ದಿನದ ಸುದ್ದಿ

ಮತ್ತೆ ‘ನೀಟ್’ ಪರೀಕ್ಷೆ ನಡೆಸಲಾಗುವುದು : ಕೇಂದ್ರ ಸಚಿವ ಪ್ರಕಾಶ್ ಜಾವೇಡ್ ಕರ್ ಟ್ವೀಟ್

Published

on

ಸುದ್ದಿದಿನ, ಡೆಸ್ಕ್ : ರೈಲು ತಡವಾಗಿ ಬಂದ ಕಾರಣ ‘ನೀಟ್’ ( ರಾಷ್ಟ್ರೀಯ ಅರ್ಹತಾ ಪರೀಕ್ಷೆ ) ಎಕ್ಸಾಮ್ ನಿಂದ ವಂಚಿತರಾದ ಸುಮಾರು 500 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮತ್ತೆ ಪರೀಕ್ಷೆ ನಡೆಸಲಾಗುತ್ತದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವೇಡ್ ಕರ್ ಟ್ವೀಟ್ ಮಾಡಿದ್ದಾರೆ.

ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ಅಗತ್ಯವಾಗಿರುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ಭಾನುವಾರ ರಾಜ್ಯದ ವಿವಿಧ ಕೇಂದ್ರಗಳಲ್ಲಿ ನಡೆದಿರುತ್ತದೆ.

ಬಳ್ಳಾರಿ, ಕೊಪ್ಪಳ, ಗದಗ ಸೇರಿದಂತೆ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳ ನೂರಾರು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಬೆಂಗಳೂರಿಗೆ ಬರಲು ಹಂಪಿ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣಿಸಿರುತ್ತಾರೆ. ಭಾನುವಾರ ಬೆಳಗ್ಗೆ 6.30 ಕ್ಕೆ ಬೆಂಗಳೂರು ತಲುಪಬೇಕಿದ್ದ ರೈಲು ಮಧ್ಯಾಹ್ನ 2.30ಕ್ಕೆ ಅಂದರೆ ಸುಮಾರು 7 ಗಂಟೆಗಳ ತಡವಾಗಿ ಬಂದು ತಲುಪಿದೆ. ಹಾಗಾಗಿ ಸುಮಾರು 500 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ವಂಚಿತರಾಗಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version