ದಿನದ ಸುದ್ದಿ
ನರೇಗಾ ಯೋಜನೆ : ಮಂಡ್ಯ ಜಿಲ್ಲೆಗೆ ರಾಷ್ಟ್ರೀಯ ಪ್ರಶಸ್ತಿ
ಸುದ್ದಿದಿನ,ಮಂಡ್ಯ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಮಂಡ್ಯ ಜಿಲ್ಲೆಗೆ ರಾಷ್ಟ್ರೀಯ ಪ್ರಶಸ್ತಿ ಸಂದಿದೆ.
ನವದೆಹಲಿಯ ವಿಜ್ಞಾನ ಭವನದಲ್ಲಿ ಇಂದು ನಡೆದ ಸಮಾರಂಭದಲ್ಲಿ ರಾಷ್ಟೀಯ ಪ್ರಶಸ್ತಿಯನ್ನು ಕೇಂದ್ರ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರಿಂದ ಮಂಡ್ಯ ಜಿಲ್ಲೆಯ ಜಿಲ್ಲಾ ಪಂಚಾಯತ್‍ನ ನಿಕಟಪೂರ್ವ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಶರತ್, ಮಂಡ್ಯ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕೃಷ್ಣರಾಜು ಹಾಗೂ ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕಿ ಶಾಂತ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401