ದಿನದ ಸುದ್ದಿ

ನಾಳೆಯಿಂದ ಮೈಸೂರು ಮೃಗಾಲಯ ಲಾಕ್ ಓಪನ್..!

Published

on

ಸುದ್ದಿದಿನ,ಮೈಸೂರು: ಕೋವಿಡ್-19 ರ ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ಸಲುವಾಗಿ ಕೇಂದ್ರ-ರಾಜ್ಯ ಸರ್ಕಾರಗಳ ನಿರ್ದೇಶನದನ್ವಯ ಮುಚ್ಚಲ್ಪಟ್ಟಿದ್ದ ಕರ್ನಾಟಕ ಮೃಗಾಲಯ ಪ್ರಾಧಿಕಾರದ ವ್ಯಾಪ್ತಿಯ ಎಲ್ಲಾ ಮೃಗಾಲಯಗಳನ್ನು ಲಾಕ್‍ಡೌನ್ ಸಡಿಲಿಕೆಯ ಹಿನ್ನೆಲೆಯಲ್ಲಿ ಜೂನ್ 8 ರಿಂದ ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುತ್ತಿದೆ ಎಂದು ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಸದಸ್ಯ ಕಾರ್ಯದರ್ಶಿ ಬಿ.ಪಿ.ರವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದ ಜೈವಿಕ ಉದ್ಯಾನಗಳು, ಮೃಗಾಲಯಗಳು, ಪಕ್ಷಿಧಾಮಗಳು ಮತ್ತು ರಾಷ್ಟ್ರೀಯ ಉದ್ಯಾನವನಗಳನ್ನು ಸಾರ್ವಜನಿಕರ ವೀಕ್ಷಣೆಗೆ ಕೋವಿಡ್-19 ನಿಯಂತ್ರಣ ಮಾರ್ಗಸೂಚಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕಾಲಕಾಲಕ್ಕೆ ನೀಡುವ ಮಾರ್ಗಸೂಚಿ, ಷರತ್ತುಗಳೊಂದಿಗೆ ಸಾರ್ವಜನಿಕರ ವೀಕ್ಷಣೆಗೆ ಪುನರಾಂಭಿಸಲಾಗುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version