ದಿನದ ಸುದ್ದಿ
ಸುಗಮವಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ-ನೀಟ್
ಸುದ್ದಿದಿನಡೆಸ್ಕ್:ದೇಶದ ಐದು ಸಾವಿರಕ್ಕೂ ಹೆಚ್ಚು ಕೇಂದ್ರಗಳಲ್ಲಿ ಮತ್ತು ವಿದೇಶಗಳ 13 ನಗರಗಳಲ್ಲಿ ಇಂದು ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ- ನೀಟ್ ಯುಜಿ -2025 ಸುಗಮವಾಗಿ ಜರುಗಿತು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ಪರೀಕ್ಷಾ ಕೇಂದ್ರಗಳಲ್ಲಿ ನೀಟ್ ಪರೀಕ್ಷೆ ನಡೆಯಿತು. ಜಿಲ್ಲೆಯ 4 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 2040 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಪ್ರತಿ ವಿದ್ಯಾರ್ಥಿಗಳ ಪ್ರವೇಶ ಪತ್ರ, ವಸ್ತ್ರ ಸಂಹಿತೆ, ಪರೀಕ್ಷಾ ನಿಯಮಗಳನ್ನು ಪಾಲಿಸುವ ಕುರಿತು ಪರಿಶೀಲನೆ ನಡೆಸಿ, ತಪಾಸಣೆ ಮಾಡಿ ಒಳ ಬಿಡಲಾಯಿತು.
ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯವಾಗಿತ್ತು. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯುತ್ ವ್ಯವಸ್ಥೆ, ಸಿ.ಸಿ ಕ್ಯಾಮೆರಾ ಅಳವಡಿಕೆ, ಆಂಬುಲೆನ್ಸ್ ಸೇವೆ , ಆರೋಗ್ಯಘಟಕ, ವ್ಯವಸ್ಥೆಗಳನ್ನು ಕಲ್ಪಿಸಲಾಗಿತ್ತು. ಚಿತ್ರದುರ್ಗದಲ್ಲಿ ಜರುಗಿದ ನೀಟ್ ಪರೀಕ್ಷೆ ಸುಗಮವಾಗಿ ಜರುಗಿದ್ದು, ಒಟ್ಟು 141 ವಿದ್ಯಾರ್ಥಿಗಳು ಗೈರಾಗಿದ್ದಾರೆ. ನೀಟ್ ಪರೀಕ್ಷೆಗಾಗಿ ಜಿಲ್ಲೆಯಲ್ಲಿ ಒಟ್ಟು 06 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು.
3 ಸಾವಿರದ 19 ವಿದ್ಯಾರ್ಥಿಗಳ ಪೈಕಿ 2878 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ, 141 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ. ಜಿಲ್ಲೆಯಲ್ಲಿ ಭಾನುವಾರ ಜರುಗಿದ ನೀಟ್ ಪರೀಕ್ಷೆ ಕಾರ್ಯಗಳ ಕುರಿತಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಎಲ್ಲ 06 ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ಪರೀಕ್ಷಾ ಪ್ರಕ್ರಿಯೆಗಳ ಬಗ್ಗೆ ಪರಿಶೀಲನೆ ನಡೆಸಿದರು.
ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಅನುವಾಗುವಂತೆ ಪರೀಕ್ಷಾ ಕೇಂದ್ರದ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ, ಪೊಲೀಸ್ ಬಂದೋಬಸ್ತ್ ಕಾರ್ಯ ಕೈಗೊಳ್ಳಲಾಗಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243