Connect with us

ದಿನದ ಸುದ್ದಿ

ಜೇನುಕೃಷಿಗೆ ಉತ್ತೇಜನ ಅಗತ್ಯ : ಅನಂತ ಹೆಗಡೆ ಆಶೀಸರ

Published

on

ಸುದ್ದಿದಿನ,ಶಿವಮೊಗ್ಗ : ಜಿಲ್ಲೆಯಲ್ಲಿ ಜೇನುಕೃಷಿಗೆ ವಿಫುಲ ಅವಕಾಶಗಳಿದ್ದು, ಜೇನುಕೃಷಿಯನ್ನು ಉತ್ತೇಜಿಸುವ ಅಗತ್ಯವಿದೆ ಎಂದು ಕರ್ನಾಟಕ ಜೀವವೈವಿದ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಅವರು ಹೇಳಿದರು.

ಅವರು ಇಂದು ಜಿಲ್ಲಾ ಪಂಚಾಯಿತಿಯಲ್ಲಿ ಕೃಷಿ ಹಾಗೂ ಕೃಷಿ ಸಂಬಂಧಿತ ಇಲಾಖೆಯ ಅಧಿಕಾರಿಗಳೊಂದಿಗೆ ಜೇನುಕೃಷಿ ಕುರಿತು ಸಮಾಲೋಚನೆ ನಡೆಸಿದ ಅವರು, ಥಾಯ್‍ಸಾಕ್‍ಬ್ರೂಡ್ ಎಂಬ ಸೋಂಕಿನಿಂದ ಜೇನುಕೃಷಿಯ ವಿಸ್ತರಣೆಯಲ್ಲಿ ಎದುರಾಗಿರುವ ಸಮಸ್ಯೆ ಸವಾಲುಗಳನ್ನು ನಿಯಂತ್ರಿಸಿ, ರಾಜ್ಯ ಮತ್ತು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜೇನುಕೃಷಿಯನ್ನು ಕೈಗೊಳ್ಳಲು ಉತ್ತೇಜಿಸಬಹುದಾದ ಕಾರ್ಯಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಸೋಂಕನ್ನು ನಿಯಂತ್ರಿಸಿ, ಜೇನುಕೃಷಿಯನ್ನು ವಿಸ್ತರಿಸುವ ಬಗ್ಗೆ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳು ಮತ್ತು ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸುವ ಅಗತ್ಯವಿದೆ ಎಂದವರು ನುಡಿದರು.

ವಿಶೇಷವಾಗಿ ಜಿಲ್ಲೆಯಲ್ಲಿ 1500ಕ್ಕೂ ಹೆಚ್ಚಿನ ಜನ ಜೇನುಕೃಷಿಕರು ತೊಡಗಿದ್ದಾರೆ. ಆದರೆ ನಿರೀಕ್ಷಿತ ಆದಾಯ ಕಾಣುವುದು ಸಾದ್ಯವಾಗುತ್ತಿಲ್ಲ. ಅದಕ್ಕೆ ಪ್ರಮುಖ ಕಾರಣವೆಂದರೆ ನೆರೆಯ ಕೇರಳ ರಾಜ್ಯದಿಂದ ಆಮದು ಮಾಡಿಕೊಳ್ಳಲಾಗುತ್ತಿರುವ ರೋಗಗ್ರಸ್ಥ ಜೇನುಕುಟುಂಬಗಳಿಂದಾಗಿ ಜೇನುಸಂತತಿ ನಾಶಗೊಳ್ಳುತ್ತಿದೆ. ಮಾತ್ರವಲ್ಲ ಸ್ಥಳೀಯ ಜೇನು ಪ್ರಬೇಧಗಳು ಅಳಿವಿನಂಚಿನಲ್ಲಿವೆ.

ಇದರೊಂದಿಗೆ ಕೀಟನಾಶಕಗಳ ಸಿಂಪರಣೆಯೂ ಜೇನುಸಂತತಿ ನಾಶಕ್ಕೆ ಕಾರಣವಾಗಿದೆ. ಅಲ್ಲದೇ ಅರಣ್ಯಗಳಲ್ಲಿ ಸಾಂಪ್ರದಾಯಿಕವಾಗಿದ್ದ ಜೇನುಗಳಿಗೆ ಈ ಸೋಂಕು ಹರಡಿರುವುದನ್ನು ಖಚಿತಪಡಿಸಿ, ಅದರ ನಿವಾರಣೆಗಾಗಿ ಕ್ರಮವಹಿಸಬೇಕಾದ ಅಗತ್ಯವಿದೆ. ಇವುಗಳ ನಿಯಂತ್ರಣಕ್ಕಾಗಿ ಸಂಶೋಧನಾ ಕಾರ್ಯಗಳನ್ನು ಕೈಗೊಳ್ಳುವ ತುರ್ತು ಅಗತ್ಯವಿದ್ದು, ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಸರ್ಕಾರದ ಗಮನಸೆಳೆಯುವುದಾಗಿ ಅವರು ತಿಳಿಸಿದರು.

ಪ್ರತಿವರ್ಷ ಜೇನುಕೃಷಿ ಕ್ಷೇತ್ರ ವಿಸ್ತರಣೆ ಆಗುತ್ತಿದೆ. ರೈತರ ಉಪಕಸುಬಾಗಿರುವ ಜೇನುಕೃಷಿಯಿಂದ ರೈತರ ಆದಾಯ ಹೆಚ್ಚಳವಾಗಲಿದೆ ಅಲ್ಲದೆ ಶೇ.25ರಷ್ಟು ಕೃಷಿ ಉತ್ಪಾದನೆಗೂ ಸಹಾಯಕವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಜೇನುಕೃಷಿಕ ನಾಗೇಂದ್ರ ಸಾಗರ್ ಅವರು ಮಾತನಾಡಿ, ಜೇನುಕೃಷಿಗೆ ಸರ್ಕಾರವು ಉತ್ತೇಜನ ನೀಡಬೇಕಾದ ಅಗತ್ಯವಿದೆ. ಸೋಂಕಿನಿಂದಾಗಿ ಇಳುವಳಿ ಕಡಿಮೆಯಾಗಲಿದೆ. ಜೇನುಕೃಷಿಕರಲ್ಲಿ ಆಸಕ್ತಿಯೂ ಕಳೆದು ಹೋಗುತ್ತಿದೆ. ಈ ಸಂಬಂಧ ವಿವಿಗಳು ಮತ್ತು ಇಲಾಖೆಗಳು ಸಂಶೋಧನೆಗಳನ್ನು ಕೈಗೊಳ್ಳಬೇಕಾದ ಅಗತ್ಯವಿದೆ ಎಂದರು.
ಈ ಸಂದರ್ಭದಲ್ಲಿ ಪ್ರಗತಿಪರ ಜೇನುಕೃಷಿಕ ನಾಗೇಂದ್ರ ಸಾಗರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಆಲ್ವಿನ್ ಉಪಸ್ಥಿತರಿದ್ದರು.

ಸಭೆಗೂ ಮುನ್ನ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಎಂ.ಎಲ್.ವೈಶಾಲಿ, ಜಂಟಿ ಕೃಷಿ ನಿರ್ದೇಶಕ ಡಾ||ಕಿರಣ್‍ಕುಮಾರ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರಾಮಚಂದ್ರ, ಜೇನುಕೃಷಿಕ ನಾಗೇಂದ್ರ ಸಾಗರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಲ್ವಿನ್ ಮುಂತಾದವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

Published

on

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.

ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ

Published

on

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್‌ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ.

ಕೆಎಸ್‌ಆರ್‌ಟಿಸಿ ಮಹಾನಿರ್ದೆಶಕರನ್ನಾಗಿ ಅಕ್ರಂ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ

Published

on

ಸುದ್ದಿದಿನಡೆಸ್ಕ್:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸಂತ್ರಸ್ಥರು ಮತ್ತು ಅವರ ಕುಟುಂಬಗಳಿಗೆ ಪಾರದರ್ಶಕತೆ ನ್ಯಾಯ ದೊರಕುವಂತಾಗಲು ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಸಂತ್ರಸ್ಥರಿಗೆ ನ್ಯಾಯ ಒದಗಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್ ಜಾರಿ ಮಾಡಿದೆ.

ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending