ದಿನದ ಸುದ್ದಿ

ನಕಲಿ ಬೀಜದ ಹಾವಳಿ ತಪ್ಪಿಸಲು ಅಗತ್ಯ ಕ್ರಮ : ಸಿಎಂ ಬೊಮ್ಮಾಯಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಬೆಂಗಳೂರು : ನಕಲಿ ಬೀಜದ ಹಾವಳಿ ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಜಲಾನಯನ ಅಭಿವೃದ್ಧಿ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಶ್ವಬ್ಯಾಂಕ್ ನೆರವಿನ ರಾಷ್ಟ್ರ ಮಟ್ಟದ ರಿವಾರ್ಡ್ ಯೋಜನೆ, ಜಲಾನಯನ ಉತ್ಕೃಷ್ಟತಾ ಕೇಂದ್ರದ ಉದ್ಘಾಟನೆ ಹಾಗೂ ಏಕರೂಪ ಬ್ರ್ಯಾಂಡಿಂಗ್ ಸ್ಪರ್ಧೆಯ ಅನಾವರಣ ಮತ್ತು ಅತ್ಯುತ್ತಮ ರೈತ ಉತ್ಪಾದಕ ಸಂಸ್ಥೆಗಳಿಗೆ ಮುಖ್ಯಮಂತ್ರಿ ಪ್ರ್ರಶಸ್ತಿ ಪ್ರದಾನ ಮಾಡಿದರು.

ಇದೇ ವೇಳೆ ಅವರು ರೈತರ ಮನೆಯ ಬಾಗಿಲಲ್ಲೆ ಎಲ್ಲ ಬಗೆಯ ಪರೀಕ್ಷೆ ನಡೆಸುವ ಸಸ್ಯ ಆರೋಗ್ಯ ಚಿಕಿತ್ಸಾಲಯ ಕೃಷಿ ಸಂಜೀವಿನಿ ನೂರು ವಾಹನಗಳನ್ನು ಲೋಕಾರ್ಪಣೆ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version