ರಾಜಕೀಯ

ಯಡಿಯೂರಪ್ಪ ಯಾರ ಕಾಲು ಹಿಡಿದು ಮುಖ್ಯಮಂತ್ರಿಯಾಗಿಲ್ಲ : ಮಾಜಿ‌ ಸಿಎಂ ಸಿದ್ದರಾಮಯ್ಯ ಗೆ ಕಟೀಲ್ ತಿರುಗೇಟು

Published

on

ಸುದ್ದಿದಿನ, ಮಂಗಳೂರು : ಯಡಿಯೂರಪ್ಪನವರು ಪಕ್ಷಾಂತರ ಮಾಡಿ ಯಾರದ್ದೋ ಕಾಲು ಹಿಡಿದು ಮುಖ್ಯಮಂತ್ರಿಯಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟಾಂಗ್ ನೀಡಿದರು.

ಮಂಗಳೂರಿನಲ್ಲಿ ಭಾನುವಾರ ಮಾತನಾಡಿದ ಅವರು, ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪ ಬಳಿಕ ಸಮರ್ಥ ನಾಯಕನಿಲ್ಲ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ನಳಿನ್ ಕುಮಾರ್ ಕಟೀಲ್ ಅವರು, ಬಿಜೆಪಿಯಲ್ಲಿ ನಾಯಕರ ಕೊರತೆ ಇಲ್ಲ, ನಮ್ಮ ಸರ್ವ ಸಮ್ಮತಿಯ ನಾಯಕ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದರು.

ಇದನ್ನೂ ಓದಿ | ಹರಿಹರ | ಶೇರಾಪುರ ವಸತಿ ಯೋಜನೆ ಪ್ರಗತಿ-ಇನ್ನಾರು ತಿಂಗಳಲ್ಲಿ ಲೋಕಾರ್ಪಣೆ: ಸಚಿವ ವಿ.ಸೋಮಣ್ಣ

ಸಿದ್ದರಾಮಯ್ಯ ಅವರು ಈ ಮುಂಚೆ ಯಾವ ಪಕ್ಷದಲ್ಲಿದ್ದರು, ಅವರ ಗುರು ಯಾರು ಆಗಿದ್ದರು, ಕಾಂಗ್ರೆಸ್ ಗೆ ಬೈದು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಬಂದು ಮುಖ್ಯಮಂತ್ರಿ ಆಗಿದ್ದನ್ನು ಜಗತ್ತು ನೋಡಿದೆ. ಕಾಂಗ್ರೆಸ್ ನಲ್ಲಿ ನಾಯಕತ್ವದ ಕೊರತೆ ಇದೆ. ಅವತ್ತು ಸಮ್ಮಿಶ್ರ ಸರ್ಕಾರ ರಚನೆ ಮಾಡಿದಾಗ ರಾಹುಲ್ ಗಾಂಧಿಯವರು ಕುಮಾರಸ್ವಾಮಿ ಕೈಕಾಲು ಹಿಡಿದು ಮುಖ್ಯಮಂತ್ರಿ ಮಾಡಿದ್ದರು ಎಂದು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version