Connect with us

ದಿನದ ಸುದ್ದಿ

ಪ್ರಗತಿಪರ ರೈತ ಖಾಜಾಹುಸ್ಸೇನ್ ಮತ್ತು ಆಶಾಬಿ ರೈತ ದಂಪತಿಗಳಿಗೆ ಸನ್ಮಾನ

Published

on

ಸುದ್ದಿದಿನ,ಚನ್ನಗಿರಿ : ತಾಲೂಕಿನ ನವಿಲೆಹಾಳ್ ಗ್ರಾಮದಲ್ಲಿ ಶನಿವಾರ 3ಎಕರೆ 10ಗುಂಟೆ ಜಮೀನಿನಲ್ಲಿ ಕೆರನ್ ಮಾರ್ಗದರ್ಶನದಲ್ಲಿ ಈ ವರ್ಷ ಬರೋಬ್ಬರಿ 117.5 ಕ್ವಿಂಟಲ್ ಭತ್ತವನ್ನು ಬೆಳೆದಿರುವುದರಿಂದ ರೈತ ದಂಪತಿಗಳಿಗೆ ಕಂಪನಿಯವರು ಸನ್ಮಾನ ಸಮಾರಂಭ ಕಾರ್ಯಕ್ರಮ ನಡೆಸಿದರು.

ಕಣದಮನೆ ಖಾಜಾಹುಸ್ಸೇನ್ ಮತ್ತು ಅವರ ಪತ್ನಿ ಆಶಾಬೀ, ಮೂರು ವರ್ಷದ ಹಿಂದೆ ಕೆರನ್ ಕಂಪನಿಯ ಒಂದು ರೈತ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಅಲ್ಲಿಂದ ಕೆರನ್ ಮಾರ್ಗದರ್ಶನದಲ್ಲಿ ತಮ್ಮ ಬೆಳೆಯನ್ನು ಬೆಳೆಯುತ್ತಿದ್ದಾರೆ.

ಬರೀ ಬೆಳೆ ಬೆಳೆಯುವ ಬಗ್ಗೆ ಮಾತ್ರ ಮಾಹಿತಿ ಅನ್ನಬೇಡಿ ಇಲ್ಲಿ ಭೂಮಿಯನ್ನು ಕಾಪಾಡಿಕೊಳ್ಳುವ ಬಗ್ಗೆ,ನೀರಿನ ಬಗ್ಗೆ,ಇಳುವರಿ ಬಗ್ಗೆ ಮುಂದಿನ ಪೀಳಿಗೆಗೆ ಒಳ್ಳೆಯ ಆಹಾರದ ಬಗ್ಗೆ ಮಾಹಿತಿ ಸಿಗುತ್ತದೆ. ಇದರಿಂದ ಆಸಕ್ತಿಗೊಂಡ ದಂಪತಿಗಳು ವರ್ಷದಿಂದ ವರ್ಷಕ್ಕೆ ತಮ್ಮ ಭತ್ತದಲ್ಲಿ ಒಳ್ಳೆಯ ಇಳುವರಿ ತೆಗೆದುಕೊಂಡಿದ್ದಾರೆ.

ಮೊದಲು 75-80 ಕ್ವಿಂಟಲ್ ಭತ್ತವನ್ನು ತಮ್ಮ 3-10 ಗುಂಟೆಯಲ್ಲಿ ಬೆಳೆಯುತ್ತಿದ್ದು, ಕೆರನ್ ಮಾರ್ಗದರ್ಶನದ ನಂತರ ಮೊದಲ ವರ್ಷವೇ 90 ಕ್ವಿಂಟಲ್ ಮತ್ತು 2 ನೇ ವರ್ಷಕ್ಕೆ 98 ಕ್ವಿಂಟಲ್ ಮತ್ತು ಈ ವರ್ಷ ಬರೋಬ್ಬರಿ 117.5 ಕ್ವಿಂಟಲ್ ಭತ್ತವನ್ನು ಬೆಳೆದಿರುತ್ತಾರೆ. ಅಲ್ಲದೇ ಪ್ರತೀ ವರ್ಷವೂ ಇವರ ಭತ್ತದ ಗುಣಮಟ್ಟ ರಫ್ತು ಸಾಗಿಸುವಷ್ಟು ಉತ್ತಮವಾಗಿದೆ.
ಅದಕ್ಕಾಗಿಯೇ ಈ ವರ್ಷದಿಂದ ಅವರು ರಫ್ತು ಮಾಡುವ ಸಲುವಾಗಿ SONA ತಳಿಯನ್ನು ಮಾಡುತ್ತಿದ್ದಾರೆ.

ಕೆರನ್ ಕಂಪನಿಗೆ ಬಂದ ಈ ದಂಪತಿಗಳು ಹಲವಾರು ಕಾರ್ಯಾಗಾರಗಳಲ್ಲಿ ಭಾಗವಹಿಸಿ ತಮ್ಮ ಇಳುವರಿ ಹೆಚ್ಚಿಸಿಕೊಂಡಿರುವುದಲ್ಲದೇ ತಮ್ಮ ಜೀವನ ಶೈಲಿಯನ್ನು ಬದಲಾಯಿಸಿಕೊಂಡಿದ್ದಾರೆ. ಅಲ್ಲದೇ ದಿಯಾ ಎಂಟರ್ಪ್ರೈಸಸ್ ಮೂಲಕ ಬಿಜಾಪುರ, ಶಿರಶಿ, ಭರಮಸಾಗರ, ಜಗಳೂರು, ಬಿದರಕೆರೆ, ಶಾಮನೂರು, ಮಲೇಬೆನ್ನೂರು, ಬೆಂಗಳೂರು ಗ್ರಾಮಾಂತರ ಭಾಗಗಳಲ್ಲಿ ರೈತರಿಗೆ ಮಾಹಿತಿ ಮಾಡುತ್ತಾ ಇದರೊಂದಿಗೆ ಪ್ರತೀ ತಿಂಗಳು 15,000 ವರೆಗೆ ಆದಾಯವನ್ನು ಪಡೆಯುತ್ತಿದ್ದಾರೆ.

ಇದೇ ವರ್ಷ 9 ಲಕ್ಷದ WAGON-R ಕಾರನ್ನು ಪಡೆದ ಈ ದಂಪತಿಗಳ ಹರ್ಷ ಕಂಪನಿಯಲ್ಲಿ ಇರುವವರೆಲ್ಲರಿಗೂ ಮಾದರಿ ಎನಿಸಿದೆ. ಇದರೊಂದಿಗೆ ಒಂದೆರಡು ಹಸುವನ್ನು ಸಾಕಿದ್ದರೂ ಕೂಡ ಪ್ರತಿ ವರ್ಷ 3 TRACTOR ಲೋಡ್ ಉತ್ಕ್ರಷ್ಠ ಗೊಬ್ಬರವನ್ನು ತಾವೇ ತಯಾರಿಸಿಕೊಳ್ಳುತ್ತಾರೆ. ಅಲ್ಲದೇ WDC,ಗೋಕೃಪಾಮೃತಜಲ,ಜೀವಾಮೃತ,ಪಂಚಗವ್ಯ-ದಶಗವ್ಯ, ಪೋಶಕಾಂಶದ್ರವ್ಯ, ಕುಣಪಜಲಗಳನ್ನು ಮಾಡಿ ಭೂಮಿಗೆ ಉಣಬಡಿಸುತ್ತಿದ್ದಾರೆ. 2 ವರ್ಷದ ಇವರ ಅಡಿಕೆ ಸಸಿಗಳನ್ನು ನೋಡಲು ತುಂಬಾ ಚೆನ್ನಾಗಿದೆ. 4 ನೇ ವರ್ಷಕ್ಕೆ ಫಸಲು ಪಡೆಯುವ ಬಗ್ಗೆ ಕಾರ್ಯಯೋಜನೆ ಮಾಡಿದ್ದಾರೆ. ಖಾಜಾಹುಸ್ಸೇನ್ ಅವರ ಪತ್ನಿ ತಮ್ಮ ಗಂಡನ ಈ ಅಭಿವೃದ್ಧಿ ಬಗ್ಗೆ ತುಂಬಾ ಹೆಮ್ಮೆ ಪಡುತ್ತಾರೆ.

ಖಾಜಾಹುಸ್ಸೇನ್ ಅವರು ತಮ್ಮ ಪತ್ನಿಯ ಸಹಕಾರದ ಬಗ್ಗೆ ಕಂಪನಿಯ ಹಲವಾರು ಕಾರ್ಯಕ್ರಮಗಳಲ್ಲಿ ಹೇಳಿದ್ದು ಉಳಿದ ಹೆಣ್ಣುಮಕ್ಕಳಿಗೆ ಸ್ಫೂರ್ಥಿದಾಯಕವಾಗಿದೆ. ಖಾಜಾಹುಸ್ಸೇನ್ ಅವರ ಗೆಳೆಯರು ಅವರ ಈ ಅಭಿವೃದ್ಧಿಯ ಬಗ್ಗೆ ಹೆಮ್ಮೆಪಟ್ಟುಕೊಳ್ಳುತ್ತಿದ್ದಾರೆ. ಕಾರನ್ನು ತಂದ ನಂತರ ಅವರ ವ್ಯವಹಾರವು ಇನ್ನೂ ಚೆನ್ನಾಗಿ ನಡೆಯುತ್ತಿದೆ. ಜೊತೆಗೆ ಭತ್ತದಲ್ಲಿ ಈ ವರ್ಷ ಇನ್ನೂ ಸ್ವಲ್ಪ ಇಳುವರಿ ಜಾಸ್ತಿ ಮಾಡುವುದರ ಬಗ್ಗೆ ಹೊಸ ಯೋಜನೆಯೊಂದನ್ನು ದಂಪತಿಗಳು ಹಾಕಿಕೊಂಡಿದ್ದಾರೆ. ಇವರ ಈ ಕಾರ್ಯ ಭೂಮಿಯ ಬಗ್ಗೆ ಅವರಿಗಿರುವ ಕಾಳಜಿ ಎಲ್ಲಾ ರೈತರಿಗೂ ಮಾದರಿಯಾಗಿದೆ.

ಕೇರನ್ ರಾಜ್ಯ ಕೃಷಿ ಸಂಯೋಜಕರು ಪ್ರಸನ್ನ ಡಿ ಎ ಕಾರ್ಯಕ್ರಮ ನಿರೂಪಣೆ ಮಾಡಿದರು. ಕರ್ನಾಟಕ ಕೇರನ್ ತಂಡದ ಪ್ರಮುಖ ಕೃಷಿ ಮಾರ್ಗದರ್ಶಕರಾದ ಸಚಿನ್ ಕಬ್ಬೂರವರು ದಂಪತಿಗಳಿಗೆ ಪ್ರಶಸ್ತಿ ವಿತರಿಸಿ ಸಾವಯವ, ಪ್ರಾಚೀನ ಕೃಷಿ ಪದ್ಧತಿ, ಅಧಿಕ ಇಳುವರಿಗಾಗಿ ಮಾಡಬೇಕಾದ ಕೃಷಿಯ ಹೊಸ ಆಯಾಮಗಳ ಬಗ್ಗೆ ತಿಳಿಸಿಕೊಟ್ಟರು.

ಬ್ಯಾಡಗಿ, ಹಾನಗಲ್, ಚೀಲೂರ್, ಹೊನ್ನಾಳಿ, ಶಿವಮೊಗ್ಗ, ದಾವಣಗೆರೆ, ರಾಣೇಬೆನ್ನೂರ್, ಹಾವೇರಿ, ಹಿರೇಕೆರೂರ, ನ್ಯಾಮತಿ ಭಾಗದ ಕೇರನ್ ಕೃಷಿ ಮಾರ್ಗದರ್ಶಕರು ಮತ್ತು ರೈತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು
ನವಲೇಹಾಳ್ ಗ್ರಾಮಸ್ಥರು ಮತ್ತು ರೈತರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

Published

on

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.

ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್‍ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.

ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್‍, ಸೋಷಿಯಲ್‍ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಜೊತೆಗೆ ಒಂದು ಮೊಬೈಲ್‍ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್‍ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು

Published

on

ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.

ಮೃತರನ್ನು ದೇವದುರ್ಗ ತಾಲೂಕಿನ ಸಮುದ್ರ ಗ್ರಾಮದ ರವಿಚಂದ್ರ (35), ಕ್ಯಾದಿಗೆರಾ ಗ್ರಾಮದ ನಾಗರಾಜ್ (30) ಹಾಗೂ ಕೊತ್ತಿಗುಡ್ಡದ ಅರ್ಜುನ್ (21) ಎಂದು ಗುರುತಿಸಲಾಗಿದೆ.

ಕಟ್ಟಡದ ಅವಶೇಷಗಳಡಿ ಸಿಲುಕಿ ರವಿಚಂದ್ರ ಹಾಗೂ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ್‌ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿಯ ಪ್ರಕಾರ, ಯುವಕರು ತಾವೇ ನಿರ್ಮಿಸಿದ್ದ ‘ಅಂತ್ಯವಾಯ್ತು’ ಎಂಬ ಕಿರುಚಿತ್ರದ ಪೋಸ್ಟರ್ ಅಂಟಿಸಲು ಕಟ್ಟಡದ ಬಳಿ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.

ಕಟ್ಟಡದ ಮೇಲ್ಛಾವಣಿಯ ಒಂದು ಭಾಗವು, ಅದಕ್ಕೆ ಜೋಡಣೆಯಾಗಿದ್ದ ಕಬ್ಬಿಣದ ಮೆಟ್ಟಿಲುಗಳ ಸಹಿತ ಕುಸಿದು ಬಿದ್ದಿದೆ. ಘಟನೆಯಲ್ಲಿ ಉಮೇಶ್, ಪ್ರಭು ಹಾಗೂ ಅಭಿಷೇಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮ ನಾಯಕ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್

Published

on

ಜಿಲ್ಲೆಯಲ್ಲಿ 1.37 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ: ಡಿಎಚ್ಒ ಡಾ. ಷಣ್ಮುಖಪ್ಪ

ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಪಲ್ಸ್ ಪೋಲಿಯೋ ವಿಶೇಷ ಅಭಿಯಾನದಲ್ಲಿ ಯಾವುದೇ ಒಂದು ಮಗುವೂ ಸಹ ಲಸಿಕೆಯಿಂದ ವಂಚಿತವಾಗದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಅವರು ಸೂಚಿಸಿದರು.

ಅವರು ಭಾನುವಾರ ಪಾಷನಗರದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಬ್ದುಲ್ ರೆಹಮಾನ್ ಎಂಬ 4 ತಿಂಗಳ ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೋ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶ ಸೇರಿದಂತೆ ಎಲ್ಲಾ ಭಾಗಗಳ ಅರ್ಹ ಮಕ್ಕಳಿಗೂ ಲಸಿಕೆ ತಲುಪಬೇಕು. ಆರೋಗ್ಯ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಷಣ್ಮುಖಪ್ಪ ಎಸ್. ಅವರು ಮಾತನಾಡಿ, ಜಿಲ್ಲೆಯನ್ನು ಸಂಪೂರ್ಣ ಪೋಲಿಯೋ ಮುಕ್ತವಾಗಿಸಲು ಆರೋಗ್ಯ ಇಲಾಖೆ ಪಣತೊಟ್ಟಿದೆ. ಜಿಲ್ಲೆಯಲ್ಲಿ ಒಟ್ಟು 18,28,153 ಜನಸಂಖ್ಯೆಯಿದ್ದು, 3,79,338 ಮನೆಗಳಿವೆ. ಇವುಗಳಲ್ಲಿ ಗುರುತಿಸಲಾಗಿರುವ 5 ವರ್ಷದ ಒಳಗಿನ 1,37,339 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ವಿವರ ನೀಡಿದರು.

ಇದಕ್ಕಾಗಿ ಜಿಲ್ಲಾದ್ಯಂತ 1,090 ಲಸಿಕಾ ಬೂತ್ಗಳನ್ನು ಸ್ಥಾಪಿಸಲಾಗಿದೆ. ಬೂತ್ಗಳಲ್ಲಿ ಲಸಿಕೆ ಹಾಕುವುದರ ಜೊತೆಗೆ, ಜೂನ್ 29 ರಿಂದ ಜುಲೈ 1 ರವರೆಗೆ ಒಟ್ಟು 3 ದಿನಗಳ ಕಾಲ ಜಿಲ್ಲೆಯ ಎಲ್ಲಾ ಮನೆ-ಮನೆಗೆ ತೆರಳಿ 5 ವರ್ಷದ ಒಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗುವುದು. ಈ ಕಾರ್ಯಕ್ರಮವನ್ನು 2 ಹಂತಗಳಲ್ಲಿ 3 ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಲಸಿಕಾ ಅಭಿಯಾನದ ಯಶಸ್ಸಿಗಾಗಿ ಮನೆ-ಮನೆ ಭೇಟಿ ತಂಡ, ಟ್ರಾನ್ಸಿಸ್ಟ್ (ಸಾರಿಗೆ ನಿಲ್ದಾಣಗಳ ತಂಡ) ಮತ್ತು ಸಂಚಾರಿ (ಮೊಬೈಲ್) ತಂಡ ಹೀಗೆ ಮೂರು ಪ್ರಮುಖ ವಿಭಾಗಗಳ ತಂಡಗಳನ್ನು ರಚಿಸಲಾಗಿದೆ. ನಿಯೋಜಿತ ಸಿಬ್ಬಂದಿ ಹಾಗೂ ಮೇಲ್ವಿಚಾರಕರು ಸಕ್ರಿಯವಾಗಿ ಕಾರ್ಯನಿರ್ವಹಿಸಲಿದ್ದು, ವಲಸೆ ಕಾರ್ಮಿಕರ ಮಕ್ಕಳು, ಹರವಿಗಿ ಹೋಗುವ ಕುಟುಂಬಗಳ ಮಕ್ಕಳು ಸೇರಿದಂತೆ ಒಂದೂ ಮಗುವು ಲಸಿಕೆಯಿಂದ ವಂಚಿತವಾಗದಂತೆ ಕಟ್ಟುನಿಟ್ಟಿನ ನಿಗಾ ಇಡಲಾಗುವುದು ಎಂದು ತಿಳಿಸಿದರು.

ಡಾ. ರೇಣುಕಾರಾಧ್ಯ ಆರ್.ಸಿ.ಹೆಚ್.ಒ ಅವರು ಮಾತನಾಡಿ, ಭಾರತವನ್ನು ಪೋಲಿಯೋ ಮುಕ್ತ ದೇಶವನ್ನಾಗಿಸಲಾಗಿದೆ ಆದರೆ ಪ್ರಸ್ತುತ ಪಾಕಿಸ್ತಾನ ಮತ್ತು ಬಾಂಗ್ಲಾದೇಶಗಳಲ್ಲಿ 5 ಪೋಲಿಯೋ ಪ್ರಕರಣಗಳು ಪತ್ತೆಯಾಗಿವೆ. ಅಲ್ಲಿನ ನಾಗರಿಕರು ಭಾರತಕ್ಕೆ ಬಂದು ಹೋಗುವ ಸಾಧ್ಯತೆ ಇರುವುದರಿಂದ, ವೈರಸ್ ಮತ್ತೆ ಇಲ್ಲಿ ಹರಡಬಾರದು ಎಂಬ ಮುಂದಾಲೋಚನೆಯಿಂದ ಮತ್ತು ಮುನ್ನೆಚ್ಚರಿಕೆ ಕ್ರಮವಾಗಿ ದೇಶಾದ್ಯಂತ ಈ ಪಲ್ಸ್ ಪೋಲಿಯೋ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಪಲ್ಸ್ ಪೋಲಿಯೋ ನೊಡೆಲ್ ಅಧಿಕಾರಿ ಡಾ.ಚಂದ್ರಶೇಖರ್ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending