ದಿನದ ಸುದ್ದಿ
ನೀಟ್ ಫಲಿತಾಂಶ | ಗ್ರೇಸ್ ಅಂಕಗಳ ಪರಿಶೀಲನೆಗೆ ಸಮಿತಿ ರಚನೆ
ಸುದ್ದಿದಿನಡೆಸ್ಕ್: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ- ನೀಟ್-ಯುಜಿ ನಲ್ಲಿ 1ಸಾವಿರದ 500 ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೀಡಿದ ಗ್ರೇಸ್ ಅಂಕಗಳನ್ನು ಪರಿಶೀಲಿಸಲು ಕೇಂದ್ರ ಶಿಕ್ಷಣ ಸಚಿವಾಲಯ ನಾಲ್ಕು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ.
ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಕುರಿತು ಮಾಹಿತಿ ನೀಡಿದ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ- ಎನ್‌ಟಿಎ ಮಹಾನಿರ್ದೇಶಕ ಸುಬೋಧ್ ಕುಮಾರ್ ಸಿಂಗ್, ಮುಂದಿನ ಒಂದು ವಾರದೊಳಗೆ ಸಮಿತಿ ತನ್ನ ಶಿಫಾರಸುಗಳನ್ನು ಸಲ್ಲಿಸಲಿದ್ದು, ಅಭ್ಯರ್ಥಿಗಳ ಫಲಿತಾಂಶಗಳನ್ನು ಪರಿಷ್ಕರಿಸಬಹುದು ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243