ದಿನದ ಸುದ್ದಿ
ನವೀನ್ ಮೃತದೇಹ ಹುಟ್ಟೂರಿಗೆ ; ಸಿಎಂ ಬೊಮ್ಮಾಯಿ ಅಂತಿಮ ನಮನ
ಸುದ್ದಿದಿನ,ಬೆಂಗಳೂರು: ಮಾರ್ಚ್ ಒಂದನೇ ತಾರೀಖು ರಷ್ಯಾ ಹಾಗೂ ಉಕ್ರೇನ್ ನಡುವಿನ ಸಂಘರ್ಷದಲ್ಲಿ ಮೃತಪಟ್ಟ ಹಾವೇರಿ ಜಿಲ್ಲೆಯ ಚಳ್ಳಗೇರಿಯ ನವೀನ್ ಶೇಖರಪ್ಪ ಗ್ಯಾನಗೌಡರ್ ಮೃತದೇಹ ಎಮಿರೆಟ್ಸ್ ವಿಮಾನದ ಮೂಲಕ ಕೆಐಎಎಲ್ ಏರ್‌ಪೋರ್ಟ್‌ಗೆ ಮುಂಜಾನೆ ಮೂರಕ್ಕೆ ಆಗಮಿಸಿತು.
ನವೀನ್ ಕುಟುಂಬ ಸದಸ್ಯರು ಹಾಗೂ ಗ್ರಾಮದ ಮುಖಂಡರು
ನವೀನ್ ಮೃತದೇಹ ತೆಗೆದುಕೊಂಡು ಹೋಗಲು
ಆಗಮಿಸಿದ್ದರು. ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಅವರು ನವೀನ್ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಿದರು.
ಉಕ್ರೇನ್ ನಲ್ಲಿ ಮೃತಪಟ್ಟಿದ್ದ ರಾಣೆಬೆನ್ನೂರಿನ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಅವರ ಪಾರ್ಥಿವ ಶರೀರವನ್ನು ಇಂದು ಬೆಂಗಳೂರಿನಲ್ಲಿ ಬರಮಾಡಿಕೊಂಡು ಗೌರವ ನಮನಗಳನ್ನು ಸಲ್ಲಿಸಿದೆನು.
ನವೀನ್ ಅವರ ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು ಶ್ರಮಿಸಿದ ಪ್ರಧಾನಮಂತ್ರಿ @narendramodi ಜೀ ಹಾಗೂ @DrSJaishankar ಜೀ ಅವರಿಗೆ ಧನ್ಯವಾದಗಳು. pic.twitter.com/SFWzlsJYNt
— Basavaraj S Bommai (@BSBommai) March 20, 2022
ನವೀನ್ ಮೃತದೇಹ ಸಾಗಿಸುತ್ತಿರುವ ಆಂಬುಲೆನ್ಸ್ ಬೆಂಗಳೂರಿನಿಂದ ಹೊರಟಿರುವ ಬೆಳಗ್ಗೆ ಸುಮಾರು ಒಂಭತ್ತು ಗಂಟೆಯ ಸುಮಾರಿಗೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನಿವಾಸಕ್ಕೆ ತಲುಪಲಿದೆ.
ನವೀನ್ ಪಾರ್ಥಿವ ಶರೀರ ಆಗಮಿಸಿದ ಬಳಿಕ ಮೊದಲು ಕುಟುಂಬಸ್ಥರು ವೀರಶೈವ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ನಂತರ ನಿವಾಸದ ಮುಂದೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಿದ್ದಾರೆ. ಎರಡ್ಮೂರು ಗಂಟೆಗಳ ನಂತರ ಗ್ರಾಮದಲ್ಲಿ ನವೀನ್ ಪಾರ್ಥೀವ ಶರೀರವನ್ನು ಮೆರವಣಿಗೆ ನಡೆಸಲಾಗುತ್ತದೆ ಎಂದರು.
Received & honoured body of our student Naveen Gyanagoudar killed in indiscriminate bomb shelling in Russia-Ukraine war.
Thanks to PM @narendramodi Ji & @DrSJaishankar Ji for getting his mortal remains. pic.twitter.com/s8YTh2gUqP
— Basavaraj S Bommai (@BSBommai) March 20, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243