ದಿನದ ಸುದ್ದಿ
ಶುಭ ಸುದ್ದಿ: ಆ 21ರಿಂದ ಅಗ್ಗದ ಬೆಲೆಯಲ್ಲಿ ಮೈಸೂರು ಸಿಲ್ಕ್ ಸೀರೆ ಮಾರಾಟ !
ಸುದ್ದಿದಿನ ಡೆಸ್ಕ್: ಮಹಿಳೆಯರು ಚಾತಕ ಪಕ್ಷಿಗಳಂತೆ ಕಾಯುತ್ತಿರುವ ದಿನಗಳು ಹತ್ತಿರ ಬಂದಿವೆ. ಅಗ್ಗದ ಬೆಲೆಯಲ್ಲಿ ಮೈಸೂರು ಸಿಲ್ಕ್ ಸೀರೆ ಸಿಗುವುದು ಯಾವಗ ಎಂದು ಕಾಯುತ್ತಿದ್ದ ಸೀರೆ ಪ್ರಿಯರಿಗೆ ಇಲ್ಲಿದೆ ಸಿಹಿ ಸುದ್ದಿ.
ಆಗಸ್ಟ್ 21ರಿಂದ ಮೈಸೂರು, ಬೆಂಗಳೂರು, ಚನ್ನಪಟ್ಟಣ ಹಾಗೂ ದಾವಣಗೆರೆಯಲ್ಲಿ ಅಗ್ಗದ ಮೈಸೂರು ರೇಷ್ಮೆ ಸೀರೆಗಳ ಮಾರಾಟ ಪ್ರಾರಂಭವಾಗುವುದಾಗಿ ರೇಷ್ಮೆ ಸಚಿವ ಸಾರಾ ಮಹೇಶ್ ಅವರು ಖಚಿತಪಡಿಸಿದ್ದಾರೆ.
ಆಗಸ್ಟ್ 21ರಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಚನ್ನಪಟ್ಟಣದಲ್ಲಿ ಈ ಸೇಲ್‍ಗೆ ಚಾಲನೆ ನೀಡಲಿದ್ದಾರೆ.
ರೇಷ್ಮೆ ಸೀರೆ ಖರೀದಿಸಲು ಬಯಸಿದವರು ತಮ್ಮ ಆಧಾರ್ ಕಾರ್ಡ್ ನೀಡುವುದು ಕಡ್ಡಾಯ. ಒಬ್ಬರಿಗೆ ಒಂದು ಸೀರೆ ಮಾತ್ರ ಮಾರಾಟ ಮಾಡಲಾಗುತ್ತದೆ. ಮೊದಲು ಬಂದವರಿಗೆ ಆದ್ಯತೆ ಹಾಗೂ ಒಮ್ಮೆ ರೇಷ್ಮೆ ಸೀರೆ ಖರೀದಿಸಿದವರು ಮುಂದಿನ ಐದು ವರ್ಷಗಳ ಕಾಲ ಈ ಆಫರ್‍ಗೆ ಅರ್ಹರಾಗಿರುವುದಿಲ್ಲ ಎಂದು ಮೂಲಗಳು ತಿಳಿಸಿವೆ.
ಮೈಸೂರು ರೇಷ್ಮೆ ಸೀರೆಗಳ ಮೂಲ ಬೆಲೆ 9500 ರೂಪಾಯಿಗಳಾಗಿವೆ. ಆದರೆ, ಆಫರ್‍ನಲ್ಲಿ ಅರ್ಧ ಬೆಲೆಗೆ ನೀಡಲಾಗುತ್ತಿದೆ. ಮೈಸೂರು ಸಿಲ್ಕ್‍ನ ಬ್ರ್ಯಾಂಡ್‍ಅನ್ನು ಇನ್ನಷ್ಟು ಪ್ರಸಿದ್ಧಗೊಳಿಸಲು ಇಲಾಖೆ ಈ ನಿರ್ಣಯ ಕೈಗೊಂಡಿದೆ.
ದಿನದ ಸುದ್ದಿ
ತೆರಿಗೆ ಹಂಚಿಕೆಯಲ್ಲಿ ಕೇಂದ್ರದ ತಾರತಮ್ಯ ನೀತಿ ವಿರುದ್ಧ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ : ಡಿಸಿಎಂ ಡಿ.ಕೆ.ಶಿವಕುಮಾರ್
ಸುದ್ದಿದಿನ,ಬೆಂಗಳೂರು:ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ತಾರತಮ್ಯವಾಗಿದ್ದು ತೆರಿಗೆ ತಾರತಮ್ಯ ಖಂಡಿಸಿ “ನಮ್ಮ ತೆರಿಗೆ ನಮ್ಮ ಹಕ್ಕು” ಎಂದು ಪ್ರತಿಭಟನೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅತಿಹೆಚ್ಚು ತೆರಿಗೆ ಪಾವತಿಸುವ ಕರ್ನಾಟಕಕ್ಕೆ ತಾರತಮ್ಯವಾಗುತ್ತಿದೆ ಎಂದು ಆರೋಪಿಸಿದ್ದಾರೆ. ರಾಜ್ಯದ ತೆರಿಗೆ ಹಣವನ್ನು ಉತ್ತರ ಪ್ರದೇಶ, ದೆಹಲಿ, ಬಿಹಾರಕ್ಕೆ ನೀಡುತ್ತಿದ್ದಾರೆ. ಆಂಧ್ರಕ್ಕಿಂತಲೂ ಕಡಿಮೆ ಹಣ ನಮಗೆ ನೀಡಿದ್ದಾರೆ ಎಂದು ಆರೋಪಿಸಿದರು.
ಮೈಸೂರು ದಸರಾಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ವಿದ್ಯುತ್ ದೀಪಾಲಂಕಾರವನ್ನು 10-12 ದಿನಗಳವರೆಗೆ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಮೈಸೂರು ದಸರಾ | ಅಂಬಾರಿ ಹೊತ್ತ ಅಭಿಮನ್ಯು ಜಂಬೂ ಸವಾರಿ
ಸುದ್ದಿದಿನಡೆಸ್ಕ್:ಮೈಸೂರು ದಸರಾ ಅಂಗವಾಗಿ ಶನಿವಾರ ವಿಜಯದಶಮಿಯಂದು ಅದ್ಧೂರಿ ಜಂಬೂ ಸವಾರಿ ನಡೆಯಿತು. ಅಕ್ಟೋಬರ್ 3 ರಂದು ದಸರಾ ಉದ್ಘಾಟನೆಯಾದಾಗಿನಿಂದ ಮೈಸೂರು ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರವಾಗಿದೆ. ಮೈಸೂರಿನ ಜಂಬೂಸವಾರಿಯಲ್ಲಿ 750ಕೆಜಿಯ ಚಿನ್ನದ ಅಂಬಾರಿಯನ್ನು ಹೊತ್ತು ಅಭಿಮನ್ಯು ಆನೆ ರಾಜಬೀದಿಗಳಲ್ಲಿ ರಾಜಗಾಂಭಿರ್ಯದಿಂದ ಸಾಗಿದನು. ಈ ಉತ್ಸವವನ್ನು ಸಾವಿರಾರು ಜನರು ಕಣ್ಣು ತುಂಬಿಸಿಕೊಂಡಿದ್ದಾರೆ.
ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಮಧ್ಯಾಹ್ನ 1:55ರ ಸುಮಾರಿಗೆ ಸಿಎಂ ಸಿದ್ದರಾಮಯ್ಯ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು. ಈ ಮೂಲಕ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಿದರು.
ವಿಶ್ವವಿಖ್ಯಾತ ಜಂಬೂಸವಾರಿಯ ಸಲುವಾಗಿ ಅಭಿಮನ್ಯು ಆನೆ 750 ಕೆ.ಜಿ ಚಿನ್ನದ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಹೊತ್ತು ರಾಜ ಗಾಂಭೀರ್ಯದಿಂದ ರಾಜಬೀದಿಗಳಲ್ಲಿ ಹೆಜ್ಜೆ ಹಾಕಿದನು. ಈ ಐತಿಹಾಸಿಕ ಕ್ಷಣವನ್ನು ದೇಶ- ವಿದೇಶ ಮತ್ತು ನೆರೆಹೊರೆಯ ಜಿಲ್ಲೆಯ ಲಕ್ಷಾಂತರ ಮಂದಿ ಕಣ್ಣುಂಬಿಕೊಳ್ಳಲು ರಾಜ ಬೀದಿಗಳಲ್ಲಿ ಕಿಕ್ಕಿರಿದು ಸೇರಿದ್ದರು.
ಈ ಜಂಬೂಸವಾರಿ ವೀಕ್ಷಣೆಗೆ ಅರಮನೆಯ ಆವರಣದಲ್ಲಿ 40 ಸಾವಿರ ಆಸನ ವ್ಯವಸ್ಥೆ ಮಾಡಲಾಗಿತ್ತು. ಆದರೂ ಅರಮನೆಯ ಬಳಿಕ ಚಿಕ್ಕ ಗಡಿಯಾರ, ಕೆ.ಆರ್.ಆಸ್ಪತ್ರೆ ಹಾಗೂ ಬನ್ನಿಮಂಟಪದ ರಸ್ತೆಗಳಲ್ಲಿ ಜನ ದಟ್ಟಣೆ ಹೆಚ್ಚಾಗಿದೆ. ಅಷ್ಟೇ ಅಲ್ಲದೇ ಜಂಬೂಸವಾರಿ ಸಾಗುವ ಸಮಯದಲ್ಲಿ ಸಾರ್ವಜನಿಕರು ಡಾ.ರಾಜ್‌ಕುಮಾರ್ ಪಾರ್ಕ್‌ನ ಮರಗಳ ಮೇಲೆ ಹಾಗೂ ಕಟ್ಟಡಗಳ ಮೇಲೆ ನಿಂತು ವೀಕ್ಷಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಒಂದು ವಾರ ರಾಜ್ಯದಲ್ಲಿ ಭಾರೀ ಮಳೆ
ಸುದ್ದಿದಿನಡೆಸ್ಕ್:ಕರ್ನಾಟಕದಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ವ್ಯಾಪಕ ಮಳೆಯಾಗಲಿದೆ. ಇಂದು ಮಧ್ಯಾಹ್ನದಿಂದಲೇ ನಗರದ ಹಲವೆಡೆ ಜಿಟಿಜಿಟಿ ಮಳೆ ಶುರುವಾಗಿದೆ.
ಜೊತೆಗೆ ಮುಂದಿನ 7 ದಿನಗಳ ಕಾಲ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಡುಗೋಡಿ, K.R.ಮಾರ್ಕೆಟ್, ಕಾರ್ಪೊರೇಷನ್ ಸರ್ಕಲ್, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಜಿಟಿಜಿಟಿ ಮಳೆ ಶುರುವಾಗಿದೆ. ಜೊತೆಗೆ ಇಂದಿನಿಂದ ಅಕ್ಟೋಬರ್ 17ರ ವರೆಗೆ ಬೆಂಗಳೂರಿನಲ್ಲಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞ ಸಿ ಎಸ್ ಪಾಟೀಲ್ ಹೇಳಿದ್ದಾರೆ.
ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ಮಂಡ್ಯ, ಮೈಸೂರು ಕೊಡಗು ಹಾಗೂ ಹಾಸನ ಜಿಲ್ಲೆಯ ಕೆಲವು ಕಡೆ ಭಾರಿ ಮಳೆ ಸಾಧ್ಯತೆಯಿದ್ದು, ಈ ಜಿಲ್ಲೆಗಳಿಗೆ ಅಕ್ಟೋಬರ್ 16, 17ರಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ಕೂಡ ಬೆಂಗಳೂರಿನಲ್ಲಿ ಮಳೆಯ ಅಬ್ಬರ ಜೋರಾಗಿಯೇ ಅಬ್ಬರಿಸಲಿದೆ.
ಇದೀಗ ಹವಾಮಾನ ಇಲಾಖೆ ಸೂಚನೆಯೊಂದನ್ನು ನೀಡಿದ್ದು, ಬೆಂಗಳೂರು ಜನರಿಗೆ ಎಚ್ಚರಿಕೆಯಿಂದಿರುವುದು ಒಳ್ಳೆಯದು. ವರದಿ ಪ್ರಕಾರ, ಬೆಂಗಳೂರಿನಲ್ಲಿ ಇನ್ನೂ 7 ದಿನ ಮಳೆರಾಯ ಅಬ್ಬರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇಂದಿನಿಂದ 1 ವಾರದ ವೆರೆಗೆ ಸಿಟಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಗುರುಕುಲ ಶಾಲೆಯ ಮಕ್ಕಳೊಂದಿಗೆ ಬೆರೆತ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ5 days ago
ಅ.9 ರಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಂದ ಅಹವಾಲು ಸ್ವೀಕಾರ
-
ದಿನದ ಸುದ್ದಿ6 days ago
ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ದಾವಣಗೆರೆ | ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಸುಗಳ ಕಾರ್ಯಾರಂಭ ಸಮಾರಂಭ ; ಶಾಸಕ ಶಾಮನೂರು ಶಿವಶಂಕರಪ್ಪ ಉದ್ಘಾಟನೆ
-
ದಿನದ ಸುದ್ದಿ5 days ago
ವಸತಿ ಯೋಜನೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೊತ್ಸಾಹಧನಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ಗ್ರಾಮ ಸಭೆ ಕಡ್ಡಾಯ : ಸಚಿವ ಪ್ರಿಯಾಂಕ ಖರ್ಗೆ