ದಿನದ ಸುದ್ದಿ
ನೀಟ್ ಯುಜಿ 2024 | ಎಲ್ಲಾ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸಲು ಸುಪ್ರೀಂ ಕೋರ್ಟ್ ನಿರ್ದೇಶನ
ಸುದ್ದಿದಿನಡೆಸ್ಕ್:ನೀಟ್ ಯುಜಿ 2024ರ ಎಲ್ಲಾ ವಿದ್ಯಾರ್ಥಿಗಳ ಫಲಿತಾಂಶವನ್ನು ಇದೇ 20ರ ಶನಿವಾರ ಮಧ್ಯಾಹ್ನ 12 ಗಂಟೆ ವೇಳೆಗೆ ತಮ್ಮ ಜಾಲತಾಣದಲ್ಲಿ ಪ್ರಕಟಿಸುವಂತೆ ಸುಪ್ರೀಂ ಕೋರ್ಟ್ ಇಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ-ಎನ್‌ಟಿಎ ಗೆ ನಿರ್ದೇಶನ ನೀಡಿದೆ.
ನೀಟ್ ಯುಜಿ ಪರೀಕ್ಷೆ ವಿಚಾರವಾಗಿ ಪ್ರಶ್ನೆಪತ್ರಿಕೆ ಸೋರಿಕೆ, ದುರ್ಬಳಕೆ, ವಿವಾದಾತ್ಮಕ ಕೃಪಾಂಕ ನೀಡಿಕೆ ಸೇರಿದಂತೆ ಹಲವು ರೀತಿಯ ಪರೀಕ್ಷಾ ಅಕ್ರಮಗಳ ಆರೋಪಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ. ಪರ್ಡಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠವು, ಅಭ್ಯರ್ಥಿಗಳ ಗುರುತನ್ನು ಮರೆಮಾಚಬೇಕು ಹಾಗೂ ನಗರವಾರು ಮತ್ತು ಕೇಂದ್ರವಾರು ಫಲಿತಾಂಶವನ್ನು ಪ್ರಕಟಿಸುವಂತೆ ಎನ್‌ಟಿಎ ಗೆ ಸೂಚಿಸಿದೆ.
ಇದಕ್ಕೂ ಮುನ್ನ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಲ್ಲಿಯವರೆಗೆ ತೆಗೆದುಕೊಂಡಿರುವ ಕ್ರಮಗಳ ಕುರಿತು ಸಿಬಿಐ ತನ್ನ ಎರಡನೆಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತು.
ಹಿಂದಿನ ವಿಚಾರಣೆ ವೇಳೆ ನ್ಯಾಯಪೀಠವು, ಪರೀಕ್ಷೆಯ ಪಾವಿತ್ರ‍್ಯತೆಗೆ ಧಕ್ಕೆಯಾಗಿದೆ ಎಂಬ ಅಂಶವನ್ನು ಒತ್ತಿಹೇಳಿತು. ಆದಾಗ್ಯೂ, ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವ ನಿರ್ಧಾರವು 23 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಜೀವನದ ಮೇಲೆ ಪರಿಣಾಮ ಬೀರುವುದರಿಂದ ಇದು ಕೊನೆಯ ಉಪಾಯವಾಗಿದೆ ಎಂದು ಹೇಳಿದೆ.
ಇನ್ನೊಂದೆಡೆ, ನೀಟ್ ಪ್ರವೇಶ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಇಂದು ಪಾಟ್ನಾದ ಏಮ್ಸ್ ನ ನಾಲ್ವರು ವಿದ್ಯಾರ್ಥಿಗಳನ್ನು ಬಂಧಿಸಿದೆ. ಬಂಧನಕ್ಕೊಳಗಾಗಿರುವ ವಿದ್ಯಾರ್ಥಿಗಳು ಎಂಬಿಬಿಎಸ್ ಕೋರ್ಸ್ನ ಎರಡನೇ ಮತ್ತು ಮೂರನೇ ವರ್ಷದಲ್ಲಿದ್ದಾರೆ ಎಂದು ಏಮ್ಸ್ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಜಿ.ಕೆ.ಪಾಲ್ ತಿಳಿಸಿದ್ದಾರೆ.
ಬಂಧಿತ ವಿದ್ಯಾರ್ಥಿಗಳ ಲ್ಯಾಪ್‌ಟಾಪ್‌ಗಳನ್ನು ಸಂಸ್ಥೆ ವಶಪಡಿಸಿಕೊಂಡಿದೆ ಮತ್ತು ಅವರ ಕೊಠಡಿಗಳನ್ನು ಸೀಲ್ ಮಾಡಿದೆ. ಸಿಬಿಐ ಈ ವಿದ್ಯಾರ್ಥಿಗಳ ವಿಚಾರಣೆ ನಡೆಸುತ್ತಿದೆ ಎಂದು ವರದಿ ತಿಳಿಸಿದೆ.ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


