ದಿನದ ಸುದ್ದಿ
ಸರ್ಕಾರಿ ನೌಕರರ ವೇತನ ನಿಗದಿಗೆ ನೂತನ ಆಯೋಗ ರಚನೆಯಾಗಲಿದೆ
ಸುದ್ದಿದಿನ,ಹಾಸನ : ಸರ್ಕಾರಿ ನೌಕರರ ವೇತನ ನಿಗದಿಗೆ, ಶೀಘ್ರದಲ್ಲಿಯೆ ನೂತನ ಆಯೋಗ ರಚನೆಯಾಗಲಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ ಅವರು ತಿಳಿಸಿದ್ದಾರೆ.
ಜಿಲ್ಲಾ ನೌಕರರ ಸಂಘದ ಭವನದಲ್ಲಿ ಸೆ.25 ರಂದು ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕಾರಿ ಸಮಿತಿ ಸಭೆ ನಡೆಸಿ ಮಾತನಾಡಿದ ಅವರು ಲೆಕ್ಕಪತ್ರಗಳು ಹಾಗೂ ಲೆಕ್ಕ ಪರಿಶೋಧನೆ/ತಪಾಸಣೆ ವರದಿಯನ್ನು ಪರಿಶೀಲಿಸಿ ಸಭೆಯನ್ನು ಯಶಸ್ವಿಗೊಳಿಸಿದರು.
ಹಾಸನ ಜಿಲ್ಲೆಯ ವಿವಿಧ ಇಲಾಖೆಗಳ ನೌಕರರು ರಾಜ್ಯ ಮಟ್ಟದ ಹಾಗೂ ಜಿಲ್ಲಾ ಹಂತದಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಜಿಲ್ಲಾ ಸಂಘಕ್ಕೆ ಲಿಖಿತವಾಗಿ ನೀಡಿದ ಮನವಿಗಳನ್ನು ಜಿಲ್ಲಾಧ್ಯಕ್ಷರಾದ ಈ.ಕೃಷ್ಣೇಗೌಡ ರವರು ರಾಜ್ಯಾಧ್ಯಕ್ಷರ ಗಮನಕ್ಕೆ ತಂದು ಸಮಸ್ಯೆಯನ್ನು ಬಗೆಹರಿಸಿಲು ಪ್ರಯತ್ನಿಸಿದರು ಹಾಗೂ ಸರ್ಕಾರಿ ಆರೋಗ್ಯ ವಿಮೆ ಯೋಜನೆ ಜಾರಿಗೆ ತರುವ ಚಿಂತನೆ ನಡೆಸುತ್ತಿದೆ. ಇದರ ಹಿಂದೆ ನೌಕರರ ಸಂಘದ ಸಾಕಷ್ಟು ಪರಿಶ್ರಮ ಇದೆ ಎಂದರು.
ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಈ.ಕೃಷ್ಣೇಗೌಡ ಮಾತನಾಡಿ ಸರ್ಕಾರಿ ಶಾಲೆಗಳ “ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪೆÇ್ರೀತ್ಸಾಹ ನೀಡಬೇಕೆಂಬ ದೃಷ್ಟಿಯಿಂದ ಸನ್ಮಾನ ಸಮಾರಂಭ ಹಮ್ಮಿಕೊಂಡಿದ್ದೇವೆ. ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಬೇಕಾದ ಜವಾಬ್ದಾರಿ ಸರ್ಕಾರಿ ನೌಕರರದ್ದಾಗಿದಾಗಿದೆ. ಇದೇ ರೀತಿ ಪ್ರಮಾಣಿಕ ಸರ್ಕಾರಿ ನೌಕರರನ್ನು ಸನ್ಮಾನ ಮಾಡಿ ಅವರ ಸೇವೆ ಗುರುತಿಸುವ ಹೊಣೆಗಾರಿಕೆಯನ್ನು ಸಂಘವು ಜಿಲ್ಲೆಯಲ್ಲಿ ಯಶಸ್ವಿಯಾಗಿ ಮಾಡಿಕೊಂಡು ಬರಲಾಗುತ್ತಿದೆ ಎಂದರು.
ಸಭೆಯಲ್ಲಿ ಜಿಲ್ಲೆಯ ಗೌರವಾಧ್ಯಕ್ಷರಾದ ಪ್ರಧಾನ ಕಾರ್ಯದರ್ಶಿಗಳು, ಖಜಾಂಚಿ ಹಾಗೂ ಎಲ್ಲಾ ತಾಲ್ಲೂಕು ಅಧ್ಯಕ್ಷರುಗಳು, ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರುಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243