ದಿನದ ಸುದ್ದಿ
ಕರ್ನಾಟಕದ ರಸ್ತೆಗಳು ಅಮೆರಿಕಾದ ರಸ್ತೆಗಳಿಗೆ ಸಮ : ಸಚಿವ ನಿತಿನ್ ಗಡ್ಕರಿ
ಸುದ್ದಿದಿನ, ಮೈಸೂರು : ಕೇಂದ್ರ ಸರ್ಕಾರ ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂಪಾಯಿಗಳ ಅನುದಾನದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಪಡಿಸಲಾಗಿದೆ ಎಂದು ಕೇಂದ್ರ ಸಾರಿಗೆ ಹಾಗೂ ರಾಷ್ಟ್ರೀಯ ರಸ್ತೆ ಅಭಿವೃದ್ಧಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ 4 ಸಾವಿರ ಕೋಟಿ ವೆಚ್ಚದ 22 ರಾಷ್ಟ್ರೀಯ ಹೆದ್ದಾರಿಯ 268ಕಿಲೋ ಮೀಟರ್ ಉದ್ದದ ರಸ್ತೆ ಕಾಮಗಾರಿಗೆ ಭಾನುವಾರ ಚಾಲನೆ ನೀಡಿ ಮಾತನಾಡಿದ ಅವರು, ಕರ್ನಾಟಕದ ರಸ್ತೆಗಳು ಅಮೆರಿಕಾದ ರಸ್ತೆಗಳಿಗೆ ಸಮನಾಗಿ ಇರಲಿವೆ.
2024ರ ಅಂತ್ಯಕ್ಕೆ ರಸ್ತೆಗಳ ಚಿತ್ರಣ ಬದಲಾಗಲಿದೆ ಎಂದರು. ಮೈಸೂರು, ಹಾಸನಕ್ಕೆ ರಿಂಗ್ ರಸ್ತೆ ಮಾಡಲಾಗುವುದು. ಕುಶಾಲನಗರ- ಮಾಣಿ ರಸ್ತೆಗೆ ಡಿಪಿಆರ್ ಮಾಡಿಸುತ್ತೇವೆ. ಮೈಸೂರು- ನಂಜನಗೂಡು 6 ಪಥದ ರಸ್ತೆ ಕಾಮಗಾರಿ ಶೀಘ್ರದಲ್ಲೇ ಆರಂಭ ಮಾಡಲಾಗುವುದು. ಮಂಗಳೂರು, ಕರ್ನಾಟಕದ ವಿಕಾಸಕ್ಕಾಗಿ ಗ್ರೀನ್ ಎಕ್ಸ್‌ಪ್ರೆಸ್ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.
ಬೆಂಗಳೂರು – ಚೆನ್ನೈ ನಡುವೆ 20 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ನಿರ್ಮಾಣ ವಾಗಲಿದೆ. ಕೇವಲ 2 ಗಂಟೆಯಲ್ಲಿ ಬೆಂಗಳೂರಿನಿಂದ ಚೆನ್ನೈ ತಲುಪಬಹುದು. ಬೆಂಗಳೂರಿನ 280 ಕಿಲೋಮೀಟರ್ ರಿಂಗ್ ರಸ್ತೆ ಡಿಸೆಂಬರ್‌ನಲ್ಲಿ ಪೂರ್ಣವಾಗಲಿದೆ.
ಇದರಿಂದ ಬೆಂಗಳೂರು ಟ್ರಾಫಿಕ್ ಜಾಮ್ ಮುಕ್ತವಾಗಲಿದೆ. ಕರ್ನಾಟಕ ಸಮೃದ್ಧ ರಾಜ್ಯವಾಗಿದೆ. ಸಾಹಿತ್ಯ, ಕಲೆ, ಸಂಗೀತ ಎಲ್ಲದರಲ್ಲೂ ವಿಶೇಷತೆ ಇದೆ ಎಂದರು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ ಮಾತನಾಡಿ, ರಾಜ್ಯದ ಸಂಪೂರ್ಣ ಅಭಿವೃದ್ಧಿ ಮೀಸಲು ಗಣತಂತ್ರ ವ್ಯವಸ್ಥೆಯಿಂದ ಸಾಧ್ಯವಿದೆ. ಪ್ರಪಂಚಕ್ಕೆ ಮಾದರಿಯಾಗಿರುವ ಪ್ರಜಾಸತ್ತಾತ್ಮಕ ಕಾರ್ಯಗಳಿಗೆ ಹೆಚ್ಚು ಹೊತ್ತು ನೀಡಿದರೆ ಅಭಿವೃದ್ಧಿಯಾಗುತ್ತದೆ. ರಸ್ತೆಗಳು ಅಭಿವೃದ್ಧಿಯಾದರೆ ರಾಜ್ಯ ಹಾಗೂ ದೇಶ ಪ್ರಗತಿ ಕಾಣಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ನೆನೆಗುದಿಗೆ ಬಿದ್ದಿರುವ ಕರ್ನಾಟಕದ ಹಲವು ಯೋಜನೆಗಳನ್ನು ಶೀಘ್ರವೇ ಕಾರ್ಯಗತಗೊಳಿಸಬೇಕೆಂದು ಮನವಿ ಮಾಡಿದರು.
ಮೈಸೂರು – ಕೊಡಗು ಸಂಸದ ಪ್ರತಾಪ್ ಸಿಂಹ ಮಾತನಾಡಿ, ಕರ್ನಾಟಕದಲ್ಲಿನ ರಸ್ತೆ ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ನಿತಿನ್ ಗಡ್ಕರಿ ಅವರ ಕೊಡುಗೆಯಿಂದ ರಾಜ್ಯದ ರಸ್ತೆಗಳು ಅಭಿವೃದ್ಧಿಯಾಗಿವೆ. ದೇಶದ ಸಾವಿರಾರು ಕಿಲೋಮೀಟರ್ ರಸ್ತೆಗಳು ಭಾರತ್ ಮಾಲಾ ಯೋಜನೆ ಮುಖಾಂತರ ಅಭಿವೃದ್ಧಿ ಕಂಡಿದೆ ಎಂದು ತಿಳಿಸಿದರು.
ಸಮಾರಂಭದಲ್ಲಿ ಸಂಸದರಾದ, ಸುಮಲತಾ ಅಂಬರೀಶ್, ಎಸ್.ಮುನಿಸ್ವಾಮಿ, ಶಾಸಕರಾದ ಹೆಚ್.ಡಿ. ರೇವಣ್ಣ, ಜಿ.ಡಿ ಹರೀಶ್ ಗೌಡ, ಶ್ರೀವತ್ಸ, ಪರಿಷತ್ ಸದಸ್ಯರಾದ ಎಚ್. ವಿಶ್ವನಾಥ್, ಸಿ.ಎನ್. ಮಂಜೇಗೌಡ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
आधुनिक भारत 🇮🇳 का आधुनिक एक्सप्रेसवे – द्वारका एक्सप्रेसवे 🛣!#PragatiKaHighway #GatiShakti #BuildingTheNation #ModiKiGuarantee #DwarkaExpressway @narendramodi @PMOIndia @BJP4India pic.twitter.com/HzVJTW0W5C
— Nitin Gadkari (मोदी का परिवार) (@nitin_gadkari) March 11, 2024
नए भारत 🇮🇳 की तस्वीर है द्वारका एक्सप्रेसवे 🛣!#PragatiKaHighway #GatiShakti #BuildingTheNation #ModiKiGuarantee #DwarkaExpressway @narendramodi @PMOIndia @BJP4India pic.twitter.com/Mm1Uf0qDcG
— Nitin Gadkari (मोदी का परिवार) (@nitin_gadkari) March 11, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243