ದಿನದ ಸುದ್ದಿ
‘ನಮ್ಮ ನಡೆ ಮತಗಟ್ಟೆ ಕಡೆ’ ಅಭಿಯಾನಕ್ಕೆ ಚಾಲನೆ
ಸುದ್ದಿದಿನ ಡೆಸ್ಕ್ : ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಮತಗಟ್ಟೆ ಕುರಿತು ಜಾಗೃತಿ ಮೂಡಿಸುವ ’ನಮ್ಮ ನಡೆ ಮತಗಟ್ಟೆ ಕಡೆ’ ಅಭಿಯಾನಕ್ಕೆ ಇಂದು ಚಾಲನೆ ದೊರಕಿದೆ.
“ಪ್ರಜಾಪ್ರಭುತ್ವದ ಹಬ್ಬ” ದ ಹೆಸರಿನಲ್ಲಿ ರಾಜ್ಯಾದ್ಯಂತ 58 ಸಾವಿರಕ್ಕೂ ಹೆಚ್ಚಿನ ಮತಗಟ್ಟೆಗಳಲ್ಲಿ ಹಲವು ಕಾರ್ಯಕ್ರಮಗಳ ಮೂಲಕ ಮತದಾರರಿಗೆ ಮತದಾನ ಮಹತ್ವ ಕುರಿತು ಮನದಟ್ಟು ಮಾಡಿಕೊಡಲಾಗುತ್ತಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ತಮ್ಮ ನಿವಾಸದ ವ್ಯಾಪ್ತಿಯ ಮತಗಟ್ಟೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಸೇರಿದಂತೆ ಅನೇಕ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243