ದಿನದ ಸುದ್ದಿ
ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ | ಒಂದು ದಿನದ ಮಟ್ಟಿಗೆ ವಿವಿಧ ಇಲಾಖೆಗಳ ಅಧಿಕಾರವಹಿಸಿದ ವಿದ್ಯಾರ್ಥಿನಿಯರು..!
ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ವಿದ್ಯಾರ್ಥಿನಿ ಪುಷ್ಪಲತಾಗೆ ಜಿಪಂ ಸಿಇಒ, ಕವಲೇಶ್ವರಿಗೆ ಜಿಪಂ ಉಪಾಧ್ಯಕ್ಷೆ ಕುರ್ಚಿಯಲ್ಲಿ ಕುಳಿತುಕೊಳ್ಳುವ ಭಾಗ್ಯ!
ಸುದ್ದಿದಿನ,ಬಳ್ಳಾರಿ : ರಾಷ್ಟೀಯ ಹೆಣ್ಣುಮಕ್ಕಳ ದಿನಾಚರಣೆ ಅಂಗವಾಗಿ ಸಿರಗುಪ್ಪದ ಆದರ್ಶ ಮಹಾವಿದ್ಯಾಲಯದ ವಿದ್ಯಾರ್ಥಿನಿ ಪುಷ್ಪಲತಾ ಎಂ ಅವರಿಗೆ ಜಿಪಂ ಸಿಇಒ ಕೆ.ಆರ್.ನಂದಿನಿ ಅವರು ಒಂದು ದಿನ ತಮ್ಮ ಜಿಪಂ ಸಿಇಒ ಕುರ್ಚಿ ಬಿಟ್ಟುಕೊಟ್ಟು,ವಿದ್ಯಾರ್ಥಿನಿಯನ್ನು ತಮ್ಮ ಆಸನದಲ್ಲಿ ಕೂಡಿಸಿ ಗೌರವಿಸಿರುವುದು ವಿಶೇಷವಾಗಿದೆ.
ವಿದ್ಯಾರ್ಥಿನಿ ಪುಷ್ಪಲತಾ ಅವರು ಜಿಪಂ ಸಿಇಒ ಕುರ್ಚಿ ಮೇಲೆ ಕುಳಿತ ಸಂದರ್ಭದಲ್ಲಿ ಜಿಪಂ ಸಿಇಒ ಕೆ.ಆರ್.ನಂದಿನಿ ಅವರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ವಿದ್ಯಾರ್ಥಿನಿಯರು ಪಕ್ಕದಲ್ಲಿ ನಿಂತು ಅಭಿನಂದಿಸಿದ್ದು ವಿಶೇಷವಾಗಿತ್ತು.
ಶನಿವಾರ ನಗರದ ಜಿಪಂ ಆವರಣದಲ್ಲಿ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಜಿಪಂ ಸಿಇಒ ಕೆ.ಆರ್.ನಂದಿನಿ ಅವರು ಸಿರಗುಪ್ಪದ ಆದರ್ಶ ಮಹಾವಿದ್ಯಾಲಯದ ವಿದ್ಯಾರ್ಥಿನಿ ಪುಷ್ಪಲತಾ ಎಂ ಅವರಿಗೆ ಒಂದು ದಿನದ ಮಟ್ಟಿಗೆ ಅತಿಥಿ ಮುಖ್ಯಕಾರ್ಯನಿರ್ವಾಹಕ ಹುದ್ದೆಯ ಪ್ರಭಾರ ನೀಡುವುದರ ಮೂಲಕ ವಿದ್ಯಾರ್ಥಿನಿಯರ ಐಎಎಸ್ ಕನಸಿಗೆ ಪ್ರೇರಣೆ ನೀಡಿದ್ದಾರೆ.
ಅತಿಥಿ ಜಿಪಂ ಸಿಇಒ ಸ್ಥಾನ ಅಲಂಕರಿಸಿದ ವಿದ್ಯಾರ್ಥಿನಿ ಪುಷ್ಪಲತಾ ಅವರು ಈ ಸ್ಥಾನ ಅಲಂಕರಿಸಿದ್ದು ತುಂಬಾ ಸಂತೋಷವಾಗಿದೆ. ಮುಖ್ಯವಾಗಿ ನನ್ನ ಮುಂದಿನ ಗುರಿ ತಲುಪುವುದಕ್ಕೆ ಪ್ರೇರಣೆ ನೀಡಿದೆ ಎಂದರು.
ನಾವು ಪರೀಕ್ಷೆಯಲ್ಲಿ ಪಾಸಾಗಿ ಈ ಹುದ್ದೆಗೆ ಬಂದಿದ್ದರೂ ಇಷ್ಟು ಖುಷಿಯಾಗುತ್ತಿರಲಿಲ್ಲ ಅಷ್ಟು ಸಂತೋಷ ಆಗುತ್ತಿದೆ ಎಂದು ಹೇಳಿದ ಸಿಇಒ ಪುಷ್ಪಲತಾ ಅವರು ಹಳ್ಳಿ ಪ್ರದೇಶದಲ್ಲಿ ಬಾಲ ಕಾರ್ಮಿಕ ಪದ್ದತಿ ಜಾಸ್ತಿಯಾಗುತ್ತಿದೆ. ಸರ್ಕಾರ ಎಷ್ಟೇ ಪ್ರಯತ್ನ ಪಟ್ಟರೂ ಇದು ಕಡಿಮೆ ಆಗುತ್ತಿಲ್ಲ. ಬಾಲ್ಯ ವಿವಾಹವೂ ಕೂಡ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ: ಈ ಕುರಿತು ಸಾರ್ವಜನಿಕರಲ್ಲಿ ,ಮಹಿಳೆಯರಲ್ಲಿ ,ಮಕ್ಕಳಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕಾರ್ಯ ನಿರ್ವಸಲಾಗುವುದು.
ಈ ಹಿಂದೆ ಹೆಣ್ಣು ಮಕ್ಕಳಿಗೆ ಶಿಕ್ಷಣ ಕಲಿಯುವುದು ತುಂಬಾ ಕಷ್ಟ ಆಗಿತ್ತು, ಇಂದಿನ ಯುಗದಲ್ಲಿ ಎಲ್ಲರಿಗೂ ಸಮಾನವಾದ ಶಿಕ್ಷಣ ದೊರೆಯುತ್ತಿದೆ. ಆದರೆ ಕೆಲವೊಂದು ಶಾಲೆಗಳಲ್ಲಿ ಕಟ್ಟಡಗಳು ಇಂದೋ ನಾಳೆಯೋ ಬೀಳುವ ಪರಿಸ್ಥಿತಿಯಲ್ಲಿವೆ. ಇಂದಿಗೂ ಅನೇಕ ಶಾಲೆಗಳಲ್ಲಿ ಸರಿಯಾದ ಶೌಚಾಲಯದ ವ್ಯವಸ್ಥೆ ಇಲ್ಲ. ಎಲ್ಲಾ ಶಾಲೆಗಳಿಗೆ ಶೌಚಾಲಯದ ಸಮಸ್ಯೆಯಾಗದಂತೆ ನೋಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗುತ್ತದೆ ಎಂದರು.
ಜಿಪಂ ಉಪಾಧ್ಯಕ್ಷೆಯಾಗಿ ಕವಲೇಶ್ವರಿ!: ಬಳ್ಳಾರಿ ಜಿಪಂ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಪಿ.ದೀನಾ ಮಂಜುನಾಥ ಅವರ ಕೋಣೆಯಲ್ಲಿ ವಿದ್ಯಾರ್ಥಿನಿ ಕವಲೇಶ್ವರಿ ಕೂಡ್ಲಿಗಿ ಆಸೀನರಾಗಿದ್ದರು.ಒಂದು ದಿನದ ಮಟ್ಟಿಗೆ ಕವಲೇಶ್ವರಿ ಅವರಿಗೆ ಉಪಾಧ್ಯಕ್ಷೆ ದೀನಾ ಮಂಜುನಾಥ ಅವರು ಅಧಿಕಾರ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಪಂ ಉಪಾಧ್ಯಕ್ಷೆ ಕವಲೇಶ್ವರಿ ಅವರು ಗ್ರಾಮೀಣ ಪ್ರದೇಶದಲ್ಲಿ ಸರಿಯಾದ ಬಸ್‍ಗಳ ವ್ಯವಸ್ಥೆಯಿಲ್ಲ. ಆಟೋಗಳ ಸಂಖ್ಯೆಯೂ ತೀರಾ ವಿರಳ, ಯಾವುದಾದರು ಕೆಲಸಗಳ ನಿಮಿತ್ತ ನಗರಗಳ ಕಡೆ ಬರಲು ತುಂಬಾ ದೂರ ಕಾಲ್ನಡಿಗೆ ಮೂಲಕ ಬರಬೇಕಾಗಿದೆ ಇದನ್ನು ತಪ್ಪಿಸಲು ಸಮರ್ಪಕ ಬಸ್‍ಗಳ ವ್ಯವಸ್ಥೆ ಮಾಡಲಾಗುವುದು ಎಂದರು.
ಎಎಸ್ಪಿ ಲಾವಣ್ಯ ಬದಲಿಗೆ ದಿವ್ಯಾಶ್ರೀ!: ಬಳ್ಳಾರಿ ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಬಿ.ಎನ್.ಲಾವಣ್ಯ ಅವರ ಸ್ಥಾನದಲ್ಲಿ ಬಳ್ಳಾರಿ ಆದರ್ಶ ವಿದ್ಯಾಲಯದ ವಿದ್ಯಾಶ್ರೀ ಕಾರ್ಯನಿರ್ವಹಿಸಿದರು.
ಎಎಸ್ಪಿ ಲಾವಣ್ಯ ಅವರು ಅತಿಥಿ ಎಎಸ್ಪಿ ವಿದ್ಯಾರ್ಥಿನಿ ದಿವ್ಯಾಶ್ರೀ ಅವರಿಗೆ ಪೊಲೀಸ್ ಇಲಾಖೆಯ ಕಾರ್ಯವೈಖರಿ ಬಗ್ಗೆ ತಿಳಿಸಿಕೊಟ್ಟಿದ್ದು ಕಂಡುಬಂದಿತು.
ಈ ಸಂದರ್ಭದಲ್ಲಿ ಮಾತನಾಡಿದ ಅತಿಥಿ ಎಎಸ್ಪಿ ದಿವ್ಯಾಶ್ರೀ ಗ್ರಾಮೀಣ ಪ್ರದೇಶದಲ್ಲಿ ತುಂಬಾ ಜನ ಹೆಣ್ಣು ಮಕ್ಕಳಿಗೆ ಕಾನೂನಿನ ತಿಳವಳಿಕೆ ಇಲ್ಲ; ಕಾನೂನಿನ, ಎಫ್.ಐ.ಆರ್ ,ಪೆÇಲೀಸ್ ವ್ಯವಸ್ಥೆಯ ಬಗ್ಗೆ ಮಹಿಳೆಯರಲ್ಲಿ ಅರಿವು ಮೂಡಿಸಲಾಗುವುದು ಎಂದರು.
ಜಿಪಂನಲ್ಲಿರುವ ಉಪಕಾರ್ಯದರ್ಶಿಗಳು, ಕೃಷಿ ಇಲಾಖೆ ಜಂಟಿ ನಿರ್ದೇಶಕರು,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಸಾರ್ವಜನಿಕ ಶಿಕ್ಷಣ ಇಲಾಖೆ, ಪಶುಸಂಗೋಪನೆ,ತೋಟಗಾರಿಕೆ,ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಅಂಗವಾಗಿ ಹೆಣ್ಮಕ್ಕಳಿಗೆ ಒಂದುದಿನದ ಮಟ್ಟಿಗೆ ಅಧಿಕಾರ ಹಸ್ತಾಂತರಿಸಿದರು.
ಜಿಪಂ ಸಿಇಒ ಆಗಿ ಅಧಿಕಾರ ಸ್ವೀಕರಿಸಿದ ವಿದ್ಯಾರ್ಥಿನಿ ಪುಷ್ಪಲತಾ ಅವರು ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಗಮನಸೆಳೆಯಿತು. ಅಧಿಕಾರ ವಹಿಸಿಕೊಂಡ ನಂತರ ಡಿಎಚ್‍ಒ ಜಿ.ಸ್ವಾತಿ ಅವರು ಜಿಲ್ಲೆಯಲ್ಲಿ ಆರೋಗ್ಯ ಸೇವೆಗಳ ಸ್ಥಿತಿಗತಿಗಳು,ಕೊರೊನಾ ನಿಯಂತ್ರಣ ಇನ್ನೀತರ ವಿಷಯಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ರಮೀಜಾ ಅವರು ನಗರದ ಜಿನ್ಸ್ ಉದ್ಯಮ ಘಟಕಕ್ಕೆ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕರಾಗಿ ಅಧಿಕಾರಿ ಮಾಣಿಕ್ಯ ಅವರು ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ಕಚೇರಿಯಲ್ಲಿ ವಿತರಿಸಿ ಗಮನಸೆಳೆದರು.
ಜಿಪಂ ಸಿಇಒ, ಎಎಸ್ಪಿ, ಜಿಪಂ ಉಪಾಧ್ಯಕ್ಷೆ ಸೇರಿದಂತೆ ಇನ್ನೀತರ ಜಿಲ್ಲಾಮಟ್ಟದ ಅಧಿಕಾರಿಗಳ ಹುದ್ದೆಗಳ ಸ್ಥಾನಗಳನ್ನು ಜಿಲ್ಲೆಯ ಪ್ರತಿಭಾವಂತ ಹೆಣ್ಣುಮಕ್ಕಳಿಗೆ ಬಿಟ್ಟು ಕೊಡುವ ಮೂಲಕ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತಿ ಆವರಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಅಲ್ಲಿ ನೆರೆದಿದ್ದ ಪ್ರತಿಯೊಬ್ಬರಲ್ಲಿ ಅದೇನೋ ಉತ್ಸಾಹ,ಉಲ್ಲಾಸ. ಅಧಿಕಾರ ಸ್ವೀಕರಿಸಿದ ಮಕ್ಕಳ ಮುಖದಲ್ಲಿ ಅದೇನೋ ಖುಷಿ, ಅಧಿಕಾರ ಹಸ್ತಾಂತರಿಸಿದ ಅಧಿಕಾರಿಗಳಿಗೆ ಒಂದು ಹೊಸ ಅನುಭವ.
ಒಬ್ಬೊಬ್ಬರದ್ದು ಒಂದೊಂದು ಕಥೆ, ಪ್ರತಿಯೊಬ್ಬರು ಪ್ರತಿಭಾವಂತರೆ, ಅವರು ಮಾತನಾಡುವ ಧ್ವನಿಯಲ್ಲಿ ಯಾವುದೇ ಅಳುಕಿಲ್ಲ,ಒಂದು ಧೈರ್ಯ, ವಿಶ್ವಾಸ ಅವರ ಮುಖದಲ್ಲಿ ನಿಚ್ಚಳವಾಗಿ ಕಾಣಿಸುತ್ತಿತ್ತು. ಅದರಲ್ಲೂ ಅಧಿಕಾರ ವಹಿಸಿಕೊಂಡವರಲ್ಲಿ ಅರ್ಧದಷ್ಟು ಜನ ಹಳ್ಳಿಯ ಪ್ರತಿಭೆಗಳೇ ಎನ್ನುವುದು ವಿಶೇಷ.
ನಾನು ಕೂಡ ಯಾವತ್ತಾದರೂ ಒಂದು ದಿನ ಉಪಾಧ್ಯಕ್ಷೆ ಆಗಬೇಕು ಅನ್ಕೊಂಡಿದ್ದೆ ಅದು ಈ ಮೂಲಕ ಸಾಧ್ಯವಾಯಿತು ಎಂದು ಹೇಳುವ ಮೂಲಕ ಅಲ್ಲಿದ್ದ ಎಲ್ಲರನ್ನು ತನ್ನತ್ತ ಸೆಳೆಯುವಂತೆ ಮಾಡಿದ್ದು ಕೂಡ್ಲಿಗಿಯ ಕವಲೇಶ್ವರಿ ಎಂಬ ಹೆಣ್ಣು ಮಗಳು, ನಮ್ಮೂರು ಸೇರೆದಂತೆ ಸುತ್ತ ಮುತ್ತಲಿನ ಊರುಗಳಿಗೆ ಸರಿಯಾದ ಬಸ್ ಸಂಚಾರದ ವ್ಯವಸ್ಥೆಯಿಲ್ಲ, ಆಟೋಗಳು ಕೂಡ ತೀರಾ ವಿರಳ ಈ ಸಮಸ್ಯೆಯನ್ನು ದೂರ ಮಾಡಿ ಆಯಾ ಹಳ್ಳಿಗಳಿಗೆ ಬಸ್ ವ್ಯವಸ್ಥೆ ಮಾಡಲಾಗುವುದು ಎಂದರು.
ಪ್ರತಿಯೊಬ್ಬರು ತಮ್ಮ ತಮ್ಮ ಹುದ್ದೆಗಳನ್ನು ಅಲಂಕರಿಸಿ ಆ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸುತ್ತೇವೆ ಎನ್ನುವ ಭರವಸೆಯನ್ನು ಅಧಿಕಾರಿಗಳಿಗೆ ನೀಡಿದರು.
ಜಿಪಂ ಸಿಇಒ ಕೆ.ಆರ್.ನಂದಿನಿ ಅವರಂತು ಫುಲ್ ಖಷಿಯಾಗಿ ಬೆಳಗ್ಗೆಯಿಂದ ಸಂಜೆಯವರೆಗೆ ನಡೆದ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾಗರಾಜ,ಡಿಎಚ್‍ಒ ಜನಾರ್ಧನ್,ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣನವರ್, ಜಿಪಂ ಉಪಕಾರ್ಯದರ್ಶಿ ಜಾನಕಿರಾಂ ಸೇರಿದಂತೆ ಇನ್ನೀತರ ಉಪ ಕಾರ್ಯದರ್ಶಿಗಳು, ಜಿಪಂ ಮುಖ್ಯ ಯೋಜನಾ ನಿರ್ದೇಶಕ ಚಂದ್ರಶೇಖರ ಗುಡಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ5 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ3 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ3 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

