ದಿನದ ಸುದ್ದಿ

ಉದ್ಘಾಟನೆಯೇ ಮುನ್ನವೇ ನೀರಲ್ಲಿ ಕೊಚ್ಚಿ ಹೋಯ್ತು ಸೇತುವೆ

Published

on

ಸುದ್ದಿದಿನ,ಭೋಪಾಲ್: ಮಧ್ಯಪ್ರದೇಶ ಸಿವನಿ ಜಿಲ್ಲೆಯಲ್ಲಿ ಭ್ರಷ್ಟಾಚಾರಕ್ಕೆ ತಾಜಾ ಉದಾಹರಣೆ ಸಿಕ್ಕಿದೆ. ಕೋಟಿ ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದ ಸೇತುವೆ ಉದ್ಘಾಟನೆಗೂ ಮುನ್ನವೇ ನದಿಯಲ್ಲಿ ಕೊಚ್ಚಿಕೊಂಡು ಹೋಗಿದೆ. ಮಧ್ಯ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಸಿವನಿ ಜಿಲ್ಲೆಯ ಸುನ್ವಾರಾ ಗ್ರಾಮದಲ್ಲಿ ವೆನ್‍ಗಂಗಾ ನದಿಗೆ ಅಡ್ಡಲಾಗಿ ಈ ಸೇತುವೆಯನ್ನ ನಿರ್ಮಿಸಲಾಗಿತ್ತು.

ಉದ್ಘಾಟನೆಗೂ ಮುನ್ನವೇ ಸಾರ್ವಜನಿಕರ ಸಂಪರ್ಕಕ್ಕೆ ಸೇತುವೆಯನ್ನ ಮುಕ್ತಗೊಳಿಸಲಾಗಿತ್ತು. ನದಿಯ ಪ್ರವಾಹಕ್ಕೆ ಸೇತುವೆ ಮಧ್ಯ ಭಾಗದ ನಾಲ್ಕು ಪಿಲ್ಲರ್ ಗಳು ಕುಸಿತಗೊಂಡು ರಸ್ತೆ ಸಂಪೂರ್ಣ ಕೊಚ್ಚಿಕೊಂಡು ಹೋಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version