ದಿನದ ಸುದ್ದಿ

ಅಲ್ಪಸಂಖ್ಯಾತ ಮಕ್ಕಳಿಗೆ ಸಿಹಿಸುದ್ದಿ ನೀಡಿದ ಮೋದಿ

Published

on

ಸುದ್ದಿದಿನ ಡೆಸ್ಕ್ |ಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಿಹಿ ಸುದ್ದಿ ನೀಡಿದ್ದು, ಸಮುದಾಯದ ಮಕ್ಕಳಿಗೆ ನೀಡುವ ವಿದ್ಯಾರ್ಥಿ ವೇತನವನ್ನು 2017-18 ಮತ್ತು 2019-20ರ ಅವಧಿಗೆ ಮುಂದುವರಿಸಿದೆ.

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಮೆಟ್ರಿಕ್ ಕಮ್ ಮೀನ್ಸ್ ಬೇಸ್ಡ್ ವಿದ್ಯಾರ್ಥಿ ವೇತನ ಯೋಜನೆಗಳನ್ನು ಮುಂದುವರಿಸಲು ಸಂಸತ್ತು ಒಪ್ಪಿಗೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯು ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ, ಮೆರಿಟ್ ಕಮ್ ಮೀನ್ಸ್ ಬೇಸ್ಡ್ ವಿದ್ಯಾರ್ಥಿ ವೇತನ ವಿತರಣೆ ಮುಂದುವರಿಕೆ ಕುರಿತ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದೆ. ಇದರ ಲಾಭವು ಅಲ್ಪಸಂಖ್ಯಾತ ಆರು ಸಮುದಾಯಗಳ 70 ವಿದ್ಯಾರ್ಥಿಗಳಿಗೆ ಸಿಗಲಿದೆ. 2019-20ಸಾಲಿನಲ್ಲಿ 5338.32 ಕೋಟಿ ರೂ. ವೆಚ್ಚವಾಗಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Leave a Reply

Your email address will not be published. Required fields are marked *

Trending

Exit mobile version