ದಿನದ ಸುದ್ದಿ
ಭಾರತದ ಸಾಂಸ್ಕೃತಿಕ ಪರಂಪರೆ, ಮೌಲ್ಯ ವ್ಯವಸ್ಥೆಗೆ ಶ್ರೀ ನಾರಾಯಣ ಗುರು ಅವರ ಕೊಡುಗೆ ಅಪಾರ : ಪ್ರಧಾನಿ ನರೇಂದ್ರ ಮೋದಿ
ಸುದ್ದಿದಿನ, ಕೇರಳ : ಭಾರತದ ಆಧ್ಯಾತ್ಮಿಕ ಜ್ಯೋತಿ ಬೆಳಗಿಸಿದ ಶ್ರೀ ನಾರಾಯಣ ಗುರು ಅವರು ದೇಶದ ಸಾಂಸ್ಕೃತಿಕ ಪರಂಪರೆ ಮತ್ತು ಮೌಲ್ಯ ವ್ಯವಸ್ಥೆಗೆ ಅತ್ಯಮೂಲ್ಯ ಕೊಡುಗೆ ನೀಡಿದ್ದಾರೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ಕೇರಳದ ಶಿವಗಿರಿ ಯಾತ್ರೆಯ 90ನೇ ವರ್ಷಾಚರಣೆ ಮತ್ತು ಬ್ರಹ್ಮ ವಿದ್ಯಾಲಯದ ಸುವರ್ಣ ಮಹೋತ್ಸವದ ಅಂಗವಾಗಿ ಇಂದು ವರ್ಚುವಲ್‌ನಲ್ಲಿ ಮಾತನಾಡಿದ ಅವರು, ನಾರಾಯಣ ಗುರು ಅವರ ಜನ್ಮದಿಂದ ಕೇರಳ ಪವಿತ್ರ ಭೂಮಿಯಾಗಿ ಉತ್ತುಂಗಕ್ಕೇರಿದೆ. ಆರೋಗ್ಯ ರಕ್ಷಣೆ, ಶಿಕ್ಷಣ ಮತ್ತು ಸಾಮಾಜಿಕ ಸೇವೆಯಲ್ಲಿ ಶ್ರೀ ನಾರಾಯಣ ಗುರು ಅವರ ಜೀವನ ಮತ್ತು ಬೋಧನೆಗಳನ್ನು ಜನಪ್ರಿಯಗೊಳಿಸುವಲ್ಲಿ ಶಿವಗಿರಿ ಯಾತ್ರೆ ಮಹತ್ವದ ಪಾತ್ರ ವಹಿಸಿದೆ ಎಂದು ಹೇಳಿದ್ದಾರೆ.
ನವತಿ ಆಚರಣೆಗಳಿಗಾಗಿ ಲಾಂಛನವನ್ನು ಪ್ರಧಾನಮಮಂತ್ರಿ ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಿದರು. ನವತಿ ಆಚರಣೆಗಾಗಿ ಮುಂದಿನ ಒಂದು ವರ್ಷ ವಿವಿಧ ದೇಶಗಳು ಮತ್ತು ರಾಜ್ಯಗಳಲ್ಲಿ ವಿಚಾರ ಸಂಕಿರಣಗಳು ಮತ್ತು ಸಮಾವೇಶಗಳನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ವಿ. ಮುರಳೀಧರನ್, ಮತ್ತು ರಾಜೀವ್ ಚಂದ್ರಶೇಖರ್, ಶ್ರೀ ನಾರಾಯಣ ಧರ್ಮ ಸಂಘಂ ಟ್ರಸ್ಟ್ ಅಧ್ಯಕ್ಷ ಸ್ವಾಮಿ ಸಚ್ಚಿದಾನಂದ ಉಪಸ್ಥಿತರಿದ್ದರು.
India is extremely proud of the monumental contribution of the Sivagiri Mutt in different fields. They have popularised the teachings of Sree Narayana Guru and done great work in healthcare, education and service. I fondly recall my visits to the Mutt in 2015 and 2013. pic.twitter.com/VbZHOONDLW
— Narendra Modi (@narendramodi) April 25, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ಪ್ರಕಟ
ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ ಕತೆ ಪಡೆದ ಪ್ರಥಮ ಸ್ಥಾನವನ್ನು ಅಮಾನ್ಯ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕತೆ-ಕವಿತೆ ಸ್ಪರ್ಧೆಯ ನಿಯಮಾವಳಿಗಳ ಪ್ರಕಾರ ‘ “ಸ್ವತಂತ್ರ ರಚನೆಯಾಗಿರ ಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು” ಎನ್ನುವ ನಿಯಮಾವಳಿಗಳನ್ನು ಉಲಂಘಿಸಿರುವುದರಿಂದ ಪ್ರಥಮ ಸ್ಥಾನ ಪಡೆದ ” ಸಂಸ” ಕತೆಯನ್ನು ಅಮಾನ್ಯಗೊಳಿಸಲಾಗಿದೆ.
‘ಸಂಸ’ ಕತೆಯ ಕತೆಗಾರರಾದ ಅನಂತ ಕುಣಿಗಲ್ ಅವರು
ಸ್ವತಃ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ‘ ಸಂಸ’ ಕತೆಯು ಈ ಹಿಂದೆ ಯಾವುದೋ ಕತಾ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿತ್ತು. ಮತ್ತೊಂದೆಡೆ ತೃತೀಯ, ಮಗದೊಂದೆಡೆ ದ್ವಿತೀಯ ಬಹುಮಾನ ಲಭಿಸಿತ್ತು, ಅಲ್ಲದೆ ‘ಟೋಟೋ’ ಅವಾರ್ಡ್ ನ ಅಂತಿಮ ಸುತ್ತಿಗೆ ಎರಡು ಬಾರಿ ಶಾರ್ಟ್ ಲಿಸ್ಟ್ ಆಗಿತ್ತು ಎಂದು ಬರೆದು ಕೊಂಡಿರುತ್ತಾರೆ. ಆದಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.
ಕತಾ ಸ್ಪರ್ಧೆಯ ಪರಿಷ್ಕೃತ ಫಲಿತಾಂಶ
ಕತಾ ಸ್ಪರ್ಧೆಯಲ್ಲಿ ರವಿಮುಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ಪ್ರಥಮ ಬಹುಮಾನ, ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ದ್ವಿತೀಯ ಬಹುಮಾನ ಹಾಗೂ ಅಜೇಯ ಸಿಂಹ ಕೆ.ವಿ ಅವರ ‘ ಮಾರ್ಜಕದ ಶ್ರೀಮುಡಿ’ ಕತೆಗೆ ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕ ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವನಗರಿ ಸುದ್ದಿದಿನ ಪತ್ರಿಕೆಯ ದೀಪಾವಳಿ ವಿಶೇಷಾಂಕ- 2026 ರ ಕತೆ – ಕವಿತೆ ಫಲಿತಾಂಶ ಪ್ರಕಟ
ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ ಹಾಗೂ ಶ್ಯಾಮ್ ಪ್ರಕಾಶನ, ನವಿಲೇಹಾಳು ವತಿಯಿಂದ ದೀಪಾವಳಿ ವಿಶೇಷಾಂಕ-2026 ರ ಕತೆ ಮತ್ತು ಕವಿತೆ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಕತಾ ಸ್ಪರ್ಧೆಯಲ್ಲಿ ಅನಂತ್ ಕುಣಿಗಲ್ ಅವರ ́ಸಂಸʼ ಕತೆಗೆ ಪ್ರಥಮ ಬಹುಮಾನ,. ರವಿ ಮಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ದ್ವಿತೀಯ ಬಹುಮಾನ ಹಾಗೂ ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕರಾದ ಗೋವರ್ಧನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಜೇಯ ಸಿಂಹ ಕೆ.ವಿ. ಅವರ ʼಮಾರ್ಜಕದ ಶ್ರೀಮುಡಿʼ, ಟಿ.ಆರ್. ಪ್ರಕಾಶ ಭಾಗವತ ಅವರ ʼಸಮಾಧಿʼ , ರಘುನಂದನ್ ಅವರ ʼಹೀಗೊಂದು ಕಛೇರಿʼ , ಡಾ||. ಮಿರ್ಜಾ ಬಷೀರ್ ಅವರ ʼ ಒಂದು ಸದ್ದಿಲ್ಲದ ಕ್ರಾಂತಿʼ, ಸುಜಾತ ಎಸ್. ಎನ್ ರೆಡ್ಡಿ ಅವರ ʼ ಸತ್ಯ ದರ್ಶನʼ, ಚಂದ್ರಿಕಾ ನಾಗರಾಜ್ ಹಿರಿಯಡಕ ಅವರ ʼ ವೆಂಕಟನ ಸ್ವೆಟರ್, ರೈಹಾನ ಅವರ ʼಬಾವಿಗೆ ಬಿದ್ದರೂʼ, ಒಟ್ಟು ಈ ಏಳುಕತೆಗಳು ತೀರ್ಪುಗಾರ ಮೆಚ್ಚುಗೆ ಪಡೆದಿವೆ.
ಕತಾ ಸ್ಪರ್ಧೆಯ ತೀರ್ಪುಗಾರರಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕತೆಗಾರ ಹಾಗೂ ನಿವೃತ್ತ ಪ್ರಾಧ್ಯಾಪಕ ಅಮರೇಶ ನುಗಡೋಣಿ, ಹೊಸಪೇಟೆ, ಕವಿ ಕತೆಗಾರ , ಜಿ. ಮುದ್ದುವೀರಸ್ವಾಮಿ, ದಾವಣಗೆರೆ, ಕತೆಗಾರ್ತಿ ಹಾಗೂ ಕನ್ನಡ ಪ್ರಾಧ್ಯಾಪಕಿ, ಸುಜಾತ ಚಲಾವಾದಿ, ತಾಳಿಕೋಟೆ, ಕತೆಗಾರ ಹಾಗೂ ಅಕ್ಷರ ಸಂಗಾತ ಮಾಸ ಪತ್ರಿಕೆಯ ಸಂಪಾದಕ ಡಾ. ಟಿ ಎಸ್. ಗೊರವರ, ಗಜೇಂದ್ರಘಡ ಇವರು ಕಾರ್ಯನಿವಹಿದ್ದರು ಎಂದು ಮಾಹಿತಿ ನೀಡಿದ್ಧಾರೆ.
ಪ್ರಥಮ ಬಹುಮಾನ ಹತ್ತು ಸಾವಿರ ರೂ (10000 ರೂ ) ನಗದು, ದ್ವೀತೀಯ ಬಹುಮಾನ ಐದು ಸಾವಿರ ನಗದು, (5000 ರೂ), ತೃತೀಯ ಬಹುಮಾನ ಮೂರು ಸಾವಿರ (3000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ನೀಡಲಾಗುವುದು.
ಕವಿತೆ ಸ್ಪರ್ಧೆ ಫಲಿತಾಂಶ
ಕವಿತೆ ಸ್ಪರ್ಧೆಯಲ್ಲಿ ಆನಂದ ಕುಂಚನೂರ ಅವರ ʼ ಬೆತ್ತಲೆ ಶಿಖರʼ ಕವಿತೆಗೆ ಪ್ರಥಮ ಬಹುಮಾನ, ಅಜಯ್ ಅಂಗಡಿ ಅವರ ʼಒಂದು ಶ್ರಾವಣ ಸಂಜೆಗೆʼ ದ್ವಿತೀಯ ಬಹುಮಾನ, ಭಾಗ್ಯ ಜ್ಯೋತಿ ಹಿರೇಮಠ ಅವರ ʼ ಗೋಡೆ ಕವಿತೆಗೆ ತೃತೀಯ ಬಹುಮಾನ ದೊರೆತಿದೆ.
ಫೈಜ್ನಟ್ರಾಜ್ ಅವರ ʼಅವ್ವ ತಟ್ಟಿದ ರೊಟ್ಟಿಯಲ್ಲಿ ಬೆರಳಿನ ಗುರುತುʼ, ಹೊನ್ನಪ್ಪ. ನೀ. ಕರೆಕನ್ನಮ್ಮನವರ ಅವರ ʼಒಂಟಿಯಾನದ ಸರಕುʼ, ಕವಿತ ಎ.ವಿ ಅವರ ʼಬಂದಿದ್ದಾರೆ ಸಿಕ್ಕಿಲ್ಲʼ, ರಮ್ಯ ಕೆ.ಜಿ. ಅವರ ʼಬಿಡಿಸಿಕೊಳ್ಳುತ್ತದೊಂದು ಚಿತ್ರ,ʼ, ಮುರ್ತುಜಾ ಬೇಗಂ ಕೊಡಗಲಿ ಅವರ ʼಒಂದು ಕನ್ನಡಿ ಮೂರು ಬಿಂಬಗಳುʼ, ಮನಸ್ವಿ ಎಂ ಸ್ವಾಮಿ ಅವರ ʼ ರಾಜಧಾನಿಯಲ್ಲಿ ರಾಜʼ, ವೀಣಾ ರಾವ್ ಅವರ ʼಬಣ್ಣಗಳ ಆಚೆಗೆʼ ಒಟ್ಟು ಏಳು ಕವಿತೆಗಳು ತೀರ್ಪುಗಾರರ ಮೆಚ್ಚುಗೆ ಪಡೆದಿವೆ.
ಕವಿತೆ ಸ್ಪರ್ಧೆಯ ತೀರ್ಪುಗಾರರಾಗಿ ಕವಿ ಚಂದ್ರಶೇಖರ ತಾಳ್ಯ, ಹೊಳಲ್ಕೆರೆ, ಕವಯಿತ್ರಿ ಸವಿತಾ ನಾಗಭೂಷಣ, ಶಿವಮೊಗ್ಗ, ಕವಿ ವಿಲ್ಸನ್ ಕಟೀಲು ಅವರು ಕಾರ್ಯನಿರ್ವಹಿಸಿದ್ದರು.
ಪ್ರಥಮ ಬಹುಮಾನ ಐದು ಸಾವಿರ ರೂ (5000 ರೂ ) ನಗದು, ದ್ವೀತೀಯ ಬಹುಮಾನ ಮೂರು ಸಾವಿರ ನಗದು, (3000 ರೂ), ತೃತೀಯ ಬಹುಮಾನ ಎರಡು ಸಾವಿರ (2000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ಇದೇ ಅಕ್ಟೋಬರ್ 24 ರಂದು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ʼ ನಡೆಯುವ ದೀಪಾವಳಿ ವಿಶೇಷಾಂಕ-2026 ರ ಬಿಡುಗಡೆ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ: 9980346243 ಸಂಪರ್ಕಿಸಲು ಈ ಮೂಲಕ ತಿಳಿಸಲಾಗಿದೆ.

ದಿನದ ಸುದ್ದಿ
ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ
ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.
ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್. ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.
ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


