ದಿನದ ಸುದ್ದಿ

ನ್ಯಾಕ್ ಗ್ರೇಡ್ ನೀಡಲು ಲಂಚ ಸ್ವೀಕಾರ ; ದಾವಣಗೆರೆ ವಿವಿ ಪ್ರಾಧ್ಯಾಪಕಿ ಬಂಧನ

Published

on

ಸುದ್ದಿದಿನ,ದಾವಣಗೆರೆ: ಆಂಧ್ರಪ್ರದೇಶದ ಗುಂಟೂರಿನಲ್ಲಿ ಕೆಎಲ್‌ಇಎಫ್‌ ವಿವಿಗೆ ನ್ಯಾಕ್ ಕಮಿಟಿಯಿಂದ ಎ++ ಗ್ರೇಡ್ ನೀಡುವಲ್ಲಿ ಲಂಚ ಸ್ವೀಕರಿಸಿದ ಆರೋಪದ ಮೇಲೆ ದಾವಣಗೆರೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಗಾಯತ್ರಿ ದೇವರಾಜ ಸೇರಿದಂತೆ 10 ಜನರನ್ನು ಸಿಬಿಐ ಬಂಧಿಸಿದೆ.

ನ್ಯಾಕ್ ತಂಡದ ಅಧ್ಯಕ್ಷರು ಮತ್ತು ಜೆ ಎನ್ ಯು ಪ್ರೊಫೆಸರ್ ಸೇರಿದಂತೆ ಶಿಕ್ಷಣ ಸಂಸ್ಥೆಯ ಅಧಿಕಾರಿಗಳು ಸೇರಿದಂತೆ 10 ಸದಸ್ಯರನ್ನು ಬಂಧಿಸಲಾಗಿದೆ.

ಗಾಯತ್ರಿ ದೇವರಾಜ್ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಮೈಕ್ರೋ ಬಯೋಲಜಿ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಮೇಲೆ ಭ್ರಷ್ಟಾಚಾರ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಮುಂದುವರಿದಿದೆ.

ಪ್ರಕರಣದ ತನಿಖೆ ನಡೆಸುತ್ತಿರುವಾಗ, ಚೆನ್ನೈ, ಬೆಂಗಳೂರು, ವಿಜಯವಾಡ, ಪಲಮು, ಸಂಬಲ್‌ಪುರ, ಭೋಪಾಲ್, ಬಿಲಾಸ್‌ಪುರ, ಗೌತಮ್ ಬುದ್ಧ ನಗರ ಮತ್ತು ನವದೆಹಲಿ ಸೇರಿದಂತೆ ದೇಶಾದ್ಯಂತ 20 ಸ್ಥಳಗಳಲ್ಲಿ ಸಿಬಿಐ ದಾಳಿ ನಡೆಸಿತು. ಈ ವೇಳೆ 37 ಲಕ್ಷ ರೂಪಾಯಿ ನಗದು, 6 ಲ್ಯಾಪ್‌ಟಾಪ್‌ಗಳು, ಐಫೋನ್ 16 ಪ್ರೊ, ಚಿನ್ನದ ನಾಣ್ಯ ಸೇರಿದಂತೆ ಹಲವು ದಾಖಲೆಗಳನ್ನು ಸಿಬಿಐ ವಶಪಡಿಸಿಕೊಂಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version