ದಿನದ ಸುದ್ದಿ
ನವಿಲೇಹಾಳು | ‘ಸ್ನೇಹ ಬಳಗ’ ದಿಂದ ಕೊರೊನಾ ವಾರಿಯರ್ಸ್; ಗ್ರಾ.ಪಂ ನೂತನ ಸದಸ್ಯರು ಹಾಗೂ ಯುವಕವಿಗೆ ಸನ್ಮಾನ
ಸುದ್ದಿದಿನ, ದಾವಣಗೆರೆ-ಚನ್ನಗಿರಿ: ನವಿಲೇಹಾಳ್ ಗ್ರಾಮದಲ್ಲಿ ಮಾ. 07ರ ಭಾನುವಾರ ಮೊಟ್ಟಮೊದಲ ಬಾರಿಗೆ ಗ್ರಾಮ ಪಂಚಾಯಿತಿಯ ನೂತನ ಸದಸ್ಯರಿಗೆ ಸನ್ಮಾನ ಸಮಾರಂಭದ ಜೊತೆಗೆ ಕರೋನಾ ವಾರಿಯರ್ಸ್ ಮತ್ತು ‘ಮೋಹದ ಮೋಡಗಳು’ ಚೊಚ್ಚಲ ಕೃತಿಯ ಯುವಕವಿಗೆ ಸನ್ಮಾನ ಕಾರ್ಯಕ್ರಮವನ್ನು ನವಿಲೇಹಾಳಿನ ‘ಸ್ನೇಹ ಬಳಗ’ದ ವತಿಯಿಂದ ನಡೆಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯ ಅಥಿತಿಗಳಾಗಿ ಆಗಮಿಸಿದ್ದ ಶಾಂತ ಗಂಗಾಧರವರು ಊರಿನ ಪರಂಪರೆ, ಸಾಹಿತ್ಯ, ಸಂಸ್ಕೃತಿ, ಸಹಬಾಳ್ವೆ ಬಗ್ಗೆ ತಿಳಿಸುತ್ತ ನೂತನ ಗ್ರಾಮ ಪಂಚಾಯ್ತಿ ಸದಸ್ಯರುಗಳ ಕೆಲಸ ಕರ್ತವ್ಯಗಳು ಆರೋಗ್ಯಕರವಾಗಿರಬೇಕು ಯಾವುದೇ ತರಹದ ದ್ವೇಷ ಆರೋಪಗಳು ಪೋಲಿಸ್ ಸ್ಟೇಷನ್ ವರೆಗೆ ಹೋಗದಂತೆ ಗ್ರಾಮದಲ್ಲಿಯೇ ಸಮಸ್ಯೆಗಳನ್ನು ಬಗೆಹರಿಸಬೇಕು.ಮತ್ತು ಜಾತಿ ಧರ್ಮಗಳನ್ನ ಬಿಟ್ಟು ಎಲ್ಲರೂ ಒಂದು ಕುಟುಂಬವೆಂದು ಬದುಕಬೇಕು ಎಂದು ಆಶಯ ವ್ಯಕ್ತಪಡಿಸಿದರು.
ಮತ್ತೋರ್ವ ಅಥಿತಿಗಳಾದ ಡಾ॥ ಹುಸೇನ್ ಮೀಯ ಅವರು ನೂತನ ಸದಸ್ಯರಿಗೆ ಶುಭ ಹಾರೈಸಿ ಪಂಚಾಯಿತಿ ವ್ಯಾಪ್ತಿಯ ಕೆಲಸಗಳು ಮತ್ತು ಅದರ ಉಪಯೋಗದ ಬಗ್ಗೆ ಗ್ರಾಮಸ್ತರಿಗೆ ಅರಿವು ಮೂಡಿಸುವ ಕಾರ್ಯಗಳನ್ನು ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಕೆಲಸ ಕೈಗೊಳ್ಳಬೇಕು ಎಂದರು.
ಜತೆಗೆ ನವಿಲೇಹಾಳನ್ನು ಸುವರ್ಣಗ್ರಾಮವನ್ನಾಗಿ ಮಾಡುವ ಕನಸಿಟ್ಟಕೊಂಡು ಆ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಮಾಡಿ ಮಾದರಿ ಗ್ರಾಮವೆನ್ನುವ ಪ್ರಶಸ್ತಿಯನ್ನು ಮುಖ್ಯಮಂತ್ರಿಗಳಿಂದ ತೆಗೆದುಕೊಳ್ಳಬೇಕು ಆಗ ನಿಮ್ಮ ಕೆಲಸಕ್ಕೆ ಫಲ ಸಿಕ್ಕಂತಾಗುವುದು ಈ ಎಲ್ಲಾ ರೀತಿಯ ಕೆಲಸಗಳಿಗೂ ನನ್ನ ಪೂರ್ಣಪ್ರಮಾಣದ ಸಹಕಾರ ಬೆಂಬಲ ಎಂದಿಗೂ ಇರುವುದು ಎಂದು ಗ್ರಾಮದವರಲ್ಲಿ ವಿಶ್ವಾಸವನ್ನು ತುಂಬಿದರು.
ಸಭೆಯನ್ನುದ್ದೇಶಿಸಿ ಗಣ್ಯರಾದ ಎಂ. ಶಿವಮೂರ್ತಿ ನಿವೃತ್ತ ಶಿಕ್ಷಕರು ನವಿಲೇಹಾಳ್, ರುದ್ರಪ್ಪ ನಿವೃತ್ತ ಶಿಕ್ಷಕರು ನವಿಲೇಹಾಳ್, ಬಾಲಣ್ಣ ದೊಡ್ಡಘಟ್ಟ, ದಾದಪೀರ್ ನವಿಲೇಹಾಳ್ ಮಾತನಾಡುತ್ತ ಗ್ರಾಮದ ಸಾದಕ ಬಾದಕಗಳಬಗ್ಗೆ ಹೇಳಿದರು.
ಕಾರ್ಯಕ್ರಮದ ಸ್ವಾಗತವನ್ನು ಇಸ್ಮಯಿಲ್ ಕಣದ್ಮನೆ ಅವರು ನಿರ್ವಹಿಸಿದರು. ನಿರೂಪಣೆಯನ್ನು ಜೆ ದಾದಪೀರ್ ನಡೆಸಿಕೊಟ್ಟರು. ಶರ್ಮತ್ ಕಣದಮನಿ, ದೂದ್ ಪೀರ್, ದಾದಪೀರ್, ಬಶೀರ್, ಮೋಸಿಮ್ ಅಕೀಲ್, ಮೋಹನ್, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


