ದಿನದ ಸುದ್ದಿ

ನಂದಿನಿ ಕೃಷಿ ಅಭಿವೃದ್ಧಿ ಬ್ಯಾಂಕ್ ದೇಶದಲ್ಲೇ ಪ್ರಥಮ ; ಯಶಸ್ವಿನಿ ಯೋಜನೆ ಪುನಃ ಜಾರಿ

Published

on

ಸುದ್ದಿದಿನ, ದಾವಣಗೆರೆ : ಯಶಸ್ವಿನಿ ಯೋಜನೆಯನ್ನು ರೈತರ ಆರೋಗ್ಯದ ಹಿತದೃಷ್ಠಿಯಿಂದ ಪುನಃ ಜಾರಿಗೆ ತರಲಾಗಿದೆ. ರೈತ ಶಕ್ತಿ ಯೋಜನೆ ಅಡಿಯಲ್ಲಿ ರೈತರಿಗೆ ಡಿಸೇಲ್ ಸಬ್ಸಿಡಿ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಜಗಳೂರಿನಲ್ಲಿ ಶುಕ್ರವಾರ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಕಳೆದ ವರ್ಷ 20 ಲಕ್ಷ ರೈತರಿಗೆ, ಈ ವರ್ಷ 33 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯಗಳನ್ನು ನೀಡಲಾಗುತ್ತದೆ. ಹಾಲು ಉತ್ಪಾದನೆಯನ್ನು ಪ್ರೋತ್ಸಾಹಿಸಲು “ನಂದಿನಿ ಕೃಷಿ ಅಭಿವೃದ್ಧಿ ಬ್ಯಾಂಕ್” ನೀಡುವುದರ ಮೂಲಕ ಅವರನ್ನು ಸಹ ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡಲು ಸಾಲ-ಸೌಲಭ್ಯಗಳನ್ನು ನೀಡಲಾಗುತ್ತದೆ. ಇಂತಹ ಬ್ಯಾಂಕ್ ದೇಶದಲ್ಲೇ ಪ್ರಥಮ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version