಮದ ಪುಟ್ಟಮ್ಮ(40) ಮೃತ ದುರ್ದೈವಿಯಾಗಿದ್ದು, ಪತಿ ದೇವರಾಜ್ ಕೊಲೆಯ ಆರೋಪಿ ಎಂದು ಗುರುತಿಸಲಾಗಿದೆ. ಮೊದಲ ಹೆಂಡತಿಯನ್ನೂ ಸಹ ಕೊಲೆ ಮಾಡಲು ಯತ್ನಿಸಿ ಜೈಲು ವಾಸ ಅನುಭವಿಸಿದ್ದ ದೇವರಾಜ್ ಈಗ ಎರಡನೇ ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿದ್ದಾನೆ.
ಮೊದಲ ಹೆಂಡತಿಯಿಂದ ದೂರವಾದ ದೇವರಾಜ್ 21 ವರ್ಷಗಳ ಹಿಂದೆ ಪುಟ್ಟಮ್ಮಳನ್ನು ಎರಡನೇ ವಿವಾಹವಾಗಿದ್ದ. ಪತ್ನಿಯ ಶೀಲ ಶಂಕಿಸಿ ಆಗಾಗ ಜಗಳ ಮಾಡುತ್ತಿದ್ದ ಆರೋಪಿ ನಿನ್ನೆ ಪತ್ನಿಯ ತಲೆ ಕತ್ತರಿಸಿ ಭೀಕರವಾಗಿ ಹತ್ಯೆಗೈದಿದ್ದಾನೆ ಎನ್ನಲಾಗಿದೆ.
ಘಟನೆ ಸಂಬಂಧ ದೇವರಾಜ್ ವಿರುದ್ಧ ಮಗಳು ದೂರು ನೀಡಿದ್ದು, ವರುಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243