Connect with us

ದಿನದ ಸುದ್ದಿ

ನೀಟ್ ಅಕ್ರಮ ಶಿಕ್ಷಣ ಕ್ಷೇತ್ರಕ್ಕೆ ಬಹುದೊಡ್ಡ ಕಳಂಕ : ಸಾಬೀರ್ ಜಯಸಿಂಹ

Published

on

ಸುದ್ದಿದಿನ,ದಾವಣಗೆರೆ:ದೇಶದ ಅತ್ಯಂತ ಕಠಿಣಾತಿ ಕಠಿಣ ಪರೀಕ್ಷೆ ನೀಟ್​​​ನಲ್ಲೂ ಗೋಲ್​​ಮಾಲ್ ನಡೆದಿದೆ. ಬಳಿಕ ನೆಟ್​​​ಪರೀಕ್ಷೆಗೂ ಅಕ್ರಮದ ವಾಸನೆ ಬಡಿದಿದ್ದರಿಂದ ಪರೀಕ್ಷೆ ರದ್ದಾಗಿದೆ. ಪರೀಕ್ಷೆಗಳ ಅಕ್ರಮದ ವಿರುದ್ಧ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಅಕ್ರಮಗಳ ಗದ್ದಲದಲ್ಲಿರುವ ಕೇಂದ್ರ ಸರ್ಕಾರ (26/06/2024) ನಡೆಯಬೇಕಿದ್ದ ನೀಟ್-ಪಿಜಿ ಪರೀಕ್ಷೆಯನ್ನು ಕೂಡ ಕೊನೆಯ ಕ್ಷಣದಲ್ಲಿ ಮುಂದೂಡಿಕೆ ಮಾಡಿ ಆದೇಶಿಸಿದೆ.

ಸರ್ಕಾರಿ ನೇಮಕಾತಿಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಆಗ್ತಿದ್ದು ಇತಿಹಾಸ. ಇದನ್ನೂ ಮೀರಿ ಈಗ ಕಠಿಣ ಪರೀಕ್ಷೆಗಳಾದ ನೀಟ್-ನೆಟ್​ ಕೂಡ ಅಕ್ರಮದ ಗೂಡುಗಳಾಗಿ ಮಾರ್ಪಟ್ಟಿವೆ. ಲಕ್ಷ ಲಕ್ಷ ಹಣಕ್ಕೆ ಪ್ರಶ್ನೆ ಪತ್ರಿಕೆಗಳು ಬಿಕರಿಯಾಗಿರುವ ಆರೋಪ ಕೇಳಿಬಂದಿದೆ. ಪರೀಕ್ಷೆಗಳ ಪಾವಿತ್ರ್ಯತೆಗೆ ಭಂಗ ತಂದಿದ್ದು ಅಭ್ಯರ್ಥಿಗಳನ್ನು ಕಂಗೆಡಿಸಿವೆ. ಈ ಕೂಡಲೇ ಕೇಂದ್ರ ಶಿಕ್ಷಣ ಸಚಿವರನ್ನು ವಜಾ ಮಾಡಿ ಪಾರದರ್ಶಕತೆಯಿಂದ ಪರೀಕ್ಷೆ ನಡೆಸಬೇಕು ಎಂದು ದಾವಣಗೆರೆ ಜಿಲ್ಲಾಧಿಕಾರಿಗಳ ರವರ ಮುಖಾಂತರ ದಲಿತ ವಿದ್ಯಾರ್ಥಿ ಪರಿಷತ್ತು ಜಿಲ್ಲಾ ಘಟಕದ ವತಿಯಿಂದ ರಾಷ್ಟ್ರಪತಿಗಳಿಗೆ ಇಂದು ಮನವಿ ಸಲ್ಲಿಸಿದರು.

ನೀಟ್‌-ಯುಜಿ ಹಾಗೂ ಯಜಿಸಿ-ನೆಟ್‌ ಪರೀಕ್ಷೆಯಲ್ಲಿ ನಡೆದ ಅಕ್ರಮಗಳ ಗದ್ದಲದಲ್ಲಿ ಮುಳುಗೇಳುತ್ತಿರುವ ಕೇಂದ್ರ ಸರಕಾರ ಇದೀಗ ನೀಟ್-ಪಿಜಿ ಪರೀಕ್ಷೆಯನ್ನು ಕೊನೇ ಕ್ಷಣದಲ್ಲಿ ಮುಂದೂಡಿಕೆ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಜೂನ್ 26 ರಂದು ನಡೆಯಬೇಕಿದ್ದ ನೀಟ್-ಪಿಜಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಿ ಆದೇಶ ನೀಡಿದೆ. ವಿದ್ಯಾರ್ಥಿಗಳಿಗೆ ಉಂಟಾದ ಅನನುಕೂಲತೆಗೆ ಪ್ರಾಮಾಣಿಕವಾಗಿ ವಿಷಾದಿಸುತ್ತೇವೆ ಎಂದು ತಿಳಿಸಿದೆ. ಕೊನೆ ಗಳಿಗೆಯಲ್ಲಿ ಏಕಾಏಕಿ ಪರೀಕ್ಷೆ ರದ್ದುಪಡಿಸಿದ್ದರಿಂದ ಎಲ್ಲೂ ಮತ್ತೊಂದು ಕಡೆ ಅಕ್ರಮದ ನಡೆಯುತ್ತಿರುವುದು ಶಂಕೆ ವ್ಯಕ್ತವಾಗುತ್ತಿದೆ. ಆದರೆ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಬೇಕಾಗಿದ ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಯ ಸಚಿವರು ಮತ್ತು ಇಲಾಖೆಯ ಅಧಿಕಾರಿಗಳು ತಮ್ಮ ಕರ್ತವ್ಯದಲ್ಲಿ ವಿಫಲಗೊಂಡಿದ್ದಾರೆ ಎಂಬದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.

ಜೂನ್ 26 ರ ಭಾನುವಾರದಂದು ದೇಶದ 270 ಕೇಂದ್ರಗಳಲ್ಲಿ ಪರೀಕ್ಷೆ ನಿಗದಿಯಾಗಿತ್ತು. 2.2 ಲಕ್ಷ ಅಭ್ಯರ್ಥಿಗಳು ನೀಟ್ – ಪಿಜಿ ಪರೀಕ್ಷೆ ಬರೆಯಬೇಕಿತ್ತು.
ನೀಟ್, ನೆಟ್ ಪರೀಕ್ಷೆಗಳಲ್ಲಿ ಅಕ್ರಮ ಹಿನ್ನೆಲೆ ಪರೀಕ್ಷೆ ರದ್ದು ಮಾಡಲಾಗಿದೆ ಎಂದು ತಿಳಿದು ಬರುತ್ತಿದೆ. ನೀಟ್ – ಪಿಜಿ
ಹೊಸ ಪರೀಕ್ಷೆಯ ದಿನಾಂಕಗಳನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ಹೇಳಿ ಕೇಂದ್ರ ಸರ್ಕಾರ ಕೊನೆ ಕ್ಷಣದಲ್ಲಿ ಪರೀಕ್ಷೆ ರದ್ದುಪಡಿಸಿದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿ ಕಾಪಾಡುವಲ್ಲಿ ಎಲ್ಲ ವಿಫಲತೆ ಎಂದು ಕಾಣುತ್ತದೆ.

ಇದೇ ವೇಳೆ ಕೇಂದ್ರವು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಮಹಾನಿರ್ದೇಶಕ ಸುಬೋಧ್ ಸಿಂಗ್ ಅವರನ್ನು ವಜಾಗೊಳಿಸಿದೆ. ಏಜೆನ್ಸಿಯ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಲು ಮತ್ತು ಪರೀಕ್ಷಾ ಸುಧಾರಣೆಗಳನ್ನು ಶಿಫಾರಸು ಮಾಡಲು ಇಸ್ರೊ ಮಾಜಿ ಮುಖ್ಯಸ್ಥ ಕೆ. ರಾಧಾಕೃಷ್ಣನ್ ನೇತೃತ್ವದಲ್ಲಿ ಏಳು ಸದಸ್ಯರ ಸಮಿತಿಯನ್ನು ರಚಿಸಿದ್ದು ಸ್ವಾಗತ ಆದರೆ ಪದೇ ಪದೇ ಪರೀಕ್ಷೆಯಲ್ಲಿನ ಅಕ್ರಮಗಳಿಂದ ಲಕ್ಷಾಂತರ ಪರೀಕ್ಷಾರ್ಥಿಗಳಿಗೆ ತೊಂದರೆ ಅನುಭವಿಸುವಂತಾಗಿದೆ. ಈ ಅಕ್ರಮಗಳಿಂದ ಪ್ರತಿಭಾವಂತ ವಿದ್ಯಾರ್ಥಿಗಳು ಅವಕಾಶ ವಂಚಿತರಾಗುವ ಸಾಧ್ಯತೆ ದಟ್ಟವಾಗಿವೆ. ಹಗಲು ರಾತ್ರಿ ಎನ್ನದೆ ಕಷ್ಟ ಪಟ್ಟು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪದೇ ಪದೇ ಪರೀಕ್ಷೆಯಲ್ಲಿ ನಡೆಯುವ ಅಕ್ರಮಗಳಿಂದ ಆತ್ಮಸ್ಥೈರ್ಯ ಮತ್ತು ನೆಮ್ಮದಿ ಹಾಳಾಗಿದೆ ಮತ್ತು ಲಕ್ಷಾಂತರ ವಿದ್ಯಾರ್ಥಿಗಳ ಹಾಗೂ ಅವರ ಪಾಲಕರ ಕನಸುಗಳಿಗೆ ಪೆಟ್ಟು ಬಿದ್ದಿದೆ.

ಎರಡು ಪರೀಕ್ಷೆಯಲ್ಲಿ ನಡೆದ ಅಕ್ರಮದ ಸಂಪೂರ್ಣ ತನಿಖೆ ಆಗಬೇಕು, ತಪ್ಪಿತಸ್ಥರಿಗೆ ಕಠಿಣ ಕ್ರಮ ಕೈಗೊಳ್ಳಬೇಕು. ಪರೀಕ್ಷೆ ನಡೆಸಲು ವಿಫಲಗೊಂಡಿರುವ ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆ ಸಚಿವರಿಗೆ ಮತ್ತು ಇಲಾಖೆಗಳ ಅಧಿಕಾರಿಗಳಿಗೆ ವಜಾಗೊಳಿಸಬೇಕು ಇದರ ಜೊತೆಗೆ ಶೈಕ್ಷಣಿಕ ಸೀಟ್ ಹಂಚಿಕೆ ಮಾಡಲು ನೀಟ್ – ನೆಟ್ ಪರೀಕ್ಷೆ ನಡೆಸುವ ಅಧಿಕಾರವನ್ನು ಆಯಾ ರಾಜ್ಯಗಳ ಸರ್ಕಾರಕ್ಕೆ ನೀಡಬೇಕೆಂದು ಈ ಮೂಲಕ ದಲಿತ ವಿದ್ಯಾರ್ಥಿ ಪರಿಷತ್ ಪರಿಷತ್ ಸಂಘಟನೆ ಆಗ್ರಹಿಸಿದೆ.

ಈ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ತು ಜಿಲ್ಲಾ ಸಂಚಾಲಕಹಾಗೂ ಪುರಸಭಾ ಸದಸ್ಯ ಸಾಬೀರ್ ಜಯಸಿಂಹ. ಹರಿಹರ ತಾಲೂಕು ಗೌರವ ಸಂಚಾಲಕ ಭೋವಿ ಶಿವಣ್ಣ, ಪುರಸಭಾ ಸದಸ್ಯರಾದ ನಯಾಜ್ ಅಹಮದ್, ಶಬ್ಬೀರ್ ಖಾನ್,ಗೌಡ್ರ ಮಂಜಪ್ಪ ಹಾಗೂ ಅನ್ವರ್ ಸಾಬ್,ಕೆ ಪಿ ಗಂಗಾಧರ್, ಭಾನುವಳ್ಳಿ ಸುರೇಶ್, ಮತ್ತಿತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

Published

on

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.

ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ

Published

on

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್‌ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ.

ಕೆಎಸ್‌ಆರ್‌ಟಿಸಿ ಮಹಾನಿರ್ದೆಶಕರನ್ನಾಗಿ ಅಕ್ರಂ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ

Published

on

ಸುದ್ದಿದಿನಡೆಸ್ಕ್:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸಂತ್ರಸ್ಥರು ಮತ್ತು ಅವರ ಕುಟುಂಬಗಳಿಗೆ ಪಾರದರ್ಶಕತೆ ನ್ಯಾಯ ದೊರಕುವಂತಾಗಲು ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಸಂತ್ರಸ್ಥರಿಗೆ ನ್ಯಾಯ ಒದಗಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್ ಜಾರಿ ಮಾಡಿದೆ.

ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending