ದಿನದ ಸುದ್ದಿ
ನಂದಿನಿ ಹಾಲಿನ ದರ ಏರಿಕೆ
ಸುದ್ದಿದಿನ, ಬೆಂಗಳೂರು : ನಂದಿನಿ ಹಾಲಿನ ದರ, ಒಂದು ಲೀಟರ್‌ಗೆ 3 ರೂಪಾಯಿ ಹೆಚ್ಚಿಸಲು, ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ. ರಾಜ್ಯದ ಎಲ್ಲ ಹಾಲು ಒಕ್ಕೂಟಗಳು ಮತ್ತು ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ – ಕೆಎಂಎಫ್ ಅಧ್ಯಕ್ಷರ ಸಭೆಯ ಬಳಿಕ, ಕೆಎಂಎಫ್ ನಿರ್ದೇಶಕ ಎಚ್.ಡಿ.ರೇವಣ್ಣ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಈ ಹೊಸ ದರ ಬರುವ ಆಗಸ್ಟ್ 1 ರಿಂದ ಜಾರಿಗೆ ಬರಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243