ದಿನದ ಸುದ್ದಿ
CRPF ಯೋಧರ ಮೇಲೆ ನಕ್ಸಲರ ದಾಳಿ : 5ವರು ಯೋಧರ ಸಾವು
ಸುದ್ದಿದಿನ ಡೆಸ್ಕ್ : CRPF ಯೋಧರ ಮೇಲೆ ನಕ್ಸಲರ ದಾಳಿಯಿಂದ ಒಬ್ಬ ಯೋಧ ಗಂಭೀರವಾಗಿ ಗಾಯಗೊಂಡು 5 ಯೋಧರು ಹುತಾತ್ಮರಾಗಿದ್ದಾರೆ. ಇಂದು ಸಂಜೆ ಸುಮಾರು 4 ಘಂಟೆಯ ಸಮಯದಲ್ಲಿ ಛತ್ತೀಸ್ಗಢ ದ ಬಿಜಾಪುರ ಜಿಲ್ಲೆಯ ಅವಪಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಮುರುಡಾ ಕ್ಯಾಂಪ್ ಬಳಿ ಈ ದುರಂತ ನಡೆದಿದೆ.
CRPF ನ 168 ನೇ ಬಟಾಲಿಯನ್ ಯೋಧರಿಂದ ಏರಿಯಾ ಡಾಮಿನೇಷನ್ ಕವಾಯಿತು ನಡೆಯುತ್ತಿದ್ದ ಸ್ಥಳದಿಂದ ಒಂದು ಕಿ.ಮೀ. ದೂರದಲ್ಲಿ 6 ಮಂದಿಯಿದ್ದ MVP ವಾಹನವನ್ನು ನಕ್ಸಲರು ಗುರಿಯಾಗಿಸಿಕೊಂಡು ಸ್ಪೋಟಿಸಿದ್ದಾರೆ.ಈ ಘಟನೆಯಲ್ಲಿ 5 ಮಂದಿ ಯೋಧರು ಸ್ಥಳದಲ್ಲಿ ಹುತಾತ್ಮರಾಗಿದ್ದು ಮತ್ತೊಬ್ಬ ಯೋಧ ತೀವ್ರವಾಗಿ ಗಾಯಗೊಂಡಿದ್ದಾರೆಂದು SP ಮೋಹಿತ್ ಗಾರ್ಗ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ದಾವಣಗೆರೆ | ಜ.18 ರಂದು ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಶಂಕುಸ್ಥಾಪನೆ ಹಾಗೂ ನೂತನ ತಾತ್ಕಾಲಿಕ ಬಸ್ ನಿಲ್ದಾಣದ ಉದ್ಘಾಟನೆ

ಸುದ್ದಿದಿನ,ದಾವಣಗೆರೆ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗ, ದಾವಣಗೆರೆ ವತಿಯಿಂದ ಜ.18 ರಂದು ಬೆಳಿಗ್ಗೆ 10 ಗಂಟೆಗೆ ಕ.ರಾ.ರ.ಸಾ ನಿಗಮದ ಕೇಂದ್ರ ಬಸ್ ನಿಲ್ದಾಣ ದಾವಣಗೆರೆ ಇಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕ.ರಾ.ರ.ಸಾ ನಿಗಮದ ಬಸ್ ನಿಲ್ದಾಣದ ಪುನರ್ ನಿರ್ಮಾಣದ ಶಂಕುಸ್ಥಾಪನೆ ಹಾಗೂ ನೂತನ ತಾತ್ಕಾಲಿಕ ಬಸ್ ನಿಲ್ದಾಣದ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸಂ.ಸವದಿ ಉದ್ಘಾಟಿಸುವರು. ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎ ರವೀಂದ್ರನಾಥ್ ಅಧ್ಯಕ್ಷತೆ ವಹಿಸುವರು. ಲೋಕಸಭಾ ಕ್ಷೇತ್ರದ ಸಂಸದರಾದ ಜಿ.ಎಂ.ಸಿದ್ದೇಶ್ವರ್ ಶಂಕುಸ್ಥಾಪನೆಯನ್ನು ನೆರೆವೇರಿಸುವರು.
ನಗರಾಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ ಚಾಲಕರಿಗೆ ಬೆಳ್ಳಿ ಪದಕ ವಿತರಣೆ ಮಾಡುವರು. ಕ.ರಾ.ರ.ಸಾ ನಿಗಮದ ಅಧ್ಯಕ್ಷರು ಹಾಗೂ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ.ಚಂದ್ರಪ್ಪ ನೂತನ ಮಾರ್ಗಗಳ ಉದ್ಘಾಟನೆಯನ್ನು ನೆರೆವೇರಿಸುವರು.
ಮುಖ್ಯ ಅತಿಥಿಗಳಾಗಿ ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ಚನ್ನಗಿರಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧ್ಯಕ್ಷರು ಮತ್ತು ನಿರ್ದೇಶಕರಾದ ಕೆ.ಮಾಡಾಳ್ ವಿರುಪಾಕ್ಷಪ್ಪ, ಜಗಳೂರು ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪ.ಪಂ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಎಸ್.ವಿ.ರಾಮಚಂದ್ರ.
ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಪ್ರೊ.ಎನ್.ಲಿಂಗಣ್ಣ, ನವಲಗುಂದ ವಿಧಾನಾಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ದಿ ಮತ್ತು ಹಣಕಾಸು ನಿಗಮ ನಿಯಮಿತದ ಅಧ್ಯಕ್ಷರಾದ ಶಂಕರ್ ಪಾಟೀಲ್ ಮುನೆನಕೊಪ್ಪ, ದಾವಣಗೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ, ಜಿ.ಪಂ ಅಧ್ಯಕ್ಷರಾದ ಕೆ.ವಿ ಶಾಂತಕುಮಾರಿ ಹಾಗೂ ವಿಧಾನಪರಿಷತ್ ಶಾಸಕರು, ಮಹಾನಗರಪಾಲಿಕೆಯ ಮಹಾಪೌರರು, ದಾ-ಹ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರು, ಕ.ರಾ.ರ.ಸಾನಿಗಮದ ಉಪಾಧ್ಯಕ್ಷರು ಪಾಲ್ಗೊಳ್ಳುವರು.
ಸರ್ಕಾರದ ಪ್ರಧಾನ ಕಾರ್ಯದರ್ಶಿ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಎಸ್.ಆರ್. ಉಮಾಶಂಕರ್, ಕ.ರಾ.ಸ.ಸಾ ನಿಗಮದ ನಿರ್ದೇಶಕ ಶಿವಯೋಗಿ ಸಿ ಕಳಸದ, ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಂಜುಂ ಪರ್ವೇಜ್.
ಕರ್ನಾಟಕ ನಗರಮೂಲಸೌಕರ್ಯ ಅಭಿವೃದ್ದಿಯ ಮತ್ತು ಹಣಕಾಸು ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕ ಡಾ.ಎಂ.ಟಿ ರೇಜು, ಜಿಲ್ಲಾಧಿಕಾರಿ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ದಾವಣಗೆರೆ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿಶೇಷ ಆಹ್ವಾನಿತರಾಗಿ ಭಾಗವಹಿಸುವರೆಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ಮೊದಲನೇ ಹಂತದ ಕೋವಿಡ್ ಲಸಿಕಾಕರಣಕ್ಕೆ ಸಂಸದ ಜಿ.ಎಂ. ಸಿದ್ದೇಶ್ವರ ಚಾಲನೆ

ಸುದ್ದಿದಿನ,ದಾವಣಗೆರೆ : ಜಿಲ್ಲಾ ಚಿಗಟೇರಿ ಆಸ್ಪತ್ರೆಯ ಆವರಣದಲ್ಲಿ ಶನಿವಾರದಂದು ಸಂಭ್ರಮದ ವಾತಾವರಣ ಏರ್ಪಟ್ಟಿತ್ತು. ವಿಶ್ವವನ್ನೇ ಬೆಚ್ಚಿ ಬೀಳಿಸಿದ ಕೋವಿಡ್ ಲಸಿಕೆ ನೀಡಲು ಎಲ್ಲ ರೀತಿಯ ಪೂರಕ ಸಿದ್ದತೆಯೊಂದಿಗೆ ವೈದ್ಯರು, ಶುಶ್ರೂಷಕರು ಸಜ್ಜಾಗಿದ್ದರು.
ಬೆಳಿಗ್ಗೆ ರಾಷ್ಟ್ರದ ಪ್ರಧಾನಮಂತ್ರಿಯವರಾದ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋವಿಡ್ ಲಸಿಕಾಕರಣದ ಕುರಿತು ಭಾಷಣ ಮುಗಿಸಿ, ಲಸಿಕಾಕರಣಕ್ಕೆ ಸಾಂಕೇತಿಕ ಚಾಲನೆ ನೀಡಿದ ನಂತರ ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ಸಂಸದರು, ಶಾಸಕರು ಮತ್ತು ಅಧಿಕಾರಿಗಳು ಕೋವಿಡ್ ಲಸಿಕಾಕರಣ ಕಾರ್ಯಕ್ರಮಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿದರು.
ರಾಷ್ಟ್ರದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಡೀ ದೇಶವನ್ನು ಉದ್ದೇಶಿಸಿ ಮಾತನಾಡಿ, ಕೊರೊನಾ ಸಮರದ ವಿರುದ್ದ ಹೋರಾಟ ಮಾಡಿದ ಸಂಕಷ್ಟದ ಸಮಯ, ಅದರ ವಿರುದ್ದ ಹೋರಾಡಿದ ಸೇನಾನಿಗಳ ಕಾರ್ಯವನ್ನು, ದೇಶವಾಸಿಗಳ ಸಹಕಾರವನ್ನು ಸ್ಮರಿಸಿದ ಅವರು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಲಸಿಕಾಕರಣ ಕಾರ್ಯಕ್ರಮ ಯಶಸ್ವಿಯಾಗಿ ನಡೆದು ದೇಶ ಕೊರೊನಾ ಮುಕ್ತವಾಗಲಿದೆ ಎಂದು ಆಶಾಭಾವನೆಯನ್ನು ವ್ಯಕ್ತಿಪಡಿಸಿ, ಕಾರ್ಯಕ್ರಮದ ಯಶಸ್ಸಿಗೆ ಹಾರೈಸಿದರು.
ಪ್ರಧಾನಮಂತ್ರಿಗಳ ಭಾಷಣ ಮುಗಿಯುತ್ತಿದ್ದಂತೆ ಜಿಲ್ಲಾಸ್ಪತ್ರೆಯಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹಾಗೂ ಮೊದಲನೇ ಸೆಷನ್ನಲ್ಲಿ ಲಸಿಕೆ ಪಡೆಯಲು ಪಾಲ್ಗೊಂಡಿದ್ದ ವೈದ್ಯರು, ಶುಶ್ರೂಷಕರು, ಲ್ಯಾಬ್ ಟೆಕ್ನೀಷಿನ್, ಡಿ ಗ್ರೂಪ್ ನೌಕರರಿಗೆ ಧೈರ್ಯ ಹೇಳಿ ಹುರಿದುಂಬಿಸಿದರು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಂಸದರಾದ ಜಿ.ಎಂ ಸಿದ್ದೇಶ್ವರ ಮಾತನಾಡಿ, ಇಂದು ನಮ್ಮ ರಾಷ್ಟ್ರದ ಪ್ರಧಾನ ಮಂತ್ರಿಯವರು ಇಡೀ ದೇಶವನ್ನುದ್ದೇಶಿಸಿ ಮಾತನಾಡಿ ಕೊರೊನಾ ಲಸಿಕಾಕರಣಕ್ಕೆ ಚಾಲನೆ ನೀಡಿದ್ದಾರೆ. ಇದೀಗ ವಿಡಿಯೋ ಕಾನ್ಫರೆನ್ಸ್ ಮೂಲಕ ಅವರ ಭಾಷಣ ಕೇಳಿದ ನಂತರ ನಮ್ಮ ಜಿಲ್ಲೆಯಲ್ಲಿಯೂ ಇಂದು ಸಾಂಕೇತಿಕವಾಗಿ ಲಸಿಕಾಕರಣಕ್ಕೆ ಚಾಲನೆ ನೀಡಲಾಗಿದೆ.
ಜಿಲ್ಲೆಯ ಏಳು ಕೇಂದ್ರಗಳಲ್ಲಿ ಇಂದು ಲಸಿಕಾಕರಣ ನಡೆಯುತ್ತಲಿದೆ. ಪ್ರತಿ ಕೇಂದ್ರದಲ್ಲಿ 100 ಜನರಿಗೆ ಲಸಿಕೆ ನೀಡಲಾಗುತ್ತಿದೆ. ಯಾವುದೇ ಭಯಕ್ಕೆ ಒಳಗಾಗದೇ ಲಸಿಕೆಯನ್ನು ಪಡೆಯಬಹುದಾಗಿದ್ದು ಕೇಂದ್ರ ಸರ್ಕಾರದ ಈ ಲಸಿಕಾ ಕಾರ್ಯಕ್ರಮ ಸಂಪೂರ್ಣ ಯಶಸ್ಸು ಕಾಣಲಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ಕೇಂದ್ರದಲ್ಲಿ ಪ್ರಧಾನಿ ಮಂತ್ರಿಗಳು ಕೊರೊನಾ ಲಸಿಕಾಕರಣ ಕುರಿತು ಭಾಷಣ ಮಾಡಿ, ಲಸಿಕಾ ಕರಣಕ್ಕೆ ಚಾಲನೆ ನೀಡಿದ ತಕ್ಷಣ ಜಿಲ್ಲಾ ಕೇಂದ್ರದಲ್ಲಿ ಚಾಲನೆ ನೀಡಲಾಗಿದೆ. ಮೊದಲ ಹಂತದಲ್ಲಿ ಜಿಲ್ಲೆಯ ಏಳು ಕೇಂದ್ರಗಳಲ್ಲಿ ಲಸಿಕಾಕರಣಕ್ಕೆ ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
18 ವರ್ಷ ಮೇಲ್ಪಟ್ಟ, ಯಾವುದೇ ಇತರೆ ಕಾಯಿಲೆಗಳ ಗಂಭೀರತೆ ಇಲ್ಲದ ತಲಾ ನೂರು ಆರೋಗ್ಯ ಕಾರ್ಯಕರ್ತ ಫಲಾನುಭವಿಗಳ ಪಟ್ಟಿ ಈಗಾಗಲೇ ತಯಾರಿಸಿದ ಪ್ರಕಾರ ಇಂದು ಲಸಿಕಾರಕರಣ ಮಾಡಲಾಗುತ್ತಿದೆ. ಮೊದಲನೇ ಹಂತದಲ್ಲಿ 6876 ಸರ್ಕಾರಿ, 12194 ಖಾಸಗಿ ಸೇರಿದಂತೆ ಒಟ್ಟು 19070 ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲು ಪಟ್ಟಿ ತಯಾರಿಸಿಡಲಾಗಿದೆ.
ಯಾವುದೇ ರೀತಿಯ ಭಯವಿಲ್ಲದೇ, ನಿರಾತಂಕವಾಗಿ ಲಸಿಕೆ ಪಡೆಯಬಹುದಾಗಿದ್ದು, ಕೋವ್ಯಾಕ್ಸಿನ್ಗೆ ಸಂಬಂಧಿಸಿದಂತೆ ಯಾರೂ ಕೂಡ ಸುಳ್ಳು ಸುದ್ದಿ, ವದಂತಿಗಳಿಗೆ ಕಿವಿಗೊಡಕೂಡದು. ಯಾರಾದರೂ ಒಂದು ಪಕ್ಷ ಯಾರಾದರೂ ಸುಳ್ಳುಸುದ್ದಿ, ವದಂತಿಗಳನ್ನು ಹಬ್ಬಿಸಿದರೆ ಅವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಇಂದು ಜಿಲ್ಲಾ ಚಿಗಟೇರಿ ಆಸ್ಪತ್ರೆ, ಬಾಪೂಜಿ/ಜೆಜೆಎಂಸಿ ಕಾಲೇಜು, ದಾವಣಗೆರೆ, ಹರಿಹರ, ಹೊನ್ನಾಳಿ, ಚನ್ನಗಿರಿ ಮತ್ತು ಜಗಳೂರು ತಾಲ್ಲೂಕು ಆಸ್ಪತ್ರೆಗಳು ಹಾಗೂ ಜಗಳೂತು ತಾಲ್ಲೂಕಿನ ಬಿಳಿಚೋಡು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಇಂದು ಕೋವಿಡ್ ಲಸಿಕೆಯಾದ ಕೋವಿಶೀಲ್ಡ್ ನೀಡಿಕೆಗೆ ಚಾಲನೆ ನೀಡಿಲಾಗಿದೆ ಮೊದಲನೇ ಸೆಷನ್ನಲ್ಲಿ ಪ್ರತಿ ಕೇಂದ್ರಗಳಲ್ಲಿ ತಲಾ ನೂರು ಜನರಿಗೆ ಲಸಿಕೆ ನೀಡಲಾಗುತ್ತಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ ಮಾತನಾಡಿ, ಲಸಿಕಾಕರಣ ಕಾರ್ಯಕ್ರಮ ಶಾಂತ ರೀತಿಯಲ್ಲಿ ನಡೆಯಲು ಎಲ್ಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಯಾರೂ ಕೂಡ ಲಸಿಕಾಕರಣ ಕುರಿತು ಅನಗತ್ಯ ಗೊಂದಲ ಸೃಷ್ಟಿಸಬಾರದು. ಸುಳ್ಳು ಸುದ್ದಿ, ವದಂತಿಗೆ ಎಡೆ ಮಾಡಿದರೆ ಅವರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್ ಮಾತನಾಡಿ, ಮುಂದಿನ ದಿನಗಳಲ್ಲಿ ಕೋವಿಡ್ನಿಂದ ಆಗಬಹುದಾದ ಸಾವು ನೋವು ಮತ್ತು ಸಮುದಾಯ ಹರಡುವಿಕೆಯನ್ನು ತಡೆಯಲು ಕೇಂದ್ರ ಸರ್ಕಾರ ಕೋವಿಡ್ ಲಸಿಕಾಕರಣ ಕಾರ್ಯಕ್ರಮ ಜಾರಿಗೆ ತಂದಿದೆ. ಮೊದಲನೇ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದ್ದು ಜಿಲ್ಲೆಯಲ್ಲಿ ಒಟ್ಟು 36 ಕೇಂದ್ರಗಳಲ್ಲಿ 19070 ಜನರಿಗೆ ಲಸಿಕೆ ನೀಡಲಾಗುವುದು. ಒಟ್ಟು 108 ನುರಿತ ಲಸಿಕಾಕಾರರು ಲಸಿಕೆ ನೀಡುವರು ಎಂದರು.
ಆರ್ಸಿಹೆಚ್ಓ ಡಾ.ಮೀನಾಕ್ಷಿ ಮಾತನಾಡಿ, ಏಳು ಕೇಂದ್ರಗಳಲ್ಲಿ ಒಟ್ಟು 30 ನುರಿತ ಲಸಿಕಾರರು ಲಸಿಕೆ ನೀಡುವರು. ಆನ್ಲೈನ್ನಲ್ಲಿ ಲಸಿಕೆ ಪಡೆಯುವವರ ಒಪ್ಪಿಗೆ ಪತ್ರವನ್ನು ಅಪ್ಲೋಡ್ ಮಾಡಿದ ನಂತರ ಲಸಿಕೆ ನೀಡಲಾಗುವುದು. ಲಸಿಕೆಗೆ ಮುನ್ನ ಅವರೊಂದಿಗೆ ಆಪ್ತಸಮಾಲೋಚನೆ ನಡೆಸಿ, ಲಸಿಕೆ ನೀಡಿದ ನಂತರ ವಿಶ್ರಾಂತಿ ಕೊಠಡಿಯಲ್ಲಿ ಅವರನ್ನು ಅರ್ಧ ಗಂಟೆ ಅಬ್ಸವರ್ಷೇನ್ಲ್ಲಿಟ್ಟು ಕಳುಹಿಸಿಕೊಡಲಾಗುವುದು. ಎಲ್ಲ ಲಸಿಕಾ ಕೇಂದ್ರಗಳಲ್ಲಿ ಅಡ್ಡ ಪರಿಣಾಮಗಳೇನಾದರೂ ಸಂಭವಿಸಿದರೆ ಅಗತ್ಯವಾಗಿ ಬೇಕಾದ ಔಷಧೋಪಚಾರದ ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದರು.
ಜಿಲ್ಲಾ ಚಿಗಟೇರಿ ಆಸ್ಪತ್ರೆಯ ಡಾ.ಶಶಿಧರ್ ಕೋವಿಶೀಲ್ಡ್ ಲಸಿಕೆ ಪಡೆದ ನಂತರ ಮಾತನಾಡಿ, ಲಸಿಕೆ ಪಡೆದ ನಂತರ ಯಾವುದೇ ಭಯವಾಗಲೀ, ಅಡ್ಡ ಪರಿಣಾಮವಾಗಲೀ ನನಗೆ ಆಗಿಲ್ಲ. ನಿರಾತಂಕವಾಗಿ ಎಲ್ಲರೂ ಲಸಿಕೆ ಪಡೆಯಬಹುದು. ಮೊದಲಿಗೆ ನನಗೆ ಕೌನ್ಸಲಿಂಗ್ ರೂಂನಲ್ಲಿ ಕೌನ್ಸಲಿಂಗ್ ಮಾಡಿ ನಂತರ ನನ್ನ ಒಪ್ಪಿಗೆ ಪತ್ರ ವೆಬ್ಪೋರ್ಟಲ್ನಲ್ಲಿ ಅಪ್ಲೋಡಿದ ನಂತರ ಲಸಿಕೆ ನೀಡಲಾಯಿತು. ನಂತರ ವಿಶ್ರಾಂತಿ ಕೊಠಡಿಯಲ್ಲಿ ಅರ್ಧ ಗಂಟೆ ಅಬ್ಸರ್ವೇಷನ್ ಮಾಡಿದ ನಂತರ ಹೊರಗೆ ಬಂದಿದ್ದೇನೆ. ಆರಾಮಾಗಿದ್ದೇನೆ ಎಂದರು.
ಲಸಿಕೆ ಪಡೆದ ಆಸ್ಪತ್ರೆಯ ಡಿ ಗ್ರೂಪ್ ನೌಕರ ರಾಜಾಭಕ್ಷ ಮಾತನಾಡಿ, ನಾನು ಮೊದಲನೇ ಹಂತದಲ್ಲಿ ಮೊದಲನೇ ದಿನವೇ ಲಸಿಕೆ ಪಡೆಯುತ್ತಿರುವುದು ಖುಷಿಯಾಗಿದೆ. ಲಸಿಕಾ ಪ್ರಕ್ರಿಯೆಯಲ್ಲಿ ಯಾವುದೇ ಭಯ ಆಗಲಿಲ್ಲ. ಲಸಿಕೆ ಪಡೆದು ಅರ್ಧ ಗಂಟೆ ನಂತರವೂ ಆರಾಮಾಗಿದ್ದೇನೆ. ಯಾರೂ ಯಾವುದೇ ರೀತಿಯ ಆತಂಕ್ಕೆ ಒಳಗಾಗದೇ ಧೈರ್ಯವಾಗಿ ಲಸಿಕೆ ಪಡೆಯಬಹುದೆಂದರು.
ಚಿಗಟೇರಿ ಆಸ್ಪತ್ರೆಯಲ್ಲಿ ಲಸಿಕಾಕರಣ ಚಾಲನೆ ವೇಳೆ ಡಾ. ಶಶಿಧರ್, ಡಾ.ಸಂಜಯ್, ಡಾ.ಯತೀಶ್, ಶುಶ್ರೂಷಕರಾದ ಗುಣೇಶ್ವರಿ, ಅಂಬುಜಾಕ್ಷಿ, ಶಿವಲೀಲಮ್ಮ.ಜಿ.ಎಸ್, ಶಾಂತಿ, ಆಶಾ ಕಾಂಬ್ಳಿ, ಲ್ಯಾಬ್ ಟೆಕ್ನೀಷಿಯನ್ ಕರಿಬಸಪ್ಪ, ಡಿ ಗ್ರೂಪ್ ನೌಕರರಾದ ರಾಜಾಭಕ್ಷ, ರವಿರಾಜ್ ಇತರರು ಲಸಿಕೆ ಹಾಕಿಸಿಕೊಂಡರು. ಮೊದಲ ಲಸಿಕೆ ಪಡೆದ ಡಾ.ಶಶಿಧರ್ ಮತ್ತು ಎರಡನೇ ಲಸಿಕೆ ಪಡೆದ ಡಿ ಗ್ರೂಪ್ ನೌಕರ ರಾಜಭಕ್ಷ ಇವರನ್ನು ಗೌರವಿಸಲಾಯಿತು.
ಈ ವೇಳೆ ದಾವಣಗೆರೆ ತಹಶೀಲ್ದಾರ್ ಗಿರೀಶ್, ಡಿಹೆಚ್ಓ ಡಾ.ನಾಗರಾಜ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಜಯಪ್ರಕಾಶ್, ತಾಲ್ಲೂಕು ವೈದ್ಯಾಧಿಕಾರಿ, ಇತರೆ ವೈದ್ಯರು, ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಮೊದಲ ಹಂತದ ಕೋವಿಡ್ ಲಸಿಕೆ | 19,070 ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುವುದು : ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ

ಸುದ್ದಿದಿನ,ದಾವಣಗೆರೆ : ವಿಶ್ವವನ್ನೇ ಬಾಧಿಸಿದ ಕೊರೊನಾಗೆ ಲಸಿಕೆ ಸಿದ್ದವಾಗಿದ್ದು, ಇಂದಿನಿಂದ ಮೊದಲ ಹಂತದ ಲಸಿಕೆ ನೀಡಿಕೆ ಕಾರ್ಯ ಜಿಲ್ಲೆಯಲ್ಲಿ ಆರಂಭವಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.
ಜಿಲ್ಲಾಸ್ಪತ್ರೆಯಲ್ಲಿ ಶುಕ್ರವಾರ ಲಸಿಕೆ ನೀಡಿಕೆ ಏರ್ಪಾಟು ಕುರಿತು ಪರಿಶೀಲನೆ ನಡೆಸಿ ನಂತರ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿ, ಶನಿವಾರ ಬೆಳಿಗ್ಗೆ ಮಾನ್ಯ ಪ್ರಧಾನಮಂತ್ರಿಗಳು ನವದೆಹಲಿಯಲ್ಲಿ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡುವರು.
ಅವರು ಚಾಲನೆ ನೀಡಿದ ನಂತರ ಜಿಲ್ಲೆಗಳಲ್ಲಿ ಲಸಿಕೆ ನೀಡಬೇಕೆಂದು ನಿರ್ದೇಶನ ಬಂದಿದ್ದು, ಅದರಂತೆ ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುವುದು. ಆರೋಗ್ಯ ಇಲಾಖೆಯ 19,070 ಆರೋಗ್ಯ ಕಾರ್ಯಕರ್ತರು ನೋಂದಾಯಿಸಿಕೊಂಡಿದ್ದು, ಇದರಲ್ಲಿ ‘ಡಿ’ ಗ್ರೂಪ್ ನೌಕರರಿಂದ ಹಿಡಿದು ಉನ್ನತ ಅಧಿಕಾರಿಗಳವರೆಗೆ ಲಸಿಕೆ ನೀಡಲಾಗುವುದು ಎಂದರು.
6826 ಸರ್ಕಾರಿ ಹಾಗೂ 12,194 ಖಾಸಗಿ ಆರೋಗ್ಯ ಕ್ಷೇತ್ರದ ಕಾರ್ಯಕರ್ತರು ಲಸಿಕೆ ಪಡೆಯಲಿದ್ದಾರೆ. ಜಿಲ್ಲೆಗೆ 13,500 ಡೋಸ್ ಲಸಿಕೆಗಳನ್ನು ಸ್ವೀಕರಿಸಿದೆ. ಎಲ್ಲಾ ಲಸಿಕಾ ಕೇಂದ್ರಗಳಿಗೆ ಪೊಲೀಸ್ ಭದ್ರತೆಯೊಂದಿಗೆ ಕಳುಹಿಸಿಕೊಡಲಾಗಿದ್ದು, ಕೋಲ್ಡ್ ಸ್ಟೋರೇಜ್ನಲ್ಲಿ ಇರಿಸಲಾಗಿದೆ.
ಜಿಲ್ಲೆಯಲ್ಲಿ ಒಟ್ಟು 36 ಲಸಿಕಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಇಂದು 7 ಕೇಂದ್ರಗಳಲ್ಲಿ ಮಾತ್ರ ಲಸಿಕೆ ನೀಡಲಾಗುತ್ತದೆ. ಎಲ್ಲಾ ತಾಲ್ಲೂಕು ಆಸ್ಪತ್ರೆ, ಸಿಜಿ ಆಸ್ಪತ್ರೆ, ಜೆಜೆಎಂಸಿ ಹಾಗೂ ಬಿಳಿಚೋಡಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆ ನೀಡಲಾಗುವುದು ಎಂದರು.
ಈ ಕೇಂದ್ರಗಳಲ್ಲಿ ಲಸಿಕೆ ತೆಗೆದುಕೊಂಡವರಿಗೆ ಪ್ರತಿಕೂಲ ಪರಿಣಾಮವಾದರೆ ತಕ್ಷಣ ಸ್ಪಂದಿಸಲು ಎಇಎಫ್ಐ ಕಿಟ್ಗಳು ಹಾಗೂ ನುರಿತ ವೈದ್ಯರು, ಆಂಬುಲೆನ್ಸ್ ಸೇರಿದಂತೆ ಅಗತ್ಯ ಮಾನವ ಸಂಪನ್ಮೂಲ ಸಿದ್ದತೆ ಮಾಡಿಕೊಳ್ಳಲಾಗಿದೆ.
ಪ್ರಥಮ ಹಂತದಲ್ಲಿ ಗರ್ಭಿಣಿಯರು, ಹಾಲುಣಿಸುವ ತಾಯಂದಿರು, ಇನ್ನಿತರೆ ಅಲರ್ಜಿ, ಕೋಮಾರ್ಬಿಡಿಟಿ ಇರುವವರನ್ನು ಹೊರತುಪಡಿಸಿ 18 ವರ್ಷ ಮೇಲ್ಪಟ್ಟ ಎಲ್ಲಾ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುವುದು. ಸ್ಥಳೀಯ ಜನಪ್ರತಿನಿಧಿಗಳು ಈ ಕಾರ್ಯಕ್ರಮಕ್ಕೆ ಚಾಲನೆ ನೀಡುವರು.
ಮುಂದಿನ ಹಂತದಲ್ಲಿ ಲಸಿಕೆ ಹೆಚ್ಚಿನ ಸಂಖ್ಯೆಯಲ್ಲಿ ಬಂದಾಗ ನಮ್ಮ ಅವಶ್ಯಕತೆಗಿಂತ ಹೆಚ್ಚು ಲಸಿಕಾ ಸ್ಟೋರೇಜ್ ಸಾಮಥ್ರ್ಯ ನಮ್ಮಲ್ಲಿದೆ. ಹಾಗೂ ಪಶುಪಾಲನಾ ಇಲಾಖೆಯ ಸ್ಟೋರೇಜ್ನ್ನು ಬಳಸಿಕೊಳ್ಳಲಾಗುವುದು. ಬೆಸ್ಕಾಂ ನವರಿಗೆ ಸೂಚನೆ ನೀಡಲಾಗಿದ್ದು ವಿದ್ಯುತ್ ವ್ಯತ್ಯಯವಾಗದಂತೆ ಸೂಚಿಸಲಾಗಿದೆ.
ಎರಡನೇ ಹಂತದಲ್ಲಿ ಫ್ರಂಟ್ಲೈನ್ ವರ್ಕರ್ಸ್ ಫಲಾನುಭವಿಗಳ ಪಟ್ಟಿ ಅಪ್ಲೋಡ್ ಮಾಡಲಾಗುತ್ತಿದ್ದು, ಇದರಲ್ಲಿ ಮುನ್ಸಿಪಾಲಿಟಿ, ಸ್ಥಳೀಯ ಸಂಸ್ಥೆಗಳು, ನಗರಪಾಲಿಕೆ, ಕಂದಾಯ, ಪೊಲೀಸ್ ಇಲಾಖೆ, ಹೋಂ ಗಾಡ್ರ್ಸ್, ಎನ್ಸಿಸಿ ಗ್ರಾ.ಪಂ, ಬಿಲ್ ಕಲೆಕ್ಟರ್, ಕಾರ್ಯದರ್ಶಿ, ಪಿಡಿಓಗಳಿಗೆ ನೀಡಲಾಗುವುದು.
ಮೂರನೇ ಹಂತದಲ್ಲಿ ಕೋಮಾರ್ಬಿಡಿಟಿ, ಮಕ್ಕಳು ಮತ್ತು 60 ವರ್ಷ ಮೇಲ್ಪಟ್ಟವರಿಗೆ ನೀಡಲಾಗುವುದು. ಸಾಮಾನ್ಯರಿಗೆ ಸರ್ಕಾರದ ನಿರ್ದೇಶನ ಬಂದ ನಂತರ ತೀರ್ಮಾನಿಸಲಾಗುವುದು ಎಂದರು.
ಈ ವೇಳೆ ಡಿಹೆಚ್ಓ ಡಾ.ನಾಗರಾಜ್, ಚಿಗಟೇರಿ ಜಿಲ್ಲಾಸ್ಪತ್ರೆ ಶಸ್ತ್ರ ಚಿಕಿತ್ಸಕ ಜಯಪ್ರಕಾಶ್, ಡಿಎಸ್ಓ ಡಾ.ರಾಘವನ್, ಆರ್ಸಿಹೆಚ್ಓ ಡಾ.ಮೀನಾಕ್ಷಿ ಇತರರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ4 days ago
ಆಂದೋಲನ-ಈ ಜೀವ ಈ ಜೀವನ | ಅಂಗನವಾಡಿ ಕಾರ್ಯಕರ್ತೆಯ ಅಸಾಮಾನ್ಯ ಕರ್ತವ್ಯಪ್ರಜ್ಞೆ..!
-
ಲೈಫ್ ಸ್ಟೈಲ್5 days ago
ಏಳಿ ಎದ್ದೇಳಿ ಗುರಿಮುಟ್ಟುವ ತನಕ ನಿಲ್ಲದಿರಿ : ವಿವೇಕಾನಂದ
-
ದಿನದ ಸುದ್ದಿ3 days ago
“ನೀನು ಅಪ್ಪನಿಗೆ ಹುಟ್ಟಿದಿಯಾ ಅನ್ನೋದಕ್ಕೆ ಸಾಕ್ಷಿ ಏನು..?” : ಸಚಿವ ಈಶ್ವರಪ್ಪ
-
ದಿನದ ಸುದ್ದಿ4 days ago
ಸಚಿವ ಸಂಪುಟ ವಿಸ್ತರಣೆ : ಏಳು ಹೊಸ ಸಚಿವರ ಹೆಸರು ಫೈನಲ್ ಗೊಳಿಸಿದ ಯಡಿಯೂರಪ್ಪ
-
ದಿನದ ಸುದ್ದಿ4 days ago
ಮೂರೂ ಕೃಷಿ ಕಾಯ್ದೆಗಳ ಜಾರಿಯನ್ನು ಅಮಾನತುಗೊಳಿಸಿದ ಸುಪ್ರೀಂ ಕೋರ್ಟ್..!
-
ದಿನದ ಸುದ್ದಿ5 days ago
ಹೊಸ ಚರಿತ್ರೆ ಬರೆಯಲಿರುವ ಜನವರಿ-26
-
ಸಿನಿ ಸುದ್ದಿ4 days ago
ಬಾಂಬೆ ಹೀರೋಹಿನ್ ಗಳು ಕಡಿಮೆ ಸಂಭಾವನೆಗೆ ಕೆಲಸ ಮಾಡ್ತಾರೆ ಅಂದವರಿಗೆ ಹೀಗಂದ್ರು ನಟಿ ಕೃತ್ತಿಕಾ ರವೀಂದ್ರ..!
-
ದಿನದ ಸುದ್ದಿ3 days ago
ರೈತರ ಹೋರಾಟದಲ್ಲಿ ರೈತರೊಂದಿಗೆ ನಿಂತ ವಾಷಿಂಗ್ ಮಷಿನ್ಗಳು..!