ದಿನದ ಸುದ್ದಿ
ಮೋದಿ ಸರ್ಕಾರದ ಮುಂದಿರುವ ಸವಾಲುಗಳು…!
ಸ್ನೇಹಿತರೆ,
ಕೇಂದ್ರದಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲುವು ಸಿಕ್ಕಿದ್ದು ಆಯ್ತು ಮೋದಿ ಎರಡನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದು ಆಯಿತು. ಆದರೆ ಈ ಸರ್ಕಾರದ ಮುಂದಿರುವ ಸವಾಲುಗಳು ಆದರೂ ಏನು ಅನುವ ಬಗ್ಗೆ ಒಂದು ಸರಿ ಗಮನ ಹರಿಸೋಣ. ಅಂದಹಾಗೆ ಈ ವಿಷಯವನ್ನು ಓದುವಾಗ ನಿಮ್ಮ ಮನಸ್ಸು ಒಳಗಿನ ರಾಗದ್ವೇಷ ಭಕ್ತಿಭಾವಗಳನ್ನು ಒಂದು ಸ್ವಲ್ಪ ಪಕ್ಕಕ್ಕಿಟ್ಟು ಪ್ರಾಕ್ಟಿಕಲ್ ಆಗಿ ಯೋಚನೆ ಮಾಡುತ್ತ ಓದಿರಿ ಹಾಗು ಮಾಡೋದಕ್ಕೆ ಸಾಧ್ಯ ಆಗದೇ ಇದ್ದರೆ ದಯವಿಟ್ಟು ಈ ವಿಷಯವನ್ನು ಓದುವುದಕ್ಕೆ ಹೋಗಬೇಡಿ.
ಮೋದಿ ಸರ್ಕಾರ ಪೂರ್ಣ ಬಹುಮತದಿಂದ ಅಧಿಕಾರಕ್ಕೇರಿದ ನಂತರ ಜನರ ನಿರೀಕ್ಷೆಗಳು ಹೆಚ್ಚಾಗಿವೆ ಭಾರತದಲ್ಲಿನ ಎಲ್ಲಾ ಸಮಸ್ಯೆಗಳನ್ನು ಮೋದಿ ನಿವಾರಿಸಿ ಬಿಡುತ್ತಾರೆ ಅನ್ನೋ ಆಸೆ ನಿರೀಕ್ಷೆ ಕೋಟಿ ಕೋಟಿ ಜನರ ಮನಸ್ಸಲ್ಲಿದೆ.
ರಾಮಮಂದಿರ ನಿರ್ಮಾಣ, ಆರ್ಟಿಕಲ್ ತ್ರೀ ಸೆವೆಂಟಿ, ಸಮಾನ ನಾಗರಿಕ ಸಂಹಿತೆ, ಹಿಂದೂ ರಾಷ್ಟ್ರದ ನಿರ್ಮಾಣ, ಇವತ್ತು ಭಾರತ ಸರ್ಕಾರದ ಮುಂದಿನ ಆದ್ಯತೆಗಳೇನು ಮೋದಿ ಸಚಿವ ಸಂಪುಟದ ಎದುರು ಸವಾಲುಗಳೇನು ಅನ್ನೋದಷ್ಟೇ ನಾವು ಗಮನಿಸಿದರೆ ಮೊಟ್ಟಮೊದಲನೆಯದಾಗಿ ಮತ್ತು ಭಯಾನಕವಾಗಿ ಈ ದೇಶವನ್ನು ಕಾಡುತ್ತಿರುವ ನಿರುದ್ಯೋಗ ಸಮಸ್ಯೆ!
ಮುಂದಿನ 20 20 ರ ಹೊತ್ತಿಗೆ ಭಾರತದಲ್ಲಿನ ನಿರುದ್ಯೋಗಿಗಳ ಸಂಖ್ಯೆ 44% ಏರುತದ್ದೆ, ಇದು ವಿದ್ಯಾವಂತ ನಿರುದ್ಯೋಗಿಗಳ ಕಥೆ ಇನ್ನು ಗ್ರಾಮೀಣ ಭಾಗದಿಂದ ವಲಸೆ ಬರುತ್ತಿರುವ ಕೃಷಿ ನಿರಾಶ್ರಿತರನ್ನು ಸೇರಿಸಿಲ್ಲ ಅದು ಲೆಕ್ಕಕ್ಕೆ ಸಿಗುವುದಿಲ್ಲ. ಸರ್ಕಾರದ ಮುಂದಿರುವ ಚಾಲೆಂಜ್ ಗಳು ಅಂದರೆ ಗ್ರಾಮೀಣ ವಲಸೆಯನ್ನು ತಡೆದು ಕೃಷಿ ಹಾಗೂ ಕೃಷಿ ಆಧಾರಿತ ಕೈಗಾರಿಕೆ ಗಳನ್ನು ಉತ್ತೇಜಿಸುವ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಅವಕಾಶಗಳನ್ನು ಸೃಷ್ಟಿಸುವುದು ಜೊತೆಗೆ ಭಾರತದಲ್ಲಿ ಹೆಚ್ಚುತ್ತಿರುವ ಹಣದುಬ್ಬರವನ್ನು ತಗ್ಗಿಸಿ ಜಿಡಿಪಿಯನ್ನು ಹೆಚ್ಚಿಸಬೇಕು. ಜವಾಬ್ದಾರಿ ಸರ್ಕಾರದ ಮೇಲಿದೆ ಡಾಲರ್ ಎದುರು ರೂಪಾಯಿ ಬೆಲೆ ಕುಸಿದು ಹೋಗುತ್ತಿರುವುದು ನಮಗೂ ತಡೆಯಬೇಕಿದೆ .
ಇವತ್ತಿನವರೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವುದಕ್ಕೆ ಸಾಧ್ಯವಾಗಿಲ್ಲ ಆದರೆ ಈ ಕೂಡಲೇ ಸರಿಪಡಿಸಬೇಕಿದೆ. ಭಾರತ ಕೃಷಿ ಪ್ರಧಾನ ದೇಶ ಆದರೆ ದುರಂತ ಅಂದ್ರೆ ಇಲ್ಲಿ ಅನ್ನ ಕೊಡುವ ರೈತನಿಗೆ ಹೊಟ್ಟೆ ತುಂಬಾ ಊಟ ಸಿಗದ ಪರಿಸ್ಥಿತಿ. ಇದು ಬಿಜೆಪಿ ಸರ್ಕಾರದ ವಿಷಯಕ್ಕೆ ಬರೋದಾದ್ರೆ, ಶ್ರೀಮಂತರು ಹಾಗೂ ಉದ್ಯಮಿಗಳ ಸರ್ಕಾರ ಅನ್ನೋ ಆರೋಪವೂ ಇದೆ.
ಮುಂದಿನ ಐದು ವರ್ಷಗಳಲ್ಲಿ ಕೃಷಿ ಕ್ಷೇತ್ರದ ಚೇತರಿಕೆಗೆ ಆದ್ಯತೆಯನ್ನು ಕೊಡಬೇಕು ಅದು ವರ್ಷಕ್ಕೆ rs.6000 ಕೊಡುವುದರಿಂದ ಅಥವಾ ಸಾಲಮನ್ನಾ ಮಾಡುವ ಘೋಷಣೆಗಳಿಂದ ಕೃಷಿಕ್ಷೇತ್ರ ಸುಧಾರಣೆ ಆಗೋದಿಲ್ಲ. ರೈತರಿಗೆ ಕರೆಂಟು ನೀರು ಸೂಕ್ತ ಬೆಳೆ ಕುರಿತಾದ ಮಾಹಿತಿ ತಂತ್ರಜ್ಞಾನ ಕೊಡಬೇಕಾಗಿದೆ .
ಕೃಷಿ ಕ್ಷೇತ್ರದಲ್ಲಿ ಹೊಸ ಹೂಡಿಕೆಗಳು ಬೆಲೆ ನಿಯಂತ್ರಣ ಕೃಷಿ-ಆಧಾರಿತ ಉದ್ದಿಮೆಗಳು ಹೀಗೆ ಇನ್ನೇನೋ ಆಗಬೇಕಿದೆ. ಇವತ್ತು ಸೇನೆಯನ್ನು ಬಲಪಡಿಸಲು ಬೇಕಾಗಿರುವುದು ,ಭಾರತದಲ್ಲಿ ಶಸ್ತ್ರಾಸ್ತ್ರ ತಯಾರಿಕೆ ಘಟಕಗಳು ಸ್ಥಾಪನೆಗೊಳ್ಳಬೇಕಿದೆ. ಆ ಮೂಲಕ ಸ್ಥಳೀಯ ಯುವಕರಿಗೆ ಉದ್ಯೋಗ ಸಿಗುತ್ತೆ ಸಾಕಷ್ಟು ಚಿಕ್ಕ ಕೈಗಾರಿಕೆಗಳು ಹುಟ್ಟುವುದಕ್ಕೆ ಸಾಧ್ಯವಾಗುತ್ತೆ ನಿರುದ್ಯೋಗ ನಿವಾರಣೆಗೆ ಕೂಡ ಆಗುತ್ತೆ ಹಾಗೆ ಪೆಟ್ರೋಲಿಯಂ ಮೇಲಿನ ಅತಿಯಾದ ಆಮದು ಮಾಡುವುದನ್ನು ನಿಲ್ಲಿಸಿ
ಪರ್ಯಾಯ ಮಾರ್ಗ ಹುಡುಕ ಬೇಕಾದ ಅನಿವಾರ್ಯತೆ ಕೂಡ ಸರ್ಕಾರದ ಮೇಲಿದೆ.
ಆಂತರಿಕ ಭದ್ರತೆ ಹಾಗೂ ಬಾಹ್ಯ ಶಕ್ತಿಗಳ ನಿಯಂತ್ರಣ ಭಯೋತ್ಪಾದನೆ ನಿರ್ಮೂಲನೆ ಬಡತನದ ವಿರುದ್ಧ ಹೋರಾಟ ಕಡಿಮೆ ಏನು ?
ಅಮೇರಿಕಾ ಮೊನ್ನೆ ತಾನೇ ಭಾರತವನ್ನು ಅಭಿವೃದ್ಧಿ ರಾಷ್ಟ್ರಗಳ ಪಟ್ಟಿಯಿಂದ ತೆಗೆದುಹಾಕಿದೆ.
ಆದರಿಂದ ಭಾರತ ಅಮೇರಿಕಾದಿಂದ ಆಮದು ಮಾಡುತಿದ್ದ ಸುಮಾರು ೨೦೦೦ ವಸ್ತುಗಳ ಮೇಲೆ ತೆರಿಗೆ ಬೀಳಲಿದೆ, ಇದರಿಂದ ಭಾರತಕ್ಕೆ ಆಗುವ ನಷ್ಟ ಕಡಿಮೆ ಏನಿಲ್ಲ .
ನಾವು ಗಮನಿಸಿದರೆ ಭಾರತ ವಿದೇಶಾಂಗ ನೀತಿಯನ್ನು ರೂಪಿಸುವಾಗ ಎಚ್ಚರಿಕೆವಹಿಸಬೇಕಾಗಿದೆ ಅನ್ನೋದು ಸ್ಪಷ್ಟ. ಚೀನಾ ಹಾಗೂ ಪಾಕಿಸ್ತಾನಗಳ ಕಂಟ್ರೋಲ್ ಮಾಡಿದ ಮೋದಿ ಸರ್ಕಾರ ಈ ಬಾರಿನೂ ಅಷ್ಟೇ ಪ್ರಭಾವಿಯಾಗಿ ಚೀನಾ ಅನ್ನೋ ಶತ್ರುವನ್ನು ನಿಯಂತ್ರಿಸುತ್ತಾ ಅದನ್ನು ಮಾಡೋದಕ್ಕೆ ಅಮೆರಿಕಾದ ಬೆಂಬಲ ಬೇಕೇ ಬೇಕು ಅಂತ ಸ್ನೇಹವನ್ನ ಕಳೆದುಕೊಳ್ಳುವುದಕ್ಕೆ ಆಗೋದಿಲ್ಲ.
ಈಗಾಗಲೇ ಒಂದು ಸಮಸ್ಯೆ ಶುರುವಾಗಿದೆ,
ದೊಡ್ಡಣ್ಣನ ಸ್ನೇಹ ವಹಿಸುವುದಕ್ಕೆ ಭಾರತ ತನ್ನ ಹಳೆಯ ಮಿತ್ರ ದೇಶ ಇರಾನ್ ಜೊತೆಗಿನ ಪೆಟ್ರೋಲಿಯಂ ವ್ಯವಹಾರವನ್ನು ನಿಲ್ಲಿಸಿದೆ.
ಇದೀಗ ಭಾರತ ತನ್ನ ವಿದೇಶ ವ್ಯವಹಾರವನ್ನು ಯೋಚಿಸಿ ಹೆಜ್ಜೆಯಿಡ ಬೇಕಾಗಿದೆ.
ಈಗ ನಾವು ಕಾದು ನೋಡಬೇಕಿದೆ ರಾಮಮಂದಿರ ಅದನ್ನ ನ್ಯಾಯಾಲಯ ನಿರ್ಧಾರ ಮಾಡುತ್ತೆ ,ಆರ್ಟಿಕಲ್ 370, ಸಮಾನ ನಾಗರಿಕ ಸಂಹಿತೆ ಇದೆಲ್ಲ ಬಿಜೆಪಿಗೆ ಮತ ತಂದುಕೊಟ್ಟ ಅಂಶಗಳಾಗಿವೆ. ನಿರುದ್ಯೋಗ ಹಣದುಬ್ಬರ ಆರ್ಥಿಕ ಅಭಿವೃದ್ಧಿ ಇವುಗಳಿಗೆ ಹೋಲಿಸಿದರೆ ಮೋದಿ ಸರ್ಕಾರದ ಆದ್ಯತೆ ಸಶಕ್ತ ಭಾರತದ ನಿರ್ಮಾಣಕ್ಕಾಗಿ ಒಂದಾಗಿದೆ.
ಇದು ಮೋದಿ ಸರ್ಕಾರದ ಮುಂದಿರುವ ಪ್ರಮುಖ ಸವಾಲುಗಳು. ಇವೆಲ್ಲವನ್ನ ನರೇಂದ್ರ ಮೋದಿಯವರ ಸಚಿವ ಸಂಪುಟ ಹೇಗೆ ನಿಭಾಯಿಸುತ್ತದೆ ಎಂದು ಕಾದುನೋಡಬೇಕು.
ಜೈ ಹಿಂದ್ ಜೈ ಕರ್ನಾಟಕ
–ಮನನ್ ಜೈನ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ
ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.
ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್. ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.
ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.
ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.
ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ
ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್, ಚೇತನ್ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.
ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.
ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


